Breaking News

ಬೆಂಗಳೂರು

ಅಮಿತ್ ಶಾ ಪ್ರಯಾಣಿಸುತ್ತಿದ್ದ ಮಾರ್ಗ ಮಧ್ಯೆ ಬೆಂಕಿ ಅವಘಡ

ಬೆಂಗಳೂರು: ‘ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜು ಎದುರಿನ ರಸ್ತೆ ಮೂಲಕ ಅಮಿತ್ ಶಾ ಅವರು ಅರಮನೆ ಮೈದಾನಕ್ಕೆ ತೆರಳಬೇಕಿತ್ತು. ಆದರೆ ಮಾರ್ಗದಲ್ಲಿ ಬೆಂಕಿ ಅವಘಡ ಸಂಭವಿಸಿದ್ದರಿಂದ, ಬದಲಿ ಮಾರ್ಗದಲ್ಲಿ ಅವರ ಸಂಚಾರಕ್ಕೆ ಪೊಲೀಸರು ಅನುಕೂಲ ಮಾಡಿಕೊಟ್ಟರು. ‘ಬೆಂಕಿ ಕೆನ್ನಾಲಗೆ ಹೆಚ್ಚಾಗಿತ್ತು. ಹೊಗೆಯೂ ಜಾಸ್ತಿ ಇತ್ತು.ಸ್ಥಳೀಯರು ಆತಂಕಗೊಂಡಿದ್ದರು. ರಸ್ತೆಯಲ್ಲಿ ಗಸ್ತಿನಲ್ಲಿದ್ದ ಪೊಲೀಸರು, ಬೆಂಕಿ ನಂದಿಸಿದರು. ಅವರು ನೀಡಿದ ಮಾಹಿತಿಯಂತೆ, ಮುಂಜಾಗ್ರತಾ ಕ್ರಮವಾಗಿ ಅಮಿತ್ ಶಾ ಅವರನ್ನು ಬದಲಿ ಮಾರ್ಗದಲ್ಲಿ ಕರೆದೊಯ್ಯಲಾಯಿತು’ ಎಂದೂ …

Read More »

ಪೊಲೀಸ್ ಧ್ವಜ ದಿನಾಚರಣೆ : ಅತ್ಯುತ್ತಮ ಖಾಕಿ ಪಡೆ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ

ಬೆಂಗಳೂರು :ನಗರದ ಕೋರಮಂಗಲದ ಪೊಲೀಸ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಪೊಲೀಸ್ ಧ್ವಜ ದಿನಾಚರಣೆಯಲ್ಲಿ ಭಾಗವಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗೌರವ ವಂದನೆ ಸ್ವೀಕರಿಸಿದರು. ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳಿಗೆ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪದಕ ಪ್ರದಾನ ಮಾಡಿದರು.ಈ ಸಂದರ್ಭದಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಪ್ರವಾಸೋದ್ಯಮ ಸಚಿವ ಆನಂದ ಸಿಂಗ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ ಗೋಯಲ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, …

Read More »

ಬೆಂಗಳೂರುಗೆ ಅಮಿತ್ ಶಾ ಆಗಮನ : ಕೆಲವು ರಸ್ತೆಗಳಲ್ಲಿ ಸಂಚಾರ ನಿಷೇಧ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಶುಕ್ರವಾರ ಮಲ್ಲೇಶ್ವರದ ಬಿಜೆಪಿ ಕಚೇರಿಗೆ ಭೇಟಿ ನೀಡುತ್ತಿರುವುದರಿಂದ ಸಂಚಾರ ದಟ್ಟಣೆ ಹೆಚ್ಚಾಗುವ ಹಿನ್ನೆಲೆಯಲ್ಲಿ ಮಲ್ಲೇಶ್ವರದ ಕೆಲ ರಸ್ತೆಗಳಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಿ ನಗರ ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಆದೇಶಿಸಿದ್ದಾರೆ. ಅಮಿತ್‌ ಶಾ ಅವರು ಮಲ್ಲೇಶ್ವರದ ಸಂಪಿಗೆ ರಸ್ತೆ, ಮಾರ್ಗೋಸಾ ರಸ್ತೆ, 18ನೇ ಅಡ್ಡ ರಸ್ತೆ, 15ನೇ ಅಡ್ಡರಸ್ತೆ, 4ನೇ ಮುಖ್ಯರಸ್ತೆ, 2ನೇ ಟೆಂಪಲ್‌ ಸ್ಟ್ರೀಟ್‌ ರಸ್ತೆಗಳಲ್ಲಿ ಸಂಚರಿಸಲಿದ್ದಾರೆ. ಈ …

