admin
March 9, 2022
Breaking News, ಬೆಂಗಳೂರು
ಬೆಂಗಳೂರು: ಮೇಕೆದಾಟು ಯೋಜನೆ ಕುರಿತು ಚರ್ಚಿಸಲು ಮುಂದಿನ ವಾರ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಮೇಕೆದಾಟು ಯೋಜನೆ ಕರಿತು ಎಲ್ಲ ಪಕ್ಷಗಳ ಮುಖಂಡರನ್ನು ಹಾಗೂ ಕಾನೂನು ತಜ್ಞರನ್ನು ಕರೆದು ಅವರ ಅಭಿಪ್ರಾಯ ಮತ್ತು ಸಲಹೆಗಳನ್ನು ಸಂಗ್ರಹಿಸಲಾಗುತ್ತದೆ.ಅವರ ಸಲಹೆ ಹಾಗೂ ಅಭಿಪ್ರಾಯಗಳನ್ನು ಪರಿಶೀಲಿಸಿ ಅಂತಿಮ ನಿರ್ಧಾರ ಕೈಗೊಂಡು ಅದರಂತೆ ಕೆಲಸ ಮಾಡಲಾಗುತ್ತದೆ.
Read More »
admin
March 9, 2022
Breaking News, ಬೆಂಗಳೂರು
ಬೆಂಗಳೂರು: ನಗರದಲ್ಲಿ ಮೊಹಮ್ಮದ್ ಉಸ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಜಾನೆ ಕಾರ್ಯಾಚರಣೆ ನಡೆಸಿದ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಸೈಯದ್ ಮೋಹಿನ್, ಅದ್ನಾನ್ ಖಾನ್ ಮೇಲೆ ಫೈರಿಂಗ್ ಮಾಡಲಾಗಿದೆ. ಕಾಲಿಗೆ ಗುಂಡುಹಾರಿಸಿ ಇಬ್ಬರನ್ನು ಬಂಧಿಸಲಾಗಿದೆ.ಇವರೊಂದಿಗೆ ಅರ್ಬಾಜ್, ಮಜರ್ ಮತ್ತು ಸೈಯದ್ ಶಾಹಿದ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ : ನಿನ್ನೆ ರಾತ್ರಿ ಗಲಾಟೆ ನಡೆದು ಮೊಹಮ್ಮದ್ ಉಸ್ಮಾನ್ ನನ್ನು ಕೊಲೆ ಮಾಡಲಾಗಿತ್ತು. ಪುಲಕೇಶಿನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, …
Read More »
admin
March 9, 2022
Breaking News, ಬೆಂಗಳೂರು
ಬೆಂಗಳೂರು: ಕೋರ್ಟ್ ಆವರಣದಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ 24 ದಿನ ಜೈಲಿನಲ್ಲಿದ್ದ ವಕೀಲ ಜಗದೀಶ್ ಮಹದೇವ್ ಅವರು ಮಂಗಳವಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಎರಡೂ ಪ್ರಕರಣದಲ್ಲಿ ಜಾಮೀನು ಸಿಕ್ಕ ಬಳಿಕ ಜಗದೀಶ್ ಮಂಗಳವಾರ ಸಂಜೆ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾದರು. ಅವರ ಅಭಿಮಾನಿಗಳು ಜಗದೀಶ್‌ಗೆ ಹೂವಿನ ಹಾರ ಹಾಕಿ ಬರ ಮಾಡಿಕೊಂಡರು.
