Breaking News

ಬೆಂಗಳೂರು

ಹಿಜಾಬ್ ತೀರ್ಪು : ಇಂದು ಶಾಲೆ , ಕಾಲೇಜು ರಜೆ ಘೋಷಣೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಮತ್ತು ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಕಾರಣ ಹೈಕೋರ್ಟ್‌ನಲ್ಲಿ ಇಂದು ಬೆಳಗ್ಗೆ 10.30ಕ್ಕೆ ಹಿಜಾಬ್ ಅಂತಿಮ ತೀರ್ಪು ಪ್ರಕಟಗೊಳ್ಳುತ್ತಿರುವ ಹಿನ್ನಲೆ ಈ ತೀರ್ಮಾನ ಕೈಗೊಳ್ಳಲಾಗಿದೆ. ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಪೀಠ ಆಲಿಸಿದ್ದು, ನಾಳೆ (ಮಾ.15, ಮಂಗಳವಾರ) ಬೆಳಗ್ಗೆ 10.30ಕ್ಕೆ ಕರ್ನಾಟಕ ಹೈಕೋರ್ಟ್‌ನಲ್ಲಿ ಅಂತಿಮ ತೀರ್ಪು ಪ್ರಕಟವಾಗಲಿದೆ.

Read More »

ಹಿಜಾಬ್ ಕುರಿತು ನಾಳೆ ಹೈಕೋರ್ಟ್‌ನಲ್ಲಿ ಅಂತಿಮ ತೀರ್ಪು ಪ್ರಕಟ

ಬೆಂಗಳೂರು : ಹಿಜಾಬ್ ಧರಿಸಲು ಕುರಿತು ನಾಳೆ (ಮಾ.15, ಮಂಗಳವಾರ) ಕರ್ನಾಟಕ ಹೈಕೋರ್ಟ್‌ನಲ್ಲಿ ಅಂತಿಮ ತೀರ್ಪು ಪ್ರಕಟವಾಗಲಿದೆ. ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಪೀಠ ಆಲಿಸಿದೆ.ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಶೇಷ ಪೀಠದಲ್ಲಿ ಮೂರು ವಾರಗಳ ಕಾಲ ವಿಚಾರಣೆ ನಡೆದಿತ್ತು. ಅನಂತರ ಅಂತಿಮ ತೀರ್ಪನ್ನು ಕಾಯ್ದಿರಿಸಲಾಗಿತ್ತು. ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್, ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರು ಸಹ …

Read More »

ಮಾಜಿ ಸಿಎಂ ವಿರುದ್ದ ಯೋಗೇಶ್ವರ್ ಸವಾಲು

ರಾಮನಗರ: ನಿನ್ನ ಹೆಂಡತಿ ವಿರುದ್ಧ ಗೆದ್ದೆ, ನಿನ್ನ ವಿರುದ್ಧ ಸೋತೆ, ಮತ್ತೆ ನಿನ್ನ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ರೆಡಿಯಾಗಿದ್ದೀನಿ ಎಂದು ಯೋಗೇಶ್ವರ್ ಸವಾಲು ಹಾಕಿದ್ದಾರೆ. ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಏವಚನದಲ್ಲೇ ವಗ್ದಾಳಿ ನಡೆಸಿದ್ದಾರೆ.

Read More »

ಕೋವಿಡ್ : ಶೂನ್ಯ ಸಾವು ಕಂಡ ಕರುನಾಡು

ಬೆಂಗಳೂರು: ಕೋವಿಡ್‌ನ ಎರಡನೇ ಅಲೆಯ ಸಂದರ್ಭದಲ್ಲಿ ಅಂದರೆ 2021ರ ಮಾಚ್‌ರ್‍, ಏಪ್ರಿಲ್‌, ಮೇ ಮತ್ತು ಜೂನ್‌ನಲ್ಲಿ ದಿನನಿತ್ಯ ನೂರಾರು ಸಾವು ವರದಿಯಾಗಿತ್ತು. ಆದರೆ 2022ರ ಜನವರಿಯಲ್ಲಿ ತೀವ್ರ ಸ್ವರೂಪ ಪಡೆದುಕೊಂಡ ಮೂರನೇ ಅಲೆ ಅಷ್ಟೊಂದು ಮಾರಣಾಂತಿಕವಾಗಿರಲಿಲ್ಲ. ಕಳೆದ 9 ದಿನಗಳಿಂದ ದಿನನಿತ್ಯದ ಸಾವು ಒಂದಂಕಿಗೆ ಇಳಿದಿತ್ತು. ಇದೀಗ 646 ದಿನದ ಬಳಿಕ ರಾಜ್ಯ ಕೋವಿಡ್‌ ಸಾವು ಶೂನ್ಯ ದಾಖಲಾಗಿದೆ. ರಾಜ್ಯದಲ್ಲಿ ಈವರೆಗೆ 40,018 ಮಂದಿ ಕೋವಿಡ್‌ನಿಂದ ಮರಣವನ್ನಪ್ಪಿದ್ದಾರೆ. ದೇಶದಲ್ಲೇ ಕೊರೋನಾ …

