admin
March 7, 2022
Breaking News, ಬೆಂಗಳೂರು
ಬೆಂಗಳೂರು: ಇಂದಿನಿಂದ ವಿಧಾನ ಮಂಡಲದ ಅಧಿವೇಶನ ಪುನರಾರಂಭಗೊಳ್ಳಲಿದೆ. ಅಲ್ಲದೇ ಬಜೆಟ್ ಅಧಿವೇಶನದಲ್ಲಿ ಆಯವ್ಯಯದ ಮೇಲೆ ಬಿಸಿ ಬಿಸಿ ಚರ್ಚೆ ನಡೆಯಲಿದೆ. ಜಂಟಿ ಅಧಿವೇಶನದಲ್ಲಿ ಕಾಂಗ್ರೆಸ್ ಧರಣಿಯಿಂದ ಮೂರು ದಿನ ಮೊದಲೇ ಅಧಿವೇಶನ ಬರಖಾಸ್ತು ಗೊಂಡಿತ್ತು. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ವೇಳೆ ಪ್ರತಿಪಕ್ಷದ ನಾಯಕರೇ ಮಾತನಾಡಿರಲಿಲ್ಲ. ಈ ಬಳಿಕ, ಇಂದು ಮತ್ತೆ ಬಜೆಟ್ ಮೇಲಿನ ಚರ್ಚೆ ನಡೆಸೋದಕ್ಕಾಗಿ ಅಧಿವೇಶನ ಪುನರಾರಂಭಗೊಳ್ಳಲಿದೆ.
Read More »
admin
March 7, 2022
Breaking News, ಬೆಂಗಳೂರು
ಬೆಂಗಳೂರು: ರೈತರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ.ಕಂದಾಯ ಮತ್ತು ಭೂಮಾಪನ ಇಲಾಖೆಯಿಂದ ಹೊಸ ಯೋಜನೆ ರೂಪಿಸಲಾಗಿದ್ದು, ಪಹಣಿ ಪತ್ರದಲ್ಲಿ ನಕ್ಷೆಯನ್ನು ಕೂಡ ನೀಡಲಾಗುತ್ತದೆ. ಪ್ರಾಯೋಗಿಕವಾಗಿ ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ನಂತರ ರಾಜ್ಯಾದ್ಯಂತ ವಿಸ್ತರಿಸಲಾಗುತ್ತದೆ. ಹೊಸ ಪಹಣಿಯಲ್ಲಿಯೂ ಹಳೆ ಪಹಣಿಯಲ್ಲಿ ಇರುವಂತೆಯೇ ಎಲ್ಲ ವಿವರಗಳು ಇರುತ್ತವೆ. ಎಡಗಡೆ ಡಿಜಿಟಲ್ ಸ್ಕೆಚ್ ಇರಲಿದೆ. ವಿಸ್ತೀರ್ಣ, ಜಮೀನು ಎಲ್ಲಿದೆ?, ಒತ್ತುವರಿ ಮಾಹಿತಿ, ಕ್ಯೂಆರ್ ಕೋಡ್, ಬಾರ್ಕೋಡ್ ಮೊದಲಾದವುಗಳನ್ನು ಒಳಗೊಂಡಂತೆ ಹೊಸ …
Read More »
admin
March 6, 2022
Breaking News, ಬೆಂಗಳೂರು
ಬೆಂಗಳೂರು: ಕೋರ್ಟ್ ಆವರಣದಲ್ಲಿ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿದ್ದ ವಕೀಲ ಜಗದೀಶ್ ಅವರಿಗೆ ಸೆಷನ್ಸ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜಾಮೀನು ಸಿಕ್ಕರೂ ಕೂಡ ಸಧ್ಯಕ್ಕೆ ಬಿಡುಗಡೆ ಭಾಗ್ಯವಿಲ್ಲ ಎನ್ನಲಾಗಿದೆ. ಗಲಾಟೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ವಕೀಲ ಜಗದೀಶ್ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿರುವ ನ್ಯಾಯಾಲಯ, 50 ಸಾವಿರ ರೂಪಾಯಿ ವೈಯಕ್ತಿಕ ಬಾಂಡ್, ಇಬ್ಬರ ಶ್ಯೂರಿಟಿ.ಸಾಕ್ಷ್ಯ ನಾಶ ಮಾಡುವಂತಿಲ್ಲ ಎಂದು ತಿಳಿಸಿದೆ. ಅಲ್ಲದೇ ನ್ಯಾಯಾಲಯದ ವಿಚಾರಣೆಗೆ ತಪ್ಪದೇ ಹಾಜರಾಗುವಂತೆ …
Read More »
admin
March 6, 2022
Breaking News, ಬೆಂಗಳೂರು
ಬೆಂಗಳೂರು : ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಅಂಗನವಾಡಿ ಕಾರ್ಯಕರ್ತೆಯರ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡು ಆದೇಶ ಹೊರಡಿಸಿದೆ. ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸಿದ್ದು, ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರ, ಪ್ರಮುಖ ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದೆ.
