admin
April 23, 2022
Breaking News, ಬೆಂಗಳೂರು
ಬೆಂಗಳೂರು: ಕಲ್ಯಾಣ ಕರ್ನಾಟಕದ ಕೆಲಭಾಗಗಳಲ್ಲಿ ಶುಕ್ರವಾರ ಬೇಸಿಗೆ ಮಳೆಯಾಗಿದ್ದು ಬಾಲಕ ಸೇರಿ ಇಬ್ಬರು ಸಿಡಿಲಿಗೆ ಬಲಿಯಾಗಿದ್ದಾರೆ. ಹಗರಿಬೊಮ್ಮನಹಳ್ಳಿ ತಾಲೂಕಿನ ಚಿಂತ್ರಪಳ್ಳಿ ಗ್ರಾಮದ ಬಾಲಕ ನಾಗರಾಜ(11) ಹೊಲಕ್ಕೆ ಹೋಗಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾನೆ.ಕಲಬುರಗಿ ಜಿಲ್ಲೆ ರೇವನೂರ ಗ್ರಾಮದಲ್ಲಿರುವ ತನ್ನ ಜಮೀನಿನಲ್ಲಿ ಶುಕ್ರವಾರ ಸಂಜೆ ಶೇಂಗಾ ಬಿಡಿಸುತ್ತಿದ್ದ ರೈತ ಮಹಾದೇವಪ್ಪ(44) ಸಿಡಿಲಿಗೆ ಬಲಿಯಾಗಿದ್ದಾರೆ.
Read More »
admin
April 22, 2022
Breaking News, ಬೆಂಗಳೂರು
ಬೆಂಗಳೂರು : ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಮತ್ತು ಧಾರವಾಡದಲ್ಲಿ ಇನ್ನೆರಡು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ ಬೀಳಲಿದೆಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ರಾಜ್ಯಾದ್ಯಂತ ಇನ್ನೂ ಮೂರು ದಿನ ಮಳೆಯಾಗಲಿದೆ. ಇಂದಿನಿಂದ 3 ದಿನ ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಉತ್ತರ …
Read More »
admin
April 22, 2022
Breaking News, ಬೆಂಗಳೂರು
ಬೆಂಗಳೂರು: ಇನ್ನು ಮುಂದೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅವರ ಬಯೋಮೆಟ್ರಿಕ್ ಹಾಜರಾತಿಯ ಆಧಾರದಲ್ಲೇ ವೇತನ ಸಿಗಲಿದೆ. ಹಾಜರಾತಿ ಕಡಿಮೆಯಿದ್ದರೆ ವೇತನಕ್ಕೂ ಕತ್ತರಿ ಬೀಳಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಸುಧಾರಣೆ ಹಾಗೂ ಗುಣಾತ್ಮಕ ಬದಲಾವಣೆ ತರುವ ನಿಟ್ಟಿನಲ್ಲಿ ಬಯೋಮೆಟ್ರಿಕ್ ಹಾಜರಾತಿ ಆಧರಿಸಿ ವೇತನ ಪಾವತಿಸುವ ವ್ಯವಸ್ಥೆ ಕಡ್ಡಾಯಗೊಳಿಸುವ ತೀರ್ಮಾನ ಕೈಗೊಂಡಿರುವುದಾಗಿ ಎಂದರು.
Read More »
admin
April 21, 2022
Breaking News, ಬೆಂಗಳೂರು
ಬೆಂಗಳೂರು : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು ಬೆಂಗಳೂರಿಗೆ ಬರಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾ ಪ್ರವಾಸದಲ್ಲಿದ್ದಾರೆ. ಕೇಜ್ರಿವಾಲ್‌ರವರು ಬೆಂಗಳೂರಿಗೆ ಆಗಮಿಸಿ, ಗುರುವಾರ ನಡೆಯಲಿರುವ ರೈತರು ಹಾಗೂ ಜನಸಾಮಾನ್ಯರ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
Read More »
admin
April 21, 2022
Breaking News, ಬೆಂಗಳೂರು
ಬೆಂಗಳೂರು: “ಮುಂದಿನ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬರಬೇಕಿದ್ದರೆ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಿ’ ಎಂಬ ಬೇಡಿಕೆಯನ್ನು ರಾಜ್ಯ ಕಾಂಗ್ರೆಸ್‌ನ ತಂಡವೊಂದು ಮುಂದಿಟ್ಟಿದೆ. ರಾಜ್ಯ ಕಾಂಗ್ರೆಸ್‌ನ ನೇತೃತ್ವ ಯಾರಿಗೆ ಎಂಬ ಬಗ್ಗೆ ಆಂತರಿಕ ಗೊಂದಲ ಮುಂದುವರಿದಿರುವ ನಡುವೆಯೇ ಈ ಹೊಸ ಬೆಳವಣಿಗೆ ನಡೆದಿದೆ. ಪಂಜಾಬ್‌ನಲ್ಲಿ ನಡೆದಿದ್ದ ಚುನಾವಣೆ ವೇಳೆ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿತ್ತು. ಅದೇ ರೀತಿ 2023ರ ವಿಧಾನಸಭೆ ಚುನಾ ವಣೆಯಲ್ಲಿ ರಾಜ್ಯದಲ್ಲೂ ಸಿಎಂ ಅಭ್ಯರ್ಥಿಯನ್ನು ಘೋಷಿಸಬೇಕು ಎಂದು …
Read More »
admin
April 20, 2022