Read More »

ಬುದ್ದಿವಾದ ಹೇಳಿದ ಪಾಲಕರು, ಆತ್ಮಹತ್ಯೆ ಶರಣಾದ ಮಗ

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮಕ್ಕಳ್ಳಿಗೆ ಪಾಲಕರು ಬುದ್ದಿವಾದ ಹೇಳುವುದೇ ಕಷ್ಟವಾಗಿದೆ. ಮಾತಾನಾಡುವ ಮುಂಚೆ ಸಾವಿರಾರು ಸಾರಿ ಯೋಚನೆ ಮಾಡುವ ಪರಿಸ್ಥಿತಿ ಉಂಟಾಗಿದೆ. ತಾಯಿ ಬೈದಿದಕ್ಕೆ ಮಗ ನೇಣಿಗೆ ಶರಣಾಗಿರುವ ಘಟನೆ ಸುಂಕದಕಟ್ಟೆ ಬಳಿಯ ಶ್ರೀನಿವಾಸ್ ನಗರದ ಪೈಪ್ ಲೈನ್ ರಸ್ತೆಯ ಮನೆಯಲ್ಲಿ ನಡೆದಿದೆ. ಸಂಜಯ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದು, ಕಳೆದ ಮೂರು ದಿನಗಳಿಂದ ಮಗ ಸಂಜಯ್ ಮನೆಗೆ ಬಂದಿರಲಿಲ್ಲ. ಯಾವುದೇ ಕೆಲಸಕ್ಕೆ ಹೋಗದೆ ಅಲೆದಾಡುತ್ತಿದ್ದ. ಹೀಗಾಗಿ ತಂದೆ ತಾಯಿ ಮಗ …

Read More »

ಬಿಜೆಪಿ ಎಂದರೆ ಬ್ರೋಕರ್ ಪಾರ್ಟಿ : ಡಿಕೆಶಿ

ಬೆಂಗಳೂರು: ಉತ್ತರಪ್ರದೇಶದಲ್ಲಿ ಸೀಟುಗಳ ಸಂಖ್ಯೆ ಕಡಿಮೆಯಾದ ಬಗ್ಗೆ, ಪಂಜಾಬ್‌ನಲ್ಲಿ ಅವರು ಎಷ್ಟು ಸ್ಥಾನ ಗೆದ್ದಿದ್ದಾರೆ? ಬಿಜೆಪಿ ಎಂದರೆ ಬ್ರೋಕರ್ ಪಾರ್ಟಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆರೋಪಿಸಿದ್ದಾರೆ. ಯುವಕಾಂಗ್ರೆಸ್‌ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಶೇ. 40ರಷ್ಟು ಪರ್ಸಂಟೇಜ್‌ ಅಲ್ಲ, ಹೊಟೇಲ್‌ನಲ್ಲಿ ತಿಂಡಿ ದರ ಪಟ್ಟಿ ಇದ್ದಂತೆ ಇಲಾಖೆಗಳಲ್ಲಿ ವರ್ಗಾವಣೆ, ಟೆಂಡರ್‌ ಸೇರಿ ಇತರೆ ಕೆಲಸಗಳಿಗೆ ಪಟ್ಟಿ ನೇತು ಹಾಕಲಾಗಿದೆ ಎಂದರು.ನಾವು ನಾಲ್ಕೂ ರಾಜ್ಯಗಳಲ್ಲಿ ಆಧಿಕಾರದಲ್ಲಿ ಇರಲಿಲ್ಲ. …

Read More »

ಮಾ. 28 ರಂದು ಎಂ.ಬಿ ಪಾಟೀಲ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಪದಗ್ರಹಣ

ಬೆಂಗಳೂರು: ಹಿರಿಯ ಕಾಂಗ್ರೆಸ್ ನಾಯಕ ಎಂ.ಬಿ ಪಾಟೀಲ್ ಅವರನ್ನು ಜನವರಿ 25 ರಂದು ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತು. ಮಾರ್ಚ್ 28ರಂದು ವಿದ್ಯುಕ್ತವಾಗಿ ಕೈ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಪದಗ್ರಹಣ ನಡೆಸಲಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುವ ಅದ್ಧೂರಿ ಸಮಾರಂಭದಲ್ಲಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಸಮಾರಂಭಕ್ಕೆ ರಾಜ್ಯದ ಎಲ್ಲೆಡೆಯಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.

