Breaking News

ಬೆಂಗಳೂರು

ಅಪ್ಪುಗೆ ಬಿಳಿ ಬಣ್ಣದ ಬಟ್ಟೆಗಳಂದ್ರೆ ಇಷ್ಟ : ನಟ ರಾಘವೇಂದ್ರ ರಾಜ್ ​​ಕುಮಾರ್​​

ಬೆಂಗಳೂರು: ಅಪ್ಪುಗೆ ಬಿಳಿ ಬಣ್ಣದ ಬಟ್ಟೆಗಳಂದ್ರೆ ಇಷ್ಟ ಹೀಗಾಗಿ ಇಡೀ ರಾಜ್​​ ಫ್ಯಾಮಿಲಿ ಇವತ್ತು ವೈಟ್​ ಬಟ್ಟೆ ತೊಡಲಿದೆ ಎಂದು ನಟ ರಾಘವೇಂದ್ರ ರಾಜ್ ​​ಕುಮಾರ್​​ ಹೇಳಿದ್ಧಾರೆ. ಅರಮನೆ ಮೈದಾನದಲ್ಲಿ ನಟ ರಾಘವೇಂದ್ರ ರಾಜ್​​ಕುಮಾರ್​​ ಮಾತನಾಡಿ ಪುನೀತ್​​ ರಾಜ್ ​ಕುಮಾರ್​​ ಗೆ ಯಾವುದೇ ಭೇದ-ಭಾವ ಇರಲಿಲ್ಲ. ಅಪ್ಪಾಜಿಗೆ ಬಿಳಿ ಬಟ್ಟೆ ಅಂದ್ರೆ ತುಂಬಾ ಇಷ್ಟ, ಅಪ್ಪುಗೂ ಬಿಳಿ ಬಣ್ಣ ಬಟ್ಟೆಗಳಂದ್ರೆ ಇಷ್ಟ. ಇದಕ್ಕಾಗಿಯೇ ನಾವೆಲ್ಲಾ ಇವತ್ತು ಬಿಳಿ ಬಟ್ಟೆ ಹಾಕಿದ್ದೇವೆ …

Read More »

9ನೇ ಮಹಡಿಯಿಂದ ಜಿಗಿದು ಉದ್ಯಮಿ ಆತ್ಮಹತ್ಯೆ

ಬೆಂಗಳೂರು: ಕೌಟುಂಬಿಕ ಕಲಹದಿಂದ ಮನನೊಂದ ಖಾಸಗಿ ಕಂಪನಿಯ ಮಹಿಳಾ ಉದ್ಯೋಗಿಯೊಬ್ಬರು ಅಪಾರ್ಟ್ಮೆಂಟ್ ಕಟ್ಟಡದ 9ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಳನ್ನು ದಿಶಾ ಅಪಾರ್ಟ್ಮೆಂಟ್ ನಿವಾಸಿ ಉಪಾಸನಾ ರಾವತ್ (30) ಎಂದು ಗುರುತಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆಯ ಪತಿ ನಿಹಾರ್ ರಂಜನ್ ರಾವತ್ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಕೌಟುಂಬಿಕ ಕಲಹದ ನಂತರ ಅಪಾರ್ಟ್ಮೆಂಟ್ ಕಟ್ಟಡದ 9ನೇ ಮಹಡಿಯಿಂದ ಬಿದ್ದು ಮಹಿಳೆ ಆತ್ಮಹತ್ಯೆ …

Read More »

ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು : ಚಾಮರಾಜನಗರ, ಮಂಡ್ಯ, ಕೊಡಗು,ಹಾಸನ ಸೇರಿದಂತೆ ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಸಂಬಂಧ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುನ್ಸೂಚನೆಯ ಪ್ರಕಾರ, ಮುಂದಿನ ಎರಡು ದಿನಗಳಲ್ಲಿ ಬೆಂಗಳೂರಿನಲ್ಲೂ ಭಾರಿ ಮಳೆಯಾಗಲಿದೆ. ಇದೇ ವೇಳೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಹಾವೇರಿ, ಬಾಗಲಕೋಟೆ, ಕಲಬುರಗಿ, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಿಗೆ …

Read More »

ನ. 11ಕ್ಕೆ ಕರ್ನಾಟಕಕ್ಕೆ ಪ್ರಧಾನಿ ಆಗಮನ

ಬೆಂಗಳೂರು: ವಿವಿಧ ಕಾಮಗಾರಿಗಳನ್ನು ಲೋಕಾರ್ಪಣೆಗೊಳಿಸಲು ಪ್ರಧಾನಿ ನರೇಂದ್ರ ಮೋದಿಯವರು  ಕರ್ನಾಟಕಕ್ಕೆ ನವೆಂಬರ್ 10ರಂದು ಬರೋದಕ್ಕೆ ದಿನಾಂಕ ನಿಗದಿಯಾಗಿತ್ತು. ಆದ್ರೇ ಇದೀಗ ಈ ಭೇಟಿ ಒಂದು ದಿನ ಮುಂದೂಡಿಕೆ ಮಾಡಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಪ್ರಧಾನಿ ಕಾರ್ಯಾಲಯದಿಂದ ಮಾಹಿತಿ ನೀಡಲಾಗಿದ್ದು, ನವೆಂಬರ್ 10ರಂದು ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುವಂತ ದಿನಾಂಕದಲ್ಲಿ ಬದಲಾವಣೆ ಮಾಡಲಾಗಿದೆ. ನವೆಂಬರ್ 10ರ ಬದಲಾಗಿ ನವೆಂಬರ್ 11ರಂದು ಆಗಮಿಸಲಿದ್ದಾರೆ ಎಂಬುದಾಗಿ ಮಾಹಿತಿ ನೀಡಿದೆ.

Read More »

ಇಂದಿನಿಂದ 3 ದಿನಗಳ ಕಾಲ ಭಾರಿ ಮಳೆ ಸಾಧ್ಯತೆ

ಬೆಂಗಳೂರ : ಇಂದಿನಿಂದ 3 ದಿನಗಳ ಕಾಲ ಬೆಂಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಅ.18ರಂದು ಕರಾವಳಿಗೆ ಕೂಡ ಹಳದಿ ಅಲರ್ಟ್​ ನೀಡಲಾಗಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಇಂದಿನಿಂದ …

Read More »

4 ಪೊಲೀಸ್ ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆ

ಬೆಂಗಳೂರು : ರಾಜ್ಯ ಸರ್ಕಾರ ನಾಲ್ಕು ಪೊಲೀಸ್ ಇನ್ಸ್​ಪೆಕ್ಟರ್​ಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ನರೇಂದ್ರ ಕುಮಾರ್ ಅವರನ್ನು ಸಿಐಡಿ ಯಿಂದ ಪರಪ್ಪನ ಅಗ್ರಹಾರಕ್ಕೆ , ರಾಮಚಂದ್ರಪ್ಪ ಎಸ್ ಚೌಧರಿ, ಮೈಕೋ ಲೇಔಟ್ ಪೊಲೀಸ್ ಠಾಣೆಯಿಂದ ಕಮರ್ಷಿಯಲ್ ಸ್ಟ್ರೀಟ್ ಪೊಲಿಸ್ ಠಾಣೆಗೆ ಹಾಗೂ ಸಂದೀಪ್ ಎಸ್, ಪರಪ್ಪನ ಅಗ್ರಹಾರ ಠಾಣೆಯಿಂದ ಸಿಐಡಿಗೆ , ಸೋಮಶೇಖರ್ ಟಿ,ಕಮರ್ಷಿಯಲ್ ಸ್ಟ್ರೀಟ್ ಪೊಲೀಸ್​ ಠಾಣೆಯಿಂದ ಸಿಸಿಬಿಗೆ ವರ್ಗಾಯಿಸಲಾಗಿದೆ.

