Breaking News

ಬೆಂಗಳೂರು

ಹಿಜಾಬ್ ಕುರಿತು ಹೈಕೋರ್ಟ್ ತೀರ್ಪಿ ಅಂತಿಮ, ಎಲ್ಲರೂ ಪಾಲಿಸಬೇಕು : ಬಿ.ಸಿ ನಾಗೇಶ್

ಬೆಂಗಳೂರು : ಹೈಕೋರ್ಟ್ ತೀರ್ಪಿನ ಅನುಸಾರ ಹಿಜಾಬ್ ಧರಿಸಿ ಶಾಲೆಗೆ ಹಾಜರಾಗಲು ಅಥವಾ ಪರೀಕ್ಷೆಗೆ ಹಾಜರಾಗಲು ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿಚಾರವಾಗಿ ಹೈಕೋರ್ಟ್ ತೀರ್ಪು ನೀಡಿದೆ ಹೀಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗುವ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಮತ್ತೆ ಅವಕಾಶ ಸಡಿಲಿಕೆ ಇರುವುದಿಲ್ಲ ಎಂದರು.

Read More »

ಕಲಿಕಾ ಚೇತರಿಕೆ ಕಾರ್ಯ ಕ್ರಮವನ್ನು ಪರಿಚಯಿಸುತ್ತೀರುವ ಮೊದಲ ರಾಜ್ಯ ಕರ್ನಾಟಕ : ಬಿ.ಸಿ. ನಾಗೇಶ್

ಬೆಂಗಳೂರು: ದೇಶದ ಮೊದಲ ರಾಜ್ಯ ಕರ್ನಾಟಕ ಕಲಿಕಾ ಹಿನ್ನಡೆ ಸರಿದೂಗಿಸಲು ‘ಕಲಿಕಾ ಚೇತರಿಕೆ’ ಎಂಬ ವಿಶೇಷ ಕಾರ್ಯಕ್ರಮವನ್ನು ಜಾರಿಗೊಳಿಸುತ್ತಿರಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು. ಜಯನಗರದಲ್ಲಿರುವ ಆರ್.ವಿ. ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕಲಿಕಾ ಚೇತರಿಕೆ ಕಾರ್ಯಕ್ರಮ ಉದ್ಘಾಟಿಸಿ ಸಚಿವರು ಮಾತನಾಡಿದರು. ಕೋವಿಡ್-19 ಸೋಂಕಿನ ಋಣಾತ್ಮಕ ಪರಿಣಾಮ ಶಿಕ್ಷಣ ಕ್ಷೇತ್ರದ ಮೇಲೆ ಅತಿ ಹೆಚ್ಚಿನ ಪ್ರಮಾಣದಲ್ಲಿ ಬೀರಿದೆ. ತರಗತಿಗಳಿಲ್ಲದೆ ಧೀರ್ಘಾವಧಿಯಲ್ಲಿ ಮಕ್ಕಳ …

Read More »

ಪವರ್ ಸ್ಟಾರ್ ಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ

ಬೆಂಗಳೂರು: ಎಲ್ಲರ ಹೃದಯದಲ್ಲಿ ಅಚ್ಚಳಿಯಾಗಿರುವ ಪವರಸ್ಟಾರ್ ಗೆ ಇದೀಗ ಮತ್ತೊಂದು ಮರಣೋತ್ತರ ಪ್ರಶಸ್ತಿ ದೊರಕಲಿದೆ. ಡಾ. ಪುನೀತ್​​ ರಾಜ್​ ಕುಮಾರ್​​ ಅವರಿಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ ಅಂತ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. KMF ಹಾಗೂ ಶಿಕ್ಷಣ ಕ್ಷೇತ್ರದ ರಾಯಭಾರಿ ಆಗಿದ್ರು , ಯಾವುದೇ ಸಂಭಾವನೆ ಪಡೆಯುತ್ತಿರಲಿಲ್ಲ ಅಂತ …

Read More »

