Breaking News

ಬೆಂಗಳೂರು

ಸರ್ಕಾರವು ಮೊದಲು ಶಿಕ್ಷಣವನ್ನು ಗ್ಯಾರಂಟಿ ಪಟ್ಟಿಯಲ್ಲಿ ಸೇರಿಸಬೇಕು: ಬರಗೂರು ರಾಮಚಂದ್ರಪ್ಪ ಆಗ್ರಹ

ಬೆಂಗಳೂರು: ಶಿಕ್ಷಣ ಸಂಸ್ಥೆಗಳನ್ನು ಕಟ್ಟಿ ಬೆಳೆಸಬೇಕಾದ ಸರ್ಕಾರಗಳು ಶಿಕ್ಷಣ ಕ್ಷೇತ್ರದ ಮಹತ್ವವನ್ನೇ ಮರೆತಂತಿದೆ. ಸರ್ಕಾರಗಳು ಮೊದಲು ಶಿಕ್ಷಣವನ್ನು ಗ್ಯಾರಂಟಿ ಪಟ್ಟಿಯಲ್ಲಿ ಸೇರಿಸಬೇಕು’ ಎಂದು ಸಾಹಿತಿ ಡಾ ಬರಗೂರು ರಾಮಚಂದ್ರಪ್ಪ ಆಗ್ರಹಿಸಿದರು. ಬೆಂಗಳೂರು ವಿಶ್ವವಿದ್ಯಾಲಯ ಶಿಕ್ಷಕರ ಪರಿಷತ್ತು ವತಿಯಿಂದ ಆಯೋಜಿಸಿದ್ದ ‘ಸೇವಾ ನಿವೃತ್ತ ಪ್ರಾಧ್ಯಾಪಕರಿಗೆ ಗೌರವ ಸಮರ್ಪಣೆ ಸಮಾರಂಭ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಎಲ್ಲಾ ಸರ್ಕಾರಗಳು ಶಿಕ್ಷಣ ಕ್ಷೇತ್ರವನ್ನು ನಿರ್ಲಕ್ಷಿಸುತ್ತಿವೆ. ಕೇವಲ ವಿಶ್ವವಿದ್ಯಾಲಯಗಳ ಸಂಖ್ಯೆ ಹೆಚ್ಚಿಸುವ ಕಡೆ ಗಮನ ಹರಿಸುತ್ತಿವೆಯೇ ಹೊರತು, …

Read More »

ಕಡಿಮೆ ಬಡ್ಡಿ ದರದಲ್ಲಿ ಸಾಲ ಒದಗಿಸುವ ಉದ್ದೇಶದಿಂದ ರಾಜ್ಯದಲ್ಲಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸ್ಥಾಪನೆಗೆ ಸರ್ಕಾರ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ‘ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ’ ಸ್ಥಾಪನೆಗೆ ಸರ್ಕಾರ ನಿರ್ಧರಿಸಿದ್ದು, ಈ ಮೂಲಕ ಮಹಿಳೆಯರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುತ್ತದೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಹೆಚ್ಚಾದ ಹಿನ್ನೆಲೆ ರಾಜ್ಯ ಸರ್ಕಾರ ಕಡಿಮೆ ಬಡ್ಡಿ ದರದಲ್ಲಿ ಜನರಿಗೆ ಸಾಲ ಸಿಗಬೇಕೆಂಬ ಉದ್ದೇಶದಲ್ಲಿ ರಾಜ್ಯದಲ್ಲಿ ‘ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ’ ಸ್ಥಾಪನೆಗೆ ನಿರ್ಧರಿಸಿದೆ. ಈ ಬಗ್ಗೆ ಸಚಿವ ಶರಣಪ್ರಕಾಶ್ ಪಾಟೀಲ್ ಮಾಹಿತಿ ನೀಡಿದ್ದು, ಕ್ರೆಡಿಟ್ ಕೋ ಆಪರೇಟಿವ್ …

Read More »

ಸರ್ಕಾರಿ ವಸತಿ ಯೋಜನೆಗಳಲ್ಲಿ ತೊಡಕುಗಳ ನಿವಾರಣೆಗಾಗಿ ಕೈಗೆಟಗುವ ವಸತಿ ನೀತಿ ರಚಿಸಲು ಸರ್ಕಾರ ಸಜ್ಜು

