Breaking News

ಬೆಂಗಳೂರು

ಮೋದಿ ವಿಶ್ವ ಗುರು ಅಲ್ಲ, ಅವರೊಬ್ಬ ಪುಕ್ಕಲು ಗುರು : ಸಿದ್ದರಾಮಯ್ಯ

ಬೆಂಗಳೂರು : ‘ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಶ್ವ ಗುರು ಅಲ್ಲ. ಅವರೊಬ್ಬ ಪುಕ್ಕಲು ಗುರು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಬಚ್ಚಾ ಎಂದಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಡಿಯೂರಪ್ಪ ಹೇಳಿಕೆಗೆ ರಾಜ್ಯ ಕಾಂಗ್ರೆಸ್‌ ಸಹ ಕಿಡಿ ಕಾರಿದ್ದು, ‘ನಿಮ್ಮ ಮುಂದೆ ನರೇಂದ್ರ ಮೋದಿ ಅವರೂ ಬಚ್ಚಾ …

Read More »

ರಾಜ್ಯಾದ್ಯಂತ ಇನ್ನೂ 2 ದಿನ ಭಾರೀ ಮಳೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ 2 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಒಳನಾಡಿನ ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ದಾವಣಗೆರೆ, ಬಳ್ಳಾರಿ, ಗದಗ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ 6.5 ಸೆಂ.ಮೀ.ನಿಂದ 11.ಸೆಂ.ಮೀ ತನಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು …

Read More »

ಗ್ರಾ.ಪಂ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸುವ ಪ್ರಸ್ತಾವನೆಗೆ ಸಿಎಂ ತಿರಸ್ಕಾರ

ಬೆಂಗಳೂರು : ಗ್ರಾಮಪಂಚಾಯಿತಿಗಳ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸಿ ಪಿಡಿಒಗಳಿಗೆ ನೀಡುವ ಪ್ರಸ್ತಾವನೆಗೆ ಸಿಎಂ ಬಸವರಾಜ ಬೊಮ್ಮಾಯಿ ತಿರಸ್ಕರಿಸಿದ್ದಾರೆ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಅರಗಜ್ಞಾನೇಂದ್ರ, ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರುಉ ಹಾಗೂ ಸದಸ್ಯರಿಗೆ ಪ್ರಸ್ತುತ ಇರುವ ಯಾವುದೇ ಅಧಿಕಾರವನ್ನು ಕಡಿತಗೊಳಿಸುವ ವಿಚಾರ ಸರ್ಕಾರದ ಮುಂದೆ ಇಲ್ಲ.ಪಂಚಾಯಿತಿ ಸಂಸ್ಥೆಗಳು, ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದ್ದು, ಗ್ರಾಮೀಣ ಭಾಗದಲ್ಲಿ ಭವಿಷ್ಯದ ನಾಯಕತ್ವ ರೂಪಿಸುವಲ್ಲಿ ಗಣನೀಯ ಕೊಡುಗೆ ಸಲ್ಲಿಸುತ್ತಿವೆ …

Read More »

ಕೇಂದ್ರ ಗೃಹ ಸಚಿವ ಸಲ್ಲಿಸಿರುವ ವರದಿ ಆಘಾತಕಾರಿ ಮಾತ್ರವಲ್ಲ, ವಿನಾಶಕ್ಕೆ ದಾರಿ : ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಸಮಿತಿ, ಹಿಂದಿ ಹೇರಿಕೆ ಬಗ್ಗೆ ರಾಷ್ಟ್ರಪತಿಗಳಿಗೆ ಸಲ್ಲಿಸಿರುವ ವರದಿ ಆಘಾತಕಾರಿ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ವಿನಾಶಕ್ಕೆ ದಾರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್‌ ಮಾಡಿರುವ ಮಾಜಿ ಮುಖ್ಯಮಂತ್ರಿಗಳು ಮಾಧ್ಯಮ ಹೇಳಿಕೆಯನ್ನೂ ಬಿಡುಗಡೆ ಮಾಡಿರುವ ಅವರು, ಕೇಂದ್ರ ಸರಕಾರ ತನ್ನ ಚಾಳಿ ಮುಂದುವರಿಸಿದೆ. ಇಡೀ ಭಾರತವನ್ನು ಹಿಡೆನ್ ಅಜೆಂಡಾ ಮೂಲಕ ಹಿಡಿದಿಟ್ಟುಕೊಳ್ಳುವ ಕಪಟಯತ್ನ ಮಾಡುತ್ತಿದೆ. …

