BigTv News
September 24, 2022
Breaking News, ಬೆಂಗಳೂರು
ಬೆಂಗಳೂರು :ರಾಜ್ಯದಲ್ಲಿ ಖಾಲಿ ಇರುವ 43 ಸಾವಿರ ಪೌರ ಕಾರ್ಮಿಕರ ಹುದ್ದೆಗಳ ನೇಮಕಕ್ಕೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಪೌರ ಕಾರ್ಮಿಕರ ದಿನಾಚರಣೆ ಅಂಗವಾಗಿ ಶುಕ್ರವಾರ ಬೆಳಿಗ್ಗೆ ಟ್ವೀಟ್ ಮಾಡಿರುವ ಅವರು, ಕರ್ನಾಟಕದಲ್ಲಿ ಶೀಘ್ರ ಪೌರ ಕಾರ್ಮಿಕರ ನೇಮಕಾತಿ ನಡೆಯಲಿದೆ.43 ಸಾವಿರ ಕಾರ್ಮಿಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು. ಶುಕ್ರವಾರ ಬೆಳಿಗ್ಗೆ ಕಾರ್ಮಿಕರೊಂದಿಗೆ ಉಪಾಹಾರ ಸೇವಿಸಿ ಮಾತನಾಡಿದ ಅವರು, ಪೌರ ಕಾರ್ಮಿಕರ ಪರಿಶ್ರಮಕ್ಕೆ ಫಲ …
Read More »
BigTv News
September 24, 2022
Breaking News, ಬೆಂಗಳೂರು
ಬೆಂಗಳೂರು: ಕಾಂಗ್ರೆಸ್ ಹಮ್ಮಿಕೊಂಡಿರುವ ಭಾರತ್ ಜೋಡೊ ಯಾತ್ರೆಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಭಾಗವಹಿಸುತ್ತಿದ್ದಾರೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿ ನಡೆಸುತ್ತಿರುವ ಯಾತ್ರೆ ರಾಜ್ಯದಲ್ಲಿ ಸೆ.30ರಂದು ಬೆಳಗ್ಗೆ 9ಕ್ಕೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಿಂದ ಆರಂಭವಾಗಲಿದೆ. ಸೋನಿಯಾ ಗಾಂಧಿ ಭಾಗವಹಿಸುವ ದಿನಾಂಕ ಶೀಘ್ರ ನಿರ್ಧರಿಸಲಾಗುವುದು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್, ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. …
Read More »
BigTv News
September 23, 2022
Breaking News, ಬೆಂಗಳೂರು
ಬೆಂಗಳೂರು: ‘ಬಿಎಂಎಸ್ ಶಿಕ್ಷಣ ಸಂಸ್ಥೆಯಲ್ಲಿ ಬೈಲಾ ಉಲ್ಲಂಘಿಸಿ ಟ್ರಸ್ಟಿಗಳ ನೇಮಕ, ಪ್ರವೇಶ ಪ್ರಕ್ರಿಯೆ, ಶುಲ್ಕ ವಸೂಲಿ ಮತ್ತು ಜಮೀನಿನಲ್ಲಿ ಅಕ್ರಮ ನಡೆದಿದ್ದು, ಇದರಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಶಾಮೀಲಾಗಿರುವುದರಿಂದ ಅವರ ತಲೆದಂಡ ಆಗಲೇಬೇಕು’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದರು. ವಿಧಾನಸಭೆಯಲ್ಲಿ ಗುರುವಾರ ನಿಯಮ 69ರ ಅಡಿ ಈ ವಿಷಯವನ್ನು ಪ್ರಸ್ತಾಪಿಸಿದ ಅವರು, ಈ ವಿಷಯದ ಬಗ್ಗೆ ಒಂದೂವರೆ ಗಂಟೆಗಳ ಕಾಲ ಸುದೀರ್ಘ ವಿವರಣೆ ನೀಡಿದರಲ್ಲದೇ …
Read More »
BigTv News
September 22, 2022
Breaking News, ಬೆಂಗಳೂರು
