Breaking News

ಬೆಂಗಳೂರು

ಮೊಟ್ಟೆ ಎಸೆದ ಪ್ರಕರಣ ಕುರಿತು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಮಾಜಿ ಸಿಎಂ

ವಿಧಾನಸಭೆ: ನೆರೆ ಸಂತ್ರಸ್ತರ ಸಮಸ್ಯೆ ಆಲಿಸಲು ಕೊಡುಗು ಜಿಲ್ಲೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ಕೊಟ್ಟ ವೇಳೆ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ, ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು. ರಾಜ್ಯದ ಪ್ರವಾಹ ಪರಿಸ್ಥಿತಿ ಕುರಿತು ಮಾತನಾಡುವಾಗ ಸ್ವತಃ ಸಿದ್ದರಾಮಯ್ಯನವರು ಈ ವಿಷಯ ಪ್ರಸ್ತಾಪಿಸಿದರು. ಆಗ ಕೆ.ಜಿ. ಬೋಪ್ಪಯ್ಯ ಹಾಗೂ ಅಪ್ಪಚ್ಚು ರಂಜನ್‌ ವಿರುದ್ಧ ನೇರ ಆರೋಪ ಮಾಡಿದ ಸಿದ್ದರಾಮಯ್ಯ ಘಟನೆಗೆ ಇವರಿಬ್ಬರೇ ನೇರ ಕಾರಣ. ಕೊಡಗಿನ …

Read More »

ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಪಕ್ಷದ ಮಹತ್ವದ ಸಭೆ

ಬೆಂಗಳೂರು : ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್, ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಅವರ ಉಪಸ್ಥಿತರಿದ್ದರು.

Read More »

ಬಿಜೆಪಿ ಅತಿ ದೊಡ್ಡ ಹಗರಣವನ್ನು ವಿಧಾನಸಭೆ ಕಲಾಪದಲ್ಲಿ ಬಯಲು ಮಾಡುವುದಾಗಿ : ಕುಮಾರಸ್ವಾಮಿ

ಬೆಂಗಳೂರು : ಸಾವಿರಾರು ಕೋಟಿ ರು. ಮೌಲ್ಯದ ಸರ್ಕಾರದ ಆಸ್ತಿ ಕಬಳಿಸುವ ಹುನ್ನಾರಕ್ಕೆ ಸಂಬಂಧಿಸಿದಂತೆ ಈ ಸರ್ಕಾರ ನಡೆಸಿರುವ ಅತಿ ದೊಡ್ಡ ಹಗರಣವನ್ನು ವಿಧಾನಸಭೆ ಕಲಾಪದಲ್ಲಿ ಬಯಲು ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಭ್ರಷ್ಟಾಚಾರದ ಬಗ್ಗೆ ದಾಖಲೆಗಳನ್ನು ನೀಡಿ ಎಂದು ಪದೇ ಪದೇ ಕೆಣಕಿದ್ದಾರೆ. ಸಾವಿರಾರು ಕೋಟಿ ರು. ಮೌಲ್ಯದ ಸರ್ಕಾರಿ ಆಸ್ತಿಯನ್ನು …

Read More »

ಸಮಾಜಸೇವಕ ಡಾ.ರಾಮಕೃಷ್ಣರಾವ್ ನಿಧನ

ಬೆಂಗಳೂರು : ವಯೋಸಹಜ ಕಾಯಿಲೆಯಿಂದ ಕನ್ನಡದ ಮಹಾನ್ ವಿಜ್ಞಾನ ಬರಹಗಾರ, ಪ್ರಾಧ್ಯಾಪಕ, ಸಮಾಜಸೇವಕ ಡಾ.ರಾಮಕೃಷ್ಣರಾವ್(87) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ​ ನಿಧನರಾಗಿದ್ದಾರೆ. ಬೆಂಗಳೂರಿನ ಕ್ರೈಸ್ಟ್ ಕಾಲೇಜಿನ ಭೌತಶಾಸ್ತ್ರ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗಗಳ ಮುಖ್ಯಸ್ಥರಾಗಿ ಸೇವೆಸಲ್ಲಿಸಿ ನಿವೃತ್ತರಾಗಿದ್ದಾರೆ. ನಿವೃತ್ತಿಯ ನಂತರ ಸಂದರ್ಶಕ ಪ್ರಾಧ್ಯಾಪಕರಾಗಿ ಬೆಂಗಳೂರು ನಗರದ ಯುವ ವಿದ್ಯಾರ್ಥಿಗಳಲ್ಲಿ ವಿಜ್ಞಾನವನ್ನು ಜನಪ್ರಿಯಗೊಳಿಸಲು ಬೆಂಗಳೂರು ಆಕಾಶವಾಣಿಯನ್ನು ಬಳಸಿಕೊಂಡು ವಿಜ್ಞಾನ ಪ್ರಸಾರದಲ್ಲಿ ಖಗೋಳಶಾಸ್ತ್ರ,ನಕ್ಷತ್ರಗಳು, ಗ್ರಹಗಳಿಗೆ ಸಂಬಂಧಿಸಿದ ನಕ್ಷತ್ರ ವೀಕ್ಷಣೆ, ಮುಂತಾದ ಕಾರ್ಯಕ್ರಮಗಳನ್ನು ಸತತವಾಗಿ ನಡೆಸಿಕೊಟ್ಟ …