ಸಭಾಪತಿ ವಿರುದ್ಧ ಎಫ್‌ಐಆರ್‌ ದಾಖಲು : ಇಂತಹ ಘಟನೆ ಮರುಕಳಿಸಿದರೆ ಕಠಿಣ ಕ್ರಮ : ಸಿಎಂ

ಬೆಂಗಳೂರು: ಸಭಾಪತಿ ಬಸವರಾಜ ಹೊರಟ್ಟಿ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದನ್ನು ಗಂಭೀರವಾಗಿ ಪರಿಗಣಿಸಿದ್ದು, ಮುಂದೆ ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗು ವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಶಿಷ್ಟಾಚಾರದ ಪ್ರಕಾರ ಸಭಾಪತಿ ಸ್ಥಾನ ಉನ್ನತವಾದುದು. ಸಾಂವಿಧಾನಿಕ ಹುದ್ದೆಗಳಲ್ಲಿರುವವರ ವಿರುದ್ಧ ದೂರು ದಾಖಲಿಸು ವಾಗ ಅದಕ್ಕೂ ಮೊದಲು ಕೆಲವು ಪ್ರಕ್ರಿಯೆ ಅನುಸರಿಸಬೇಕು. ಹೊರಟ್ಟಿ ಅವರ ಪ್ರಕರಣದಲ್ಲಿ ಯಾವುದೂ ಪಾಲನೆಯಾಗದೇ ಲೋಪಗಳಾಗಿದ್ದು, ಮೇಲ್ನೋಟಕ್ಕೆ ದೃಢಪಟ್ಟಿದೆ. ಹೀಗಾಗಿ ತಪ್ಪಿತಸ್ಥರ ವಿರುದ್ಧ …

Read More »

ಪವರ್ ಸ್ಟಾರ್ ಗೆ ಶೀಘ್ರ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಲಾಗುವುದು : ಬೊಮ್ಮಾಯಿ

ಬೆಂಗಳೂರು: ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ರಾಜ್ಯ ಸರ್ಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿತ್ತು. ಇದೀಗ ಈ ಪ್ರಶಸ್ತಿಯನ್ನು ಶೀಘ್ರವೇ ಪ್ರಧಾನ ಮಾಡೋದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪುನೀತ್ ಕುಟುಂಬ ಸದಸ್ಯರೊಂದಿಗೆ ಮಾತುಕತೆ ನಡೆಸಲಾಗುವುದು. ಪುನೀತ್ ಹಾಗೂ ಡಾ.ರಾಜ್ ಕುಮಾರ್ ಅವರಿಗೆ ಗೌರವ ತರುವ ರೀತಿಯಲ್ಲಿ ಕಾರ್ಯಕ್ರಮ ಏರ್ಪಡಿಸಲು ಸಮಿತಿ ರಚಿಸಲಾಗುವುದು ಎಂದು ತಿಳಿಸಿದ್ದಾರೆ.

Read More »

ಮಾ. 28 ರಿಂದ SSLC ಪರೀಕ್ಷೆ ಪ್ರಾರಂಭ

ಬೆಂಗಳೂರು: ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಎಸ್‌ಎಸ್‌ಎಲ್ಸಿ ಪರೀಕ್ಷೆ ಪ್ರಾರಂಭವಾಗಲಿವೆ. ಪರೀಕ್ಷಾ ಕೇಂದ್ರಗಳ ಬಳಿ ವಿದ್ಯಾರ್ಥಿಗಳು, ಪೋಷಕರು ಗುಂಪುಗೂಡುವುದನ್ನು ತಡೆಯಲು ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಸಲುವಾಗಿ ಮೊದಲೇ ವಿದ್ಯಾರ್ಥಿಗಳ ಪೋಷಕರ ಮೊಬೈಲ್ ಗಳಿಗೆ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರ, ಕೊಠಡಿ, ಆಸನ ಸಂಖ್ಯೆ ಬಗ್ಗೆ ಮಾಹಿತಿಯನ್ನು ಎಸ್‌ಎಂಎಸ್ ಮೂಲಕ ಕಳುಹಿಸಲಾಗುತ್ತದೆ. ಎಸ್‌ಎಸ್‌ಎಲ್ಸಿ ಪರೀಕ್ಷೆ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿರುವ ಕೊಠಡಿ ಸಂಖ್ಯೆ, ಆಸನಗಳ ಕುರಿತಾಗಿ ಮುಂಚಿತವಾಗಿ ಎಸ್‌ಎಂಎಸ್ ಮೂಲಕ …

Read More »

ರಾಜ್ಯದಲ್ಲಿ ಸರ್ಕಾರಿ ಹುದ್ದೆಗಳು ಖಾಲಿ : ಬೊಮ್ಮಾಯಿ‌

ಬೆಂಗಳೂರು: ರಾಜ್ಯದಲ್ಲಿ ಇರುವ 38 ಇಲಾಖೆಗಳಿಗೆ 7,68,975 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 5,16,073 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ, 2,52,902 ಹುದ್ದೆಗಳು ಖಾಲಿ ಇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ತಿಳಿಸಿದರು. 15 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮತಿ ನೀಡಲಾಗಿದೆ. ಖಾಸಗಿ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯನ್ನು ಆರ್ಥಿಕ ಸ್ಥಿತಿಗತಿಯ ಆಧಾರದ ಮೇಲೆ ಅನುಮತಿ ನೀಡಲಾಗುವುದು ಎಂದು ಭರವಸೆ ನೀಡಿದರು.