ಬೆಂಗಳೂರು: ಸರ್ಕಾರಿ ವಸತಿ ಯೋಜನೆಗಳಲ್ಲಿ ಹೊಸ ಹೊಸ ಆಕಾಂಕ್ಷೆ, ನವೀನ ಕಲ್ಪನೆ ಮತ್ತು ಪ್ರಸ್ತುತ ಎದುರಿಸುತ್ತಿರುವ ತೊಡಕುಗಳ ನಿವಾರಣೆಗಾಗಿ ‘ಕೈಗೆಟಕುವ ವಸತಿ ನೀತಿ’ ರಚಿಸಲು ಸರ್ಕಾರ ಮುಂದಾಗಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆ ಹ್ಯೂಮನ್ ಸೆಟಲ್‌ಮೆಂಟ್ ಸಂಸ್ಥೆಗೆ ಹೊಸ ನೀತಿಯನ್ನು ಸಿದ್ಧಪಡಿಸುವ ಜವಾಬ್ದಾರಿ ನೀಡಿರುವ ವಸತಿ ಇಲಾಖೆ, ಮುಂದೆ ವರದಿ ಸಲ್ಲಿಕೆಯಾದ ಬಳಿಕ ಸಂಪುಟದ ಮುಂದಿಟ್ಟು ಚರ್ಚೆ ನಡೆಸಿ ಅನುಷ್ಠಾನಕ್ಕೆ ತರಲಿದೆ. ವಸತಿ ಯೋಜನೆ ಅನುಷ್ಠಾನದಲ್ಲಿ ಅಡಿಗಡಿಗೂ ತೊಡಕುಗಳಿವೆ. ಕಾಲ ಬದಲಾದಂತೆ …

Read More »

ಅರಣ್ಯ ವ್ಯಾಪ್ತಿ ಕಡಿಮೆ ಇರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಸೇರಿದಂತೆ ಹಸಿರು ಹೊದಿಕೆ ಮತ್ತು ಅರಣ್ಯ ವ್ಯಾಪ್ತಿ ಕಡಿಮೆ ಇರುವ 16 ಜಿಲ್ಲೆಗಳಿಗೆ ವಿಶೇಷ ಯೋಜನೆ ಸಿದ್ಧಪಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದ್ದಾರೆ. ವಿಕಾಸಸೌಧದ ಕೊಠಡಿ ಸಂಖ್ಯೆ 122ರಲ್ಲಿಂದು ಸಂಜೆ ನಡೆದ ವಿಡಿಯೋ ಕಾನ್ಫರೆನ್ಸ್ ನಲ್ಲಿ ಅವರು, ಬಿಸಿಲು ಹೆಚ್ಚಿರುವ ವಿಜಯಪುರ, ರಾಯಚೂರು, ಯಾದಗಿರಿ, ಬಳ್ಳಾರಿ, ಬೀದರ್, ಕಲ್ಬುರ್ಗಿ ಸೇರಿದಂತೆ ಹಸಿರು ವ್ಯಾಪ್ತಿ ಕಡಿಮೆ ಇರುವ ಜಿಲ್ಲೆಗಳಲ್ಲಿ ಎತ್ತರದ …

Read More »

ರಾಜ್ಯ ಸರ್ಕಾರದ ಮಸೂದೆಗಳನ್ನು ಅಂಗೀಕಾರ ಹಾಕದೆ ವಾಪಸ್ ಕಳುಹಿಸಿದ ರಾಜ್ಯಪಾಲರು: ಗವರ್ನರ್ ನಡೆಗೆ ತೀವ್ರ ಖಂಡನೆ

ಬೆಂಗಳೂರು : ಕಳೆದ ಬೆಳಗಾವಿ ಅಧಿವೇಶನದಲ್ಲಿ ರಾಜ್ಯಪಾಲರ ಅಂಗೀಕಾರಕ್ಕೆ ರಾಜ್ಯ ಸರ್ಕಾರ ಹಲವು ಮಸೂದೆಗಳನ್ನು ಕಳುಹಿಸಿಕೊಡಲಾಗಿತ್ತು ಆದರೆ ರಾಜ್ಯಪಾಲರು ಮಸೂದೆಗಳನ್ನು ಅಂಗೀಕಾರ ಹಾಕದೆ ವಾಪಸ್ ಕಳಿಸಿದ್ದಾರೆ ಇದೀಗ ರಾಜಪಾಲರ ನಡೆಗೆ ರಾಜ ಸರ್ಕಾರ ತೀವ್ರವಾಗಿ ಖಂಡಿಸಿದ್ದು ಕಾನೂನು ಹೋರಾಟಕ್ಕೆ ಚಿಂತನೆ ನಡೆಸಿದೆ. ಹೌದು ರಾಜ್ಯಪಾಲರು ನಡೆಯಿಂದ ರಾಜ್ಯ ಸರ್ಕಾರ ಆಕ್ರೋಶಗೊಂಡಿದ್ದು, ರಾಜ್ಯಪಾಲರು ವಿರುದ್ಧ ಕಾನೂನು ಹೋರಾಟಕ್ಕೆ ಇದೀಗ ಚಿಂತನೆ ನಡೆಸುತ್ತಿದೆ. ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಸಂಘರ್ಷ ಮುಂದುವರೆದಿದ್ದು, ಮಸೂದೆಗಳನ್ನು …

