Breaking News

ಬೆಂಗಳೂರು

11 ಜಿಲ್ಲೆಗಳಲ್ಲಿ ಭಾರಿ ಮಳೆ : ಮೂವರು ಸಾವು

ಬೆಂಗಳೂರು: ರಾಜ್ಯದ 11 ಜಿಲ್ಲೆಗಳಲ್ಲಿ ಬುಧವಾರ ಆಕಾಲಿಕ ಮಳೆ ಆರ್ಭಟಿಸಿದ್ದು ಮಳೆ ಸಂಬಂಧಿ ಕಾರಣಗಳಿಗೆ ಪ್ರತ್ಯೇಕ ಪ್ರಕರಣಗಳಲ್ಲಿ ಮೂವರು ಮೃತಪಟ್ಟಿದ್ದಾರೆ. ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಧಾರವಾಡ, ಚಿತ್ರದುರ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದ್ದರೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲೂ ಉತ್ತಮ ಮಳೆ ಸುರಿದಿದೆ.

Read More »

ಪಿಎಸ್‌ಐ ನೇಮಕಾತಿ ಅಕ್ರಮ : ಡಿವೈಎಸ್‌ಪಿ, ಎಸ್ಪಿ ಅಮಾನತು

ಬೆಂಗಳೂರು : ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಶಾಮೀಲಾದ ಆರೋಪದ ಮೇಲೆ ಕಲಬುರಗಿ ಬೆರಳಚ್ಚು ವಿಭಾಗದ ಡಿವೈಎಸ್‌ಪಿ ಆರ್‌.ಆರ್‌. ಹೊಸಮನಿ ಮತ್ತು ಮಹಿಳಾ ಪೊಲೀಸ್‌ ಠಾಣೆಯ ಇನ್‌ಸ್ಪೆಕ್ಟರ್‌ ದಿಲೀಪ್‌ ಸಾಗರ್‌ ಅವರನ್ನು ಬುಧವಾರ ಅಮಾನತು ಮಾಡಲಾಗಿದೆ. ಪರೀಕ್ಷಾ ಅಕ್ರಮ ನಡೆದಿರುವ ಕಲಬುರಗಿಯ ಜ್ಞಾನ ಜ್ಯೋತಿ ಪರೀಕ್ಷಾ ಕೇಂದ್ರದ ಉಸ್ತುವಾರಿಯಾಗಿ ಆರ್‌.ಆರ್‌. ಹೊಸಮನಿ ಮತ್ತು ಮೇಲ್ವಿಚಾರಕರಾಗಿ ದಿಲೀಪ್‌ ಸಾಗರ್‌ ಕಾರ್ಯನಿರ್ವಹಿಸಿದ್ದರು. ಈ ಇಬ್ಬರೂ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರುವುದು ಕಂಡುಬಂದಿರುವ ಕಾರಣದಿಂದ ಅಮಾನತು ಮಾಡಲಾಗಿದೆ …

Read More »

ಬಜೆಟ್‌ ಘೋಷಣೆ ವೇಳಾಪಟ್ಟಿ ನಿಗದಿ‍ಪಡಿಸಲಾಗುವುದು : ಬೊಮ್ಮಾಯಿ

ಬೆಂಗಳೂರು: ಬಜೆಟ್‌ ಘೋಷಣೆಗಳನ್ನು ಕಾಲಮಿತಿಯಲ್ಲಿ ಅನುಷ್ಠಾನಕ್ಕೆ ತಂದು, ಫಲಾನುಭವಿಗಳಿಗೆ ತ್ವರಿತವಾಗಿ ಸೌಲಭ್ಯ ಒದಗಿಸುವುದಕ್ಕಾಗಿ ಎಲ್ಲ ಇಲಾಖೆಗಳಿಗೂ ವೇಳಾಪಟ್ಟಿ ನಿಗದಿ‍ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪ್ರಸಕ್ತ ವರ್ಷದ ಬಜೆಟ್‌ ಘೋಷಣೆಗಳ ಅನುಷ್ಠಾನದ ಕುರಿತು ಪ್ರಮುಖ ಇಲಾಖೆಗಳು ಕೈಗೊಂಡಿರುವ ಕ್ರಮಗಳ ಬಗ್ಗೆ ಅವರು ಬುಧವಾರ ಇಡೀ ದಿನ ಪರಿಶೀಲನಾ ಸಭೆಗಳನ್ನು ನಡೆಸಿದರು. ಸಭೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ, ‘ವೇಳಾಪಟ್ಟಿಯ ಪ್ರಕಾರವೇ ಬಜೆಟ್‌ ಅನುಷ್ಠಾನಕ್ಕೆ ಬರಲಿದೆ’ ಎಂದರು.