Read More »

ಪವರ್ ಸ್ಟಾರ್ ಮನೆಗೆ ಭೇಟಿ : ಅಶ್ವಿನಿ ಗೆ ಸಾಂತ್ವನ ಹೇಳಿದ ರಾಹುಲ್ ಗಾಂಧಿ

ಬೆಂಗಳೂರು : ಪವರ್‌ ಸ್ಟಾರ್‌ ಪುನೀತ್‌ ರಾಜ್‌ ಕುಮಾರ್‌ ಅವರನ್ನು ರಾಜ್ಯದ ಜನತೆ ಪ್ರತಿದಿನವೂ ಸ್ಮರಿಸಿಕೊಂಡು ಅವರು ಮಾಡಿರುವ ಮಾನವೀಯ ಕಾರ್ಯಗಳನ್ನು ಕೊಂಡಾಡುತ್ತಿದ್ದಾರೆ.ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಯವರು ಪುನೀತ್‌ ರಾಜ್‌ ಕುಮಾರ್‌ ಅವರ ನಿವಾಸಕ್ಕೆ ಭೇಟಿ ನೀಡಿ ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌ ಅವರಿಗೆ ಸಾಂತ್ವನ ಹೇಳಿದ್ದಾರೆ. ಪುನೀತ್‌ ರಾಜ್‌ ಕುಮಾರ್‌ ಅವರ ಸಮಾಧಿಗೆ ಈಗಲೂ ನಿತ್ಯ ಸಾವಿರಾರು ಮಂದಿ ಭೇಟಿ ನೀಡುತ್ತಿದ್ದಾರೆ. ಇದೀಗ ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷ …

Read More »

ಕರ್ನಾಟಕದಲ್ಲಿ ಕೋವಿಡ್ ಕನಿಷ್ಠ ಸಂಖ್ಯೆ ದಾಖಲು

ಬೆಂಗಳೂರು: ಕರ್ನಾಟಕದಲ್ಲಿ ಬುಧವಾರ 35 ಮಂದಿಯಲ್ಲಿ ಕೋವಿಡ್-19 ಸೋಂಕು ಪತ್ತೆಯಾಗಿದ್ದು, ಇದು ಸುಮಾರು ಎರಡು ವರ್ಷಗಳಲ್ಲೇ ಕನಿಷ್ಠ ಸಂಖ್ಯೆಯಾಗಿದೆ. ಇದಕ್ಕೂ ಕಡಿಮೆ ಅಂದರೆ ಕೇವಲ 24 ಹೊಸ ಕೋವಿಡ್-19 ಪ್ರಕರಣಗಳು ಕಳೆದ ವರ್ಷದ ಮೇ 14ರಂದು ದಾಖಲಾಗಿದ್ದವು. ಬುಧವಾರ ರಾಜ್ಯದಲ್ಲಿ ದಾಖಲಾದ 35 ಪ್ರಕರಣಗಳ ಪೈಕಿ ಬೆಂಗಳೂರಿನಲ್ಲಿ 25 ಪ್ರಕರಣಗಳು ವರದಿಯಾಗಿವೆ. ಬುಧವಾರ ರಾಜ್ಯದ 21 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಎಂಟು ಜಿಲ್ಲೆಗಳು ಸಂಪೂರ್ಣ ಕೋವಿಡ್ ಮುಕ್ತ ಜಿಲ್ಲೆಗಳಾಗಿದ್ದು, …

Read More »

ಇಂದು ರಾಜ್ಯಕ್ಕೆ ರಾಷ್ಟ್ರೀಯ ಕಾಂಗ್ರೆಸ್ ನಾಯಕ ಆಗಮನ

ಬೆಂಗಳೂರು: ಇಂದು ಬೆಂಗಳೂರಿಗೆ ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದು, ಎರಡು ದಿನ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಮುಂದಿನ ವರ್ಷ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಪಕ್ಷವನ್ನು ಬಲಪಡಿಸುವ ಉದ್ದೇಶದಿಂದ ಇಂದಿನಿಂದ ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಇದಕ್ಕಾಗಿ ಹಲವು ಸಭೆಗಳನ್ನು ಆಯೋಜಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Read More »