Read More »

ಕೊನೆಗೂ ರಾಜ್ಯಕ್ಕೆ ಹೆಚ್ಚುವರಿ ಅಕ್ಕಿ ನೀಡಲು ಒಪ್ಪಿದ ಕೇಂದ್ರ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದ ಮೇಲೆ 5 ಪ್ರಮುಖ ಗ್ಯಾರಂಟಿ ಯೋಜನೆ ಜಾರಿ ಮಾಡಿತ್ತು. ಇದರಿಂದ ಕೇಂದ್ರ ಸರ್ಕಾರ ನೀಡಬೇಕಾಗಿದ್ದ ಹೆಚ್ಚುವರಿ ಅಕ್ಕಿಯನ್ನು ಕೊಡುವುದನ್ನು ನಿಲ್ಲಿಸಿತ್ತು. ಆದರೆ ಇದೀಗ ರಾಜ್ಯಕ್ಕೆ ಅಕ್ಕಿ ನೀಡಲು ಕೇಂದ್ರ ಒಪ್ಪಿದೆ. ಇದಕ್ಕೆ ಕಾಂಗ್ರೆಸ್ ಟ್ವೀಟ್ ನಲ್ಲಿ ಇದು ಗ್ಯಾರಂಟಿ ಯೋಜನೆಗಳ ಯಶಸ್ಸಿನ ಪರಿಣಾಮ ಎಂದು ಕುಟುಕಿದೆ. ಹೌದು ಟ್ವೀಟ್ ನಲ್ಲಿ ಕೇಂದ್ರದ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೂ ಕರ್ನಾಟಕದ …

Read More »

ಕೆಎಎಸ್ ಮರುಪರೀಕ್ಷೆ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿದ ಹೈಕೋರ್ಟ್

ಬೆಂಗಳೂರು: ಗೆಜೆಟೆಡ್‌ ಪ್ರೊಬೇಷನರ್ (ಕೆಎಎಸ್‌) ಅಧಿಕಾರಿಗಳ 384 ಹುದ್ದೆಗಳ ನೇಮಕಕ್ಕೆ 2024ರ ಡಿಸೆಂಬರ್‌ 29ರಂದು ನಡೆಸಲಾಗಿದ್ದ ಮರು ಪರೀಕ್ಷೆಯನ್ನು ರದ್ದುಪಡಿಸಿ ಮತ್ತೂಮ್ಮೆ ಪರೀಕ್ಷೆ ನಡೆಸುಂತೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ. ಈ ವಿಚಾರವಾಗಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಕಾಂತಕುಮಾರ್‌ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಆರ್‌. ದೇವದಾಸ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. …

Read More »

ರಾಜ್ಯದಲ್ಲಿ ಏಪ್ರಿಲ್‌-ಮೇ ತಿಂಗಳಲ್ಲಿ ಜಿ.ಪಂ, ತಾ.ಪಂ ಚುನಾವಣಾ ನಡೆಯುವ ಸಾಧ್ಯತೆ

ಬೆಂಗಳೂರು: ಏಪ್ರಿಲ್ -ಮೇ ತಿಂಗಳಲ್ಲಿ ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಯುವ ಸಾಧ್ಯತೆ ಇದೆ. ಕಾಂಗ್ರೆಸ್ ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿಗಳಲ್ಲೂ ಅಧಿಕಾರ ಹಿಡಿಯಲು ನೀಲಿ ನಕ್ಷೆ ಸಿದ್ಧಪಡಿಸಲು ಮುಂದಾಗಿದೆ. ಈ ತಿಂಗಳ ಅಂತ್ಯಕ್ಕೆ ಅಥವಾ ಫೆಬ್ರವರಿ ಮೊದಲ ವಾರ ಕೆಪಿಸಿಸಿ ಪ್ರಮುಖರ ಸಭೆ ನಡೆಸಲಾಗುವುದು. ಚುನಾವಣೆಗೆ ಪೂರ್ವ ತಯಾರಿ ಬಗ್ಗೆ ವ್ಯವಸ್ಥಿತ ಯೋಜನೆ ರೂಪಿಸಲಿದ್ದು, ಪಕ್ಷ ಯಾವುದೇ ಹಂತದಲ್ಲಿ ಹಿಡಿತ ಕಳೆದುಕೊಳ್ಳಬಾರದು ಎನ್ನುವ ನಿಟ್ಟಿನಲ್ಲಿ ನಾಯಕರು …

