Breaking News

ಬೆಂಗಳೂರು

ಏ. 21 ರಂದು ರೈತ ಸಮಾವೇಶ

ಬೆಂಗಳೂರು : ಏಪ್ರಿಲ್ 21 ರಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ರೈತ ಸಮಾವೇಶದಲ್ಲಿ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಭಾಗವಹಿಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಏಪ್ರಿಲ್ 21 ರ ಬೆಳಗ್ಗೆ 11 ಗಂಟೆಗೆ ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ರೈತರ ಸಮಾವೇಶ ನಡೆಯಲಿದೆ.

Read More »

ಇಂದು ಸಚಿವ ಸಿ.ಎಂ. ಇಬ್ರಾಹಿಂ ರಾಜ್ಯಾಧ್ಯಕ್ಷರಾಗಿ ಪದಗ್ರಹಣ

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್‍ ರಾಜ್ಯಾಧ್ಯಕ್ಷರಾಗಿ ಇಂದು ಬೆಳಗ್ಗೆ ಪದಗ್ರಹಣ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎನ್. ತಿಪ್ಪೇಸ್ವಾಮಿ ಅವರು ತಿಳಿಸಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ. ಕುಮಾರಸ್ವಾಮಿ ಅವರಿಗೆ ಪಾರ್ಲಿಮೆಂಟರಿ ಬೋರ್ಡ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

Read More »

ಜನತಾ ಜಲಧಾರೆ-ಗಂಗಾ ರಥಯಾತ್ರೆಗೆ ಚಾಲನೆ

ಬೆಂಗಳೂರು: ರಾಜ್ಯದ ಸಮಗ್ರ ನೀರಾವರಿ ಯೋಜನೆಗಳ ಜಾರಿಗೆ ಸಂಕಲ್ಪ ಮಾಡಿ ಜಾತ್ಯತೀತ ಜನತಾ ದಳ ಹಮ್ಮಿಕೊಂಡಿರುವ ಜನತಾ ಜಲಧಾರೆ-ಗಂಗಾ ರಥಯಾತ್ರೆಗೆ ಶನಿವಾರ ಚಾಲನೆ ಸಿಗಲಿದೆ. ಬೆಳಗ್ಗೆ 11ಕ್ಕೆ ರಾಜ್ಯದ 15 ಜೀವ ನದಿಗಳ ಪುಣ್ಯಜಲವನ್ನು ಕಲಶಕ್ಕೆ ತುಂಬಿಕೊಳ್ಳುವ ಕಾರ್ಯಕ್ರಮ ನಡೆಯಲಿದೆ. ಈಗಾಗಲೆ ಹದಿನೈದು ಗಂಗಾ ರಥಗಳು ನಿಗದಿತ ಸ್ಥಳಗಳನ್ನು ತಲುಪಿದ್ದು, ಆಯಾ ಜಿಲ್ಲೆಗಳ ಪಕ್ಷದ ಅಧ್ಯಕ್ಷರು, ಶಾಸಕರು, ಕಾರ್ಯಕರ್ತರು ಅವುಗಳನ್ನು ಬರ ಮಾಡಿಕೊಂಡಿದ್ದಾರೆ.

Read More »

