Breaking News

ಬೆಂಗಳೂರು

ಕೆಎಎಸ್ ಪರೀಕ್ಷೆ ರದ್ದು: ಪ್ರಶ್ನೆ ಪತ್ರಿಕೆ ದೋಷದ ಕುರಿತು ಕಾನೂನು ಹೋರಾಟ ಆರಂಭ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ನೇಮಕಾತಿ ಪೂರ್ವಭಾವಿ ಪರೀಕ್ಷೆಯ ಕನ್ನಡ ಪ್ರಶ್ನೆ ಪತ್ರಿಕೆ ದೋಷದ ಕುರಿತು ಕಾನೂನು ಹೋರಾಟ ಆರಂಭವಾಗಿದೆ. ಕೆಎಎಸ್ ಹುದ್ದೆಗಳ ನೇಮಕಾತಿಗೆ ನಡೆದ ಮರು ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಹಲವು ಅಭ್ಯರ್ಥಿಗಳು ಕೆಎಟಿ ಮೊರೆ ಹೋಗಿದ್ದಾರೆ. ಕೆಪಿಎಸ್‌ಸಿ 2024 ಆಗಸ್ಟ್‌ ಮತ್ತು ಡಿಸೆಂಬರ್ 29ರಂದು ಎರಡು ಬಾರಿ ಈ ಪರೀಕ್ಷೆಗಳನ್ನು ನಡೆಸಿದೆ. ಆದರೆ ಎರಡು ಬಾರಿಯೂ …

Read More »

ಕಲ್ಯಾಣ ಕರ್ನಾಟಕ ಭಾಗಕ್ಕೆ ಬಜೆಟ್‌ ನಲ್ಲಿ 5 ಸಾವಿರ ಕೋಟಿ ರೂ. ಅನುದಾನಕ್ಕೆ ಕ್ರಮವಹಿಸಲು ನಿರ್ಮಲಾ ಸೀತಾರಾಮನ್ ಗೆ ಮಲ್ಲಿಕಾರ್ಜುನ್ ಖರ್ಗೆ ಪತ್ರ

ಬೆಂಗಳೂರು: ಹೈದರಾಬಾದ್ ಕರ್ನಾಟಕ(ಈಗಿನ ಕಲ್ಯಾಣ ಕರ್ನಾಟಕ) ಪ್ರದೇಶದ ಅಭಿವೃದ್ದಿಗಾಗಿ ಈ ಸಲ ಕೇಂದ್ರದ ಬಜೆಟ್ ನಲ್ಲಿ 5 ಸಾವಿರ ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಗೆ ಕ್ರಮವಹಿಸುವಂತೆ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‍ಗೆ ಪತ್ರ ಬರೆದಿದ್ದಾರೆ. ಪತ್ರದ ಸಾರಾಂಶ: ಕಲ್ಯಾಣ ಕರ್ನಾಟಕ ಪ್ರದೇಶ ಶೈಕ್ಷಣಿಕ, ಆರೋಗ್ಯ, ಮೂಲಭೂತ ಸೌಲಭ್ಯ ಇತ್ಯಾದಿ ಕ್ಷೇತ್ರಗಳಲ್ಲಿ ಹಿಂದುಳಿದಿದ್ದು ಈ ಎಲ್ಲ ಕ್ಷೇತ್ರಗಳ ಅಭಿವೃದ್ದಿ ಪಡಿಸಲು …

Read More »

ರಾಜ್ಯದ ಅಭಿವೃದ್ದಿ ಪ್ರಗತಿಗೆ ಕೇಂದ್ರದ ಮೆಚ್ಚುಗೆ: 8 ಹೊಸ ಜಲಾನಯನ ಯೋಜನೆಗಳಿಗೆ ರೂ.99 ಕೋಟಿ ಬಿಡುಗಡೆ

ಬೆಂಗಳೂರು :ಜಲಾನಯನ ಅಭಿವೃದ್ಧಿ ಯೋಜನೆಗಳಲ್ಲಿ ಕರ್ನಾಟಕ ರಾಜ್ಯ ತೋರಿರುವ ಅಭೂತ ಪೂರ್ವ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ ಪ್ರಸಕ್ತ ಆರ್ಥಿಕ ವರ್ಷದಲ್ಲೇ 8 ಹೊಸ ಯೋಜನೆಗಳಿಗೆ ಹೆಚ್ಚುವರಿ ರೂ.99 ಕೋಟಿಗಳು ಬಿಡುಗಡೆಗೆ ಮಂಜೂರಾತಿ ನೀಡಿದೆ. ರಾಜ್ಯ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿಅವರಿಗೆ ಈ ಬಗ್ಗೆ ಲಿಖಿತ ಪತ್ರ ಬರೆದಿರುವ ಕೇಂದ್ರ ಗ್ರಾಮೀಣಾಭಿವೃದ್ಧಿ, ಕೃಷಿ, ರೈತ ಕಲ್ಯಾಣ ಸಚಿವರಾದ ಶ್ರೀ ಶಿವರಾಜ ಸಿಂಗ್ ಚೌವ್ಹಾಣ್, ಜಲಾನಯನ ಯೋಜನೆ 2.0 ಅಡಿಯಲ್ಲಿ ಹೊಸದಾಗಿ …