Breaking News, ಬೆಂಗಳೂರು, ಹುಬ್ಬಳ್ಳಿ
ಹುಬ್ಬಳ್ಳಿ: ಹುಬ್ಬಳ್ಳಿ – ಧಾರವಾಡದಲ್ಲಿ ಶಾಂತಿ ನೆಲೆಸಬೇಕಾಗಿರುವುದು ತೀರ ಅಗತ್ಯತೆ ಇದೆ ಎಂದು ಮೂರುಸಾವಿರಮಠದ ಶ್ರೀ ಗುರುಸಿದ್ದರಾಜಯೋಗಿಂದ್ರ ಮಹಾಸ್ವಾಮಿಗಳು ಹಳೇ ಹುಬ್ಬಳ್ಳಿ ಗಲಭೆ ಹಿನ್ನೆಲೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಏ.17 ರಂದು ಹಳೇಹುಬ್ಬಳ್ಳಿ ಗಲಭೆಯಲ್ಲಿ ಗಾಯಗೊಂಡಿದ್ದ ಸಂಚಾರಿ ಪೋಲಿಸ್ ಇನ್ಸ್ಪೆಕ್ಟರ್ ಕಾಡದೇವರಮಠ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ನಂತರ ಮಾತನಾಡಿದ ಅವರು, ಕಳೆದ 20 ವರ್ಷಗಳಿಂದ ಇಂತಹ ಯಾವ ಘಟನೆಗಳು ನಡೆದಿಲ್ಲ. ಆದರೆ ಮೊನ್ನೆ ನಡೆದ ಘಟನೆ …
Read More »
admin
April 20, 2022
Breaking News, ಬೆಂಗಳೂರು
ಬೆಂಗಳೂರು : ಮಂಡ್ಯದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂದಿದ್ದಕ್ಕೆ ಸಿಟ್ಟಾಗಿದ್ದ ಸಿಟ್ಟಾದ ಕುಮಾರಸ್ವಾಮಿ, ಬೆಳಗ್ಗೆ ಸಿದ್ದರಾಮಯ್ಯ ಅಲ್ಲ ಸುಳ್ಳರಾಮಯ್ಯ ಎಂದು ಸರಣಿ ಟ್ವೀಟ್ ಮಾಡಿ ಕಿಡಿಕಾರಿದ್ರು, ಇದೀಗ ಸಿದ್ದರಾಮಯ್ಯ ಸಹ ಸರಣಿ ಟ್ವೀಟ್ ಮಾಡಿ ಕುಮಾರಸ್ವಾಮಿಗೆ ಸವಾಲ್ ಹಾಕಿದ್ದಾರೆ. ಜಾತ್ಯಾತೀತ ಪಕ್ಷ ಎನ್ನುತ್ತೀರಲ್ವಾ, ಹಾಗಾದರೆ ಚುನಾವಣಾ ಪೂರ್ವ ಹಾಗೂ ಚುನಾವಣಾ ಬಳಿಕ ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಿ, ನಾಡಿನ ಜನತೆ …
Read More »
admin
April 20, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ವೇಳೆ ಹಿಜಾಬ್ ಹಾಕಿಕೊಂಡು ಬರುವ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅನುಮತಿ ನೀಡಲಾಗುವುದಿಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ವೇಳೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಸಮವಸ್ತ್ರ ನಿಯಮವನ್ನು ಪಾಲನೆ ಮಾಡಬೇಕು.ಹಿಜಾಬ್ ಧರಿಸಿಕೊಂಡು ಬರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.
Read More »
admin
April 19, 2022
Breaking News, ಬೆಂಗಳೂರು
ಬೆಂಗಳೂರು : ಏಪ್ರಿಲ್ 22 ರಿಂದ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಏಪ್ರಿಲ್ 22 ರಿಂದ ಮೇ.18ರವರೆಗೆ ನಡೆಯಲಿದ್ದು, ಈ ಬಾರಿ ಒಟ್ಟು 6.84 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ಸಮವಸ್ತ್ರ ಕಡ್ಡಾಯ ಮಾಡಲಾಗಿದ್ದು, ಹಿಜಾಬ್ ಧರಿಸಿ ಬಂದ್ರೆ ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ಇಲ್ಲ ಎಸ್ ಎಸ್‌ಎಲ್ ಸಿ ಪರೀಕ್ಷೆಯಂತೆ ದ್ವಿತೀಯ ಪಿಯುಸಿ ಪರೀಕ್ಷೆಗೂ ಹಿಜಾಬ್ ನಿಷೇಧ ಮಾಡಲಾಗುವುದು.
Read More »
admin
April 19, 2022
Breaking News, ಬೆಂಗಳೂರು
ಬೆಂಗಳೂರು: ಮಠಗಳಿಗೆ ನೀಡುವ ಅನುದಾನದಲ್ಲೂ ಶೇ.30 ರಷ್ಟು ಕಮಿಷನ್ ಪಡೆಯಲಾಗುತ್ತಿದೆ ಎಂಬ ದಿಂಗಾಲೇಶ್ವರ ಶ್ರೀಗಳ ಆರೋಪ ಕುರಿತು ಮುಖ್ಯಮಂತ್ರಿಗಳು ಉತ್ತರಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಮಾನ್ಯ ಮುಖ್ಯಮಂತ್ರಿಗಳೇ ಇದಕ್ಕೇನಂತೀರಿ, ಉತ್ತರ ಕೊಡಿ ಈ ಅನ್ಯಾಯಕ್ಕೆ ಯಾರು ಹೊಣೆ, ಇದಕ್ಕೆಲ್ಲ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ.
Read More »