Read More »

ಅರಣ್ಯ ಹುತಾತ್ಮರ ಕುಟುಂಬಕ್ಕೆ ಭದ್ರತೆ ಒದಗಿಸಿದ ಸಿಎಂ

ಬೆಂಗಳೂರು: ಅರಣ್ಯ ಹುತಾತ್ಮರ ಕುಟುಂಬಕ್ಕೆ ಸ್ಥಿರತೆ ಮತ್ತು ಭದ್ರತೆ ನೀಡುವ ದೃಷ್ಟಿಯಿಂದ ಹಾಲಿ 30 ಲಕ್ಷ ರೂ.ಇದ್ದ ಪರಿಹಾರದ ಮೊತ್ತವನ್ನು 50 ಲಕ್ಷ ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಬೆಂಗಳೂರಿನಲ್ಲಿ ಭಾನುವಾರ ಅರಣ್ಯ ಇಲಾಖೆ ಆಯೋಜಿಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ 2022 ಸಮಾರಂಭದಲ್ಲಿ ಹುತಾತ್ಮರಿಗೆ ಗೌರವ ಸಲ್ಲಿಸಿ ಮಾತನಾಡಿದರು. ಅರಣ್ಯ ಹುತಾತ್ಮರಿಗೆ 20 ಲಕ್ಷ ರೂ.ಗಳಿದ್ದ ಪರಿಹಾರವನ್ನು 30 ಲಕ್ಷ ರೂ.ಗಳಿಗೆ ಮಾಜಿ ಮುಖ್ಯಮಂತ್ರಿ …

Read More »

2023 ರ ಚುನಾವಣೆ ಯಲ್ಲಿ ಭಾಜಪದ ಕಮಲ ಅರಳುವ ಸಂದೇಶ ಸ್ಪಷ್ಟ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು : ಜನಸ್ಪಂದನ ಕರ್ನಾಟಕದ ಹಳ್ಳಿ ಹಳ್ಳಿಗೂ, ಮೂಲೆ ಮೂಲೆಗೂ, ಕರ್ನಾಟಕದ ಪ್ರತಿ ತಾಲ್ಲೂಕು, ಕ್ಷೇತ್ರಕ್ಕೆ ಪ್ರಯಾಣಿಸಲಿದೆ.2023 ರ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ ದ ಕಮಲ ಅರಳುವ ಸಂದೇಶ ಸ್ಪಷ್ಟವಾಗಿ ಕಳುಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದರು. ಅವರು ಇಂದು ದೊಡ್ಡಬಳ್ಳಾಪುರದ ರಘುನಾಥಪುರದಲ್ಲಿ ಆಯೋಜಿಸಿದ್ದ “ ಜನಸ್ಪಂದನ” ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆಗಳ ಆನಾವರಣ ಹಾಗೂ ಬೃಹತ್ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು. ದಿಟ್ಟ ನಿಲುವಿನಿಂದ …

Read More »

