Breaking News

ಬೆಂಗಳೂರು

6 ಐಎಎಸ್ ಅಧಿಕಾರಿಗಳು ವರ್ಗಾವಣೆ

ಬೆಂಗಳೂರು : ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಸಲುವಾಗಿ 6 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕಂದಾಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ. ಮಂಜುಳಾ ಎನ್. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಕಾರ್ಯದರ್ಶಿ ಡಾ. ರೇಜು. ಎಂಟಿ. ಕಲಬುರಗಿ ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, …

Read More »

ನಟಿ ಲೀಲಾವತಿ ಅನಾರೋಗ್ಯ , ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಭೇಟಿ

ಬೆಂಗಳೂರು: ಕನ್ನಡದ ಹಿರಿಯ ನಟಿ ಲೀಲಾವತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರ ನಿವಾಸಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವಂತ ಕನ್ನಡದ ಹಿರಿಯ ನಟಿ ಲೀಲಾವತಿ ಹಾಸಿಗೆ ಹಿಡಿದಿದ್ದಾರೆ. ನೆಲಮಂಗಲದ ಬಳಿಯ ಅವರ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಯನ್ನು ನಟಿ ಲೀಲಾವತಿಗೆ ನೀಡಲಾಗುತ್ತಿದೆ. ಈ ವಿಷಯ ತಿಳಿದಂತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ …

Read More »

ಧಾರಾಕಾರ ಮಳೆಗೆ ಬೆಂಗಳೂರಿನ ಜನ ತತ್ತರ

ಬೆಂಗಳೂರು: ಉತ್ತರ ಬೆಂಗಳೂರಿನ ನೆಲೆಸಿರುವ ಕೆಲವು ಉನ್ನತ ವ್ಯಾಪಾರ ಅಧಿಕಾರಿಗಳು ತಮ್ಮ ಪ್ರದೇಶದಲ್ಲಿ ಈ ಪರಿಸ್ಥಿತಿ ಬರುತ್ತದೆ ಎಂದು ಕನಸಿನಲ್ಲೂ ಯೋಚಿಸಿರಲಿಕ್ಕಿಲ್ಲ. ಎರಡು ದಿನಗಳ ಭಾರೀ ಮಳೆಯಿಂದ ಉಂಟಾದ ಪ್ರವಾಹದಿಂದಾಗಿ ಹಲವಾರು ಉದ್ಯಮಿಗಳು ತಮ್ಮ ಸ್ವಂತ ಮನೆಗಳಲ್ಲಿ ಸಿಲುಕಿಕೊಂಡರು, ನಗರದ ಹಲವಾರು ಭಾಗಗಳಲ್ಲಿ, ವಿಶೇಷವಾಗಿ ಐಟಿ ಕಾರಿಡಾರ್ ರಸ್ತೆಗಳಲ್ಲಿ ಜನ ಜೀವನವನ್ನು ಸ್ತಬ್ದಗೊಳಿಸಿತ್ತು. ನಾಗವಾರದ ಸಮೀಪವಿರುವ ಕಣ್ಮನ ಸೆಳೆಯುವ ಪ್ರದೇಶವು ಪ್ರವಾಹದ ಸಮಯದಲ್ಲಿ ನಾಗವಾರ ಕೆರೆಯಾಗಿ ಮಾರ್ಪಟ್ಟಿತು.ಇಲ್ಲಿ ಬಿಲಿಯನೇರ್‌ಗಳ ವಿಲ್ಲಾದ …

Read More »

ರಾಜ್ಯದಲ್ಲಿ 592 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 592 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, 889 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಸಾವಿಗೀಡಾಗಿದ್ದಾರೆ. 18 ಸಾವಿರ ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ.3.7 ರಷ್ಟು ದಾಖಲಾಗಿದೆ. ಸೋಮವಾರಕ್ಕೆ ಹೋಲಿದರೆ ಸೋಂಕು ಪರೀಕ್ಷೆ 6 ಸಾವಿರ ಹೆಚ್ಚು ನಡೆಸಲಾಗಿದೆ. ಹೀಗಾಗಿ, ಹೊಸ ಪ್ರಕರಣಗಳು 108 ಏರಿಕೆಯಾಗಿವೆ. (ಸೋಮವಾರ 484, ಪ್ರಕರಣಗಳು, ಸಾವು ಎರಡು). ಶಿವಮೊಗ್ಗದಲ್ಲಿ 55 ವರ್ಷದ ಪುರುಷ, ಕಲಬುರಗಿಯಲ್ಲಿ 76 ವರ್ಷದ ವೃದ್ಧೆ ಸೋಂಕಿನಿಂದ …

