Breaking News

ಬೆಂಗಳೂರು

ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ವಿರುದ್ಧ ಸಿಬಿಐ ತನಿಖೆ

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಸಿದ ಆರೋಪ ಎದುರಿಸುತ್ತಿರುವ ರವಿ ಡಿ ಚೆನ್ನಣ್ಣ ಅವರ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿರುವ ವಕೀಲ ಜಗದೀಶ್ ಈ ಅರ್ಜಿ ಸಲ್ಲಿಕೆ ಮಾಡಿದ್ದು, ಸಂಬಂಧಿಕರ ಹೆಸರಿನಲ್ಲಿ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ವಿರುದ್ಧ ಸಿಬಿಐ ತನಿಖೆ ಕೋರಿ ವಕೀಲ ಕೆ.ಎನ್.ಜಗದೀಶ್ ಕುಮಾರ್ ರಿಟ್ ಅರ್ಜಿಯನ್ನು ಹೈಕೋರ್ಟ್ ಗೆ ಸಲ್ಲಿಕೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಬೇನಾಮಿ …

Read More »

ರಾಜ್ಯದಲ್ಲಿ ಶೇ.97.59ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ ಗಳು

ಬೆಂಗಳೂರು: ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಸೋಮವಾರ ಸುಸೂತ್ರವಾಗಿ ಆರಂಭವಾಗಿದ್ದು, ಮೊದಲ ದಿನ ಶೇ.97.59 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಚಿಕ್ಕೋಡಿಯಲ್ಲಿ ಅಭ್ಯರ್ಥಿಗಳ ಪರವಾಗಿ ಪರೀಕ್ಷೆ ಬರೆಯಲು ಬಂದಿದ್ದ ಆರು ಜನರು ಸಿಕ್ಕಿಬಿದ್ದಿದ್ದರೆ, ಬಾಗಲಕೋಟೆಯ ಇಳಕಲ್​ನಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಅವಕಾಶ ಸಿಗದೆ ವಾಪಸ್ ಹೋಗಿದ್ದಾರೆ.

Read More »

ಕಾಂಗ್ರೆಸ್‌ನ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ. ಪಾಟೀಲ್‌ ಅಧಿಕಾರ ಸ್ವೀಕಾರ

ಬೆಂಗಳೂರು: ಪ್ರದೇಶ ಕಾಂಗ್ರೆಸ್‌ನ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಮಾಜಿ ಸಚಿವ ಎಂ.ಬಿ. ಪಾಟೀಲ್‌ ಜವಾಬ್ದಾರಿ ಸ್ವೀಕರಿಸಿದ್ದಾರೆ. ಎಂ.ಬಿ.ಪಾಟೀಲ್‌ ಮಾತನಾಡಿ, ಸಾಮಾಜಿಕ ನ್ಯಾಯಕ್ಕಾಗಿ ಕರ್ನಾ ಟಕದಲ್ಲಿ ಕಾಂಗ್ರೆಸ್‌ ಸರಕಾರ ಅಧಿ ಕಾರಕ್ಕೆ ಬರಬೇಕಾಗಿದೆ. ಅನ್ನ, ಅಕ್ಷರ, ಆರೋಗ್ಯ, ಆಶ್ರಯ ಮತ್ತು ಅಭಿವೃದ್ದಿ ಎಂಬ ಪಂಚ ಸೂತ್ರಗಳೊಂದಿಗೆ ಜನಾ ಶೀರ್ವಾದ ಪಡೆಯಲು ತೆರಳು ವುದಾಗಿ ಘೋಷಿಸಿದ್ದಾರೆ.

Read More »

ಇಂದು ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಮಹಾರಾಷ್ಟ್ರ ಕರಾವಳಿಯಲ್ಲಿನ ವಾಯುಭಾರ ಕುಸಿತದ ಪರಿಣಾಮ ಸೋಮವಾರವೂ ಮಳೆಯ ಮುನ್ಸೂಚನೆ ನೀಡಲಾಗಿದೆ. ಬೆಂಗಳೂರು ನಗರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಕೊಡಗು, ಹಾಸನ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಮಾರ್ಚ್ 28ರಂದು ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

Read More »

ಶೀಘ್ರದಲ್ಲಿ ಪವರಸ್ಟಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ದಿನಾಂಕ ಘೋಷಣೆ : ಬೊಮ್ಮಾಯಿ

ಬೆಂಗಳೂರು; ಅವರ ಕುಟುಂಬದವರ ಬಳಿ ಮಾತನಾಡಿ ಡಾ. ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಸರ್ಕಾರ ಘೋಷಿಸಿದೆ. ಪ್ರಶಸ್ತಿ ಪ್ರದಾನ ಮಾಡುವ ದಿನಾಂಕವನ್ನು ನಿಗದಿ ಮಾಡಲಾಗುವುದು” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಬಿಬಿಎಂಪಿ ನೌಕರರ ಕನ್ನಡ ಸಂಘ ಡಾ. ರಾಜ್ ಕುಮಾರ್ ಗಾಜಿನ ಮನೆ, ಬಿಬಿಎಂಪಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಡಾ. ಪುನೀತ್ ರಾಜ್‍ಕುಮಾರ್ ಕಂಚಿನ ಪುತ್ಥಳಿಯ ಅನಾವರಣ ಹಾಗೂ ಗಂಧದಗುಡಿ ಉದ್ಯಾನವನವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಿದರು. …