Read More »

ಅಭಿವೃದ್ದಿ ಕೆಲಸಗಳಿಗಾಗಿ 48,000 ಕೋಟಿ ರೂ. ಸಾಲ ಮಾಡಲು ಯೋಜಿಸಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ ತೆರಿಗೆ ಆದಾಯವನ್ನು ಪಂಚಗ್ಯಾರಂಟಿ, ಬದ್ಧ ವೆಚ್ಚಕ್ಕಾಗಿ ಬಳಕೆ ಮಾಡುತ್ತಿದೆ. ಇತ್ತ ಅಭಿವೃದ್ಧಿಗಾಗಿನ ಬಂಡವಾಳ ವೆಚ್ಚಕ್ಕಾಗಿ ಸಂಪೂರ್ಣ ಸಾಲವನ್ನೇ ನೆಚ್ಚಿಕೊಂಡಿದೆ. ಹೀಗಾಗಿ ಮುಂದಿನ ಮೂರು ತಿಂಗಳಲ್ಲಿ ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸಗಳಿಗಾಗಿ 48,000 ಕೋಟಿ ರೂ.ಸಾಲ ಮಾಡಲು ಯೋಜಿಸಿದೆ. ಆರ್ಥಿಕ ವರ್ಷದ ಮುಕ್ಕಾಲು ಭಾಗ ಪೂರ್ಣವಾಗಿದೆ. ಕೊನೆಯ ತ್ರೈಮಾಸಿಕ ಚಾಲ್ತಿಯಲ್ಲಿದೆ. ಕಾಂಗ್ರೆಸ್‌‍ ಸರ್ಕಾರ ಪಂಚ ಗ್ಯಾರಂಟಿ ಕೇಂದ್ರಿತ ಆಡಳಿತ ನಡೆಸುತ್ತಿದೆ. ತನ್ನ ಸ್ವಂತ ತೆರಿಗೆ ಆದಾಯದ ಬಹುಪಾಲನ್ನು …

Read More »

ದೇವದಾಸಿ ಪದ್ಧತಿ ನಡೆದದ್ದು ಎಲ್ಲಿಯಾದರೂ ಗಮನಕ್ಕೆ ಬಂದರೆ ಡಿಸಿ-ಎಸ್ಪಿ ವಿರುದ್ಧ ಮುಲಾಜಿಲ್ಲದೇ ಕ್ರಮ: ಸಿಎಂ ಎಚ್ಚರಿಕೆ

ಬೆಂಗಳೂರು: ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ SP-DC ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಎಚ್ವರಿಸಿದರು. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಎಚ್ವರಿಕೆ ನೀಡಿದ್ದು, ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು …

Read More »

ಮೈಕ್ರೋ ಫೈನಾನ್ಸ್ ಕಿರುಕುಳ ಕಂಡುಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಎಲ್ಲಾ ಡಿಸಿಗಳಿಗೆ ರಾಜ್ಯ ಸರ್ಕಾರ ಖಡಕ್ ಸೂಚನೆ

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ನೀಡುವುದು ಕಂಡುಬಂದರೆ ಕ್ರಿಮಿನಲ್ ಪ್ರಕರಣ ದಾಖಲಿಸಿ ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ರಾಜ್ಯ ಸರ್ಕಾರ ಖಡಕ್ ಸೂಚನೆ ನೀಡಿದೆ. ವಿಕಾಸಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳು 59 ಸಾವಿರ ಕೋಟಿ ರೂ.ಸಾಲ ನೀಡಿವೆ. ಅಲ್ಲದೆ, ತಮ್ಮ ಸಾಮರ್ಥ್ಯ ವಿಸ್ತರಿಸಿಕೊಳ್ಳುವ ಸಲುವಾಗಿ ಆರ್ ಬಿಐ ಗೈಡ್ಲೈನ್ಸ್ ಉಲ್ಲಂಘಿಸಿ ಸಾಲ ನೀಡುತ್ತಿವೆ. …

Read More »

ಸಿಎಂ ಅಧ್ಯಕ್ಷತೆಯಲ್ಲಿ ಅನುಸೂಚಿತ ಜಾತಿ, ಬುಡಕಟ್ಟುಗಳ ರಾಜ್ಯ ಮಟ್ಟದ ಮೇಲ್ವಿಚಾರಣಾ ಸಮಿತಿ ಸಭೆ

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ, ಸಹಕಾರ ಸಚಿವ ರಾಜಣ್ಣ, ನಗರಾಭಿವೃದ್ಧಿ ಸಚಿವ ಸುರೇಶ, ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಮೇಲ್ವಿಚಾರಣಾ ಸಮಿತಿ ಅಧ್ಯಕ್ಷ ನರೇಂದ್ರಸ್ವಾಮಿ, ವಿಧಾನ …