Read More »
admin
March 9, 2022
Breaking News, ಬೆಂಗಳೂರು
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎಂದು ಹೇಳುತ್ತಾ ‘ಸಬ್ ಕಾ ಸರ್ವನಾಶ್’ ಮಾಡುತ್ತಿದ್ದಾರೆ ಎಂಬ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕೆಯು ಸದನದಲ್ಲಿ ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರ ನಡುವೆ ತೀವ್ರ ಜಟಾಪಟಿಗೆ ಕಾರಣವಾಯಿತು. ಮಂಗಳವಾರ ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ‘ಬಜೆಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮಾರ್ಗದರ್ಶನದಲ್ಲಿ ನಾವು ರಾಜ್ಯವನ್ನು ಸುಭಿಕ್ಷಗೊಳಿಸುತ್ತೇವೆ ಎಂದು ಹೇಳಲಾಗಿದೆ. …
Read More »
admin
March 9, 2022
Breaking News, ಬೆಂಗಳೂರು
ಬೆಂಗಳೂರು : ಪದವಿ ಶಿಕ್ಷಣದಲ್ಲಿ ಕನ್ನಡ ಭಾಷೆ ಸೇರಿದಂತೆ ಯಾವುದೇ ಭಾಷೆ ಕಲಿಕೆ ಕಡ್ಡಾಯವಲ್ಲ ಎಂದು ಕೇಂದ್ರ ಸರ್ಕಾರ ಕರ್ನಾಟಕ ಹೈಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿದೆ. ರಾಷ್ಟ್ರೀಯ ಶಿಕ್ಷಣ ನೀತಿ-2020 (NEP) ಹಾಗೂ ಅದರ ನಿಯಮಗಳಲ್ಲಿ ಕನ್ನಡ ಸೇರಿದಂತೆ ಯಾವುದೇ ಭಾಷೆಯನ್ನು ಪದವಿ ಶಿಕ್ಷಣದಲ್ಲಿ ಕಡ್ಡಾಯಗೊಳಿಸುವ ಸಂಬಂಧ ಉಲ್ಲೇಖಗಳಲ್ಲಿ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದ್ದು, ಕರ್ನಾಟಕ ಹೈಕೋರ್ಟ್ ಗೆ ಪ್ರಮಾಣ ಪತ್ರ ಸಲ್ಲಿಸಿದೆ. ಇದರಿಂದ ಪದವಿ ಹಂತದಲ್ಲಿ ಭಾಷೆಯಾಗಿ …
Read More »
admin
March 8, 2022
Breaking News, ಬೆಂಗಳೂರು
ಬೆಂಗಳೂರು: ಯೂಕ್ರೇನ್ ನ ಯುದ್ಧ ಭೂಮಿಯಲ್ಲಿ ಹುತಾತ್ಮರಾದ ಕನ್ನಡಿಗ ವೈದ್ಯ ವಿದ್ಯಾರ್ಥಿ ನವೀನ್ ಶವ ಪತ್ತೆಯಾಗಿದ್ದು, ಅಲ್ಲಿನ ಶವಾಗಾರದಲ್ಲಿ ಸಂರಕ್ಷಸಿಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು. ಆರ್ ಟಿ.ನಗರದ ತಮ್ಮ ನಿವಾಸದ ಬಳಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು ವಿದೇಶಾಂಗ ಸಚಿವ ಎಸ್.ಜೈಶಂಕರ್ ಈ ವಿಷಯ ತಿಳಿಸಿದ್ದಾರೆ. ಸದ್ಯಕ್ಕೆ ಷೆಲ್ ದಾಳಿ ಮುಂದುವರಿದಿದೆ. ಹೀಗಾಗಿ ಅಲ್ಲಿನ ಶವಾಗಾರದ ಅಧಿಕಾರಿಗಳ ಜತೆಗೆ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳು …
Read More »
admin
March 8, 2022
Breaking News, ಬೆಂಗಳೂರು
