Breaking News

ಬೆಂಗಳೂರು

ಹರ್ಷ ಹತ್ಯೆ ಪ್ರಕರಣ : ನ್ಯಾಯಾಂಗ ಬಂಧನದ 190 ದಿನಕ್ಕೆ ವಿಸ್ತರಣೆ

ಬೆಂಗಳೂರು : ಶಿವಮೊಗ್ಗದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಬಂಧಿಸಲಾಗಿರುವ ಹತ್ತು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು 190 ದಿನಕ್ಕೆ ವಿಸ್ತರಣೆ ಮಾಡಲಾಗಿದೆ. ಆರೋಪಿಗಳನ್ನು ಇನ್ನೂ ಹೆಚ್ಚಿನ ತನಿಖೆಗೆ ಒಳಪಡಿಸುವ ಅಗತ್ಯವಿರುವುದರಿಂದ ಅವರ ನ್ಯಾಯಾಂಗ ಬಂಧನ ಅವಧಿಯನ್ನು 90 ದಿನಗಳಿಂದ 190 ದಿನಗಳಿಗೆ ಹೆಚ್ಚಿಸಬೇಕೆಂದು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಮಾಡಿದ ಮನವಿಯನ್ನು ವಿಶೇಷ ಕೋರ್ಟ್ ಪುರಸ್ಕರಿಸಿದೆ.

Read More »

ಪದವಿ ಪಾಸಾದ ವಿದ್ಯಾರ್ಥಿಗಳಿಗೆ ಗುಡ್​ನ್ಯೂಸ್​

ಬೆಂಗಳೂರು: ಡಿಗ್ರಿ ಪಾಸಾದವರಿಗೆ ಗುಡ್​ನ್ಯೂಸ್​ ಸಿಕ್ಕಿದ್ದು, ಕರ್ನಾಟಕ ಬ್ಯಾಂಕ್​ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ. ದೇಶಾದ್ಯಂತ ತನ್ನ ಶಾಖೆಗಳು / ಕಚೇರಿಗಳಿಗಾಗಿ ಭರ್ತಿ ಪ್ರಕ್ರಿಯೆ ನಡೆಯುತ್ತಿದೆ. ಆಸಕ್ತರು ಅಧಿಕೃತ ವೆಬ್​ಸೈಟ್​ karnatakabank.com ನಲ್ಲಿ ಅರ್ಜಿ ಸಲ್ಲಿಸಬಹುದು.

Read More »

ನೀರಿನ ಸಮಸ್ಯೆ ಪರಿಹರಿಸಿದಿದ್ದರೆ ಮುಂದಿನ ದಿನದಲ್ಲಿ ನೀರಿನ ಹಾಹಾಕಾರ ಎದುರಿಸಬೇಕಾಗುತ್ತದೆ : ಮಾಜಿ ಪ್ರಧಾನಿ

ಬೆಂಗಳೂರು: ಸ್ವಾತಂತ್ರ್ಯ ಪಡೆದು ಇಷ್ಟು ವರ್ಷಗಳಾದರೂ ನದಿ ನೀರು ಹಂಚಿಕೆ ವಿಚಾರದಲ್ಲಿ ಕೇಂದ್ರದ ನಿರ್ಲಕ್ಷ್ಯ ಧೋರಣೆಯಿಂದಾಗಿ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದು, ಸಮಸ್ಯೆ ಪರಿಹರಿಸಿ ಕೊಳ್ಳದಿದ್ದರೆ ಮುಂದಿನ ದಿನದಲ್ಲಿ ನೀರಿನ ಹಾಹಾಕಾರ ಎದುರಿಸಬೇಕಾಗುತ್ತದೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಕಳವಳ ವ್ಯಕ್ತಪಡಿಸಿದ್ದಾರೆ. ಬಸವನಗುಡಿ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಿದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೇಂದ್ರದ ನಿರ್ಲಕ್ಷ್ಯ ಧೋರಣೆಯಿಂದಾಗಿ ನಮ್ಮ ನೀರು ನಾವು ಪಡೆಯಲು ಆಗಲಿಲ್ಲ. ಭವಿಷ್ಯದಲ್ಲಿ ನೀರು ಪೂರೈಕೆ ಬಹಳ ಕಷ್ಟವಾಗಲಿದೆ. …

Read More »