ಬೆಂಗಳೂರು: ಕಂದಾಯ ಇಲಾಖೆಯ ಕಾಗದ ಪತ್ರಗಳಲ್ಲಿ ಹೆಸರನ್ನು ಬದಲಾವಣೆ ಮಾಡಿದರೆ ಅವರು ಅಪರಾಧಿಗಳಾಗುತ್ತಾರೆ. ಮಾಡಿ ಕೊಟ್ಟವರು ಅಪರಾಧಿಗಳಾಗುತ್ತಾರೆ. ಇಬ್ಬರ ಮೇಲೆಯೂ ಕ್ರಮ ತೆಗೆದುಕೊಳ್ಳುತ್ತೇವೆ.ಅಧಿಕಾರಿಗಳನ್ನು ಅಮಾನತು ಮಾಡಿ, ಅವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸುತ್ತೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ವಿಧಾನಸಭೆಯಲ್ಲಿ ಶೂನ್ಯ ವೇಳೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಯಾದಗಿರಿ ಜಿಲ್ಲೆಯ ಕೊಡೆಕಲ್ ಗ್ರಾಮದಲ್ಲಿ ಸರ್ವೇ ನಂಬರ್ 72ರಲ್ಲಿ 15 ಎಕರೆ 10 ಗುಂಟೆ ಜಮೀನನ್ನು ಕೃಷ್ಣ …
Read More »
BigTv News
September 21, 2022
Breaking News, ಬೆಂಗಳೂರು
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ‘ದೇವೇಗೌಡರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಬಹಳ ಆತ್ಮೀಯವಾಗಿ, ಲವಲವಿಕೆಯಿಂದ ಮಾತನಾಡಿದ್ದಾರೆ. ಸಾಕಷ್ಟು ಹಳೆಯ ವಿಚಾರಗಳನ್ನು ಮೆಲಕು ಹಾಕಿದರಲ್ಲದೆ ರಾಜ್ಯಕ್ಕೆ ಒಳ್ಳೆಯದು ಮಾಡಬೇಕೆಂಬ ನಿಟ್ಟಿನಲ್ಲಿ ಅವರ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅವರ ಆರೋಗ್ಯ ಚೆನ್ನಾಗಿರಲಿ, ನೂರ್ಕಾಲ ಚೆನ್ನಾಗಿ ಬಾಳಲಿ. ರಾಜ್ಯಕ್ಕೆ ಅವರಿಂದ ಇನ್ನಷ್ಟು ಮಾರ್ಗದರ್ಶನ ಸಿಗುವಂತಾಗಲಿ ಎಂದು …
Read More »
BigTv News
September 21, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯದ ಕೆಲ ಜಿಮ್ ಗಳಲ್ಲಿ ಪ್ರೋಟೀನ್ ಪೌಡರ್ ಮಾರಾಟ ಮಾಡಲಾಗುತ್ತಿದ್ದು, ಪ್ರೋಟೀನ್ ಪೌಡರ್ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯದ ಹಲವು ಜಿಮ್ನಲ್ಲಿ ಬಳಸುವ ಪ್ರೋಟೀನ್ ಪೌಡರ್ ಅನ್ನು ಬ್ಯಾನ್ ಮಾಡುವಂತೆ ಸದನದಲ್ಲಿ ಒತ್ತಾಯ ಮಾಡಲಾಗಿದೆ. ಈ ಬಗ್ಗೆ ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಜಿಮ್ಗಳಲ್ಲಿ ಬಳಕೆ ಮಾಡುವ ಪ್ರೋಟೀನ್ ಪೌಡರ್‌ಗಳ ಬಗ್ಗೆ ಸದನದ ಗಮನ ಸೆಳೆದು ತಮ್ಮ ಸಂತೋಷ್ …
Read More »
BigTv News
September 21, 2022
Breaking News, ಬೆಂಗಳೂರು