ಎಂ ಡಿ ಲಕ್ಷ್ಮೀನಾರಾಯಣ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ

ಬೆಂಗಳೂರು: ಕೆಲ ದಿನಗಳ ಹಿಂದೆ ಮಾಜಿ ಪರಿಷತ್ ಸದಸ್ಯ ಎಂ ಡಿ ಲಕ್ಷ್ಮೀನಾರಾಯಣ , ಕಾಂಗ್ರೆಸ್ ಪಕ್ಷಕ್ಕೆ  ರಾಜೀನಾಮೆ ನೀಡಿ ಹೊರ ನಡೆದಿದ್ದರು. ಇದೀಗ ಅವರು ಸೆ.10 ರ ಇಂದು ಅಧಿಕೃತವಾಗಿ ಬಿಜೆಪಿ  ಸೇರ್ಪಡೆಗೊಳ್ಳುವುದಾಗಿ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ದಿನಾಂಕ 10-09-2022ರಂದು ದೊಡ್ಡಬಳ್ಳಾಪುರದಲ್ಲಿ ನಡೆಯುವ ಬಿಜೆಪಿ ಜನಸ್ಪಂದನ ಕಾರ್ಯಕ್ರಮದಲ್ಲಿ ಬೆಳಿಗ್ಗೆ 11.30ಕ್ಕೆ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಳ್ಳುತ್ತಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ. ಅಂದಹಾಗೇ ದಿನಾಂಕ …

Read More »

ದೊಡ್ಡಬಳ್ಳಾಪುರದಲ್ಲಿ ಜನಸ್ಪಂದನ ಸಮಾವೇಶಕ್ಕೆ ಬೃಹತ್ ವೇದಿಕೆ ಸಜ್ಜು

ಬೆಂಗಳೂರು: ದೊಡ್ಡಬಳ್ಳಾಪುರ ತಾಲೂಕಿನ ತಮ್ಮಶೆಟ್ಟಿ‌ ಬಳಿ ಜನಸ್ಪಂದನ ಸಮಾವೇಶಕ್ಕೆ ಬೃಹತ್ ವೇದಿಕೆ, ದೊಡ್ಡ ಸಭಾಮಂಟಪ ಸಜ್ಜಾಗಿದ್ದು,‌ ಶನಿವಾರ ನಡೆಯಲಿರುವ ಸಮಾವೇಶದಲ್ಲಿ ಬಿಜೆಪಿ ಜನಬಲ ಪ್ರದರ್ಶನವಾಗಲಿದೆ ಎಂದು ಕಾರ್ಯಕ್ರಮದ ಉಸ್ತುವಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಕಾರ್ಯಕ್ರಮದ ಸ್ಥಳದಲ್ಲಿ ಸಿದ್ಧತೆಗಳನ್ನು ಶುಕ್ರವಾರ ವೀಕ್ಷಿಸಿದ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಫಲಾನುಭವಿಗಳು ಹಾಗೂ ಕಾರ್ಯಕರ್ತರು ಸೇರಿ ಆಚರಿಸುತ್ತಿರುವ ಉತ್ಸವ ಇದಾಗಿದ್ದು, ಮೂರು ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ. ಕೇಂದ್ರ …

Read More »

ಕರ್ನಾಟಕದ 10 ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆ

ಕರ್ನಾಟಕದ 10 ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಕರಾವಳಿ ಮತ್ತು ಮಲೆನಾಡು, ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಸೆ. 11ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ 3 ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು , ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ , ಉತ್ತರ ಒಳನಾಡಿನ ಬೆಳಗಾವಿ, ಬೀದರ್, ರಾಯಚೂರು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ‘ಆರೆಂಜ್ ಅಲರ್ಟ್‘ ಘೋಷಿಸಲಾಗಿದೆ. ಕರ್ನಾಟಕದ 10 ಜಿಲ್ಲೆಗಳಲ್ಲಿ …

Read More »

ನಾಳೆ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನಸ್ಪಂದನಾ ಸಮಾವೇಶ

ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರದ ಸರ್ಕಾರದ ಮೂರು ವರ್ಷಗಳ ಸಾಧನೆಯ ಅನಾವರಣ’ ಸಮಾವೇಶ ಜನಸ್ಪಂದನಾ ಸಮಾವೇಶವು ನಾಳೆ ಮಧ್ಯಾಹ್ನ 12 ಗಂಟೆಗೆ ದೊಡ್ಡಬಳ್ಳಾಪುರದಲ್ಲಿ ನಡೆಯಲಿದ್ದು, ಮೂರು ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಜನಸ್ಪಂದನ ಸಾರ್ಥಕ ಸೇವೆ ಸಬಲೀಕರಣ ಸಮಾವೇಶವನ್ನು ಶನಿವಾರ ಮಧ್ಯಾಹ್ನ 12 ಗಂಟೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಉದ್ಘಾಟಿಸಲಿದ್ದಾರೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಅರುಣಾ, …

Read More »