Breaking News

ಬೆಂಗಳೂರು

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ನಾನೇ ಮುಖ್ಯಮಂತ್ರಿ : ಶಿವಶಂಕರಪ್ಪ

ದಾವಣಗೆರೆ : ಮುಂದೆ ಪಕ್ಷ ಅಧಿಕಾರಕ್ಕೆ ಬಂದ್ರೆ ನಾನು ಮುಖ್ಯಮಂತ್ರಿ ಆಕಾಂಕ್ಷಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ನಾನೇ ಮುಖ್ಯಮಂತ್ರಿ. ದಾವಣಗೆರೆ ದಕ್ಷಿಣದಿಂದ ಮುಂದೆ ಸ್ಪರ್ಧಿಸೋಕೆ ನನ್ನ ಬಳಿ ಹಣ ಇಲ್ವಾ?, ನನ್ನ ಬಳಿ ಶಕ್ತಿ ಇಲ್ವಾ..? ಎಂದು ಮಾಜಿ ಸಚಿವ ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಶಾಸಕ ಶಾಮನೂರು ಶಿವಶಂಕರಪ್ಪ, ಡಿಕೆ ಶಿವಕುಮಾರ್- ಸಿದ್ದರಾಮಯ್ಯ ಜೊತೆ ನಂದೂ ಸ್ಪರ್ಧೆ ಇದೆ. ದಾವಣಗೆರೆ ಉತ್ತರದಿಂದ …

Read More »

ತಾಯ್ನಾಡಿಗೆ ಮರಳಿ ನವೀನ್​ ಮೃತದೇಹ : ಪ್ರಧಾನಿಗೆ ಟ್ವೀಟ್ ಮಾಡಿದ ಸಿಎಂ

ಬೆಂಗಳೂರು: ಉಕ್ರೇನ್​ನಲ್ಲಿ ಮೃತಪಟ್ಟಿದ್ದ ನವೀನ್​ ಮೃತದೇಹ ತಾಯ್ನಾಡಿಗೆ ಮರಳಿದ್ದು, ಈ ಹಿನ್ನೆಲೆ ಸಿಎಂ ಬೊಮ್ಮಾಯಿ ಪ್ರಧಾನಿ ಮೋದಿಗೆ ಪತ್ರ ಬರೆದು ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿರುವ ಸಿಎಂ ಬೊಮ್ಮಾಯಿ, ನಿಮ್ಮ ಈ ಕಾಳಜಿಗೆ ನಾನು ಮತ್ತು ಕರ್ನಾಟಕದ ಜನತೆಯಿಂದ ಧನ್ಯವಾದ ಎಂದು ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದ ತಿಳಿಸಿದ್ದಾರೆ.

Read More »

ಮಾ. 28ರಂದು ಎಂ.ಬಿ. ಪಾಟೀಲ ಅಧಿಕಾರ ಸ್ವೀಕಾರ

ಬೆಂಗಳೂರು: ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ಎಂ.ಬಿ. ಪಾಟೀಲ ಮಾರ್ಚ್‌ 28ರಂದುನಗರದ ಅರಮನೆ ಮೈದಾನದಲ್ಲಿ ನಡೆಯುವ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್‌, ‘ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಮಾರ್ಚ್‌ 28ರ ಮಧ್ಯಾಹ್ನ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರ ‍ಪದಗ್ರಹಣ ಸಮಾರಂಭ ನಡೆಯಲಿದೆ.

Read More »

ರಿಜಿಸ್ಟ್ರಾರ್ ಕಚೇರಿಗಳ ದೈನಂದಿನ ಕೆಲಸದ ಅವಧಿ ಹೆಚ್ಚಳ

ಬೆಂಗಳೂರು : ರಾಜ್ಯಾದ್ಯಂತ ಸಬ್ ರಿಜಿಸ್ಟ್ರಾರ್ ಕಚೇರಿಗಳ ದೈನಂದಿನ ಕೆಲಸದ ಅವಧಿಯನ್ನು ವಿಸ್ತರಣೆ ಮಾಡಿ ನೋಂದಣಿ ಮಹಾ ಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರು ಈ ಆದೇಶ ಹೊರಡಿಸಿದ್ದಾರೆ . ಮಾರ್ಚ್ ಅಂತ್ಯದವರೆಗೆ ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಸಬ್ ರಿಜಿಸ್ಟ್ರಾರ್ ಕಚೇರಿಗಳು ಪ್ರತಿ ದಿನ ಕಾರ್ಯನಿರ್ವಹಿಸಲಿವೆ. ತಕ್ಷಣದಿಂದಲೇ ಜಾರಿಯಾಗುವಂತೆ ಈ ತಾತ್ಕಾಲಿಕ ವಿಸ್ತರಣೆ ಮಾಡಲಾಗಿದೆ. ಮಾರ್ಚ್ ತಿಂಗಳ ಎಲ್ಲಾ ಶನಿವಾರದಂದು ರಾಜ್ಯದ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ …

Read More »

ರಾಜ್ಯದ ವಿವಿಧೆಡೆ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ‘ಅಸನಿ’ ಚಂಡಮಾರುತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಮಳೆ, ಗಾಳಿ, ಸಿಡಿಲಿನ ಅಬ್ಬರಕ್ಕೆ ಮೂವರು ಮೃತಪಟ್ಟಿದ್ದಾರೆ. ವಿವಿಧ ಜಿಲ್ಲೆಗಳಲ್ಲಿ ತಾಪಮಾನ ಸಹ ಏರಿಕೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಸೋಮವಾರದಿಂದ ‘ಅಸನಿ’ ಚಂಡಮಾರತು ತೀವ್ರ ಸ್ವರೂಪ ಪಡೆಯಲಿದೆ ಎಂದು ಮುನ್ಸೂಚನೆ ನೀಡಿದೆ. ಇದರ ಪರಿಣಾಮದಿಂದ ಕರ್ನಾಟಕ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಮುನ್ನೆಚ್ಚರಿಕೆ ನೀಡಲಾಗಿದೆ.

