admin
May 1, 2022
Breaking News, ಬೆಂಗಳೂರು
ಬೆಂಗಳೂರು: ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಇತ್ತೀಚಿಗೆ ರಸಗೊಬ್ಬರ ದರದ ಮೇಲಿನ ರಿಯಾಯ್ತಿ ಹೆಚ್ಚಿಸೋ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಅದರಂತೆ, ಇದೀಗ ರಸಗೊಬ್ಬರದ ಮೇಲಿನ ರಿಯಾಯ್ತಿ ದರ ಹೆಚ್ಚಿಸಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವಂತ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು, ಅಂತರಾಷ್ಟ್ರೀಯ ಮಟ್ಟದಲ್ಲಿ ರಸಗೊಬ್ಬರ ಮಾರುಕಟ್ಟೆಯಲ್ಲಿ ಕಚ್ಚಾ ವಸ್ತುಗಳ ಬೆಲೆ ಏರಿಕೆಯಾದ ಹಿನ್ನಲೆಯಲ್ಲಿ 2022-23ನೇ ಸಾಲಿನ ಆರಂಭದಲ್ಲಿಯೇ ಕೇಂದ್ರ ಸರ್ಕಾರ ರಸಗೊಬ್ಬರಗಳಿಗೆ ರಿಯಾಯ್ತಿ ದರ ಹೆಚ್ಚಿಸಿದೆ ಎಂದು ಮಾಹಿತಿ ನೀಡಿದ್ದಾರೆ.
Read More »
admin
April 30, 2022
Breaking News, ಬೆಂಗಳೂರು
ಬೆಂಗಳೂರು: ಪಿಎಸ್‌ಐ ನೇಮಕಾತಿ ಹುದ್ದೆ ಮರು ಪರೀಕ್ಷೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷೆ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಮರು ಪರೀಕ್ಷೆಯಿಂದ ಫೇಲ್ ಆದವರಿಗೂ ಅವಕಾಶ ಸಿಗುತ್ತೆ. ಪರೀಕ್ಷೆ ಮಾತ್ರ ಇರುತ್ತೆ, ದೈಹಿಕ ಸಾಮರ್ಥ್ಯ ಪರೀಕ್ಷೆ ಇರಲ್ಲ. ಎಲ್ಲರೂ ಸಹ ಆತ್ಮವಿಶ್ವಾಸದಿಂದ ಪಿಎಸ್‌ಐ ಪರೀಕ್ಷೆ ಬರೆಯಲಿ ಎಂದು ಹೇಳಿದ್ದಾರೆ.
Read More »
admin
April 30, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯ ಸರ್ಕಾರದ ನಿದ್ದೆಕೆಡಿಸಿರುವ PSI ನೇಮಕ ಹಗರಣ ದಿನದಿಂದ ದಿನಕ್ಕೆ ಒಂದ ತಿರುವು ಪಡೆದುಕೊಳ್ಳುತ್ತಿದ್ದು, ನೇಮಕಾತಿ ಪ್ರಕ್ರಿಯೆಯನ್ನು ರದ್ದು ಮಾಡಿ ಮತ್ತೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಡುವೆ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ದ ಅಭ್ಯರ್ಥಿಗಳ ಸೇರಿದಂತೆ ವಿರೋಧ ಪಕ್ಷಗಳು ಟೀಕೆ ಮಾಡುತ್ತಿದ್ದು, ಸರ್ಕಾರದ ಕ್ರಮವನ್ನು ಖಂಡಿಸುತ್ತಿದ್ದಾರೆ. ಸರ್ಕಾರ ಯಾರದ್ದೂ ತಪ್ಪನ್ನು ನಮಗೆ ಶಿಕ್ಷೆ ನೀಡಲು ಮುಂದಾಗಿರುವುದು ನಮಗೆ ಬೇಸರ ತಂದಿದ್ದೆ, ಈ ನಿಟ್ಟಿನಲ್ಲಿ ಕಾನೂನು ಸಮರಕ್ಕೆ …
Read More »
admin
April 29, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದ ವಿವಿಧೆಡೆ ಗುರುವಾರವೂ ಭಾರೀ ವರ್ಷಧಾರೆಯಾಗಿದ್ದು, ಮಳೆಯ ಆರ್ಭಟಕ್ಕೆ ಮೂವರು ಮೃತಪಟ್ಟಿದ್ದಾರೆ. ರಾಯಚೂರು, ವಿಜಯನಗರ, ಬಳ್ಳಾರಿ, ಕೊಪ್ಪಳ, ಬಾಗಲಕೋಟೆ, ಶಿವಮೊಗ್ಗ, ದಾವಣಗೆರೆ, ಕೊಡಗು, ಬೆಳಗಾವಿ, ವಿಜಯಪುರ ಸೇರಿದಂತೆ ಹಲವೆಡೆ ಗುಡುಗು-ಸಿಡಿಲು-ಬಿರುಗಾಳಿ ಸಹಿತ ಭಾರೀ ಮಳೆಯಾಗಿದೆ.
