Breaking News

ಬೆಂಗಳೂರು

ನೀರಾವರಿ ಯೋಜನೆಗಳನ್ನು ಅಭಿವೃದ್ದಿಪಡಿಸಲು ಯೋಜನೆ ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಶನಿವಾರ ಮಂಡನೆಯಾಗಲಿರುವ ಕೇಂದ್ರ ಬಜೆಟ್ 2025ರಲ್ಲಿ ರಾಜ್ಯದಲ್ಲಿನ ಕುಡಿಯುವ ನೀರು ಮತ್ತು ನೀರಾವರಿ ಯೋಜನೆಗಳಿಗೆ ಅಗತ್ಯ ಅನುಮೋದನೆ ನೀಡಬೇಕು. ನಗರಗಳ ನಿರಂತರ ಬೆಳವಣಿಗೆಯನ್ನು ಬೆಂಬಲಿಸಲು ನಿರ್ಣಾಯಕ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಹೊಸ ಯೋಜನೆಯನ್ನು ರೂಪಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ದಾವಣಗೆರೆ, ಬಳ್ಳಾರಿ, ರಾಯಚೂರು ಮತ್ತು ಕಲಬುರಗಿಯಂತಹ ನಗರಗಳು ಆರ್ಥಿಕ ಬೆಳವಣಿಗೆ ಮತ್ತು ಉದ್ಯೋಗ ನೀಡುವ ನಗರವಾಗಿ ಮುಂದುವರೆದಿದ್ದು, ತ್ವರಿತ ನಗರೀಕರಣ …

Read More »

ಸಿಇಟಿ, ನೀಟ್ ಪ್ರವೇಶ ಪರೀಕ್ಷೆಗಳಿಗೆ ಆಧಾರ್ ಆಧಾರಿತ ನೋಂದಣಿ ತರಲು ಕೆಇಎ ನಿರ್ಧಾರ

ಬೆಂಗಳೂರು: ಪಿಯುಸಿ ನಂತರ ಭವಿಷ್ಯದ ವೃತ್ತಿ ಆಯ್ಕೆಗೆ ಪೂರಕವಾದ ಶಿಕ್ಷಣ ಆಯ್ಕೆ ಮಾಡಲು ಸಿಇಟಿ (CET)ಪರೀಕ್ಷೆಯನ್ನು ಪ್ರತಿಯೊಬ್ಬ ವಿದ್ಯಾರ್ಥಿ ಬರೆಯಲೇಬೇಕು. ಆದರೆ ಇತ್ತೀಚೆಗೆ ಸಿಇಟಿ ಕೌನ್ಸೆಲಿಂಗ್​​​ನಲ್ಲಿ ಸೀಟ್ ಬ್ಲಾಕಿಂಗ್, ಹೆಚ್ಚು ಹಣ ನೀಡಿದವರಿಗೆ ಸೀಟು ನೀಡುವ ದಂಧೆಗಳು ನಡೆದಿದ್ದು ಕಂಡುಬಂದಿತ್ತು. ಹೀಗಾಗಿ ಇದಕ್ಕೆ ಕಡಿವಾಣ ಹಾಕಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮುಂದಾಗಿದ್ದು, ಕಠಿಣ ಸೇರಿದಂತೆ ಕೆಲ ಹೊಸ ನಿಯಮಗಳನ್ನು ತರಲು ಮುಂದಾಗಿದೆ. 2023 ಮತ್ತು 2024ರ ಸಿಇಟಿ ಕೌನ್ಸೆಲಿಂಗ್​ನಲ್ಲಿ …

Read More »

ಯು ಪಿ ಎಸ್ ಸಿ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಯುಪಿಎಸ್ಸಿ ಹಾಗೂ ಎಸ್ ಎಸ್ ಸಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಂತ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಪರೀಕ್ಷೆಗಾಗಿ ಅರ್ಜಿ ಸಲ್ಲಿಸಲು ಬೇಕಿರುವಂತ ಓಬಿಸಿ ಪ್ರಮಾಣಪತ್ರಕ್ಕಾಗಿ 2ನೇ ಸಲ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ. ಈ ಸಂಬಂಧ ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯದ ನಿರ್ದೇಶಕರು ಮಾಹಿತಿ ನೀಡಿದ್ದು, UPSC ಸಿವಿಲ್ ಸರ್ವೀಸಸ್ ಪರೀಕ್ಷ ಆಕಾಂಕ್ಷಿಗಳಿಗೆ ಮತ್ತು SSC ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸುವ OBC ಅಭ್ಯರ್ಥಿಗಳು ದಿನಾಂಕ: …

Read More »