Read More »

ಫೆ.5 ರಂದು ಬೆಂಗಳೂರಿನಲ್ಲಿ ಎಲ್ಲ ರಾಜ್ಯಗಳ ಉನ್ನತ ಶಿಕ್ಷಣ ಸಚಿವರ ಸಮಾವೇಶ ಆಯೋಜನೆ: ಸಚಿವ ಎಂ.ಸಿ.ಸುಧಾಕರ್

ಬೆಂಗಳೂರು: ನಮ್ಮ ತೆರಿಗೆ ನಮ್ಮ ಹಕ್ಕು ಎಂದು ದಿಲ್ಲಿ ಪರೇಡ್‌ ನಡೆಸಿ, ಕಾಂಗ್ರೆಸ್‌ ಮತ್ತು ಐಎನ್‌ಡಿಐಎ ಒಕ್ಕೂಟದ ಪಕ್ಷಗಳ ಆಡಳಿತವಿರುವ ರಾಜ್ಯಗಳ ಹಣಕಾಸು ಸಚಿವರ ಸಭೆ ಆಯೋಜನೆಯಲ್ಲಿ ಮುಂಚೂಣಿಯಲ್ಲಿದ್ದ ರಾಜ್ಯ ಕಾಂಗ್ರೆಸ್‌ ಸರಕಾರವು ಈಗ ವಿಶ್ವವಿದ್ಯಾನಿಲಯಗಳ ಕುಲಪತಿ ನೇಮಕಾತಿಯಲ್ಲಿ ವಿಷಯ ದಲ್ಲಿ ಕೇಂದ್ರ ಸರಕಾರದ ವಿರುದ್ಧ ಮತ್ತೊಂದು ಹೋರಾಟಕ್ಕೆ ವೇದಿಕೆ ಸಿದ್ಧಪಡಿಸಿಕೊಳ್ಳುತ್ತಿದೆ. ಯುಜಿಸಿ ನಿಯಮ ತಿದ್ದುಪಡಿಯ ವಿರುದ್ಧ ವಿವಿಧ ರಾಜ್ಯಗಳ ಶಿಕ್ಷಣ ಸಚಿವರನ್ನು ಸಂಘಟಿಸಿ, ಕೇಂದ್ರದ ಮೇಲೆ ಒತ್ತಡ ಹೇರಲು …

Read More »

ಪರಿಶಿಷ್ಟ ಜಾತಿ, ಪಂಗಡದವರಿಗೆ ಜಾತಿ ಹಾಗೂ ಆದಾಯ ಪ್ರಮಾಣಪತ್ರ ಒದಗಿಸುವ ಪ್ರಕ್ರಿಯೆ ಸರಳೀಕರಣ

ಬೆಂಗಳೂರು: ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯದವರಿಗೆ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಒದಗಿಸುವ ಪ್ರಕ್ರಿಯೆಯನ್ನು ಸರಳೀಕರಣ ಗೊಳಿಸಲಾಗುವುದು. ಈ ಸಂಬಂಧ ಸುತ್ತೋಲೆ ಹೊರಡಿಸುತ್ತೇವೆ’ ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಪಿ.ಮಣಿವಣ್ಣನ್ ಭರವಸೆ ನೀಡಿದರು. ಎಸ್‌.ಸಿ.ಎಸ್‌.ಎ/ಟಿ.ಎಸ್‌.ಎ ಜಾಗೃತಿ ವೇದಿಕೆ ನಗರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ, ಎಸ್‌ಸಿ-ಎಸ್‌ಟಿ ಸಮುದಾಯದ ಪ್ರಮುಖರ ಅಹವಾಲು ಆಲಿಸಿದರು. ಜಾತಿ ಹಾಗೂ ಆದಾಯ ಪ್ರಮಾಣ ಪತ್ರ …

Read More »