ಭಗವಾನ್ ಮಹಾವೀರರ ಆದರ್ಶಗಳು ಎಲ್ಲರಿಗೂ ಪ್ರೇರಣಾದಾಯಕವಾಗಿದೆ : ಸಿಎಂ

ಬೆಂಗಳೂರು: ಚಿಕ್ಕ ವಯಸ್ಸಿನಲ್ಲಿ ಸರ್ವಸಂಗ ಪರಿತ್ಯಾಗಿಯಾಗಿದ್ದ ಭಗವಾನ್ ಮಹಾವೀರರ ಆದರ್ಶಗಳು ಎಲ್ಲರಿಗೂ ಪ್ರೇರಣಾದಾಯಕವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಶ್ರಮಣ ಭಗವಾನ್ ಮಹಾವೀರರ 2621ನೇ ಜನ್ಮಕಲ್ಯಾಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಜೈನ ಸಮುದಾಯದವರು ಉನ್ನತ ಮಟ್ಟದ ತತ್ವಗಳನ್ನು ಪರಿಪಾಲನೆ ಮಾಡುತ್ತಾರೆ. ‘ಅಹಿಂಸೋ ಪರಮೋ ಧರ್ಮ’ ಎಂಬ ನೀತಿಯನ್ನು ಜೈನರು ನೂರಕ್ಕೆ ನೂರರಷ್ಟು ಪಾಲಿಸುತ್ತಾರೆ. ಅಹಿಂಸೆಯ ತತ್ವದಲ್ಲಿ ಕರುಣೆ, ಮಮತೆ ಹಾಗೂ ಆದರ್ಶದ ಬದುಕಿದೆ ಎಂದರು.

Read More »

ಬೇಸಿಗೆ ಮಳೆಯ ಅಬ್ಬರ : ರೈತರಿಬ್ಬರು ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೇಸಿಗೆ ಮಳೆಯ ಅಬ್ಬರ ಮುಂದುವರೆದಿದ್ದು, ಬೆಳಗಾವಿ ಮತ್ತು ವಿಜಯಪುರದಲ್ಲಿ ಸಿಡಿಲು ಬಡಿದು ರೈತರಿಬ್ಬರು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ತುಮ್ಮರಗುದ್ದಿ ಗ್ರಾಮದ ಭೀಮಪ್ಪ ಅಡಿವೆಪ್ಪ ಬಸರಿಮರದ(25) ಎಮ್ಮೆ ಮೇಯಿಸಲು ಹೋದಾಗ ಸಿಡಿಲು ಬಡಿದು ಅಸುನೀಗಿದ್ದರೆ, ಈತನ ತೆಗೆದುಕೊಂಡು ಹೋಗಿದ್ದ ಎಮ್ಮೆ ಕೂಡ ಸಿಡಿಲಿಗೆ ಬಲಿಯಾಗಿದೆ. ವಿಜಯಪುರ ತಾಲೂಕಿನ ಮದಭಾವಿ ಗ್ರಾಮದಲ್ಲಿ ಜಮೀನಿನಿಂದ ವಾಪಸ್‌ ಮನೆಗೆ ಬರುವಾಗ ಸಿಡಿಲು ಬಡಿದು ಮರೆಮಸಾಬ ಸಾಹೇಬಲಾಲ …

Read More »

ಏ.18ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬೆಂಗಳೂರು, ಶಿವಮೊಗ್ಗ, ಮೈಸೂರು, ಚಿಕ್ಕಮಗಳೂರು, ಕೊಡಗು, ಕರಾವಳಿ ಜಿಲ್ಲೆಗಳಲ್ಲಿ ಗುರುವಾರ ಸಂಜೆಯೂ ಜೋರಾಗಿ ಮಳೆಯಾಗಿದೆ. ಕರ್ನಾಟಕದ ಕರಾವಳಿ ಸೇರಿದಂತೆ ಕೆಲವು ಕಡೆ ಮುಂದಿನ 4 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳ ಕೆಲವು ಕಡೆ ಏ.18ರವರೆಗೆ ಮಳೆಯಾಗುವ ಸಂಭವವಿದೆ.

Read More »

3-4 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3-4 ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆ ಇದೆ. ಇಂದು ಹಾವೇರಿ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಲಿದೆ.

Read More »

ಸಂತೋಷ್ ಪಾಟೀಲ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು : ಡಿ. ಕೆಂಪಣ್ಣ ಆಗ್ರಹ

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ್ ಪಾಟೀಲ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಇಲ್ಲವಾದಲ್ಲಿ ಹೈಕೋರ್ಟ್ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು. ಸಂತೋಷ್ ಪಾಟೀಲ್ ಸಾವಿಗೆ ಸರ್ಕಾರವೇ ನೇರ ಹೊಣೆ. ಸಂತೋಷ್ ಮಾಡಿಸಿರುವ ಕಾಮಗಾರಿ ಮೊತ್ತವನ್ನು ಸರ್ಕಾರ ಕೂಡಲೇ …

