Breaking News

ಬೆಂಗಳೂರು

ವಿಧಾನಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಿಸಿದ ಮಾಜಿ‌ ಸಿಎಂ

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಹೆಸರು ಘೋಷಿಸಲಾಗಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶ್ರೀಶೈಲ ನಿಂಗಪ್ಪ ಗಡದಿನ್ನಿ ಕಣಕ್ಕಿಳಿಯಲಿದ್ದಾರೆ. ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಚಂದ್ರಶೇಖರ ಲೋಣಿ ಕಣಕ್ಕಿಳಿಯಲಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿಧಾನ ಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದ್ದಾರೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶ್ರೀಶೈಲ ನಿಂಗಪ್ಪ ಕಣಕ್ಕಿಳಿಯಲಿದ್ದಾರೆ.ಬಸವರಾಜ ಹೊರಟ್ಟಿ ಪ್ರತಿನಿಧಿಸುತ್ತಿದ್ದ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶ್ರೀಶೈಲ ಅವರಿಗೆ ಟಿಕೆಟ್ ನೀಡಲಾಗಿದೆ. ಹೊರಟ್ಟಿ ಅವರು ಬಿಜೆಪಿ …

Read More »

ಚಿತ್ರೀಕರಣದಲ್ಲಿ ಬ್ಯುಸಿಯಾದ ಪ್ರಶಾಂತ್ : 2 ವರ್ಷ ಸ್ಯಾಂಡಲ್ ವುಡ್ ಗೆ ಬರುವುದು ಡೌಟ್

ಬೆಂಗಳೂರು: ಕೆಜಿಎಫ್ ಸಿನಿಮಾ ಮೂಲಕ ಭಾರತೀಯ ಚಿತ್ರರಂಗವೇ ತಿರುಗಿ ನೋಡುವಂತೆ ಮಾಡಿದ್ದ ನಿರ್ದೇಶಕ ಪ್ರಶಾಂತ್ ನೀಲ್ ಈಗ ಅತ್ಯಂತ ಬ್ಯುಸಿ ನಿರ್ದೇಶಕ. ಸದ್ಯಕ್ಕೆ ಪ್ರಶಾಂತ್ ತೆಲುಗಿನಲ್ಲಿ ಎರಡು ಸಿನಿಮಾ ಮಾಡುತ್ತಿದ್ದಾರೆ. ಈ ಪೈಕಿ ಸಲಾರ್ ಚಿತ್ರೀಕರಣ ಹಂತದಲ್ಲಿದ್ದು, ಈ ವರ್ಷವೇ ಬಿಡುಗಡೆಯಾಗುವ ಸಾಧ‍್ಯತೆಯಿದೆ. ಇದಲ್ಲದೆ ಜೂ. ಎನ್ ಟಿಆರ್ ಜೊತೆಗೆ ಮೊನ್ನೆಯಷ್ಟೇ ಹೊಸ ಸಿನಿಮಾ ಘೋಷಣೆಯಾಗಿದ್ದು, ಇದು ಮುಂದಿನ ವರ್ಷದಿಂದ ಚಿತ್ರೀಕರಣ ಆರಂಭವಾಗಲಿದೆ. ಹೀಗಾಗಿ ಮುಂದಿನ ಎರಡು ವರ್ಷಗಳಿಗೆ ಪ್ರಶಾಂತ್ …

Read More »

ಹಲವು ಜಿಲ್ಲೆಗಳಲ್ಲಿ ಇಂದೂ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ಕರಾವಳಿ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರ್ನಾಟಕ ಕರಾವಳಿ, ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ, ದಾವಣಗೆರೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

Read More »

ಮಾಜಿ ಸಿಎಂನಿಂದ ಸಿಎಂಗೆ ಸಲಹೆ

ಬೆಂಗಳೂರು : ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕ ಕಡಿತ ಮಾಡಿದ ರೀತಿಯಲ್ಲೇ ರಾಜ್ಯ ಸರ್ಕಾರವೂ ಸುಂಕ ಕಡಿತ ಮಾಡಿದಲ್ಲಿ ಜನತೆಗೆ ಹೆಚ್ಚಿನ ಸಹಾಯವಾಗಲಿದೆ.ಈ ನಿಟ್ಟಿನಲ್ಲಿ ಆಲೋಚನೆ ಮಾಡಬೇಕೆಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಲಹೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೈಲ ಬೆಲೆ ಏರಿಕೆಯ ಸಂಕಷ್ಟದಲ್ಲಿ ಇಡೀ ದೇಶದ ಜನತೆ ಇದ್ದಾಗ ಬಹಳ ದೊಡ್ಡ ಮನಸ್ಸು ಮಾಡಿ ಪೆಟ್ರೋಲ್ …

Read More »

ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ ಆರ್ಭಟ

ಬೆಂಗಳೂರು: ಇನ್ನೂ ಎರಡು ದಿನ ಮಳೆ ಆರ್ಭಟ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗಲಿದ್ದು, ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ.

