Breaking News

ಬೆಂಗಳೂರು

ರಾಜ್ಯ ಸರ್ಕಾರದಿಂದ ಗ್ರಾಮ ಸಹಾಯಕರು, ಲೆಕ್ಕಿಗರಿಗೆ ಪ್ರೋತ್ಸಾಹಧನ ನೀಡಲು ನಿರ್ಧಾರ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಆಧಾರ್ ಸೀಡಿಂಗ್ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ 4.5 ಕೋಟಿ ರೂ. ಪ್ರೋತ್ಸಾಹ ಧನ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ವಿಕಾಸಸೌಧದಲ್ಲಿ ಇಂದು ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ 2.12 ಕೋಟಿ ಜಮೀನುಗಳನ್ನು ಆರ್ಟಿಸಿ ಜೊತೆಗೆ ಆಧಾರ್ ಜೋಡಿಸಲಾಗಿದೆ. ಇದನ್ನೆಲ್ಲಾ ಮಾಡಿದ್ದು …

Read More »

ಜಾತಿಗಣತಿ ವಿಚಾರವಾಗಿ ಎದುರಾದ ಪ್ರಶ್ನೆಗೆ ಮಲ್ಲಿಕಾರ್ಜುನ ಖರ್ಗೆ ಮೌನ

ಬೆಂಗಳೂರು: ಜಾತಿ ಜನಗಣತಿ ವಿಚಾರವಾಗಿ ಎದುರಾದ ಪ್ರಶ್ನೆಯೊಂದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಯಾವುದೇ ಪ್ರತಿಕ್ರಿಯೆ ನೀಡದೇ ನಿರ್ಗಮಿಸಿದ್ದಾರೆ. ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿ ವಿಚಾರವಾಗಿ ಶೋಷಿತ ವರ್ಗಗಳ ಬೇಡಿಕೆಗಳ ಕುರಿತು ಪ್ರಶ್ನೆ ಎದುರಾದಾಗ ಯಾವುದೇ ಪ್ರತಿಕ್ರಿಯೆ ನೀಡದೇ ನಿರ್ಗಮಿಸಿದರು. ಆದರೆ ಇದೇ ವೇಳೆ ದೆಹಲಿಯ ವಿಧಾನಸಭೆಯ ಚುನಾವಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಪಕ್ಷ ಉತ್ತಮವಾದ ಪ್ರಚಾರ ಕಾರ್ಯವನ್ನು ಆಂತರಿಕವಾಗಿ …

Read More »

ಜ.31 ಮತ್ತು ಫೆ.2 ರಂದು ಕೆಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆ: ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಲು ಆಗ್ರಹ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಜನವರಿ 31 ಮತ್ತು ಫೆಬ್ರವರಿ 2ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತಿದೆ. ಈ ಪರೀಕ್ಷೆಗಳಿಗೆ ಹಾಜರಾಗಲು ಅಭ್ಯರ್ಥಿಗಳು ಪರೀಕ್ಷೆ ಕೇಂದ್ರಕ್ಕೆ ತೆರಳಬೇಕು. ಬೇರೆ ಬೇರೆ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳು ಇರುವ ಕಾರಣ ಅಭ್ಯರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಲಾಗಿದೆ. ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಯದಲ್ಲಿ ಸರ್ಕಾರದ ಸೂಚನೆಯಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಹೆಚ್ಚುವರಿ ಬಸ್ ವ್ಯವಸ್ಥೆ …

Read More »

