BigTv News
June 6, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕಳೆದೊಂದು ವಾರದಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2 ಸಾವಿರ ಗಡಿ ದಾಟಿದೆ. ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ನಾಲ್ಕನೇ ಭೀತಿ ಎದುರಾಗಿದೆ. ಮುಂದಿನ 2-3 ವಾರಗಳು ನಿರ್ಣಾಯಕವಾಗಿದ್ದು, ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಜ್ಞರು ಎಚ್ಚರಿಕೆ ನೀಡಿದ್ದಾರೆ.ರಾಜ್ಯದಲ್ಲಿ ಕಳೆದ 10 ದಿನಗಳಲ್ಲಿ 1,927 ಸೋಂಕು ಪ್ರಕರಣಗಳು ವರದಿಯಾಗಿದ್ದು, ದಿನದ ಸೋಂಕು ಪ್ರಮಾಣ ದರ ಶೇ. 1ಕ್ಕಿಂತ ಹೆಚ್ಚಿದೆ. ಈ ಅವಧಿಯಲ್ಲಿ …
Read More »
BigTv News
June 3, 2022
Breaking News, ಬೆಂಗಳೂರು
ಬೆಂಗಳೂರು: ಬೈಕ್ ಮತ್ತು ಲಾರಿ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆನೇಕಲ್ ತಾಲೂಕಿನ ಸೂಳಗಿರಿ ಮೇಳುಮಲೈ ಬಳಿ ನಡೆದಿದೆ. 29 ವರ್ಷದ ವರ್ಷದ ರಾಜು ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ರಾಜು ಬೆಂಗಳೂರಿನಲ್ಲಿ ದ್ವಿಚಕ್ರವಾಹನದ ಮೆಕ್ಯಾನಿಕ್ ವಿಭಾಗದಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಕೆಲಸ ಮುಗಿಸಿ ಮನೆಗೆ ಹೋಗುವಾಗ ಬೈಕ್ ಹಾಗೂ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. …
Read More »
BigTv News
June 2, 2022
Breaking News, ಬೆಂಗಳೂರು
ಬೆಂಗಳೂರು: ಪ್ರಾಥಮಿಕ ಹಾಗು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ನಿವಾಸಕ್ಕೆ ನುಗ್ಗಿ ದಾಂಧಲೆ ನಡೆಸಿರುವ ಘಟನೆ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ತಿಪಟೂರಿನ ಮನೆಯ ಆವರಣಕ್ಕೆ ನುಗ್ಗಿ NSUI ಕಾರ್ಯಕರ್ತರು ಪ್ರತಿಭಟನೆ ಮಾಡಿ ದಾಂಧಲೆ ನಡೆಸಿರುವುದು ಖಂಡನೀಯ. ಇಂತಹ …
Read More »
BigTv News
June 1, 2022
Breaking News, ಬೆಂಗಳೂರು
ಬೆಂಗಳೂರು : ಕರ್ನಾಟಕಕ್ಕೆ ಅಧಿಕೃತವಾಗಿ ನೈಋತ್ಯ ಮುಂಗಾರು ಪ್ರವೇಶವಾಗಿದ್ದು, ಮುಂದಿನ 3-4 ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಮುಂಗಾರು ಪ್ರಭಾವದಿಂದ ರಾಜ್ಯದ ಕಾರವಾರ, ಚಿಕ್ಕಮಗಳೂರು, ಬೆಂಗಳೂರು, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.
Read More »
BigTv News
June 1, 2022
Breaking News, ಬೆಂಗಳೂರು
ಬೆಂಗಳೂರು: ‘ಬಿಜೆಪಿ ಸರ್ಕಾರದ ಕಾರಣಪುರುಷ, ಆಹಿಂದ ಆದಿಪುರುಷ, ಕಾಂಗ್ರೆಸ್ ಮುಗಿಸಲು ಹೊರಟ ಸಿದ್ದಹಸ್ತ ಮಹಾಶಯ.. ಏನಯ್ಯಾ ನಿಮ್ಮ ರಾಜಕೀಯ?ಮುಸ್ಲಿಮರ ರಾಜಕೀಯ ನರಮೇಧಕ್ಕೆ ಇನ್ನೊಂದು ವಿನಾಶಕಾರಿ ಅಧ್ಯಾಯ ಆರಂಭಿಸಿದ್ದೀರಿ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ‘ಭಾಷಣ ಒಂದು, ರಾಜಕಾರಣ ಇನ್ನೊಂದು!!’, ಇದಯ್ಶಾ ಕಿಲಾಡಿರಾಮಯ್ಯನ ರಾಜನೀತಿ ಮತ್ತು ರಣನೀತಿ.5 ವರ್ಷಗಳ ನಿಮ್ಮ ನೇತೃತ್ವದ ಕಾಂಗ್ರೆಸ್ ಸರ್ಕಾರ ಬರಲು ಕಾರಣರಾದ ಅಲ್ಪಸಂಖ್ಯಾತರನ್ನೇ ಅಯ್ಯೋ ಎನ್ನುವಂತೆ ಮಾಡುತ್ತಿದೀರಲ್ಲ..? …
Read More »
BigTv News
May 30, 2022
Breaking News, ಬೆಂಗಳೂರು
ಬೆಂಗಳೂರು: ರೈತರ ಜೀವನಾಡಿ ಎಂದೇ ಜನಜನಿತವಾಗಿರುವ ನೈಋುತ್ಯ ಮುಂಗಾರು ಕೇರಳಕ್ಕೆ ಭಾನುವಾರ ಪ್ರವೇಶಿಸಿದ್ದು, ಜೂನ್ 1ರಿಂದ ರಾಜ್ಯಕ್ಕೆ ಪ್ರವೇಶವಾಗಲಿದೆ. ಜೂನ್ 2ರಂದು ಮಳೆ ಭರ್ಜರಿಯಾಗಿ ಸುರಿಯುವ ಸಾಧ್ಯತೆ ಹೆಚ್ಚಿರುವುದರಿಂದ ಕರಾವಳಿ ಮತ್ತು ಪಶ್ಚಿಮ ಘಟ್ಟದ ತಪ್ಪಲಿನ ಜಿಲ್ಲೆಗಳಿಗೆ ‘ಹಳದಿ ಅಲರ್ಚ್’ ನೀಡಲಾಗಿದೆ.