Read More »

ಬಸವಣ್ಣನವರ ಪುತ್ಥಳಿಗೆ ಮಾಲಾರ್ಪಣೆ

ಧಾರವಾಡ : ಬಸವ ಜಯಂತಿ ನಿಮಿತ್ತ ಧಾರವಾಡದ ಶ್ರೀ ಬಸವೇಶ್ವರ ವೃತ್ತದಲ್ಲಿರುವ ಕಾಯಕಯೋಗಿ ಬಸವಣ್ಣನವರ ಪುತ್ಥಳಿಗೆ ಶಾಸಕ ಅಮೃತ ದೇಸಾಯಿ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು . ಈ ವೇಳೆಯಲ್ಲಿ ಹಲವರು ಭಾಗಿಯಾಗಿದರು .

Read More »

ಸಿಎಂಗೆ ಮಹತ್ವದ ಸಂದೇಶ ನೀಡಿದ ಅಮಿತ್‌ ಶಾ… ಅದೇನು ಅಂತೀರಾ ಈ ಸುದ್ದಿ ನೋಡಿ ??

ಬೆಂಗಳೂರು: ‘ನೀವು ನಿರಾತಂಕವಾಗಿ ಉತ್ತಮ ಆಡಳಿತ ನೀಡುವತ್ತ ಗಮನಹರಿಸಿ. ಅಭಿವೃದ್ಧಿಯ ವೇಗ ಹೆಚ್ಚಿಸಿ. ಎಲೆಕ್ಷನ್‌, ರಾಜಕೀಯದಂತ ಬಾಕಿ ವಿಚಾರಗಳನ್ನು ನಮಗೆ ಬಿಡಿ. ಅವುಗಳನ್ನು ನಾವು ನೋಡಿಕೊಳ್ಳುತ್ತೇವೆ’ ಎಂದು ಕೇಂದ್ರದ ಗೃಹ ಸಚಿವ ಅಮಿತ್‌ ಶಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಯ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಸೋಮವಾರ ತಡರಾತ್ರಿ ಅಮಿತ್‌ ಶಾ ಅವರು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಬೆನ್ನಲ್ಲೇ ಖಾಸಗಿ ಹೋಟೆಲ್‌ನಲ್ಲಿ ಬೊಮ್ಮಾಯಿ ಅವರೊಂದಿಗೆ ಸುಮಾರು ಅರ್ಧ …

Read More »

ಹವಮಾನ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು:ಕರ್ನಾಟಕದಲ್ಲಿ ವರುಣನ ಅಬ್ಬರಇನ್ನೂ ಹೆಚ್ಚಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ಕರ್ನಾಟಕದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಇಂದು ಕೂಡ ರಾಜ್ಯಾದ್ಯಂತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಾದ್ಯಂತ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ಸಂಜೆಯ ಬಳಿಕ ಹಗುರ ಮಳೆಯಾಗಲಿದೆ.

Read More »

ಪಿಎಸ್‌ಐ ನೇಮಕಾತಿ : ಮತ್ತೊಮ್ಮೆ ಪರೀಕ್ಷೆ ಅಕ್ರಮದಲ್ಲಿ ಭಾಗಿ

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಸಂಬಂಧಿಸಿ ಬಂಧಿತರಾಗಿರುವ ಆರ್‌.ಡಿ. ಪಾಟೀಲ್‌ ಹಾಗೂ ಮಂಜುನಾಥ್‌ ಮೇಳಕುಂದಿ ಅವರು ಈ ಹಿಂದೆ ಲೋಕೋಪಯೋಗಿ ಇಲಾಖೆ ಸಹಾಯಕ ಎಂಜಿನಿಯರ್‌ ಹುದ್ದೆ ಪರೀಕ್ಷೆ ಅಕ್ರಮದಲ್ಲೂ ಆರೋಪಿಗಳಾಗಿದ್ದರು. ಭೂಸನೂರು ಕರ್ನಾಟಕ ನೀರಾವರಿ ನಿಗಮ ನಿಯಮಿತ ಅಮರ್ಜಾ ಯೋಜನೆ ಅಣೆಕಟ್ಟು ಉಪವಿಭಾಗ ಕೋರಳ್ಳಿ ಕ್ಯಾಂಪ್‌ ಸಹಾಯಕ ಎಂಜಿನಿಯರ್‌ ಆಗಿರುವ ಮಂಜುನಾಥ ಮೇಳಕುಂದಿ ಹಾಗೂ ಮತ್ತೋರ್ವ ಆರೋಪಿ ರುದ್ರಗೌಡ ಪಾಟೀಲ್‌ (ಆರ್‌.ಡಿ.ಪಾಟೀಲ್‌) ಲೋಕೋಪಯೋಗಿ ಇಲಾಖೆಯ ಎಂಜಿನಿಯರ್‌ ಪರೀಕ್ಷೆ ಅಕ್ರಮದಲ್ಲೂ ಭಾಗಿಯಾದ …