Read More »

ಇಳೆಕೆ ಕಂಡ ಕೊರೋನಾ ಪ್ರಕರಣ

ಬೆಂಗಳೂರು : ಕೊರೋನಾ ಒಟ್ಟು 136 ಕೇಸ್ ದಾಖಲಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಇತ್ತೀಚೆಗೆ ಪಾಸಿಟಿವ್ ಕೇಸ್ಗಳ ಸಂಖ್ಯೆ ಇಳಿಕೆ ಕಂಡರೂ, ಮರಣ ಪ್ರಕರಣ ಕಡಿಮೆಯಾಗಿರಲಿಲ್ಲ. ಇಂದು ಮರಣ ಪ್ರಕರಣ ಕೂಡ ಇಳಿಕೆ ಕಂಡಿದೆ. ಈ ಮೂಲಕ ಕೋವಿಡ್-19 ಮರಣ ಪ್ರಮಾಣ ಶೇ.1.47% ರಷ್ಟಿದೆ. ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೀದರ್, ಚಾಮರಾಜನಗರ, ಗದಗ, ಹಾವೇರಿ, ಕೊಡಗು, ಕೋಲಾರ, ಕೊಪ್ಪಳ. ಮಂಡ್ಯ, ರಾಯಚೂರು, ಉಡುಪಿ ಹಾಗೂ ವಿಜಯಪುರದಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

Read More »

ಮೋದಿ ಇಲ್ಲದಿದ್ದರೆ ಉಕ್ರೇನ್ ನಲ್ಲಿ ವಿದ್ಯಾರ್ಥಿಗಳು ಸಾವನ್ನಪ್ಪುತ್ತಿದ್ದರು : ತೇಜಸ್ವಿ ಸೂರ್ಯ

ಬೆಂಗಳೂರು : ‘ಪ್ರಧಾನಿ ನರೇಂದ್ರ ಮೋದಿ ಇಲ್ಲದಿದ್ದರೆ ಹೆಚ್ಚಿನ ಭಾರತೀಯ ವಿದ್ಯಾರ್ಥಿಗಳು ಉಕ್ರೇನ್‌ ನಲ್ಲಿಸಾವನ್ನಪ್ಪುತ್ತಿದ್ದರು’ ಎಂದು ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದರು. ಯುದ್ಧಪೀಡಿತ ಉಕ್ರೇನ್ʼನಲ್ಲಿ ಭಾರತದ ಸ್ಥಳಾಂತರ ಪ್ರಯತ್ನವಾದ ಆಪರೇಶನ್ ಗಂಗಾ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸೂರ್ಯ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಈ ವೇಳೆ ‘19,000 ವಿದ್ಯಾರ್ಥಿಗಳಲ್ಲಿ ನಾವು ಕೇವಲ ಒಬ್ಬ ನವೀನ್ ಅವರನ್ನ ಕಳೆದುಕೊಂಡಿದ್ದೇವೆ. ಸ್ಥಳಾಂತರ ಸರಿಯಾಗಿ ನಡೆಯದಿದ್ದರೆ, ನಾವು ಹೆಚ್ಚು ನವೀನ್ʼರನ್ನ ಕಳೆದುಕೊಳ್ಳಬೇಕಿತ್ತು. ಮೋದಿ …

Read More »

ಸಿ.ಎಂ.ಇಬ್ರಾಹಿಂ ರಾಜಿನಾಮೆ ಕುರಿತು ಮಾಜಿ ಸಿಎಂ ಪ್ರತಿಕ್ರಿಯೆ

ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆ ಪತ್ರ ನನಗೆ ತಲುಪಿಲ್ಲ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಅವರ ರಾಜೀನಾಮೆ ಪತ್ರ ನನಗೆ ತಲುಪಿಲ್ಲ. ಪತ್ರ ಬಂದ ಬಳಿಕ ಈ ಬಗ್ಗೆ ಮಾತನಾಡುತ್ತೇನೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷಕ್ಕೆ ಹಾಗೂ ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಶನಿವಾರ …

Read More »