ಪುನೀತ್ ರಾಜ್ ಕುಮಾರ್ ಪೂಜೆ ಸಲ್ಲಿಕೆ

ಬೆಂಗಳೂರು : ನಟ ಡಾ.ಪುನೀತ್ ರಾಜ್ ಕುಮಾರ್ ಅವರು ನಿಧನರಾಗಿ ಇಂದಿಗೆ ೫ ತಿಂಗಳು ಆಗಿದೆ . ಈ ಹಿನ್ನೆಲೆ ಕುಟುಂಬ ಸದಸ್ಯರು ಅಪ್ಪು ಸಮಾಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು . ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಪುನೀತ್ ಸಮಾಧಿಗೆ ಭೇಟಿ ನೀಡಿದ ಪತ್ನಿ ಅಶ್ವಿನಿ ಪುನೀತ್‌ರಾಜ್‌ಕುಮಾರ್ , ಪುತ್ರಿ ವಂದಿತಾ , ರಾಘವೇಂದ್ರ ರಾಜ್‌ಕುಮಾರ್‌ , ಸೇರಿದಂತೆ ಕುಟುಂಬ ಸದಸ್ಯರು ಪೂಜೆ ಸಲ್ಲಿಸಿದರು.ವಿಶೇಷವಾಗಿ ಇಂದು ಅಪ್ಪು ಸಮಾಧಿಗೆ ಖ್ಯಾತ …

Read More »

ರಾಜ್ಯದಲ್ಲಿ ಎರಡು ದಿನ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆ ಇದೆ.

Read More »

ಏ.1 ರಿಂದ ರಾಜ್ಯದ 12 ರಿಂದ 14 ವರ್ಷದ ಮಕ್ಕಳಿಗೆ ಕೊವೀಡ್ ಲಸಿಕೆ

ಬೆಂಗಳೂರು : ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಏ.1 ರಿಂದ ರಾಜ್ಯದ 12 ರಿಂದ 14 ವರ್ಷದ ಮಕ್ಕಳಿಗೆ ಶಾಲೆಗಳಲ್ಲಿಯೇ ಕೊರೊನಾ ಲಸಿಕೆ ಕೋರ್ಬಿವ್ಯಾಕ್ಸ್ ನೀಡಲು ಆರೋಗ್ಯ ಇಲಾಖೆ ಮುಂದಾಗಿದೆ. 12 ರಿಂದ 14 ವರ್ಷದ ಮಕ್ಕಳಿಗೆ ಮಾರ್ಚ್ 16 ರಿಂದ ಕೊರೊನಾ ಲಸಿಕೆ ಅಭಿಯಾನ ಆರಂಭವಾಗಿದ್ದು, ಸದ್ಯ ಆರೋಗ್ಯ ಕೇಂದ್ರಗಳಲ್ಲಿ ಮಾತ್ರ ಲಸಿಕೆ ನೀಡಲಾಗುತ್ತಿದೆ.

Read More »

ಮಾ. 31 ರಂದು ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮನ : ಡಿಕೆಶಿ

ಬೆಂಗಳೂರು: ಮಾ. 31 ರಂದು ನಮ್ಮ ರಾಷ್ಟ್ರೀಯ ನಾಯಕರಾದ ರಾಹುಲ್ ಗಾಂಧಿ ಅವರು ಶ್ರೀ ಶಿವಕುಮಾರ ಸ್ವಾಮೀಜಿ ಅವರ 115ನೇ ಜಯಂತಿ ಕಾರ್ಯಕ್ರಮ ನಿಮಿತ್ತ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಬೆಂಗಳೂರಿಗೆ ಬಂದು ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಸಿ ಬಿಬಿಎಂಪಿ ವ್ಯಾಪ್ತಿ ನಾಯಕರನ್ನು ಭೇಟಿ ಮಾಡಲಿದ್ದಾರೆ. ನಂತರ ಏ.1 ರಂದು ಎಲ್ಲ ಶಾಸಕರು, ಮಾಜಿ ಶಾಸಕರು, 2018 ರ …

Read More »