Read More »

ಚಂದ್ರ ದರ್ಶನವಾಗದ ಹಿನ್ನೆಲೆ : ನಾಳೆ ರಂಜಾನ್ ಆಚರಣೆ

ಬೆಂಗಳೂರು: ಚಂದ್ರ ದರ್ಶನವಾಗದ ಹಿನ್ನೆಲೆಯಲ್ಲಿ ರಂಜಾನ್ ಹಬ್ಬವನ್ನು ಸೋಮವಾರದ ಬದಲು ಮಂಗಳವಾರ ಆಚರಿಸಲಾಗುವುದು. ವಕ್ಫ್ ಮಂಡಳಿಯಿಂದ ಈ ಕುರಿತಾಗಿ ಮಾಹಿತಿ ನೀಡಲಾಗಿದೆ. ಚಂದ್ರದರ್ಶನ ಸಮಿತಿಯ ಮೌಲಾನಾ ಮಸೂದ್ ಇಮ್ರಾನ್ ರಶಾದಿ ಅವರು ಸೋಮವಾರದ ಬದಲು ಮಂಗಳವಾರ ರಂಜಾನ್ ಹಬ್ಬ ಆಚರಿಸುವಂತೆ ತಿಳಿಸಿದ್ದಾರೆ.

Read More »

ಪದವಿ ವಿದ್ಯಾರ್ಥಿಗಳಿಗೆ ಮಹತ್ವ ಮಾಹಿತಿ

ಬೆಂಗಳೂರು : ರಾಜ್ಯದಲ್ಲಿ 2022-23 ನೇ ಶೈಕ್ಷಣಿಕ ವರ್ಷದಿಂದ ಪದವಿ ವಿದ್ಯಾರ್ಥಿಗಳ ಹೊಸ ಮಾದರಿಯ ಆಂತರಿಕ ಮೌಲ್ಯಮಾಪನ ಪದ್ಧತಿಯನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದ್ದು, ಇನ್ಮುಂದೆ ಪದವಿ ವಿದ್ಯಾರ್ಥಿಗಳ ಆಂತರಿಕ ಮೌಲ್ಯಮಾಪನಕ್ಕೆ 40 ಅಂಕ ನಿಗದಿಗೊಳಿಸಲಾಗಿದೆ. 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ವಿದ್ಯಾರ್ಥಿಗಳು 40 ಅಂಕಗಳಿಗೆ ಆಂತರಿಕ ಮತ್ತು 60 ಅಂಕಗಳಿಗೆ ಥಿಯರಿ ಪರೀಕ್ಷೆ ಬರೆಯಬೇಕಿದೆ. ಉನ್ನತ ಶಿಕ್ಷಣ ಇಲಾಖೆಯು ರಾಷ್ಟ್ರೀಯ ಶಿಕ್ಷಣ ನೀತಿ …

Read More »

ಪಿಎಸ್‌ಐ ನೇಮಕಾತಿ ಅಕ್ರಮ : 12 ಅಭ್ಯರ್ಥಿಗಳ ಬಂಧನ

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ 12 ಅಭ್ಯರ್ಥಿಗಳನ್ನು ಹೈಗ್ರೌಂಡ್ಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸಿಐಡಿ ಡಿಎಸ್​ಪಿ ನೀಡಿದ ದೂರಿನನ್ವಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, 8ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಕೋರಮಂಗಲದ ನಿವಾಸಕ್ಕೆ ಹಾಜರುಪಡಿಸಿ, 10 ದಿನ ವಶಕ್ಕೆ ಪಡೆದರು. ಬಂಧಿತರು 2020-21ನೇ ಸಾಲಿನಲ್ಲಿ ಬೆಂಗಳೂರಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದಾರೆ. ತನಿಖೆಯ ವೇಳೆ ಅಭ್ಯರ್ಥಿಗಳ ಒಎಂಆರ್​​ ಶೀಟ್‌ನ ಕಾರ್ಬನ್ ಪ್ರತಿ ಪಡೆಯಲಾಗಿತ್ತು. ಈ ಪೈಕಿ 22 ಅಭ್ಯರ್ಥಿಗಳ …

Read More »