ಬೆಂಗಳೂರು: ನಾನು ಈ ರಾಜ್ಯದ ಮುಖ್ಯಮಂತ್ರಿಯಾದ್ರೇ, ನಿಮ್ಮ ಸರ್ಕಾರವೇ ಬರೋದಿಲ್ಲ. 20 ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂಬುದಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ನೀಡಿದ್ದಾರೆ. ಇಂದು ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಬಿಸಿ ಬಿಸಿ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದಂತ ಸದಸ್ಯ ಯತ್ನಾಳ್, ನಿಮ್ಮನ್ನು ನೋಡ್ತಾ ಇದ್ದೇನೆ. ಕಳೆದ ಒಂದು ಗಂಟೆಯಿಂದ ವಿಪಕ್ಷದವರೇ ಮಾತನಾಡುತ್ತಿದ್ದೀರಿ. ಅರ್ಧ ಗಂಟೆಯಲ್ಲಿ ನಿಮ್ಮ ಭಾಷಣ ಮೊಟಕುಗೊಳಿಸುವಂತೆ ಸ್ಪೀಕರ್ ಹೇಳಿದಂತೆ …
Read More »
admin
March 8, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣ ಕಡಿಮೆಯಾಗುತ್ತಿದ್ದು, ಇಂದು 155 ಮಂದಿಯಲ್ಲಿ ಕೋವಿಡ್ 19 ಇರುವುದು ದೃಢಪಟ್ಟಿದೆ. ಹಾಗೆಯೇ ಐವರು ಕೊರೊನಾದಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ. 349 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈ ಮೂಲಕ ಇದುವರೆಗೆ 38,99,647 ಮಂದಿ ಕೋವಿಡ್ 19 ನಿಂದ ಗುಣಮುಖರಾಗಿದ್ದಾರೆ.
Read More »
admin
March 8, 2022
Breaking News, ಬೆಂಗಳೂರು
ಬೆಂಗಳೂರು: ‘ಡಬಲ್ ಎಂಜಿನ್ ಸರ್ಕಾರ ಬಂದರೆ ರಾಜ್ಯವನ್ನು ಸ್ವರ್ಗವನ್ನಾಗಿ ಮಾಡುತ್ತೇವೆ ಎಂದು ಬಿಜೆಪಿಯವರು ಹೇಳಿಕೊಂಡಿದ್ದರು. ಅವರ ಕಾಲದಲ್ಲಿ ರಾಜ್ಯ ದಿವಾಳಿಯತ್ತ ಸಾಗಿದೆ. ಇಲ್ಲಿರುವುದು ಡಬಲ್ ಎಂಜಿನ್ ಸರ್ಕಾರವಲ್ಲ, ಡಬ್ಬಾ ಸರ್ಕಾರ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ‘ಬಸವರಾಜ ಬೊಮ್ಮಾಯಿ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದೆ. ಆದರೆ, ಎಲ್ಲ ನಿರೀಕ್ಷೆಗಳು ಹುಸಿಯಾಗಿವೆ. ಆರ್‌ಎಸ್‌ಎಸ್ ಹಿನ್ನೆಲೆಯವರು ಯಾರಾದರೂ ಇಂಥಾ …
Read More »
admin
March 8, 2022
Breaking News, ಬೆಂಗಳೂರು
ಬೆಂಗಳೂರು: ಜೆಇಇ ಪರೀಕ್ಷೆಯಂದೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ದಿನಾಂಕ ಘೋಷಣೆಯಿಂದಾಗಿ, ಮತ್ತೆ ಪಿಯು ಬೋರ್ಡ್ ನಿಂದ ವಾರ್ಷಿಕ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಿ, ತಾತ್ಕಾಲಿಕ ವಾರ್ಷಿಕ ವೇಳಾಪಟ್ಟಿ ಪ್ರಕಟಿಸಲಾಗಿತ್ತು. ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2021-22ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ದಿನಾಂಕ 22-04-2022ರಿಂದ 11-05-2022ರವರೆಗೆ ನಿಗದಿಪಡಿಸಲಾಗಿದ್ದು, ಆಕ್ಷೇಪಣೆಗಳನ್ನು ಸಲ್ಲಿಸಲು ದಿನಾಂಕ 05-03-2022ರ ಸಂಜೆ 5 …
Read More »