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ರಾಜ್ಯಪಾಲರು

ಬೆಂಗಳೂರು: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಬಿಕ್ಕಟ್ಟು ಉಂಟಾಗಿ ರಾಜ್ಯದ ಅಭಿವೃದ್ಧಿ ಕುಂಠಿತವಾಗಲಿದೆ ಎಂಬ ನಿರಾಶಾವಾದಿಗಳ ಭವಿಷ್ಯ ಸುಳ್ಳಾಗಿದ್ದು, ಆರ್ಥಿಕ ಬೆಳವಣಿಗೆ ಹಾಗೂ ಸಾಮಾಜಿಕ ನ್ಯಾಯ ಎರಡನ್ನೂ ಸಮನಾಗಿ ನಿಭಾಯಿಸಿ ದೇಶದಲ್ಲಿ ಅತ್ಯುತ್ತಮ ಅಭಿವೃದ್ಧಿ ಸಾಧಿಸುತ್ತಿರುವ ರಾಜ್ಯಗಳ ಪೈಕಿ ಕರ್ನಾಟಕವೂ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ’ ಎಂದು ರಾಜ್ಯಪಾಲ ಥಾವರಚಂದ್‌ ಗೆಹಲೋತ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ಭಾನುವಾರ ಆಯೋಜಿಸಿದ್ದ ’76ನೇ …

Read More »

ಸರ್ಕಾರಿ ಪ್ರೌಢಶಾಲಾ, ಪ್ರಾಥಮಿಕ ಶಾಲೆಗಳ ಶಿಕ್ಷಕರ ಮುಂಬಡ್ತಿ ಸಮಯದಲ್ಲಿ ಎಸ್ಸಿ, ಎಸ್ಟಿ ಬ್ಯಾಕ್ ಲಾಗ್ ಗುರುತಿಸುವ ಬಗ್ಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇರ ನೇಮಕಾತಿ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡುವ ಸಮಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿಂಬಾಕಿ (ಬ್ಯಾಕ್ ಲಾಗ್)ಹುದ್ದೆಗಳನ್ನು ಗುರುತಿಸುವ ಬಗ್ಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ(01) ರ ಪತ್ರದಲ್ಲಿ ಬ್ಯಾಕ್ ಲಾಗ್ ಸಚಿವ ಸಂಪುಟ ಉಪ ಸಮಿತಿ ಸಭೆಯ ನಿರ್ಣಯದಂತೆ, ಸರ್ಕಾರದ ವಿವಿಧ ಇಲಾಖೆಗಳು/ನಿಯಮಗಳು/ಮಂಡಳಿಗಳು /ವಿಶ್ವವಿದ್ಯಾನಿಯಗಳು/ ಸಹಕಾರ …

Read More »

ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಸಂವಿಧಾನ ಸಮಾವೇಶ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಬೆಳಗಾವಿಯ ನಂತರ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಸಂವಿಧಾನ ಸಮಾವೇಶ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರಾದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಇದು ಪಕ್ಷದ್ದಲ್ಲ, ಜನರ ಕಾರ್ಯಕ್ರಮವಾಗಿದೆ. ಎಲ್ಲ ವರ್ಗದವರ ಭಾಗವಹಿಸುವಿಕೆಗಾಗಿ ಸರ್ಕಾರವೇ ಕಾರ್ಯಕ್ರಮ ಆಯೋಜಿಸುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿ ಡಿಸಿಎಂ, ಬೆಳಗಾವಿಯಲ್ಲಿ ಯಶಸ್ವಿಯಾದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್ ಸಮಾವೇಶವನ್ನು ಇಡೀ ವರ್ಷ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿಯೂ …

Read More »

ದೇಶದಲ್ಲೇ ಮೊದಲ ಬಾರಿಗೆ ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ ಕಾರ್ಯಕ್ರಮ ಜಾರಿ: ಸಚಿವ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ‘ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್’ ಕಾರ್ಯಕ್ರಮವನ್ನು ಜಾರಿಗೊಳಿಸಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಈ ಕಾರ್ಯಕ್ರಮವನ್ನು ಜಾರಿಗೆ ತರುವುದಾಗಿ ಹಿಂದಿನ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಹಿಂದುಳಿದ ಪ್ರದೇಶವಾದ ಕಲ್ಯಾಣ ಕರ್ನಾಟಕದಲ್ಲಿ ಸ್ಥಳೀಯ ಆಡಳಿತವನ್ನು ಬಲಪಡಿಸುವ ಉದ್ದೇಶದಿಂದ ಉತ್ಸಾಹಿ ಹಾಗೂ ಪ್ರತಿಭಾವಂತ ಯುವ ಸಮುದಾಯಕ್ಕೆ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ …

Read More »