Read More »
admin
March 5, 2022
Breaking News, ಬೆಂಗಳೂರು
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ರಾಜ್ಯ ಬಿಜೆಪಿ ಕಿಡಿಕಾರಿದೆ. ಸಿದ್ದರಾಮಯ್ಯ ಅಡ್ಡಕಸುಬಿ ಬಜೆಟ್ ಎಂದು ಟ್ವೀಟ್ ಮೂಲಕ ಬಜೆಟ್ ಟೀಕಿಸಿದ್ದಾರೆ. ಸಿದ್ದರಾಮಯ್ಯ ಟೀಕೆಗೆ ರಾಜ್ಯ ಬಿಜೆಪಿ ಘಟಕ ಟಾಂಗ್ ಕೊಟ್ಟಿದೆ. ರಾಜಕೀಯ ಟೀಕೆಗಳು ಮರ್ಯಾದೆಯ ಗೆರೆ ದಾಟಬಾರದು. ಆದರೆ ಸಿದ್ದರಾಮಯ್ಯ ಅವರು ರಾಜ್ಯದ ಆಯವ್ಯಯವನ್ನೇ ಅಡ್ಡಕಸುಬಿ ಬಜೆಟ್ ಎಂದು ವ್ಯಾಖ್ಯಾನಿಸಿದ್ದಾರೆ. ಪ್ರಜಾಪ್ರಭುತ್ವದ ರೀತಿ ರಿವಾಜುಗಳಿಗೆ ವಿರುದ್ಧವಾದ ಹೇಳಿಕೆಯನ್ನು ಸಿದ್ದರಾಮಯ್ಯರಿಂದ ರಾಜ್ಯದ ಜನರು ನಿರೀಕ್ಷಿಸಿರಲಿಲ್ಲ. ಇದು ರಾಜ್ಯದ ಜನತೆಗೆ ಮಾಡಿದ …
Read More »
admin
March 5, 2022
Breaking News, ಬೆಂಗಳೂರು
ಬೆಂಗಳೂರು : ನವೀನ್ ಮೃತದೇಹವನ್ನು ಪಡೆಯುವ ಪ್ರಯತ್ನ ಜಾರಿಯಲ್ಲಿದೆ. ನಿಖರ ಮಾಹಿತಿ ಪಡೆಯಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು ಅವರು,ಉಕ್ರೇನ್ ನಿಂದ ಹಲವಾರು ಕನ್ನಡಿಗರನ್ನು ಕರೆತರಲಾಗಿದೆ.ಖರಕಾಯ್, ಕೀವ್ ನಲ್ಲಿ ಹೊರಬರಲಾರದ ಪರಿಸ್ಥಿತಿಯೂ ಇದೆ. ಸಿಲುಕಿಕೊಂಡವರನ್ನು ಪತ್ತೆ ಹಚ್ಚಲು ರಾಯಭಾರಿ ಕಚೇರಿಯವರೂ ಕಾರ್ಯನಿರತರಾಗಿದ್ದಾರೆ. ದಾಳಿ ಕಡಿಮೆಯಾದ ಕೂಡಲೇ ಸಂಪರ್ಕ ಸಾಧಿಸಲಾಗುವುದು ಎಂದು ಹೇಳಿದ್ದಾರೆ. ನಿನ್ನೆಯೂ ಕೇಂದ್ರ ವಿದೇಶಾಂಗ ಸಚಿವರೊಂದಿಗೆ …
Read More »
admin
March 5, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 233 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 648 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣ ಸಂಖ್ಯೆ 3,469ಕ್ಕೆ ಇಳಿಕೆಯಾಗಿದೆ. ರಾಜ್ಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ 6 ಮಂದಿ ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ. ಬೆಂಗಳೂರು ನಗರ 2, ಧಾರವಾಡ, ಹಾಸನ, ತುಮಕೂರು, ವಿಜಯಪುರ ಜಿಲ್ಲೆಯಲ್ಲಿ ತಲಾ ಒಂದು ಮರಣ ಪ್ರಕರಣ ದಾಖಲಾಗಿದೆ. ಆ ಮೂಲಕ ಮರಣ ದರ ಶೇ. 2.57 ಹಾಗೂ ಪಾಸಿಟಿವ್ ದರ ಶೇ. 0.48ಕ್ಕೆ ಇಳಿಕೆಯಾಗಿದೆ.