Read More »
admin
April 29, 2022
Breaking News, ಬೆಂಗಳೂರು
ಬೆಂಗಳೂರು: ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಬಂಧನವಾಗಿರುವ ಆರೋಪಿಗಳ ಬಡ ಕುಟುಂಬದ ತಾಯಂದಿರಿಗೆ, ಹೆಣ್ಣುಮಕ್ಕಳಿಗೆ ಹಾಗೂ ಪುಟ್ಟ ಮಕ್ಕಳಿಗೆ ಪವಿತ್ರ ರಂಜಾನ್ ಹಬ್ಬ ಆಚರಣೆ ಸಹಾಯ ಹಸ್ತ ನೀಡಲು ಶಾಸಕ ಜಮೀರ್ ಖಾನ್ ಮುಂದಾಗಿದ್ದಾರೆ. ಇಂದು ಹುಬ್ಬಳ್ಳಿಯ ಕಸಬಾಪೇಟ್ ಪೊಲೀಸ್ ಸ್ಟೇಷನ್ ಹತ್ತಿರದ ಮಸ್ತಾನ್ ಶಾ ಶಾದಿಮಹಲ್‌ನಲ್ಲಿ ಸಹಾಯ ಹಸ್ತ ನೀಡಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರ್ಷಕ್ಕೊಮ್ಮೆ ಬರುವ ಪವಿತ್ರ ರಂಜಾನ್ ಹಬ್ಬದ ಸಮಯದಲ್ಲಿ ಹಬ್ಬ ಆಚರಣೆ ಮಾಡಿ ಪವಿತ್ರ …
Read More »
admin
April 29, 2022
Breaking News, ಬೆಂಗಳೂರು
ಬೆಂಗಳೂರು: ಹಿಂದಿ ರಾಷ್ಟ್ರ ಭಾಷೆ ಹೌದೇ ಅಲ್ಲವೇ ಎಂಬ ಬಗ್ಗೆ ಕನ್ನಡದ ನಟ ಸುದೀಪ್ ಮತ್ತು ಹಿಂದಿ ನಟ ಅಜಯ್ ದೇವಗನ್ ಮಧ್ಯೆ ನಡೆದ ಟ್ವೀಟ್ ಸಮರ ಈಗ ರಾಜಕೀಕರಣಗೊಂಡಿದೆ. ಈ ವಿಚಾರವಾಗಿ ಬಿಜೆಪಿಯಲ್ಲೂ ಭಿನ್ನ ಅಭಿಪ್ರಾಯಗಳೂ ವ್ಯಕ್ತವಾಗಿವೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ‘ಕನ್ನಡವೇ ಸಾರ್ವಭೌಮ ಭಾಷೆ. ಎಲ್ಲರೂ ಇದನ್ನು ಮನಗಂಡು ಗೌರವಿಸಬೇಕು’ ಎನ್ನುವ ಮುಖೇನ ಸುದೀಪ್ ಅವರನ್ನು ಬೆಂಬಲಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ …
Read More »
admin
April 28, 2022
Breaking News, ಬೆಂಗಳೂರು
ಬೆಂಗಳೂರು: ಕೋವಿಡ್ 4ನೇ ಅಲೆ ಬಗ್ಗೆ ಎಚ್ಚರವಾಗಿರಿ ಅಂತ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಹೇಳಿದ್ದಾರೆ. ಇಲ್ಲಿಗೆ ಮತ್ತೊಂದು ಅಲೆ ಬರೋದು ನಿಶ್ಚಿತ. ಆದರೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೋನಾ ಬೂಸ್ಟರ್ ಡೋಸ್ ಅಭಾವ ಎದುರಾಗಿದೆ. ಈಗಾಗಲೇ ಈ ಬಗ್ಗೆ ತೆಗೆದುಕೊಳ್ಳಬೇಕಾದ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರ ಮುಂದಾಗಿದೆ ಅಂತ ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ಹೇಳಿದ್ದಾರೆ. ಬೆಂಗಳೂರಿನ ಬಗ್ಗೆ ಹೆಚ್ಚಿನ ಜಾಗೃತೆ ತೆಗೆದುಕೊಳ್ಳಲು ತಜ್ಞರು ಸೂಚಿಸಿದ್ದಾರೆ.