ಬೆಂಗಳೂರು : ಹಣ ವರ್ಗವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನವದೆಹಲಿಯಲ್ಲಿರುವ ಇಡಿ ಕಚೇರಿಗೆ ತೆರಳಿ ವಿಚಾರಣೆಗೆ ಹಾಜರಾದರು. ಈ ಸಂದರ್ಭದಲ್ಲಿ ಡಿಕೆಶಿ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು, ತೀವ್ರ ಜ್ವರದಿಂದ ಬಳಲುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜ್ವರ ಹೆಚ್ಚಾಗಿರುವುದರಿಂದ ದೆಹಲಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇಡಿ ಡ್ರಿಲ್ ಆಗಮಿಸಿದ ಸಂದರ್ಭದಲ್ಲಿ ಆರೋಗ್ಯದಲ್ಲಿ ಏರುಪೇರಾಗಿದೆ. ಎಂಬ ಮಾಹಿತಿ ಲಭ್ಯವಾಗಿದೆ. ನಿನ್ನೆ ವೇಳೆ ವಿಚಾರಣೆ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು 36 …
Read More »
BigTv News
September 20, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ 200 ದೈಹಿಕ ಶಿಕ್ಷಕರು ಹಾಗೂ 100 ವಿವಿಧ ಶಿಕ್ಷಕರ ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದರು. ಸೋಮವಾರ ಪ್ರಶ್ನೋತ್ತರ ವೇಳೆ ಬಿಜೆಪಿಯ ಹೇಮಲತಾ ನಾಯಕ್ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ ಒಂದೂವರೆ ದಶಕದಿಂದ 2 ಸಾವಿರಕ್ಕೂ ಹೆಚ್ಚು ದೈಹಿಕ ಮತ್ತು ಚಿತ್ರಕಲಾ ಶಿಕ್ಷಕರ ಹುದ್ದೆಗಳ ಖಾಲಿ ಇವೆ.ಇದುವರೆಗೆ ಯಾವುದೇ ಶಿಕ್ಷಕರ ನೇಮಕಾತಿ ಆಗಿಲ್ಲ. ಒಟ್ಟು 2120 …
Read More »
BigTv News
September 20, 2022
Breaking News, ಬೆಂಗಳೂರು
ಬೆಂಗಳೂರು: SC/ST, BPL ಕಾರ್ಡ್‌ದಾರರಿಗೆ 75 ಯುನಿಟ್ ತನಕ ಉಚಿತ ವಿದ್ಯುತ್ ನೀಡಲು ರಾಜ್ಯ ಸಚಿವ ಸಂಪುಟ ಗ್ರೀನ್ ಸಿಗ್ನಲ್ ನೀಡಿದೆ. ವಿಧಾನಸಭೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ. ಇದೇ ವೇಳೆ ರಾಜ್ಯದ ನಗರಸಭೆ, ಪುರಸಭೆ ಮತ್ತು ಇತರೆ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 11,133 ಪೌರಕಾರ್ಮಿಕರನ್ನು ವಿಶೇಷ ನೇಮಕಾತಿಯಲ್ಲಿ ಸಕ್ರಮ ಮಾಡಲು ಕೂಡ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಸಚಿವ …
Read More »
BigTv News
September 20, 2022
Breaking News, ಬೆಂಗಳೂರು
ಬೆಂಗಳೂರು: ರೈತ ಮುಖಂಡರು, ಕನ್ನಡ ಪರ ಹೋರಾಟಗಾರರ ಮೇಲೆ ದಾಖಲಾದ ಕೇಸ್ ಸೇರಿದಂತೆ 35 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರೈತ ಮುಖಂಡರು ಸೇರಿದಂತೆ ಇತರರ ವಿರುದ್ಧ ದಾಖಲಾದ 35 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆದುಕೊಳ್ಳಲು ತೀರ್ಮಾನಿಸಲಾಗಿದೆ. ಸಚಿವ ಸಂಪುಟ ಉಪಸಮಿತಿ ಆಧರಿಸಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಇದರಲ್ಲಿ ಬಿಜೆಪಿ ಕಾರ್ಯಕರ್ತರು, ಹಿಂದೂ ಪರ …
Read More »