Read More »

ತಾಳಿ ಕಟ್ಟು ವೇಳೆ ವಧುವಿನ ಹೈಡ್ರಾಮ : ಮಾತುಕತೆಯಲ್ಲಿ ಸುಖ್ಯಾಂತ ಕಂಡ ಮದುವೆ

ಮೈಸೂರು : ತಾಳಿ ಕಟ್ಟುವಾಗ ಒಲ್ಲೇ ಎಂದು ಮದುವೆ ನಿಲ್ಲಿಸಿದ್ದ ಪ್ರಕರಣ ಸುಖ್ಯಾಂತ ಕಂಡಿದೆ. ಎರಡು ಕುಟುಂಬಸ್ಥರು ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಂಡಿದ್ದಾರೆ. ವಧುವಿನ ಮನೆಯವರು ವರನ ಕಡೆಯವರು ನೀಡಿದ್ದ ಆಭರಣವನ್ನು ವಾಪಸ್ ನೀಡಿ, ಮದುವೆಯ ನಷ್ಟವನ್ನು ಭರಿಸಿದ್ದಾರೆ. ಹಣ ಹಾಗೂ ಚಿನ್ನಾಭರಣವನ್ನು ವಾಪಸ್ ಪಡೆದು ವರನ ಕುಟುಂಬಸ್ಥರು ಹೆಚ್.ಡಿ.ಕೋಟೆಗೆ ವಾಪಸ್ ಮರಳಿದ್ದಾರೆ. ವಧುವಿನ ಕುಟುಂಬಸ್ಥರು ಆಟೋದಲ್ಲಿ ಮನೆಗೆ ವಾಪಸ್ ಹೋಗಿದ್ದಾರೆ. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ. ಈಕೆಯ …

Read More »

ಧಾರವಾಡ ಅಪಘಾತ : ಮೃತ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ

ಬೆಂಗಳೂರು: ಶನಿವಾರದ ನಿನ್ನೆ ರಾತ್ರಿ ಮದುವೆಗೆ ಹೊರಟಿದ್ದಂತ ಕ್ರೂಸರ್ ಮರಕ್ಕೆ ಡಿಕ್ಕಿಯಾಗಿ ಧಾರವಾಡದ ಬಾಡ ಬಳಿಯಲ್ಲಿ ಭೀಕರ ಅಪಘಾತ ಸಂಭವಿಸಿತ್ತು. ಈ ಅಪಘಾತದಲ್ಲಿ ಪುಟ್ಟ ಮಕ್ಕಳು ಸಹಿತ 9 ಮಂದಿ ಸಾವನ್ನಪ್ಪಿದ್ದರು. ಇದೀಗ ರಾಜ್ಯ ಸರ್ಕಾರ ಮೃತ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರವನ್ನು ಘೋಷಿಸಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವಿಟ್ ಮಾಡಿದ್ದು,ಧಾರವಾಡದ ಬಾಡ ಗ್ರಾಮದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ 9 ಜನರ ಕುಟುಂಬಗಳಿಗೆ …

Read More »

ಮಹತ್ವದ ಮಾಹಿತಿ ನೀಡಿದ ಹವಮಾನ ಇಲಾಖೆ

ಬೆಂಗಳೂರು: ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದ್ದು, ಇನ್ನೆರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Read More »

ಕೆರೆ ಪ್ರದೇಶದಲ್ಲಿ ಮನೆ ಕಟ್ಟಲು ಅವಕಾಶ ನೀಡಲಾಗುವುದಿಲ್ಲ : ಬೊಮ್ಮಾಯಿ

ಬೆಂಗಳೂರು : ಕೆರೆ ಪ್ರದೇಶದಲ್ಲಿ ಮನೆ ಕಟ್ಟಲು ಅವಕಾಶ ನೀಡಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ಬೆಂಗಳೂರಿನ ಕೆ.ಆರ್.ಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಳೆಹಾನಿ ಪ್ರದೇಶಗಳಾದ ರಾಮಮುರ್ತಿನಗರದ ನಾಗಪ್ಪ ಬಡಾವಣೆಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕೆರೆ ಪ್ರದೇಶದಲ್ಲಿ ಬಡಾವಣೆಗಳನ್ನು ನಿರ್ಮಿಸುವ ಸಂಬಂಧ ಹಿರಡಿಸಲಾಗಿದ್ದ ಅಧಿಸೂಚನೆಯನ್ನು ರದ್ದು ಮಾಡಲಾಗಿದೆ. ಯಾವುದೇ ಅಧಿಸೂಚಿತ ಕೆರೆ ಪ್ರದೇಶದಗಳ ಮೇಲೆ ಬಡಾವಣೆಗಳನ್ನು ಮಂಜೂರು ಮಾಡುವ ಪ್ರಶ್ನೆಯೇ …

Read More »

ಮಳೆ ಆರ್ಭಟ : ಬೆಂಗಳೂರು ಸಿಟಿ ರೌಂಡ್ಸ್ ಮಾಡಿದ ಸಿಎಂ

ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಮಳೆಯಿಂದಾಗಿ ತೊಂದರೆಗೊಳಗಾದ ಜನವಸತಿ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ಬೆಂಗಳೂರಿನ ಮಳೆ ಹಾನಿ ಪ್ರದೇಶಗಳಿಗೆ ಬಿಬಿಎಂಪಿ ಅಧಿಕಾರಿಗಳ ಜೊತಗೆ ಸಿಎಂ ಬಸವರಾಜ ಬೊಮ್ಮಾಯಿಇಂದು ಸಿಟಿ ರೌಂಡ್ಸ್ ಹೊರಟಿದ್ದಾರೆ.ಮಳೆ ಹಾನಿ ಸಂಬಂಧ ಸ್ಥಳೀಯರಿಂದ ಸಿಎಂ ಬೊಮ್ಮಾಯಿ ಮಾಹಿತಿ ಪಡೆಯುತ್ತಿದ್ದಾರೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ, ಸಾಯಿ ಬಡಾವಣೆ, ನಾಗಪ್ಪ ರೆಡ್ಡಿ ಬಡಾವಣೆ, ಪೈ ಬಡಾವಣೆಗಳಲ್‌ಇ ವೀಕ್ಷಣೆ ಮಾಡಲಿದ್ದಾರೆ. …

Read More »