Read More »

ಕಾಂಗ್ರೆಸ್‌ನವರಿಗೆ 80 ಕ್ಷೇತ್ರದಲ್ಲಿ ಅಭ್ಯರ್ಥಿಗಳಿಲ್ಲ : ಸಿ.ಎಂ.ಇಬ್ರಾಹಿಂ ವ್ಯಂಗ್ಯ

ಬೆಂಗಳೂರು : ಕಾಂಗ್ರೆಸ್‌ನವರಿಗೆ 80 ಕ್ಷೇತ್ರದಲ್ಲಿ ಅಭ್ಯರ್ಥಿಗಳಿಲ್ಲ. ನಾನು ಅಲ್ಲಿಯೇ ಇದ್ದವನು, ಹಳೆ ಹೆಂಡಂದಿರ ಬಗ್ಗೆ ನಮಗೆ ಗೊತ್ತಿಲ್ಲವೇ? ಅಭ್ಯರ್ಥಿಗಳನ್ನು ಹುಡುಕುತ್ತಿದ್ದಾರೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ಅವರನ್ನು ನಾವು ಹನುಮಂತನಂತೆ ಹೊತ್ತುಕೊಂಡು ಹೋಗುತ್ತಿದ್ದೆವು. ಈಗ ಹೊತ್ತುಕೊಂಡು ಹೋಗುವವರು ಯಾರಿಲ್ಲ. ಪಾಪ ಅವರನ್ನು ಓಡಿಸಿಬಿಟ್ಟರು. ಅವರಿಗೆ ಸ್ಟೆಂಟ್‌ ಹಾಕಿದ್ದಾರೆ. ಇರುವ ಆರೋಗ್ಯ ಎಲ್ಲಿ ಹಾಳಾಗುತ್ತೋ ಎಂದು ನನಗೆ ಗಾಬರಿಯಾಗಿತ್ತು. ಸದ್ಯ ವೇಣುಗೋಪಾಲ ಬಂದು ಹಿಡಿದುಕೊಂಡರು. ಸಿದ್ದರಾಮಯ್ಯ ಅವರ …

Read More »

108 ಆಯಂಬುಲೆನ್ಸ್ ಸೇವೆ ಸ್ಥಗಿತ : ರೋಗಿಗಳು ಪರದಾಟ

ಬೆಂಗಳೂರು : ಕೆಲ ದಿನಗಳ ಹಿಂದೆ ತಾಂತ್ರಿಕ ಸಮಸ್ಯೆಯಿಂದ ಸ್ಥಗಿತಗೊಂಡಿದ್ದ 108 ಆಯಂಬುಲೆನ್ಸ್ ಸೇವೆ ಇದೀಗ ಸಿಬ್ಬಂದಿ ಕೊರೆಯಿಂದಾಗಿ ಮತ್ತೆ ಸ್ಥಗಿತಗೊಂಡಿದೆ. ರೋಗಿಗಳು ಪರದಾಡುವಂತಾಗಿದೆ. ಈಗ ಸಿಬ್ಬಂದಿ ಕೊರತೆಯಿಂದ ಸಿಗದ 108 ಆಯಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯವಾಗಿದೆ. 108 ಕ್ಕೆ ಕರೆ ಮಾಡಿದ್ರೆ ಯಾರೂ ಕರೆ ಸ್ವೀಕರಿಸುತ್ತಿಲ್ಲ. ಹೀಗಾಗಿ ಅನೇಕ ಜಿಲ್ಲೆಗಳಲ್ಲಿ ರೋಗಿಗಳು ಮತ್ತೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ನಿನ್ನೆ ರಾತ್ರಿಯಿಂದ 108 ಆಯಂಬುಲೆನ್ಸ್ ಸೇವೆಯಲ್ಲಿ ಸಮಸ್ಯೆ ಕಂಡುಬಂದಿದೆ. ವೇತನ ನೀಡದಿದ್ದಕ್ಕೆ …

Read More »

ಅ. 11ರವರೆಗೂ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಇಂದಿನಿಂದ ಈ ಜಿಲ್ಲೆಗಳಲ್ಲಕಿ ಅ. 11ರವರೆಗೂ ಭಾರೀ ಮಳೆಯಾಗಲಿದೆ. ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅ. 11ರಂದು ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕಲಬುರ್ಗಿ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿಯಲ್ಲಿ ಹಳದಿ ಅಲರ್ಟ್​ ಘೋಷಿಸಲಾಗಿದೆ. ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ ಹಾಗೂ ಮಧ್ಯ …