Read More »
admin
April 28, 2022
Breaking News, ಬೆಂಗಳೂರು
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಅವಧಿಗೆ ಮೊದಲೇ ಶಾಲೆಗಳನ್ನು ಆರಂಭಿಸಬೇಕು ಎನ್ನುವ ಶಿಕ್ಷಣ ಇಲಾಖೆ ಸೂಚನೆಗೆ ಪೋಷಕರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ‘ಖಾಸಗಿ ಶಾಲೆಗಳ ಲಾಬಿಗೆ ಸರ್ಕಾರ ಮಣಿಯುತ್ತಿದೆ. ಪ್ರವೇಶ ಶುಲ್ಕ ತೆತ್ತು, ಸಮವಸ್ತ್ರ ಖರೀದಿಸಿದ ಬಳಿಕ ಲಾಕ್ಡೌನ್ ಘೋಷಿಸುತ್ತಾರೆ. ಲಾಕ್ಡೌನ್ ಹೇರಿಕೆ ಕಾರಣಕ್ಕೆ ಆನ್ಲೈನ್ ತರಗತಿ ಆರಂಭಿಸುತ್ತಾರೆ. ಇದು ದೊಡ್ಡ ಹುನ್ನಾರ ಎಂದು ಪೋಷಕರು ಬೇಸರ ವ್ಯಕ್ತಪಡಿಸಿದ್ದಾರೆ.
Read More »
admin
April 28, 2022
Breaking News, ಬೆಂಗಳೂರು
ಬೆಂಗಳೂರು: ಬಾಲಿವುಡ್ ನಟ ಅಜಯ್ ದೇವಗನ್ ಅವರ ‘ಹಿಂದಿ ರಾಷ್ಟ್ರ ಭಾಷೆ’ ಹೇಳಿಕೆಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಸೇರಿದಂತೆ ಹಲವರು ಪ್ರತಿಕ್ರಿಯಿಸಿದ್ದು, ‘ಹಿಂದಿ ಎಂದೆಂದಿಗೂ ನಮ್ಮ ರಾಷ್ಟ್ರೀಯ ಭಾಷೆಯಾಗುವುದಿಲ್ಲ’ ಎಂದಿದ್ದಾರೆ. ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ ಎಂದು ಇತ್ತೀಚೆಗೆ ಸುದೀಪ್ ನೀಡಿದ್ದ ಹೇಳಿಕೆಗೆ ಬಾಲಿವುಡ್ ನಟ ಅಜಯ್ ದೇವಗನ್ ಪ್ರತಿಕ್ರಿಯೆ ವಿವಾದ ಸೃಷ್ಟಿಸಿದೆ.
Read More »
admin
April 28, 2022
Breaking News, ಬೆಂಗಳೂರು
ಬೆಂಗಳೂರು : ಕಿರಿಯ ಪ್ರಾಥಮಿಕ ಶಾಲಾ ( 1 ರಿಂದ 5 ನೇ ತರಗತಿ) ಪದವೀಧರ ಶಿಕ್ಷಕರಿಗೆ, ಸ್ಪರ್ಧಾತ್ಮಕ ಪರೀಕ್ಷೆಯಿಲ್ಲದೆ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕ ಹುದ್ದೆಗೆ (6 ರಿಂದ 8 ನೇ ತರಗತಿ) ಬಡ್ತಿ ನೀಡಲು ಬಡ್ತಿ ಪ್ರಮಾಣವನ್ನು ಶೇ.40 ಕ್ಕೆ ಹೆಚ್ಚಿಸಲು ಅನುಮೋದಿಸಿದೆ. ರಾಜ್ಯ ಸರ್ಕಾರವುಉ ಬಡ್ತಿ ಮೂಲಕ ಭರ್ತಿ ಮಾಡುವ ಹುದ್ದೆ ಪ್ರಮಾಣ ಶೇ. 40 ರಷ್ಟು ಹೆಚ್ಚಿಸಲು ನಿರ್ಧರಿಸಿದ್ದು, ಈ ಮೂಲಕ 52 ಸಾವಿರಕ್ಕೂ …
Read More »