ದಿ. ಎಂ.ಪಿ ಶಂಕರ್ ಅವರ ಪತ್ನಿ ಮಂಜುಳಾ ನಿಧನ

ಮೈಸೂರು: ಸ್ಯಾಂಡಲ್ ವುಡ್ ಖ್ಯಾತ ನಟ, ನಿರ್ಮಾಪಕರಾಗಿದ್ದಂತ ದಿವಂಗತ ಎಂ.ಪಿ ಶಂಕರ್ ಅವರ ಪತ್ನಿ ಮಂಜುಳಾ ಶಂಕರ್ (75) ಹೃದಯಾಘಾತದಿಂದ ಮಂಗಳವಾರ ನಿಧನರಾಗಿದ್ದಾರೆ. ಮೈಸೂರಿನ ವಿಜಯನಗರದ ತಮ್ಮ ಸ್ವಗೃಹದಲ್ಲಿ ಕೆಲ ದಿನಗಳ ಹಿಂದೆಯೂ ಹೃದಯಾಘಾತಕ್ಕೆ ಒಳಗಾಗಿದ್ದರು.ಇದೀಗ ವಿಧಿವಶರಾದರು.

Read More »

ಡಿಜಿಪಿ ಡಾ.ಪಿ. ರವೀಂದ್ರನಾಥ್ ರಾಜೀನಾಮೆ

ಬೆಂಗಳೂರು: ರಾಜ್ಯ ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಡಾ.ಪಿ. ರವೀಂದ್ರನಾಥ್ ಅವರು ತಮ್ಮ ಹುದ್ದೆಗೆ ಮಂಗಳವಾರ ರಾಜೀನಾಮೆ ನೀಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ಪತ್ರ ಸಲ್ಲಿಸಿದ್ದಾರೆ. ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್‌ಇ) ಡಿಜಿಪಿ ಆಗಿದ್ದ ರವೀಂದ್ರನಾಥ್ ಅವರನ್ನು ಪೊಲೀಸ್ ತರಬೇತಿ ವಿಭಾಗಕ್ಕೆ ಇತ್ತೀಚೆಗಷ್ಟೇ ವರ್ಗಾಯಿಸಲಾಗಿತ್ತು.

Read More »

ಮೇ.26ರಿಂದ ಲಾಲ್ ಬಾಗ್ ನಲ್ಲಿ ಮಾವು ಮೇಳ

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದಂತ ಮಾವು ಮೇಳಕ್ಕೆ ಮತ್ತೆ ಜೀವ ಬಂಧಿದೆ. ಇದೇ ಮೇ.26ರಿಂದ ನಗರದ ಲಾಲ್ ಬಾಗ್ ಮತ್ತು ಕಬ್ಬನ್ ಉದ್ಯಾನವನದಲ್ಲಿ ಮಾವು ಮೇಳವನ್ನು ಆಯೋಜಿಸಲಾಗಿದೆ. ಈ ಕುರಿತು ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಅಧ್ಯಕ್ಷ ಕೆ.ವಿ ನಾಗರಾಜ್, ವ್ಯವಸ್ಥಾಪಕ ನಿರ್ದೇಶಕ ಸಿ.ಜಿ ನಾಗರಾಜ್ ಮತ್ತು ರಾಜ್ಯ ತೋಟಗಾರಿಕೆ ಇಲಾಖೆ ನಿರ್ದೇಶಕ ನಾಗೇಂದ್ರ ಪ್ರಸಾದ್ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ, ಈ ತೀರ್ಮಾನ ಕೈಗೊಳ್ಳಲಾಗಿದೆ.

Read More »

