BigTv News
November 13, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಈಗಾಗಲೇ ಭರ್ಜರಿ ಸಿದ್ಧತೆ ನಡೆಸಿರುವ ರಾಜ್ಯ ಕಾಂಗ್ರೆಸ್ ಇದೀಗ ಕಾಂಗ್ರೆಸ್ ಸಿಎಂ ಅಭ್ಯರ್ಥಿ ಕುರಿತಂತೆ ಸಭೆ ನಡೆಸಿ ಮಹತ್ವದ ತೀರ್ಮಾನ ಕೈಗೊಂಡಿದೆ ಎಂದು ಹೇಳಲಾಗುತ್ತಿದೆ. ಕೆಲ ದಿನಗಳ ಹಿಂದೆ ರಾಜ್ಯ ಕಾಂಗ್ರೆಸ್ ನ ಹಿರಿಯ ನಾಯಕರಾದ ಸುರ್ಜೆವಾಲಾ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಕೆ.ಜೆ ಜಾರ್ಜ್ ಹಾಗೂ ಎಂ.ಬಿ.ಪಾಟೀಲ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಸಭೆಯಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಕುರಿತಂತೆ ಚರ್ಚೆ …
Read More »
BigTv News
November 13, 2022
Breaking News, ಬೆಂಗಳೂರು
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 11 ರಂದು ಬೆಂಗಳೂರಿನ ಸಂಸ್ಥಾಪಕ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಪ್ರತಿಮೆ ಅನಾವರಣಗೊಳಿಸಿದ್ದು, ಈ ಕಾರ್ಯಕ್ರಮಕ್ಕಾಗಿ ಕೆಲಸ ಮಾಡಲು ಕರೆ ತಂದಿದ್ದ ಕೂಲಿ ಕಾರ್ಮಿಕರಿಗೆ ಬಾಕಿ ಹಣ ಪಾವತಿ ಮಾಡದ ಸ್ಥಳೀಯ ಬಿಜೆಪಿ ಮುಖಂಡನ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ. ಸ್ಥಳೀಯ ಬಿಜೆಪಿ ಮುಖಂಡ ನಂದೀಶ್ ಅವರ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲೆಯ ಸಿಡ್ಲಘಟ್ಟ ಪೊಲೀಸ್ ಠಾಣೆಯಲ್ಲಿ 40 ಕಾರ್ಮಿಕರು …
Read More »
BigTv News
November 12, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ ವ್ಯಾಪಕ ಭ್ರಷ್ಟಾಚಾರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದ್ದು, ಅವರಿಂದ ಉತ್ತರ ಬರುವ ಸಾಧ್ಯತೆಯಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶುಕ್ರವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಪ್ರತಿಪಕ್ಷಗಳ ಪತ್ರಗಳಿಗೆ ಪ್ರಧಾನಿ ಉತ್ತರಿಸುತ್ತಾರೆ. ಕಾಂಗ್ರೆಸ್ ಆರೋಪಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಕೂಡಾ ಉತ್ತರಿಸುವ ವಿಶ್ವಾಸವಿದೆ ಎಂದರು. ರಾಜ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಡಿಕೆ ಶಿವಕುಮಾರ್, ಗುತ್ತಿಗೆದಾರರೊಬ್ಬರು …
Read More »
BigTv News
November 12, 2022
Breaking News, ಬೆಂಗಳೂರು
ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಆಹ್ವಾನಿಸಿಲ್ಲ ಎಂದು ಜೆಡಿಎಸ್ ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ಹೊರ ಹಾಕಿದ ಬೆನ್ನಲ್ಲೇ ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಮೊದಲ ಆಹ್ವಾನ ಪತ್ರಿಕೆಯನ್ನು ಎಚ್.ಡಿ.ದೇವೇಗೌಡರಿಗೆ ನೀಡಿದ್ದೇವೆ ಎಂದು ಸ್ಪಷ್ಟನೆ ನೀಡಿದೆ. ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗ ಎಚ್.ಡಿ.ದೇವೇಗೌಡರಿಗೆ ಮೊದಲ ಆಹ್ವಾನ ಪತ್ರ ಹೋಗಿದ್ದು, ಮಾತ್ರವಲ್ಲ ಖುದ್ದು ಸಿಎಂ ಬಸವರಾಜ ಬೊಮ್ಮಾಯಿ ದೂರವಾಣಿ ಕರೆ ಮಾಡಿ ಆಹ್ವಾನಿಸಿದ್ದಾರೆ. ಈ ವಿಷಯದಲ್ಲೂ ಸುಳ್ಳಾಡುವ …
Read More »
BigTv News
November 11, 2022
Breaking News, ಬೆಂಗಳೂರು
ಬೆಂಗಳೂರು : ಇಂದು ಅಂದರೆ ಶುಕ್ರವಾರದಂದು ಬೆಂಗಳೂರು ನಗರವು ಪ್ರಧಾನಿ ಅವರನ್ನು ಸ್ವಾಗತಿಸಲು ಸಜ್ಜಾಗುತ್ತಿದೆ. ಇದೇ ಸಂದರ್ಭದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಮೃದ್ಧತೆಯ ಪ್ರತೀಕ ಎನ್ನಲಾಗುವ ಸ್ಟ್ಯಾಚ್ಯೂ ಆಫ್ ಪ್ರಾಸ್ಪೆರಿಟಿಯನ್ನು ಪ್ರಧಾನಿ ಅನಾವರಣಗೊಳಿಸಲಿದ್ದಾರೆ. ಇನ್ನು, ಈ ಪ್ರತಿಮೆಯ ಬಗ್ಗೆ ಹೇಳುವುದಾದರೆ ಒಂದೇ ಕುಟುಂಬದ ಮೂರು ತಲೆಮಾರಿನ ಶಿಲ್ಪಿಗಳು ಹಾಗೂ ಇತರೆ 200 ಶಿಲ್ಪಿಗಳು ಸತತ ಒಂಭತ್ತು ತಿಂಗಳ ಕಾಲ ಇದರ ಕೆತ್ತನೆಯಲ್ಲಿ ತೊಡಗಿದ್ದು ವಿಶೇಷ. ಈ ಒಟ್ಟಾರೆ …
Read More »
BigTv News
November 11, 2022
Breaking News, ಬೆಂಗಳೂರು
ಬೆಂಗಳೂರು : ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಪ್ರತಿಮೆ ಸ್ಥಾಪಿಸಲು ಸರ್ಕಾರದ ಹಣ ಬಳಸಿದ್ದು ಏಕೆ? ಎಂದು ಪ್ರಶ್ನಿನಿಸಿದ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು, ಇದು ದೊಡ್ಡ ಅಪರಾಧ ಎಂದು ಗುರುವಾರ ಹೇಳಿದ್ದಾರೆ. ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ನಿರ್ವಹಿಸುತ್ತಿರುವ ಬೆಂಗಳೂರು …
Read More »
BigTv News
November 5, 2022
Breaking News, ಬೆಂಗಳೂರು
ಬೆಂಗಳೂರು : ಉತ್ತಮ ಮೂಲಸೌಕರ್ಯವುಳ್ಳ 50 ಸಾವಿರ ಎಕರೆ ಲ್ಯಾಂಡ್ ಬ್ಯಾಂಕ್ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲಭ್ಯವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಇನ್ವೆಸ್ಟ್ ಕರ್ನಾಟಕ 2022 ಜಾಗತಿಕ ಹೂಡಿಕೆದಾರರ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಹುಬ್ಬಳ್ಳಿ ಧಾರವಾಡ, ಮಂಗಳೂರು, ಕಲಬುರ್ಗಿ, ಬಳ್ಳಾರಿ, ತುಮಕೂರು, ಮೈಸೂರು ಜಿಲ್ಲೆಗಳಲ್ಲಿ ಲ್ಯಾಂಡ್ ಬ್ಯಾಂಕ್ ಲಭ್ಯವಿದೆ. ಶಿವಮೊಗ್ಗ ಬಿಜಾಪುರ ವಿಮಾನ ನಿಲ್ದಾಣ ಶೀಘ್ರ ಆರಂಭವಾಗುತ್ತಿದ್ದು, ಕಾರವಾರದಲ್ಲಿ ವಿಮಾನ ನಿಲ್ದಾಣವಾಗಲಿದೆ. …