Read More »
admin
March 4, 2022
Breaking News, ಬೆಂಗಳೂರು
*ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಡಾ.ಎಸ್.ವಿ.ಪಾಟೀಲ ಕೃಷಿ ಸಂಶೋಧನೆ,ತರಬೇತಿ ಹಾಗೂ ರೈತರ ಶ್ರೇಯೋಭಿವೃದ್ಧಿ ಪೀಠ ಸ್ಥಾಪನೆ. *ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿ ನೀರು ಬಳಸಿಕೊಂಡು ಉತ್ತರ ಕರ್ನಾಟಕದ ಐದು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆಗೆ ಯೋಜನೆ. *ಕೇಂದ್ರ ಸರ್ಕಾರದ ನೆರವಿನೊಂದಿಗೆ ಹುಬ್ಬಳ್ಳಿಯ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆಯ ಸಾಮರ್ಥ್ಯವನ್ನು 50 ಹಾಸಿಗೆಗಳಿಂದ 100 ಹಾಸಿಗೆಗಳಿಗೆ ಹೆಚ್ಚಿಸುವುದು. *ಮಹಾದಾಯಿ ನ್ಯಾಯಾಧೀಕರಣ ತೀರ್ಪಿನನ್ವಯ ಹಂಚಿಕೆಯಾದ ನೀರಿನ ಬಳಕೆಗೆ ರಾಜ್ಯದ ಕಳಸಾ ಬಂಡೂರಿ ನಾಲಾ …
Read More »
admin
March 4, 2022
Breaking News, ಬೆಂಗಳೂರು
ಮೇಕೆದಾಟು ಯೋಜನೆಗೆ 1000 ಕೋಟಿ ರೂ. ► ಎತ್ತಿನ ಹೊಳೆ ಯೋಜನೆಗೆ 3000 ಕೋಟಿ ರೂ. ► ಭದ್ರಾ ಮೇಲ್ದಂಡೆಗೆ 3000 ಕೋಟಿ ರೂ. ► ಕಳಸಾ ಬಂಡೂರಿ ನಾಲಾ ತಿರುವು ಯೋಜನೆಗೆ 1000 ಕೋಟಿ ರೂ. ► ಕಾಸರಗೋಡು, ಅಕ್ಕಲಕೋಟೆಯಲ್ಲಿ ಕನ್ನಡ ಭವನ ನಿರ್ಮಾಣ ► ಆಶಾ ಕಾರ್ಯಕರ್ತೆಯರಿಗೆ ಗೌರವಧನ 1000 ರೂ.ಹೆಚ್ಚಳ ►ಕಟ್ಟಡ ಕಾರ್ಮಿಕರಿಗೆ ರಿಯಾಯಿತಿ ಬಸ್ ಪಾಸ್ ಯೋಜನೆ ರಾಜ್ಯಾದ್ಯಂತ ವಿಸ್ತರಣೆ ►ಕಟ್ಟಡ ಕಾರ್ಮಿಕರಿಗಾಗಿ 100 …
Read More »
admin
March 4, 2022
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ 7 ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆ ಮಾಡಲಾಗುವುದು. ಐಐಟಿ ಮಾದರಿಯಲ್ಲಿ ಕೆಐಟಿ ಸ್ಥಾಪನೆ ಮಾಡಲಾಗುವುದು. ಉನ್ನತ ಶಿಕ್ಷಣಕ್ಕೆ ಉಚಿತ ಆನ್ಲೈನ್ ಕೋಚಿಂಗ್ ಯೋಜನೆ ನೀಡಲಾಗುವುದು ಎಂದು ಶಿಕ್ಷಣ ಕ್ಷೇತ್ರದ ವಿಶೇಷ ಯೋಜನೆಗಳ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ಸಿಎಂ ಬೊಮ್ಮಾಯಿ ಇಂದು (ಮಾರ್ಚ್ 4) ಚೊಚ್ಚಲ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗಳನ್ನಾಗಿ ರಾಜ್ಯದ ಏಳು ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳ …
Read More »