Read More »

ಸ್ಟೇಟ್ ಲೆವೆಲ್ ಬಾಕ್ಸಿಂಗ್ ಚಾಂಪಿಯನ್: 3 ಬೆಳ್ಳಿ ಪದಕ ಗೆದ್ದ ಹುಬ್ಬಳ್ಳಿ ಪೋರಿಯರು

ಬೆಂಗಳೂರು : ನಗರದಲ್ಲಿ ನಡೆದ ಕರ್ನಾಟಕ ಸ್ಟೇಟ್ ಲೆವೆಲ್ ಬಾಕ್ಸಿಂಗ್ ಚಾಂಪಿಯನ್ಶಿಪ 2022 ಸ್ಪರ್ಧೆಯಲ್ಲಿ ಹುಬ್ಬಳ್ಳಿಯ ಅಮೇಚರ್ ಬಾಕ್ಸಿಂಗ್ ಅಸೋಸಿಯೇಷನ್ ಕ್ಲಾಸಿನ ವಿದ್ಯಾರ್ಥಿಗಳು 3 ಬೆಳ್ಳಿ ಬಪದಕ ಗೆದ್ದು ಅವಕಾಶ ಹಾಗೂ ಪ್ರೋತ್ಸಾಹ ನೀಡಿದರೆ ಹೆಣ್ಣು ಮಕ್ಕಳು ಯಾರಿಗೂ ಕಮ್ಮಿ ಇಲ್ಲವೆಂದು ತೋರಿಸಿ ಕೊಟ್ಟಿದ್ದಾರೆ. ಇವರಿಗೆ ಹುಬ್ಬಳ್ಳಿಯ ಯೋಗೇಶ್ ಸಾಲಿಯಾನ್ ಕೋಚ್ ನೀಡುವ ಮೂಲಕ ತಮ್ಮಹುಬ್ಬಳ್ಳಿ ಧಾರವಾಡಕ್ಕೆ 3 ಸಿಲ್ವರ್ ಮೇಡಲ್ ಪಡೆಯುವಂತೆ ಮಾಡಿದ್ದಾರೆ…ಧಾರವಾಡ ಜಿಲ್ಲೆಯಲ್ಲಿ ಬಾಕ್ಸಿಂಗ್ ಗೆ ಹೆಚ್ಚು …

Read More »

ಕೆಜಿಎಫ್ -2 ಸಿನಿಮಾ ಬಿಡುಗಡೆ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ನಿರಾಸೆ

ಬೆಂಗಳೂರು: ಏಪ್ರಿಲ್ 14 ರಂದು ಕರ್ನಾಟಕ ಸೇರಿ ನಾನಾ ಭಾಷೆಗಳಲ್ಲಿ ಕೆಜಿಎಫ್ -2 ಸಿನಿಮಾ ಬರೋಬ್ಬರಿ 7500 ಥೀಯೇಟರ್‌ಗಳಲ್ಲಿ ಬಿಡುಗಡೆಗೆ ಸಜ್ಜಾಗಿದೆ.ಕೆಜಿಎಫ್ – 2 ಸಿನಿಮಾ ಬಿಡುಗಡೆಗೆ ತಡೆ ಕೋರಿ ಕಲ್ಯಾಣ ಕರ್ನಾಟಕ ವೇದಿಕೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ. ಕಲ್ಯಾಣ ಕರ್ನಾಟಕ ವೇದಿಕೆ ಸಂಸ್ಥಾಪಕ ಅಶೋಕ್ ಕುಮಾರ್ ಅಲಿಯಾಸ್ ದುಮ್ಮೇನಹಳ್ಳಿ ಅಶೋಕ್ ಕುಮಾರ್, ಅಖಂಡ ಕರ್ನಾಟಕ ಜನಜಾಗೃತಿ ವೇದಿಕೆ, ಸುರೇಶ್, ರೈತ ಮಾತ್ತು ಕಾರ್ಮಿಕರ ರಕ್ಷಣಾ ವೇದಿಕೆ ವತಿಯಿಂದ ಸಿನಿಮಾ …

Read More »