Breaking News

ಬೆಂಗಳೂರು

ಮನೆ, ಜಮೀನು ಖರೀದಿಸುವವರಿಗೆ ಸಿಹಿ ಸುದ್ದಿ

ಬೆಂಗಳೂರು: ಕೃಷಿ ಜಮೀನು, ಕೃಷಿಯೇತರ ಜಮೀನು, ನಿವೇಶನ, ಕಟ್ಟಡ, ಫ್ಲಾಟ್, ಅಪಾರ್ಟ್ಮೆಂಟ್ ಗಳ ಮಾರ್ಗಸೂಚಿ ದರವನ್ನು ಜನವರಿ 1 ರಿಂದ 31 ರವರೆಗೆ ಅನ್ವಯವಾಗುವಂತೆ ಶೇಕಡ 10 ರಷ್ಟು ಕಡಿಮೆ ಮಾಡಲಾಗಿದೆ. ಇದನ್ನು ಮೂರು ತಿಂಗಳು ವಿಸ್ತರಿಸುವ ಸರ್ಕಾರ ಚಿಂತನೆ ನಡೆಸಿದೆ. ಕಂದಾಯ ಸಚಿವ ಆರ್. ಅಶೋಕ್, ಈ ಬಗ್ಗೆ ಮಾಹಿತಿ ನೀಡಿದ್ದು, ರಿಯಲ್ ಎಸ್ಟೇಟ್ ಉದ್ಯಮ ಪ್ರೋತ್ಸಾಹಿಸಲು ಜನವರಿಯಿಂದ ಮಾರ್ಚ್ 31ರವರೆಗೆ ಸ್ಥಿರಾಸ್ತಿಗಳ ಮೇಲಿನ ಮಾರ್ಗಸೂಚಿ ದರವನ್ನು ಶೇಕಡ …

Read More »

ಬಿಜೆಪಿಯಲ್ಲಿ ಯಾವುದೂ ಶಾಶ್ವತ ಅಲ್ಲ, ಕಾಲಕ್ಕೆ ಬದಲಾವಣೆ : ಸಿ ಟಿ ರವಿ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ತಮ್ಮ ಹೆಸರು ಕೇಳಿ ಬರುತ್ತಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ನಾನು ಪಕ್ಷದ ಕಾರ್ಯಕರ್ತನಾಗಿದ್ದು, ಯಾವುದೇ ಹುದ್ದೆಯ ಅಕಾಂಕ್ಷಿ ಅಲ್ಲ. ಪಕ್ಷ ನೀಡುವ ಜವಾಬ್ದಾರಿಗೆ ನಾನು ಬದ್ಧ. ಬಿಜೆಪಿಯಲ್ಲಿ ಯಾವುದೂ ಶಾಶ್ವತ ಅಲ್ಲ. ಎಲ್ಲವೂ ಕಾಲಕಾಲಕ್ಕೆ ಬದಲಾವಣೆ ಆಗುತ್ತಿರುತ್ತದೆ ಎಂದು ಹೇಳಿದರು.

Read More »

ಮೇ ತಿಂಗಳನಲ್ಲಿ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆ ಫಲಿತಾಂಶ ಮೇ ತಿಂಗಳ 3ನೇ ವಾರ ಪ್ರಕಟವಾಗಲಿದೆ. ಪರೀಕ್ಷೆ ಮಾರ್ಚ್ 28ರಂದು ಆರಂಭವಾಗಿದ್ದು, ಎಪ್ರಿಲ್ 11ಕ್ಕೆ ಕೊನೆಗೊಳ್ಳಲಿದೆ. ಎಪ್ರಿಲ್ 23ರಂದು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಆರಂಭವಾಗಲಿದೆ.ಈ ಪ್ರಕ್ರಿಯೆ 10-15 ದಿನಗಳಲ್ಲಿ ಮುಗಿಯಲಿದೆ ಎಂದು ಕರ್ನಾಟಕ ಸೆಕೆಂಡರಿ ಎಜ್ಯುಕೇಶನ್ ಎಕ್ಸಾಮಿನೇಶನ್ ಬೋರ್ಡ್‍ನ ಉನ್ನತ ಅಧಿಕಾರಿಯೊಬ್ಬರು ಹೇಳಿದ್ದಾರೆ.