ಧ್ವನಿವರ್ಧಕ ಕುರಿತು ಮಹತ್ವದ ಮಾಹಿತಿ ಹೊರಡಿಸಿದ ಸರ್ಕಾರ

ಬೆಂಗಳೂರು: ಆಜಾನ್ ಮತ್ತು ಸುಪ್ರಭಾತ ವಿವಾದಕ್ಕೆ ತೆರೆ ಎಳೆಯಲು ಧ್ವನಿವರ್ಧಕ ವಿಚಾರದಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಸುಪ್ರೀಂ ಕೋರ್ಟ್ 2002ರ ಆದೇಶದಂತೆ ಯಾವ ಪ್ರದೇಶದಲ್ಲಿ ಎಷ್ಟು ಡೆಸಿಬಲ್ ಧ್ವನಿವರ್ಧಕ ಬಳಸಬೇಕೆಂದು ರಾಜ್ಯ ಸರ್ಕಾರ ತನ್ನ ಮಾರ್ಗಸೂಚಿಯಲ್ಲಿ ತಿಳಿಸಿದೆ ಕರ್ನಾಟಕ ಶಬ್ದ ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಕಾರ ಬೆಳಗ್ಗೆ 10 ರಿಂದ ಸಂಜೆ 6ವರೆಗೆ ಇಂತಿಷ್ಟೇ ಡೆಸಿಬಲ್ ಹಾಗೂ ರಾತ್ರಿ 10 ರಿಂದ ಬೆಳಗ್ಗೆ 6 ರವರಗೆ …

Read More »

ಗೋಪಾಲಯ್ಯ ಹೆಸರು ಪ್ರಸ್ತಾಪಿಸದೆ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ

ಬೆಂಗಳೂರು: ನಗರದ ಮಹಾಲಕ್ಷ್ಮೀ ಲೇಔಟ್‌ ಕ್ಷೇತ್ರದ ಮಹಾನುಭಾವನಿಗೆ ಎರಡು ಬಾರಿ ಟಿಕೆಟ್‌ ಕೊಟ್ಟೆ. ನನಗೆ ಟೋಪಿ ಹಾಕಿ ಹೋದ ಎಂದು ಅಬಕಾರಿ ಸಚಿವ ಗೋಪಾಲಯ್ಯ ಹೆಸರು ಪ್ರಸ್ತಾಪಿಸದೆ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಮಹಾಲಕ್ಷ್ಮೀ ಲೇಔಟ್‌ನಲ್ಲಿ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸ್ವಾಮಿಜಿಯೊಬ್ಬರು ಏನೋ ತಪ್ಪು ಮಾಡಿಕೊಂಡಿದ್ದಾನೆ. ಒಂದು ಬಾರಿ ಟಿಕೆಟ್‌ ಕೊಡಿ ಎಂದಿದ್ದರು. ಅವರ ಸಲಹೆ ಮೇರೆಗೆ ಟಿಕೆಟ್‌ ಕೊಟ್ಟೆ. ಆಮೇಲೆ ಸಾವಿರಾರು ಕೋಟಿ …

Read More »

ಸಿದ್ದರಾಮಯ್ಯ ಅವರನ್ನು ಭೇಟಿಯಾದ ನಾಗೇಶ್

ಬೆಂಗಳೂರು: ಮಾಜಿ ಸಚಿವ ನಾಗೇಶ್ ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸಿದ್ದರಾಮಯ್ಯ ಭೇಟಿ ಬಳಿಕ ಮಾತನಾಡಿದ ನಾಗೇಶ್, ರಾಜಕೀಯದಲ್ಲಿ ಯಾರೂ ಮಿತ್ರರಲ್ಲ, ಯಾರೂ ಶತ್ರುಗಳೂ ಅಲ್ಲ, ಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದಕ್ಕೆ ನನಗೆ ಬೇಸರವೂ ಇಲ್ಲ ಎಂದು ಹೇಳಿದ್ದಾರೆ.

Read More »

ಮೇ 14ರ ವರೆಗೆ ಮಳೆ ಯಾಗುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನ, ಮೇ 14ರ ವರೆಗೆ ಮಳೆ ಯಾಗುವ ಸಾಧ್ಯತೆಗಳಿವೆ ಎಂದು ಹವಾ ಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ ನೆರೆಯ ರಾಜ್ಯಗಳಂತೆ ಭಾರೀ ಮಳೆಯಾಗದು ಎಂದು ಇಲಾಖೆ ತಿಳಿಸಿದೆ. ಒಂದು ವಾರದಿಂದ ರಾಜ್ಯದ ಕರಾವಳಿ, ದಕ್ಷಿಣ ಮತ್ತು ಉತ್ತರ ಒಳನಾಡು ಪ್ರದೇಶದಲ್ಲಿ ಮಳೆಯಾಗುತ್ತಿದೆ. ಇದು ಮುಂದಿನ ನಾಲ್ಕು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಉತ್ತರ ಒಳನಾಡು ಜಿಲ್ಲೆಗಳಲ್ಲಿ ಬಿಸಿಲು, ಚಂಡಮಾರುತದ ಪರಿಣಾಮ ದಿಂದ …

Read More »