Read More »
BigTv News
November 4, 2022
Breaking News, ಬೆಂಗಳೂರು
ಬೆಂಗಳೂರು: ಕಂಚುಗಲ್ ಬಂಡೆಮಠದ ಬಸವಲಿಂಗಶ್ರೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಕಣ್ಣೂರು ಮಠದ ಶ್ರೀಗಳು ತಪ್ಪೊಪ್ಪಿಕೊಂಡಿದ್ದಾರೆ. ಮಾಗಡಿ ಪೊಲೀಸರು ಆರೋಪಿ ಕಣ್ಣೂರು ಮಠದ ಡಾ.ಮೃತ್ಯುಂಜಯಶ್ರೀಗಳನ್ನು ತೀವ್ರ ವಿಚಾರಣೆಗೊಳಪಡಿಸಿದ್ದು, ಈ ವೇಳೆ ಬಸವಲಿಂಗಶ್ರೀಗಳ ವಿಡಿಯೋ ರೆಕಾರ್ಡ್ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಇದೇ ವೇಳೆ ಡಾ.ಮೃತ್ಯುಂಜಯ ಸ್ವಾಮೀಜಿಯನ್ನು ಕಣ್ಣೂರು ಮಠಕ್ಕೆ ಕರೆದೊಯ್ದಿರುವ ಮಾಗಡಿ ಪೊಲೀಸರು ಕಣ್ಣೂರು ಮಠದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಈ ನಡುವೆ ಬಂಧಿತ ಎಂಜಿನಿಯರಿಂಗ್ ವಿದ್ಯಾರ್ಥಿನಿ ನೀಲಾಂಬಿಕೆ …
Read More »
BigTv News
November 3, 2022
Breaking News, ಬೆಂಗಳೂರು
ಬೆಂಗಳೂರು: ಪಿ ಎಸ್ ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಮೊದಲ ರ್ಯಾಂಕಿಂಗ್ ಪಡೆದಿದ್ದ ಅಭ್ಯರ್ಥಿ ಸುಪ್ರಿಯಾಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. 545 ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಈವರೆಗೆ 52 ಜನರನ್ನು ಬಂಧಿಸಲಾಗಿದೆ. ಇದೀಗ ಪಿ ಎಸ್ ಐ ನೇಮಕಾತಿಯಲ್ಲಿ ಮೊದಲ ರ್ಯಾಂಕ್ ಪಡೆದಿದ್ದ ಸುಪ್ರಿಯಾ ಹುಂಡೇಕರ್ ಅವರನ್ನು ಬಂಧಿಸಲಾಗಿದೆ. ಪ್ರಕರಣದ ಇನ್ನೋರ್ವ ಆರೋಪಿಗಾಗಿ ತೀವ್ರ ಶೋಧ ನಡೆಸಲಾಗಿದೆ. ಕಲಬುರ್ಗಿಯ ಜೇವರ್ಗಿ ತಾಲೂಕಿನ ಹಿಪ್ಪರಗಿ ಗ್ರಾಮದ …
Read More »
BigTv News
November 3, 2022
Breaking News, ಬೆಂಗಳೂರು
ಬೆಂಗಳೂರು : ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಗರದ ಕಾಮಾಕ್ಷಿಪಾಳ್ಯದ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ. ಮೃತನ ಗುರುತು ಪತ್ತೆಯಾಗಿಲ್ಲವಾದ್ರೂ ಮುಂದೆ ಹೋಗುತ್ತಿದ್ದ ಬೈಕ್ ಗೆ ಹಿಂಬದಿಯಿಂದ ಬಸ್ ಡಿಕ್ಕಿ ಹೊಡೆದಿದೆ.ಕೂಡಲೇ ಯುವಕ ನೆಲಕ್ಕೆ ಬಿದ್ದಿದ್ದು, ತಲೆಗೆ ಗಂಭೀರವಾದ ಗಾಯವಾಗಿದ್ದು, ತೀವ್ರ ರಸ್ತಸ್ರಾವದಿಂದ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಅಪಘಾತಕ್ಕೆ ಕಾರಣವಾದ ಬಸ್ ಚಾಲಕನಿಗೆ ಥಳಿಸಿದ್ದಾರೆ.ಮಾಹಿತಿ ತಿಳಿದ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು …
Read More »