Read More »

ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದನೆ ತಿಳಿಸಿದ ಬಿಜೆಪಿಯ ರಾಜ್ಯಾಧ್ಯಕ್ಷ

ಬೆಂಗಳೂರು: ವಿಶ್ವದ ಅತ್ಯಂತ ಜನಪ್ರಿಯ ನಾಯಕರಲ್ಲಿ ಮತ್ತೆ ಅಗ್ರ ಸ್ಥಾನ ಪಡೆದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅಭಿನಂದಿಸಿದ್ದಾರೆ. ದೇಶದ ಸರ್ವತೋಮುಖ ಅಭಿವೃದ್ಧಿ ಮಾತ್ರವಲ್ಲದೆ ಭಾರತವು ವಿಶ್ವಗುರುವಾಗಿ ನಿಲ್ಲಲು ಪ್ರಧಾನಿ ಮೋದಿ ಅವರು ಮಾಡುತ್ತಿರುವ ಕೆಲಸವನ್ನು ಇದು ಸ್ಪಷ್ಟವಾಗಿ ತಿಳಿಸಿದೆ ಎಂದು ಹೇಳಿದ್ದಾರೆ.

Read More »

ಹಿಜಾಬ್ ತೀರ್ಪು : ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ

ಬೆಂಗಳೂರು: ಹಿಜಾಬ್ ವಿಚಾರವಾಗಿ ತೀರ್ಪು ನೀಡಿರುವ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ತಮಿಳುನಾಡಿನ ಮುಸ್ಲಿಂ ಮುಖಂಡರೊಬ್ಬರ ವಿರುದ್ಧ ಇಲ್ಲಿನ ವಿಧಾನಸೌಧ ಠಾಣೆಯಲ್ಲಿ ಶನಿವಾರ ಎಫ್‌ಐಆರ್ ದಾಖಲಾಗಿದೆ. ‘ವಕೀಲರಾದ ಸುಧಾ ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸರು, ತಮಿಳುನಾಡು ಪೊಲೀಸರನ್ನು ಸಂಪರ್ಕಿಸಿ ಮಾಹಿತಿ ಹಂಚಿಕೊಂಡಿದ್ದಾರೆ. ‘ಮಧುರೈನಲ್ಲಿ ನಡೆದಿರುವ ಸಮಾವೇಶದ ಭಾಷಣದ ವಿಡಿಯೊ ಎಲ್ಲೆಡೆ ಹರಿದಾಡುತ್ತಿದೆ. …

Read More »

ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಕುಸಿತ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ 106ಕ್ಕೆ ಕುಸಿದಿದೆ. ಐವರು ಮೃತರಾಗಿದ್ದಾರೆ.154 ಮಂದಿ ಚೇತರಿಸಿಕೊಂಡಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2013ಕ್ಕೆ ಇಳಿದಿದೆ. 36,326 ಕೋವಿಡ್‌ ಪರೀಕ್ಷೆ ನಡೆದಿದ್ದು, ಶೇ.0.29ರ ಪಾಸಿಟಿವಿಟಿ ದರ ದಾಖಲಾಗಿದೆ. ಬೆಂಗಳೂರು ನಗರದಲ್ಲಿ 84 ಹೊಸ ಪ್ರಕರಣ ಪತ್ತೆಯಾಗಿದೆ.

Read More »

ಮಾ‌. 21ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ

ಬೆಂಗಳೂರು : ಇಂದಿನಿಂದ ಮಾರ್ಚ್ 21 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ.ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇಂದು ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳನ್ನು ಹೊರತುಪಡಿಸಿ ಎಲ್ಲಾ ಜಿಲ್ಲೆಗಳ ಕೆಲವು ಕಡೆ ಮಳೆಯಾಗುವ ಇದೆ.

Read More »

ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸುತ್ತಿರುವ ಜೇಮ್ಸ್

ಬೆಂಗಳೂರು: ಡಾ. ಪುನೀತ್ ರಾಜ್ ಕುಮಾರ್ಅ ವರ ಕೊನೆಯ ಚಿತ್ರ ಜೇಮ್ಸ್ ಮೊದಲ ದಿನವೇ ದಾಖಲೆ ಬರೆದಿತ್ತು. ನಿನ್ನೆ ಎರಡನೇ ದಿನವೂ ತನ್ನ ಅಬ್ಬರವನ್ನು ಮುಂದುವರೆಸಿದೆ. ಜೇಮ್ಸ್ ಚಿತ್ರ ಬಿಡುಗಡೆಯಾದ ಮೊದಲ ದಿನ ಅಂದರೆ ಗುರುವಾರ 25 ಕೋಟಿ ರೂ.ಗೂ ಅಧಿಕ ಗಳಿಕೆ ಕಂಡಿತ್ತು.ಇನ್ನೂ ಎರಡನೇ ದಿನ ಅಂದರೆ ಶುಕ್ರವಾರದ ಅಂತ್ಯಕ್ಕೆ 20 ಕೋಟಿ ರೂ. ಕಮಾಯಿ ಮಾಡಿದೆ ಎಂದು ಅಂದಾಜಿಸಲಾಗಿದ್ದು, ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸುತ್ತಿದೆ.

Read More »