Read More »

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯ ತೆ

ಬೆಂಗಳೂರು : ಬಿಸಿಲ ತಾಪಕ್ಕೆ ಸುಸ್ತತಾಗಿ ಹೋಗಿದ್ದಾರೆ. ಆದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮಾರ್ಚ್ 21 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದೆ.ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮಾರ್ಚ್ 19 ರಂದು ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ದಾವಣಗೆರೆ ಜಿಲ್ಲೆಗಳನ್ನು ಹೊರತುಪಡಿಸಿ ಎಲ್ಲಾ ಜಿಲ್ಲೆಗಳ …

Read More »

ಭೂಮಿ ಸರ್ವೆ ಕುರಿತು ಮಹತ್ವದ ಆದೇಶ ಹೊರೆಡಿಸಿದ ರಾಜ್ಯ ಹೈಕೋರ್ಟ್

ಬೆಂಗಳೂರು : ಕರ್ನಾಟಕ ಭೂ ಕಂದಾಯ ಕಾಯ್ದೆಯ ಸೆಕ್ಷನ್ 140(2)ರಡಿಯಲ್ಲಿ ಮುನ್ಸಿಪಲ್ ಕಾರ್ಪೊರೇಶನ್ ವ್ಯಾಪ್ತಿಯೊಳಗೆ ಬರುವ ಭೂಮಿಯ ಸರ್ವೆ ಮಾಡಿ ಗಡಿಯನ್ನ ನಿಗದಿಪಡಿಸುವ ಅಧಿಕಾರ ತಹಶಿಲ್ದಾರ್‌ಗಿದೆ ಎಂದು ಹೇಳಿದೆ. ಬೆಂಗಳೂರು ಬಸವನಗುಡಿಯ ನಿವಾಸಿ ಸುನಿಲ್ ಚಜೆಡ್ ಅನ್ನೋರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದ್ದು, ‘ಭೂಮಿಯ ಸರ್ವೆ ಮಾಡಿ ಗಡಿಯನ್ನ ನಿಗದಿಪಡಿಸುವ ಅಧಿಕಾರ ತಹಶಿಲ್ದಾರ್‌ಗಿದೆ’ ಎಂದಿದೆ.

Read More »

ಡಿವಿಜಿ ಪತ್ರಕರ್ತರಾಗಿ ಪತ್ರಿಕಾ ಕ್ಷೇತ್ರದ ಘನತೆಯನ್ನು ಎತ್ತಿ ಹಿಡಿದವರು : ಶಿವಾನಂದ ತಗಡೂರು

ಎಂಖ್ಯಾತ ಸಾಹಿತಿ ಮತ್ತು ದಿಟ್ಟ ಪತ್ರಕರ್ತ ಡಿ.ವಿ. ಗುಂಡಪ್ಪ( ಡಿವಿಜಿ) ಅವರು ವೃತ್ತಿನಿರತ ಪತ್ರಕರ್ತರ ಒಂದು ಘನತೆ ಎಂದು ಕರ್ನಾಟಕ‌ ಕಾರ್ಯ ನಿರತ ಪತ್ರಕರ್ತರ ಸಂಘ ದ ಅಧ್ಯಕ್ಷ ಶಿವಾನಂದ ತಗಡೂರು ಸ್ಮರಿಸಿದರು. ನಗರದ ಕೆಯುಡಬ್ಲ್ಯೂಜೆಯಲ್ಲಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಡಿವಿಜಿ ಅವರ ಜನ್ಮದಿನ ಸಮಾರಂಭದಲ್ಲಿ ಅವರು ಮಾತನಾಡಿದರು. ಡಿವಿಜಿ ಸಾಹಿತಿಯಾಗಿ ಅಷ್ಟೆ ಅಲ್ಲ ಪತ್ರಕರ್ತರಾಗಿ ಪತ್ರಿಕಾ ಕ್ಷೇತ್ರದ ಘನತೆಯನ್ನು ಎತ್ತಿ ಹಿಡಿದವರು. ಪತ್ರಿಕಾಧರ್ಮ, ಮೌಲ್ಯಗಳನ್ನು ಗಟ್ಟಿಯಾಗಿ ಪ್ರತಿಪಾದಿಸಿದರು. ಕನ್ನಡ ಪತ್ರಿಕೋದ್ಯಮದಲ್ಲಿನ …

Read More »