Read More »

ಗೃಹ ಸಚಿವ ಅವರನ್ನು ಸಂಪುಟದಿಂದ ವಜಾ ಮಾಡವಂತೆ ಡಿಕೆಶಿ ಆಗ್ರಹ

ಬೆಂಗಳೂರು: ಪ್ರಚೋದನಕಾರಿ ಹೇಳಿಕೆ ಕೊಡುತ್ತಿರುವ ಮತ್ತು ಸಮಾಜದಲ್ಲಿ ಅಶಾಂತಿ, ಜಾತಿ- ಧರ್ಮಗಳ ನಡುವೆ ವೈಷಮ್ಯ ಸೃಷ್ಟಿಸುತ್ತೀರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ತತ್‌ಕ್ಷಣ ಸಂಪುಟದಿಂದ ವಜಾ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಗ್ರಹಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಜಯ್‌ ಮಾಕನ್‌ ಜತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸ್‌ ಆಯುಕ್ತರು ಗೃಹ ಸಚಿವರ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಬೇಕು. ಇಲ್ಲದಿದ್ದರೆ ನಾವೇ ಪಕ್ಷದ ವತಿಯಿಂದ ದೂರು …

Read More »

ಆಜಾನ್‌ ಧ್ವನಿವರ್ಧಕ ವಿವಾದ: 301 ಧಾರ್ಮಿಕ ಸಂಸ್ಥೆಗಳಿಗೆ ನೋಟಿಸ್

ಬೆಂಗಳೂರು : ರಾಜ್ಯದಲ್ಲಿ ಆಜಾನ್‌ ಧ್ವನಿವರ್ಧಕ ವಿವಾದ ಭುಗಿಲೆದ್ದಿದ್ದು, ಒಟ್ಟು 301 ಧಾರ್ಮಿಕ ಸಂಸ್ಥೆಗಳಿಗೆ ನೋಟಿಸ್ ನೀಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಪೊಲೀಸ್‌ ಆಯುಕ್ತರು, ‘ರಾಜ್ಯದ ಮಸೀದಿಗಳು, ದೇವಾಲಯಗಳು, ಚರ್ಚ್ಗಳು ಸೇರಿ ಇತರೆ 301 ಸಂಸ್ಥೆಗಳು ತಮ್ಮ ಧ್ವನಿವರ್ಧಕಗಳನ್ನ ಅನುಮತಿಸಬಹುದಾದ ಡೆಸಿಬಲ್ ಮಟ್ಟದೊಳಗೆ ಬಳಸುವಂತೆ ಪೊಲೀಸರಿಂದ ನೋಟಿಸ್ಗಳನ್ನು ಸ್ವೀಕರಿಸಿವೆ’ ಎಂದರು.

Read More »

ಪದವಿಯಲ್ಲಿ ಕನ್ನಡ ಭಾಷೆಗೆ ಕಲಿಕೆ ಕಡ್ಡಾಯಗೊಳಿಸುವುದಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಪದವಿ ಹಂತದ ಶಿಕ್ಷಣದಲ್ಲಿ ಕನ್ನಡವನ್ನು ಒಂದು ಭಾಷಾ ವಿಷಯವಾಗಿ ಕಲಿಯುವುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಪದವಿ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆ ಕಡ್ಡಾಯಗೊಳಿಸಿ ಸರ್ಕಾರ ಹೊರಡಿಸಿರುವ ಆದೇಶ ರದ್ದು ಕೋರಿ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್, ಮಹಾವಿದ್ಯಾಲಯ ಸಂಸ್ಕೃತ ಪ್ರಾಧ್ಯಾಪಕ ಸಂಘ ಹಾಗೂ ಕೆಲ ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ …

Read More »

ಭಾರತೀಯ ಹವಾಮಾನ ಇಲಾಖೆಯಿಂದ ಮಹತ್ವದ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇಂದು ಕೂಡ ಕರಾವಳಿ, ಮಲೆನಾಡು, ಬೆಂಗಳೂರು, ಮೈಸೂರು, ಕೊಡಗು ಮುಂತಾದ ಕಡೆಗಳಲ್ಲಿ ವರುಣನ ಆರ್ಭಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇಂದಿನಿಂದ 4 ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುಂದುವರೆಯಲಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ …

Read More »

ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಸುವರ್ಣ ಅವಕಾಶ

ಬೆಂಗಳೂರು : ಸ್ಪರ್ಧಾತ್ಮಕ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಇಲ್ಲಿಯೊಂದು ಸುವರ್ಣ ಅವಕಾಶ ನೀಡಲಾಗಿದೆ.  ಎಫ್ ಡಿಎ, ಎಸ್ ಡಿಎ, ಪಿಡಿಒ, ಗ್ರೂಪ್ ಡಿ ಹುದ್ದೆ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವಂತಹ ಅಭ್ಯರ್ಥಿಗಳಿಗೆ ಕೆಆರ್ ಪುರದಲ್ಲಿನ ಇಂಡಿಯನ್ ಐಎಎಸ್, ಕೆಎಎಸ್ ಕೋಚಿಂಗ್ ಅಕಾಡೆಮಿ ವತಿಯಿಂದ ನಾಲ್ಕು ತಿಂಗಳ ಉಚಿತ ತರಬೇತಿ ನೀಡಲಾಗುವುದು. ಏಪ್ರಿಲ್ 9ರಿಂದ ತರಬೇತಿ ಆರಂಭವಾಗಲಿದ್ದು, ಆಸಕ್ತ ಅಭ್ಯರ್ಥಿಗಳು ಹೆಸರು ನೋಂದಾಯಿಸಕೊಳ್ಳಬಹುದು.‌ ಪ್ರವೇಶಾವಕಾಶಕ್ಕಾಗಿ 9902829811 ಸಂಖ್ಯೆಗೆ ಕರೆ ಮಾಡಿ ಮಾಹಿತಿ …

Read More »

ಆಸ್ಪತ್ರೆಗಳಲ್ಲಿ ದಿನದ 24 ಗಂಟೆಗಳ ಕಾಲ ಸೇವೆಗಳು ಲಭ್ಯ

ಬೆಂಗಳೂರು : ಸಮುದಾಯ ಆರೋಗ್ಯ ಹಾಗೂ ಅದರ ಮೇಲ್ದರ್ಜೆಯ ಆಸ್ಪತ್ರೆಗಳಲ್ಲಿ ದಿನದ 24 ಗಂಟೆಗಳ ಕಾಲ ತುರ್ತು ಸೇವೆಗಳು ಸಾರ್ವಜನಿಕರಿಗೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ತುರ್ತು ಸೇವೆಗಳ ಸಿಬ್ಬಂದಿಗಳಾದ ವೈದ್ಯಾಧಿಕಾರಿಗಳು, ಶುಶ್ರೂಷಾಧಿಕಾರಿಗಳು ಹಾಗೂ ಗ್ರೂಪ್ ಡಿ ನೌಕರರು ಕರ್ತವ್ಯದಲ್ಲಿ ಹಾಜರಿರತಕ್ಕದ್ದು, ಕರ್ತವ್ಯದ ಪಾಳಿ ಮುಗಿದ ನಂತರ ಮತ್ತೊಬ್ಬ ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಾಗುವವರೆಗೆ ಕರ್ತವ್ಯದಲ್ಲಿ ಮುಂದುವರೆಯುವಂತೆ ಹಾಗೂ …

Read More »

ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಏ. 6ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ.

Read More »