Read More »

ವರುಣನ ಆರ್ಭಟಕ್ಕೆ ತತ್ತರಿಸಿದ ಬೆಂಗಳೂರಿನ ಜನ

ಬೆಂಗಳೂರು:  ಕಳೆದ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಭಾರೀ ಅವಾಂತರ ಸೃಷ್ಟಿಯಾಗಿದೆ. ನಗರದ ವಿವಿಧೆಡೆ ದಾಖಲೆಯ ಮಳೆಯಾಗಿದ್ದು, ಬೆಳ್ಳಂದೂರಿನ ಎಕೋಸ್ಪೇಸ್ ಬಳಿ ಮತ್ತೆ ನೀರು ತುಂಬಿಕೊಂಡಿದೆ. ನಗರದ ವಿವಿಧೆಡೆ ರಸ್ತೆ, ಅಂಡರ್ ಪಾಸ್ ಹಾಗೂ ಮೇಲ್ಸೇತುವೆಗಳ ಮೇಲೆ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದೆ. ತಾವರೆಕೆರ ಚೋಳನಾಯನಹಳ್ಳಿಯಲ್ಲಿ ಹೆಚ್ಚು ಮಳೆ ದಾಖಲಾಗಿದೆ. ಚೋಳನಾಯಕನಹಳ್ಳಿಯಲ್ಲಿ 15.5 ಮಿ.ಮೀ ಮಳೆ ದಾಖಲಾಗಿದೆ. ಸೊಂಡೆಕೊಪ್ಪ 79.5 ಮಿ.ಮೀ,ಹುಸ್ಕೂರು 70 ಮಿ.ಮೀ, ದಾಸಾನಪುರದಲ್ಲಿ 65.5 ಮಿ.ಮೀ …

Read More »

ಮುರುಘಾಮಠದ ಶ್ರೀಗೆ ಏದುರಾದ ಮತ್ತೊಂದು ಸಂಕಷ್ಟ

ಬೆಂಗಳೂರು : ಪೋಕ್ಸೋ ಕಾಯ್ದೆಯಡಿ ಮುರುಘಾಮಠದ ಶಿವಮೂರ್ತಿ ಸ್ವಾಮೀಜಿಗಳ ಬಂಧನವಾಗಿದ್ದು, ಇದೀಗ ಶ್ರೀಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬೆಂಗಳೂರು ಮೆಟ್ರೊಪಾಲಿಟನ್​ ಮ್ಯಾಜಿಸ್ಟ್ರೇಟ್ ಕೋರ್ಟ್​ನಿಂದ ಅರೆಸ್ಟ್ ವಾರಂಟ್ ಜಾರಿ ಮಾಡಲಾಗಿದೆ.​​ ಮುರುಘಾ ಶ್ರೀಗಳ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದೆ. ತಿಪ್ಪಶೆಟ್ಟಿ ಮಠಕ್ಕೆ ಸೇರಿದ ಕೆಂಗೇರಿ ಸೂಲಿಕೆರೆಯ 8 ಕೋಟಿ ಮೌಲ್ಯದ ಮಠದ ಆಸ್ತಿ 49 ಲಕ್ಷ ರೂಪಾಯಿಗಳಿಗೆ ಮಾರಾಟವಾಗಿದೆ ಮುರುಘಾಶ್ರೀಗಳ ವಿರುದ್ಧ ಪಿ.ಎಸ್.ಪ್ರಕಾಶ್ ಎಂಬುವರ ಖಾಸಗಿ ದೂರು ನೀಡಿದ್ದಾರೆ. ಶ್ರೀಗಳ ವಿರುದ್ಧ …

Read More »