Read More »

ಜನರ ಪ್ರಾಣಕ್ಕೆ ಕಂಟಕವಾದ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕಲು ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ವಸೂಲಿ ನೆಪದಲ್ಲಿ ಸಾಲಗಾರರನ್ನು ಇನ್ನಿಲ್ಲದಂತೆ ಕಾಡಿ ಕಂಗೆಡಿಸಿವೆ. ಸಾಕಷ್ಟು ಜನರ ಪ್ರಾಣಕ್ಕೆ ಕಂಟಕವಾಗಿವೆ. ಜೀವ ಹಿಂಡುವ ಇಂತಹ ಪೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ. ಕಾನೂನು ತಿದ್ದುಪಡಿಗೆ ತುರ್ತಾಗಿ ಸುಗ್ರೀವಾಜ್ಞೆ ರೂಪಿಸಲು ಸರ್ಕಾರ ಮುಂದಾಗಿದೆ. ಈ ನಡುವೆ ಪೊಲೀಸ್ ಇಲಾಖೆ ಕೂಡ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಮೂಗುದಾರ ಹಾಕುವ ನಿಟ್ಟಿನಲ್ಲಿ ನಿನ್ನೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಹಿರಿಯ …

Read More »

ನಗರ ಪಟ್ಟಣ ಸ್ಥಳೀಯ ವ್ಯಾಪ್ತಿಯ ಅನಧಿಕೃತ ಮನೆ, ನಿವೇಶನಗಳಿಗೆ ಬಿ-ಖಾತಾ ನೀಡಲು ನಿರ್ಧಾರ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ನಗರ-ಪಟ್ಟಣ ಸ್ಥಳೀಯ ವ್ಯಾಪ್ತಿಯಲ್ಲಿ ಅನಧಿಕೃತ ಮನೆ, ನಿವೇಶನಗಳ ಮಾಲೀಕರಿಗೆ ಬಿ-ಖಾತಾ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಒಂದು ಬಾರಿಗೆ ಅನ್ವಯಿಸಿ ಇ-ಖಾತಾಗೆ ಸಮಾನಾಂತರವಾದ ಬಿ-ಖಾತಾ ನೀಡಲಿದೆ. ವಿಕಾಸಸೌಧದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಈ ವಿಷಯ ತಿಳಿಸಿ, ಅನಧಿಕೃತ ಮನೆ/ನಿವೇಶನಗಳ ಮಾಲೀಕರು ಇದಕ್ಕಾಗಿ ಪ್ರತ್ಯೇಕ ಅರ್ಜಿ ಸಲ್ಲಿಸಬೇಕಾಗಿಲ್ಲ, ಹೆಚ್ಚುವರಿ ಶುಲ್ಕ ಪಾವತಿಸಬೇಕಾಗಿಲ್ಲ. ಆನ್‌ಲೈನ್ ಮುಖೇನ ಬಿ-ಖಾತಾ (ಇ-ಆಸ್ತಿ) ತಲುಪಲಿದ್ದು, ಜಿಲ್ಲಾಧಿಕಾರಿ ನೇತೃತ್ವದಲ್ಲಿ ರಾಜ್ಯವ್ಯಾಪಿ ಅಭಿಯಾನ ನಡೆಯಲಿದೆ …

Read More »

ಮುಂದಿನ 5 ವರ್ಷಗಳಲ್ಲಿ ಉನ್ನತ ಶಿಕ್ಷಣ ಇಲಾಖೆಯ ಎಲ್ಲ ಹುದ್ದೆಗಳು ಭರ್ತಿ: ಸಚಿವ ಎಂ.ಸಿ.ಸುಧಾಕರ್‌

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಹಂತ ಹಂತವಾಗಿ ಮುಂದಿನ 5 ವರ್ಷಗಳಲ್ಲಿ ಭರ್ತಿ ಮಾಡಲಾಗುವುದು. ಈ ಸಂಬಂಧ ಆರ್ಥಿಕ ಇಲಾಖೆಯ ಜತೆಗೂ ಚರ್ಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ. ಸುಧಾಕರ್‌ ತಿಳಿಸಿದರು. ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ನೂತನವಾಗಿ ನೇಮಕಗೊಂಡ ಸಹಾಯಕ ಪ್ರಾಧ್ಯಾಪಕರಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಮುಂದಿನ ಫೆಬ್ರವರಿ ತಿಂಗಳ ಅಂತ್ಯದ ವೇಳೆಗೆ 310 ಮಂದಿ ಪದವಿ ಕಾಲೇಜುಗಳ …

Read More »