Read More »
BigTv News
May 30, 2022
Breaking News, ಬೆಂಗಳೂರು
ಬೆಂಗಳೂರು : ಕಾಂಗ್ರೆಸ್ ನ ಜೊತೆಗೆ ಬಿಜೆಪಿಯಲ್ಲೂ ವಿಧಾನಪರಿಷತ್ ಸ್ಥಾನ ಕೈತಪ್ಪಿದ ಅಸಮಧಾನ ನಿಧಾನಕ್ಕೆ ಹೊಗೆಯಾಡಲಾರಂಭಿಸಿದೆ. ತಮ್ಮ ಗೆ ವಿಧಾನಪರಿಷತ್ ಸ್ಥಾನ ಕೈ ತಪ್ಪಿದ್ದಕ್ಕೇ ಪರೋಕ್ಷವಾಗಿ ಅಸಮಧಾನ ತೋರಿಸಿಕೊಂಡಿರೋ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ , ಹಾಸನದಲ್ಲಿ ನಡೆದ ಸಮಾರಂಭದಲ್ಲಿ ಪಕ್ಕಾ ರಾಜಕೀಯ ಭಾಷಣ ಮಾಡಿದ್ದು, ಪರೋಕ್ಷವಾಗಿ ಬಿಜೆಪಿ ಬಿ.ಎಸ್.ಯಡಿಯೂರಪ್ಪ ಬಿಟ್ಟು ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದರು.
Read More »
BigTv News
May 29, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ವಿಚಾರದ ಬಗ್ಗೆ ಇಂದು ಸಂಜೆಯೊಳಗೆ ತೀರ್ಮಾನವಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆ ಅಭ್ಯರ್ಥಿ ಆಯ್ಕೆ ಬಗ್ಗೆ ನಮ್ಮ ರಾಷ್ಟ್ರೀಯ ನಾಯಕರು ಇಂದು ಸಂಜೆಯೊಳಗೆ ತೀರ್ಮಾನ ಮಾಡುತ್ತಾರೆ.ಮೂರನೇ ಅಭ್ಯರ್ಥಿಯ ಬಗ್ಗೆಯೂ ಇಂದು ಸಂಜೆಯೊಳಗೆ ತೀರ್ಮಾನವಾಗಲಿದೆ ಎಂದರು.
Read More »
BigTv News
May 25, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ ಜೂನ್ 3 ರಂದು ನಡೆಯುವ ಚುನಾವಣೆಗೆ ಕಾಂಗ್ರೆಸ್,ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಏಳು ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಏಳು ಅಭ್ಯರ್ಥಿಗಳು ಮಾತ್ರ ನಾಮಪತ್ರ ಸಲ್ಲಿಕೆ ಮಾಡಿದ್ದರಿಂದ ಅವಿರೋಧ ಆಯ್ಕೆ ಖಚಿತವಾಗಿದೆ.ನಾಮಪತ್ರ ಸಲ್ಲಿಕೆಗೆ ಮಂಗಳವಾರ ಕೊನೆಯ ದಿನವಾಗಿದ್ದರಿಂದ ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಆಡಳಿತ ಪಕ್ಷ ಬಿಜೆಪಿಯಿಂದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಛಲವಾದಿ ನಾರಾಯಣಸ್ವಾಮಿ, ಕೇಶವ ಪ್ರಸಾದ್ …
Read More »
BigTv News
May 25, 2022
ಬೆಂಗಳೂರು
ಬೆಂಗಳೂರು: ‘ನಾಡಗೀತೆ ಮತ್ತು ಕುವೆಂಪು ಅವರನ್ನು ಅಪಮಾನಿಸಿದ ವ್ಯಕ್ತಿಯನ್ನು ಮೊದಲು ಒದ್ದು ಒಳಗೆ ಹಾಕಬೇಕು’ ಎಂದು ಪಠ್ಯಪುಸ್ತಕ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಹೆಸರು ಹೇಳದೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ನಾಡಗೀತೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಈ ಹಿಂದೆ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿಯನ್ನು ಸಮಿತಿ ಅಧ್ಯಕ್ಷನನ್ನಾಗಿ ಮಾಡಿರುವುದೇ ತಪ್ಪು. ಕುವೆಂಪು ಮತ್ತು ನಾಡಗೀತೆಗೆ …
Read More »