ಮುರುಘಾ ಮಠದ ಶ್ರೀ ಮೇಲಿನ ಆರೋಪದ ಬಗ್ಗೆ ಸೂಕ್ತ ತನಿಖೆ ಮಾಡಬೇಕು : ಸಿದ್ದರಾಮಯ್ಯ

ಬೆಂಗಳೂರು: ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿಯರು ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಕುರಿತಾಗಿ ಅವರು ಟ್ವೀಟ್ ಮಾಡಿದ್ದು, ಚಿತ್ರದುರ್ಗದ ಮುರುಘಾ ಮಠದ ಸ್ವಾಮಿಗಳ ವಿರುದ್ಧದ ಆರೋಪ ಗಂಭೀರ ಸ್ವರೂಪದ್ದಾಗಿದೆ. ಪೊಲೀಸರು ಯಾವುದೇ ಒತ್ತಡಕ್ಕೊಳಗಾಗದೆ ಸಂತ್ರಸ್ತ ವಿದ್ಯಾರ್ಥಿನಿಯರ ದೂರಿನ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ …

Read More »

ಡಿಕೆಶಿ ಮನೆಗೆ ಮಧ್ಯಪ್ರದೇಶದ ಮಾಜಿ ಸಿಎಂ ಭೇಟಿ

ಬೆಂಗಳೂರು: ಸದಾಶಿವನಗರದ ತಮ್ಮ ನಿವಾಸಕ್ಕೆ ಬುಧವಾರ ರಾತ್ರಿ ಭೇಟಿ ನೀಡಿದ ಭಾರತ್ ಜೋಡೋ ಯಾತ್ರೆಯ ರಾಷ್ಟ್ರೀಯ ಸಮಿತಿ ಅಧ್ಯಕ್ಷ, ಮಧ್ಯಪ್ರದೇಶದ ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಹೂಗುಚ್ಛ ನೀಡಿ ಬರಮಾಡಿಕೊಂಡರು. ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ಉಸ್ತುವಾರಿ ವಹಿಸಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್, ಸಂಸದ ಡಿಕೆ ಸುರೇಶ್, ರಾಜ್ಯಸಭೆ ಸದಸ್ಯ …

Read More »

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಗೌರಿ-ಗಣೇಶ ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ವರುಣಾ ದೊಡ್ಡ ಪ್ರಮಾಣದಲ್ಲಿ ಶಾಕ್‌ ನಿಡಿದ್ದು, ಹಬ್ಬದತ್ತ ಊರಿಗೆ ತೆರಳದೇ ಮನೆಲ್ಲೇ ಉಳಿಯುವ ಸನ್ನಿವೇಶ ನಿರ್ಮಾಣವಾಗಿದೆ. ಈ ನಡುವೆ ಆ.29, 30ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ; ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರು; ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, …

Read More »

ರಾಜ್ಯದ 27 ಜಿಲ್ಲೆಗಳಲ್ಲಿ ಈ ಬಾರಿ ಮಳೆಯ ಅಬ್ಬರ ಜೋರು : ಸಚಿವ ಆರ್.ಅಶೋಕ್

ಬೆಂಗಳೂರು: ರಾಜ್ಯದ 27 ಜಿಲ್ಲೆಗಳಲ್ಲಿ ಈ ಬಾರಿ ಮಳೆಯ ಅಬ್ಬರ ಜೋರಾಗಿದ್ದು, ಅನಾಹುತಗಳು ಸಂಭವಿಸಿವೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ರಾಜ್ಯದ ಒಟ್ಟು 27 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಯಾಗಿದೆ. ಪ್ರಸ್ತುತ ಮತ್ತೆ 820ಮಿ.ಮೀಟರ್ ಮಳೆಯಾಗಿದ್ದು, ರಾಮನಗರ, ಚಾಮರಾಜನಗರ, ಮಂಡ್ಯದಲ್ಲಿ 9 ಮಿ.ಮೀಟರ್ ಮಳೆಯಾಗಿದೆ. ಜೂನ್ ನಿಂದ ಈವರೆಗೆ 187 ಹಳ್ಳಿಗಳಿಗೆ ಮಳೆಯಿಂದಾಗಿ ಹಾನಿಯಾಗಿದೆ ಎಂದರು. ರಾಜ್ಯದಲ್ಲಿ ಈ ಬಾರಿ ಮಳೆಯಿಂದಾಗಿ 96 ಜನರು …

Read More »