Read More »

ಅ.11ರಿಂದ ಒಂದು ತಿಂಗಳ ಕಾಲ ಮಾಜಿ ಸಿಎಂ ಜೊತೆ ಸಿಎಂ ರಾಜ್ಯಪ್ರವಾಸ : ಬೊಮ್ಮಾಯಿ

ಬೆಂಗಳೂರು: ಪಕ್ಷದ ಬಲವರ್ಧನೆ ಹಾಗೂ ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ತಿಳಿಸುವ ಸಲುವಾಗಿ ಅ.11ರಿಂದ ಒಂದು ತಿಂಗಳ ಕಾಲ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಜತೆ ರಾಜ್ಯ ಪ್ರವಾಸ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ್‌ ಜೋಡೋ ಅಭಿಯಾನಕ್ಕೂ ಮುನ್ನವೇ ರಾಜ್ಯದಲ್ಲಿ ಬಿಜೆಪಿ ಆರು ರ‍್ಯಾಲಿಗಳನ್ನು ಆಯೋಜಿಸಲು ನಿರ್ಧರಿಸಿತ್ತು. ಆದರೆ ದಸರಾ ಹಾಗೂ ವಿಧಾನಸಭಾ ಅಧಿವೇಶನಗಳ ಹಿನ್ನೆಲೆಯಲ್ಲಿ ರ‍್ಯಾಲಿಗಳನ್ನು ನಡೆಸುವುದು ವಿಳಂಬವಾಯಿತು ಎಂದರು. …

Read More »

ಎಪ್‌ಕೆಸಿಸಿಐ ಅಧ್ಯಕ್ಷರಾಗಿ ಉದ್ಯಮಿ ಬಿ.ವಿ. ಗೋಪಾಲ ರೆಡ್ಡಿ ಆಯ್ಕೆ

ಬೆಂಗಳೂರು: ಉದ್ಯಮಿ ಬಿ.ವಿ. ಗೋಪಾಲ ರೆಡ್ಡಿ ಅವರು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ (ಎಪ್‌ಕೆಸಿಸಿಐ)ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ರೆಡ್ಡಿ ಅವರ ಬೆಂಗಳೂರಿನ ಮಾರ್ಷಲ್ ಮೋಟರ್ಸ್ ಪ್ರೈ.ಲಿ. ಕಂಪನಿಯ ಅಧ್ಯಕ್ಷ. ರೆಡ್ಡಿ ಅವರು ಎಫ್‌ಕೆಸಿಸಿಐ ಜೊತೆ ಎರಡು ದಶಕಗಳಿಗೂ ಹೆಚ್ಚಿನ ಅವಧಿಯಿಂದ ಗುರುತಿಸಿಕೊಂಡಿದ್ದಾರೆ. ಹಿಂದೆ ಎಫ್‌ಕೆಸಿಸಿಐ ಉಪಾಧ್ಯಕ್ಷರಾಗಿ, ಹಿರಿಯ ಉಪಾಧ್ಯಕ್ಷರಾಗಿ ಅವರು ಕರ್ತವ್ಯ ನಿಭಾಯಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. ರಮೇಶ್‌ ಚಂದ್ರ ಲಹೋಟಿ ಅವರು ಎಫ್‌ಕೆಸಿಸಿಐ ಹಿರಿಯ ಉಪಾಧ್ಯಕ್ಷರಾಗಿ, ಎಂ.ಜಿ. …

Read More »

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಕೊರೋನಾ ಸೋಂಕು ದೃಢ

ಬೆಂಗಳೂರು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕೊರೋನಾ ಸೋಂಕು ದೃಢವಾಗಿದೆ. ಇಂದು ಅವರು ಕೊರೊನಾ ವೇಳೆ ಸೋಂಕು ಟೆಸ್ಟ್ ಮಾಡಿಸಿಕೊಂಡಿದ್ದರು,ಪರೀಕ್ಷೆಯಲ್ಲಿ ತಗುಲಿರುವುದು ಧೃಡಪಟ್ಟಿದೆ. ಈ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ತಮ್ಮ ಟ್ವಿಟ್ಟರ್ ನಲ್ಲಿ, ಮಾನ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಕೊರೋನಾ ಸೋಂಕಿನಿಂದ ಶೀಘ್ರವಾಗಿ ಗುಣಮುಖರಾಗಿ ಎಂದಿನಂತೆ ತಮ್ಮ ಕಾರ್ಯಚಟುವಟಿಕೆಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Read More »