Read More »

ರೈಲಿಗೆ ತಲೆಕೊಟ್ಟು ಪ್ರಾಣ ತ್ಯಾಗಮಾಡಿದ ಪ್ರೇಮಿಗಳು

ಬೆಂಗಳೂರು : ರೈಲಿಗೆ ತಲೆಕೊಟ್ಟು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಹೊರಮಾವು ಬಳಿಯ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ ಚೈತನ್ಯ ( 19 ) ಹಾಗೂ ಸಿರೀಶ್ ( 20 ) ಮೃತ ಪ್ರೇಮಿಗಳು ಎಂದು ತಿಳಿದು ಬಂದಿದೆ . ಇವರು ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಸಿಎ ವಿದ್ಯಾಭ್ಯಾಸ ಮಾಡುತ್ತಿದ್ದರು . ಘಟನಾ ಸ್ಥಳಕ್ಕೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ , ಮೃತದೇಹಗಳನ್ನು ಮರಣೋತ್ತರ …

Read More »

ಮಾ. 28 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ

ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಇಂದಿನಿಂದ ಮಾರ್ಚ್ 28 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಇಂದು ರಾಜ್ಯದ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಚಿತ್ರದುರ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಯಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ.

Read More »

ಮಾ. 28 ರಿಂದ SSLC ಪರೀಕ್ಷೆ: ಹಿಜಾಬ್ ಧರಿಸಿದರೆ ನೋ ಏಂಟ್ರಿ

ಬೆಂಗಳೂರು : ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆಪ್ರಸಕ್ತ ಸಾಲಿನ ಎಸ್‌ಎಸ್ ಎಲ್ ಸಿ ಪರೀಕ್ಷೆಗಳು ಆರಂಭವಾಗಲಿದೆ. ವಿದ್ಯಾರ್ಥಿಗಳು ಹಿಜಾಬ್ ಧರಿಸಿಕೊಂಡು ಬಂದರೆ ಪರೀಕ್ಷೆಗೆ ಅವಕಾಶ ಸಿಗುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಹೈಕೋರ್ಟ್ ಆದೇಶ ಪಾಲಿಸದೆ ಯಾವುದೇ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಬಂದರೆ ಪರೀಕ್ಷೆ ಬರೆಯಲು ಅವಕಾಶ ಸಿಗುವುದಿಲ್ಲ ಎಂದು ತಿಳಿಸಿದ್ದಾರೆ.

Read More »

ಮತ್ತಷ್ಟು ಚುರುಕುಗೊಂಡ ಹರ್ಷ ಕೊಲೆ ಪ್ರಕರಣ

ಬೆಂಗಳೂರು:ಶಿವಮೊಗ್ಗದಲ್ಲಿ ನಡೆದ ಹರ್ಷ ಕೊಲೆ ಪ್ರಕರಣ ಮತ್ತಷ್ಟು ಚುರುಕುಗೊಂಡಿದೆ. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು, ಎನ್‌ಐಎ ತನಿಖೆಗೆ ವಹಿಸಬೇಕು ಎಂಬುದಾಗಿ ಆಡಳಿತ, ಪ್ರತಿಪಕ್ಷದ ನಾಯಕರು ಒತ್ತಾಯಿಸಿದ್ದರು. ಈ ಬಳಿಕ, ಇದೀಗ ರಾಜ್ಯ ಸರ್ಕಾರ ಹರ್ಷ ಹತ್ಯೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ, ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯ ಗೃಹ ಇಲಾಖೆಯಿಂದ ಆದೇಶ ಹೊರಡಿಸಿದ್ದು, ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆಯನ್ನು ಎನ್‌ಐಎ ಅಧಿಕಾರಿಗಳು ನಡೆಸುವಂತೆ ಆದೇಶಿಸಿದೆ. ಈ …

Read More »

ಲಾರಿಗಳ ಮುಖಾಮುಖಿ ಡಿಕ್ಕಿ : ಚಾಲಕ ಸಜೀವ ದಹನ

ಬೆಂಗಳೂರು: ಎರಡು ಸಿಮೆಂಟ್ ಲಾರಿಗಳು ಡಿಕ್ಕಿಯಾದ ಪರಿಣಾಮ ಲಾರಿಗಳು ಹೊತ್ತುಕೊಂಡು ಉರಿದ ಘಟನೆ ದೇವನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ನಡೆದಿದೆ. ಬೆಂಕಿಯಲ್ಲಿ ಚಾಲಕನೊಬ್ಬ ಸಜೀವ ದಹನವಾಗಿರುವ ದುರ್ಘಟನೆ ನಡೆದಿದೆ. ಭುಕ್ತಿ ಡಾಬಾ ಬಳಿ ಸಂಭವಿಸಿದ ಅಪಘಾತದಲ್ಲಿ ಎರಡೂ ಸಿಮೆಂಟ್ ಸಾಗಣೆ ಲಾರಿಗಳು ಹೊತ್ತಿ ಉರಿದವು. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಯತ್ನಿಸಿದರು. ಓರ್ವ ಚಾಲಕನನ್ನು ಸ್ಥಳೀಯರು ರಕ್ಷಿಸಿದರು. ಆದರೆ ಮತ್ತೋರ್ವ ಚಾಲಕ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ …

Read More »