ಶ್ರೀರಾಮಲು ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತ: ಸಚಿವ ಶಿವರಾಜ ತಂಗಡಗಿ

ಬೆಂಗಳೂರು:- ಶ್ರೀರಾಮುಲು ಪಕ್ಷಕ್ಕೆ ಬಂದ್ರೆ ಸ್ವಾಗತ ಎಂದು ಶಿವರಾಜ್ ತಂಗಡಗಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ನಮ್ಮಲ್ಲಿ ಎಸ್‌ಟಿ ನಾಯಕರು ಸೇರಿದಂತೆ ಎಲ್ಲಾ ಸಮುದಾಯದ ನಾಯಕರೂ ಇದ್ದಾರೆ. ಸತೀಶ್ ಜಾರಕಿಹೊಳಿ ಹಾಗೂ ಕೆ.ಎನ್.ರಾಜಣ್ಣ ಎಸ್‌ಟಿ ನಾಯಕರಿದ್ದಾರೆ. ಯಾರೂ ಸಹ ಯಾರನ್ನೂ ಮುಗಿಸಲು ಆಗಲ್ಲ ಎಂದರು. ರೆಡ್ಡಿ ಅವರವರ ಕಚ್ಚಾಟದಿಂದ ಕಾಂಗ್ರೆಸ್‌ಗೆ ಬರ್ತಾ ಇದಾರೆ ಎಂದು ಹೇಳ್ತಾ ಇದಾರೆ. ರಾಮುಲು ಅವರನ್ನು ಪಕ್ಷದಿಂದ ಹೊರಗೆ ಹಾಕಬೇಕು ಎನ್ನುತ್ತಿದ್ದಾರೆ ಎಂದು ನಮ್ಮ …

Read More »

ಜ.26 ಗಣರಾಜ್ಯೋತ್ಸವ ದಿನಾಚರಣೆ: ರಾಜ್ಯದ ಶಾಲಾ-ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಅಂಬೇಡ್ಕರ್ ಭಾವಚಿತ್ರ ಕಡ್ಡಾಯಗೊಳಿಸಿ ಸರ್ಕಾರ ಆದೇಶ

ಬೆಂಗಳೂರು :ಜನವರಿ 26 ರ ಗಣರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ಡಾ.ಬಿ.ಆರ್ ಅಂಬೇಡ್ಕ‌ರವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಉಲ್ಲೇಖಿತ ಸುತ್ತೋಲೆಯಲ್ಲಿ ಸೂಚಿಸಿರುವಂತೆ, ಜನವರಿ 26ರ ಗಣರಾಜ್ಯೋತ್ಸವ ದಿನದಂದು ಕೂಡ ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳು, ಸರ್ಕಾರಿ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ಹಾಗೂ ಶಾಲಾ ಕಾಲೇಜು ಸೇರಿದಂತೆ ಸರ್ಕಾರದ ವತಿಯಿಂದ ನಡೆಯುವ ಎಲ್ಲಾ ಸಮಾರಂಭಗಳಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಭಾವಚಿತ್ರದೊಂದಿಗೆ ಸಂವಿಧಾನದ ಪಿತಾಮಹ, ಭಾರತ ರತ್ನ …

Read More »

12 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ರಾಜ್ಯ ಸರಕಾರವು 12 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಪುತ್ತೂರು ಉಪ ವಿಭಾಗದ ಹಿರಿಯ ಸಹಾಯಕ ಆಯುಕ್ತ ಜುಬೀನ್ ಮಹಾಪಾತ್ರ ಅವರನ್ನು ರಾಯಚೂರು ನಗರ ಪಾಲಿಕೆಯ ಆಯುಕ್ತ ಹಾಗೂ ಕಲಬುರಗಿ ಮಹಾನಗರ ಪಾಲಿಕೆಯ ಉಪ ಆಯುಕ್ತ(ಆಡಳಿತ) ಶಿಂಧೆ ಅವಿನಾಶ್ ಸಂಜೀವನ್‍ರನ್ನು ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರ್ ಅವರನ್ನು ಬೆಂಗಳೂರು …

Read More »