Read More »

ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು : ರೈತರ ಆದಾಯವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ನಿರಂತರವಾಗಿ ಪ್ರಯತ್ನಿಸುತ್ತಿದೆ. ಅಲ್ಲದೆ ಹಲವು ಯೋಜನೆಗಳನ್ನು ಸರ್ಕಾರ ನಡೆಸುತ್ತಿದ್ದು, ಇದರಿಂದ ರೈತರಿಗೆ ಅಪಾರ ಲಾಭವಾಗುತ್ತಿದೆ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯು ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿದೆ. ಮುಂದಿನ 24 ಘಂಟೆಗಳಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳ ಮತ್ತು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, …

Read More »

ಪಿ ಎಸ್ ಐ ಅಕ್ರಮ ನೇಮಕಾತಿ ಪ್ರಕರಣ : 3 ಜನ ಬಂಧನ

ಬೆಂಗಳೂರು: ಪಿ ಎಸ್ ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಹೆಚ್ ಎ ಎಲ್ ಸಂಚಾರಿ ಠಾಣೆ ಹೆಡ್ ಕಾನ್ಸ್ ಟೇಬಲ್ ಆಗಿ ಕೆಲಸ ಮಾಡುತ್ತಿದ್ದ ಜೇವರ್ಗಿ ಮೂಲದ ಲಕ್ಕಪ್ಪ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಆರ್.ಡಿ ಪಾಟೀಲ್ ಮೂಲಕ ಡೀಲ್ ಮಾಡಿಕೊಂಡು ಇನ್ ಸರ್ವಿಸ್ ಖೋಟಾದಡಿ ಕಸ್ತೂರಿ ನಗರ ಬಳಿಯ ನ್ಯೂ ಹಾರಿಜನ್ ಕಾಲೇಜಿನಲ್ಲಿ ಅಕ್ರಮವಾಗಿ ಲಿಖಿತ ಪರೀಕ್ಷೆ ಬರೆದಿದ್ದ …

Read More »

24 ಗಂಟೆಗಳಲ್ಲಿ ತ್ವರಿತವಾಗಿ ಮಳೆ ಹಾನಿ ಪರಿಹಾರ ನೀಡಲಾಗುತ್ತದೆ : ಬೊಮ್ಮಾಯಿ

ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜೀವ ಹಾನಿಯ ಜೊತೆಗೆ ಹೊಲಗದ್ದೆಗಳಿಗೆ ನೀರು ನುಗ್ಗಿರುವ ಪರಿಣಾಮ ಬೆಳೆ ನಷ್ಟವೂ ಸಂಭವಿಸಿದೆ. ಇದರ ಜೊತೆಗೆ ರಸ್ತೆಗಳು ಸಹ ಕಿತ್ತು ಹೋಗಿವೆ. ಇದೀಗ ವಿಜಯನಗರ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯದ ಆಯ್ದ 16 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಮಳೆ ಹಾನಿಗೆ ಸಂಬಂಧಿಸಿದಂತೆ 24 ಗಂಟೆಗಳೊಳಗಾಗಿ ಪರಿಹಾರ ವಿತರಿಸುವಂತೆ ಸೂಚಿಸಲಾಗಿದೆ …

Read More »

ಕರ್ನಾಟಕ ಸಿವಿಲ್ ಪೊಲೀಸ್ ಪೇದೆಗಳ 1137 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಸಿವಿಲ್ ಪೊಲೀಸ್ ಪೇದೆಗಳ (ಸಿಪಿಸಿ) 1137 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ರಾಜ್ಯ ಪೊಲೀಸ್ ಇಲಾಖೆಯು ಗೆಜೆಟ್ ಅಧಿಸೂಚನೆ ಹೊರಡಿಸಿದೆ. ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದು, ಅರ್ಜಿ ಸ್ವೀಕಾರ ಪ್ರಕ್ರಿಯೆ 2022 ಅಕ್ಟೋಬರ್ 20ರಿಂದ ಬೆಳಗ್ಗೆ 10 ಗಂಟೆಯಿಂದ ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಕೊನೆ ದಿನಾಂಕ 2022ರ ನವಂಬರ್ 21ರ ಸಂಜೆ ಆರು ಗಂಟೆವರೆಗೆ ಅವಕಾಶ ಇರಲಿದೆ. ಅರ್ಜಿ ಶುಲ್ಕ ಪಾವತಿಸಲು …

Read More »