ಭೂ ಪರಿವರ್ತನೆ ಪ್ರಕ್ರಿಯೆಯನ್ನು ಒಂದು ತಿಂಗಳೊಳಗಾಗಿ ಪೂರ್ಣಗೊಳಿಸಬೇಕು: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಭೂ ಪರಿವರ್ತನೆ ಸಂಪೂರ್ಣ ಪ್ರಕ್ರಿಯೆಯನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು. ಮಾಸ್ಟರ್ ಪ್ಲಾನ್ ಆದ ಕಡೆ ಮತ್ತೆ ಭೂ ಪರಿವರ್ತನೆ ಅಗತ್ಯವಿಲ್ಲ ಎಂದು ಕಾಯ್ದೆಗೆ ತಿದ್ದುಪಡಿ ಮಾಡಲಾಗಿದೆ. ಈ ಕುರಿತು ಆದೇಶವನ್ನು ಆದಷ್ಟು ಬೇಗನೆ ಹೊರಡಿಸಬೇಕು ಎಂದು ಸಿಎಂ ಸಿದ್ಧರಾಮಯ್ಯ ಸೂಚನೆ ನೀಡಿದ್ದಾರೆ. ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ನೀಡಿದ ಸೂಚನೆಗಳನ್ನು ನೀಡಿದ್ದು, ನಗರ ಪ್ರದೇಶಗಳಲ್ಲಿ ಮಾಸ್ಟರ್ ಪ್ಲಾನ್ ಅನ್ನು ಕಾಲದಿಂದ ಕಾಲಕ್ಕೆ ನವೀಕರಿಸಬೇಕು. ಮ್ಯುಟೇಶನ್, …

Read More »

ಮಹಾಕುಂಭಮೇಳ; ಕಾಲ್ತುಳಿತದಲ್ಲಿ ಕರ್ನಾಟಕದ ನಾಲ್ವರು ಮೃತ: ಪರಿಹಾರ ಘೋಷಣೆ ಕುರಿತು ಸಿಎಂ ಮಾಹಿತಿ

ಬೆಂಗಳೂರು: ಪ್ರಯಾಗ್ ರಾಜ್ ನಲ್ಲಿ ನಡೆದಿರುವ ಕಾಲ್ತುಳಿತದಲ್ಲಿ ಕರ್ನಾಟಕದ ನಾಲ್ವರು ಮೃತಪಟ್ಟಿದ್ದು, ಮೃತ ದೇಹಗಳನ್ನು ರಾಜ್ಯಕ್ಕೆ ತರಲು ಏರ್ ಆಂಬ್ಯುಲೆನ್ಸ್ ಕಳುಹಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಳಗಾವಿ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ವ್ಯವಸ್ಥೆ ಮಾಡಿದ್ದು, ಇನ್ನೂ ಎಂಟು ಜನ ನಾಪತ್ತೆಯಾಗಿರುವ ಬಗ್ಗೆ ಮಾಹಿತಿಯಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಮೃತ ಪಟ್ಟವರ ಕುಟುಂಬಕ್ಕೆ ಪರಿಹಾರವನ್ನು ಘೋಷಣೆ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿ ನೀಡಿದರು.

Read More »

ಬಿಬಿಎಂಪಿ ಹೊರತುಪಡಿಸಿ ರಾಜ್ಯದ ನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ದಾಖಲೆಗಳಿಲ್ಲದ ನಿವೇಶನಗಳಿಗೆ ಬಿ ಖಾತಾ ನೀಡುವಂತೆ ಸಿಎಂ ಆದೇಶ

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೊರತುಪಡಿಸಿ ರಾಜ್ಯದ ಉಳಿದ ನಗರಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಪ್ರದೇಶ ವ್ಯಾಪ್ತಿಯಲ್ಲಿ ಯಾವುದೇ ದಾಖಲೆಗಳಿಲ್ಲದ ನಿವೇಶನಗಳಿಗೆ ‘ಬಿ’ ಖಾತಾ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಮಾಡಿದ್ದಾರೆ. ಒಂದು ಬಾರಿಗೆ ಅನ್ವಯವಾಗುವಂತೆ ಈ ಆದೇಶ ಹೊರಡಿಸಿ, ಎಲ್ಲ ಅಕ್ರಮ ನಿವೇಶನಗಳನ್ನು ಸಕ್ರಮಗೊಳಿಸಿ ಇನ್ನು ಮುಂದೆ ರಾಜ್ಯದ ಯಾವುದೇ ಭಾಗದಲ್ಲಿ ಅನಧಿಕೃತ ಬಡಾವಣೆ ತಲೆ ಎತ್ತದಂತೆ ನೋಡಿಕೊಳ್ಳಿ ಎಂದು ಮುಖ್ಯಕಾರ್ಯದರ್ಶಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ …

Read More »

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆದಿದೆ. ಈ ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಸೇರಿದಂತೆ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಭಾಗಿಯಾಗಿದ್ದಾರೆ.

Read More »

ಅಲೆಮಾರಿ ಸಮುದಾಯಗಳಿಗೆ ಒಳಮೀಸಲಲ್ಲಿ ಪ್ರತ್ಯೇಕ ವರ್ಗ ಸೃಷ್ಟಿಸುವಂತೆ ಬೇಡಿಕೆ

ಬೆಂಗಳೂರು: ಕರ್ನಾಟಕ ಪರಿಶಿಷ್ಟ ಜಾತಿ ಕೊರಮ, ಕೊರಚ, ಕುರುವನ್, ಕೇಪ್ಮಾರಿಸ್ ವೈಜ್ಞಾನಿಕ ಒಳಮೀಸಲಾತಿ ಅನುಷ್ಠಾನ ಹೋರಾಟ ಸಮಿತಿಯ ನಿಯೋಗವು ಬುಧವಾರ ಒಳ ಮೀಸಲು ವಿಚಾರದಲ್ಲಿ ಸರ್ಕಾರ ರಚಿಸಿರುವ ನ್ಯಾ.ನಾಗಮೋಹನದಾಸ್ ನೇತೃತ್ವದ ವಿಚಾರಣಾ ಆಯೋಗಕ್ಕೆ ಮನವಿ ಸಲ್ಲಿಸಿ ತಮ್ಮ ಬೇಡಿಕೆಯನ್ನು ಪ್ರಸ್ತಾಪಿಸಿದೆ. ಸುಪ್ರೀಂಕೋರ್ಟ್ ತೀರ್ಪಿನ ಮಾನದಂಡದಂತೆ ಪರಿಶಿಷ್ಟ ಜಾತಿಗಳಲ್ಲಿಯೇ ಅತ್ಯಂತ ಹಿಂದುಳಿದಿರುವ ಅಧಿಸೂಚಿತ ಸಮುದಾಯ (ಡಿಎನ್‌ಟಿಎಸ್) ವಿಮುಕ್ತ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕವಾದ ವರ್ಗವನ್ನು ಸೃಷ್ಟಿಸಬೇಕು. ಆ ವರ್ಗದಲ್ಲಿ ಕೊರಚ, ಕೊರಮ, ಕುರವನ್ …

Read More »

ಪ್ರಸಕ್ತ ವರ್ಷದಲ್ಲಿ ಸಣ್ಣ ನೀರಾವರಿ ಇಲಾಖೆಯಲ್ಲಿ 1,468 ಕೋಟಿ ರೂ. ವೆಚ್ಚ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪ್ರಸಕ್ತ ವರ್ಷದಲ್ಲಿ ಸಣ್ಣ ನೀರಾವರಿ ಇಲಾಖೆಗೆ 1,577 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದ್ದು, ಇದುವರೆಗೆ 1,468 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬುಧವಾರ ಮುಖ್ಯಮಂತ್ರಿಗಳ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಸಣ್ಣ ನೀರಾವರಿ ಇಲಾಖೆಯ ಪ್ರಗತಿ ಪರೀಶಿಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರಸ್ತುತ ವರ್ಷ ಸಣ್ಣ ನೀರಾವರಿ ಇಲಾಖೆಯ 9,449 ಹೆಕ್ಟೇರ್ ಹೊಸ ಅಚ್ಚುಕಟ್ಟು ಸೃಷ್ಟಿಸಲಾಗಿದೆ ಎಂದರು. ರಾಜ್ಯದಲ್ಲಿ ಸಣ್ಣ ನೀರಾವರಿ …

Read More »

ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಬೆಂಗಳೂರು: ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗೆ ಆರೋಪಪಟ್ಟಿ ದಾಖಲಿಸುವ ಜತೆಗೆ ಶಿಕ್ಷೆಯ ಪ್ರಮಾಣ ಹೆಚ್ಚಳವಾಗುವಂತೆ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡದ ಜಾಗೃತ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಈ ಪ್ರಕರಣಗಳಿಗೆ ಯಾರಾದರೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದರೆ ಅಡ್ವೊಕೇಟ್‌ ಜನರಲ್‌ ಜತೆ ಚರ್ಚಿಸಿ ತಡೆಯಾಜ್ಞೆ ತೆರವುಗೊಳಿಸಿ. ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ …

Read More »