Breaking News

ಬೆಂಗಳೂರು

ಇಂದು ಮೇಕೆದಾಟು ಪಾದಯಾತ್ರೆ ಸಮಾರೋಪ ಸಮಾರಂಭ

ಬೆಂಗಳೂರು: ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಕೈಗೊಂಡಿರುವ ಪಾದಯಾತ್ರೆ ಸಮಾರೋಪ ಸಮಾರಂಭ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 9 ಗಂಟೆಗೆ ಅರಮನೆ ಮೈದಾನದಿಂದ ಪಾದಯಾತ್ರೆ ಆರಂಭವಾಗಲಿದ್ದು, ಕಾವೇರಿ ಚಿತ್ರಮಂದಿರ, ಸ್ಯಾಂಕಿ ಟ್ಯಾಂಕ್, ಮಲ್ಲೇಶ್ವರಂ 18ನೇ ಕ್ರಾಸ್, ಮಾರ್ಗೋಸಾ ರಸ್ತೆ, ಕೆಸಿ ಜನರಲ್ ಆಸ್ಪತ್ರೆ, ಶೇಷಾದ್ರಿಪುರಂ ಲಿಂಕ್ ರಸ್ತೆ, ರಾಜೀವ್ ಗಾಂಧಿ ಪ್ರತಿಮೆ, ಕಾಟನ್ ಪೇಟೆ ಮುಖ್ಯರಸ್ತೆ, ಬ್ರಿಯಾಂಡ್ ಸರ್ಕಲ್, ಈದ್ಗಾ ಮೈದಾನ ಮಾರ್ಗವಾಗಿ ನ್ಯಾಷನಲ್ ಕಾಲೇಜು ಮೈದಾನಕ್ಕೆ …

Read More »

ತೃತೀಯ ಲಿಂಗಿಗಳಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ

ಬೆಂಗಳೂರು : ತೃತೀಯ ಲಿಂಗಿಗಳಿಗೆ ರಾಜ್ಯ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಹುದ್ದೆಗಳ ನೇಮಕಾತಿ ವೇಳೆ ತೃತೀಯ ಲಿಂಗಿಗಳಿಗೆ ಎಲ್ಲ ವರ್ಗಗಳಲ್ಲಿ ಶೇ. 1 ರಷ್ಟು ಸಮತಲ ಮೀಸಲು ಕಲ್ಪಿಸಿ ರೂಪಿಸಲಾಗಿರುವ ನಿಯಮವನ್ನು ಅಳವಡಿಸಿಕೊಳ್ಳುವಂತೆ ರಾಜ್ಯದ ಪ್ರಾಧಿಕಾರಗಳು ಹಾಗೂ ನಿಗಮ ಮಂಡಳಿಗಳಿಗೆ ಕೋರಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಮಾಹಿತಿ ನೀಡಿದೆ. ರಾಜ್ಯ ಸರ್ಕಾರ, ಕರ್ನಾಟಕ ನಾಗರಿಕ ಸೇವಾ ನೇಮಕಾತಿ ನಿಯಮ 1977 ರ ನಿಯಮ 9 ಕ್ಕೆ …

Read More »

ನವೀನ್ ಪಾರ್ಥಿವ ಶರೀರವನ್ನು ಮರಳಿ ತರಲು ಪ್ರಯತ್ನಗಳು ನಡೆಯುತ್ತಿವೆ : ಬೊಮ್ಮಾಯಿ

ಬೆಂಗಳೂರು: ಹಾವೇರಿ ಜಿಲ್ಲೆಯ ಚಳಗೇರಿ ಗ್ರಾಮದ ನವೀನ್ ಜ್ಞಾನಗೌಡ ಎಂಬ ವಿದ್ಯಾರ್ಥಿ ಮೆಟ್ರೋ ನಿಲ್ದಾಣದಿಂದ ಹೊರ ಬರುವಾಗ ಶೆಲ್ ದಾಳಿಗೆ ಬಲಿಯಾಗಿದ್ದಾರೆ.ಮೃತ ನವೀನ್ ಪಾರ್ಥಿವ ಶರೀರವನ್ನು ಮರಳಿ ತರಲು ಪ್ರಯತ್ನಗಳು ನಡೆಯುತ್ತಿವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಸಿಎಂ ಬೊಮ್ಮಾಯಿ ಅವರು ನವೀನ್ ತಂದೆ ಶೇಖರ್ ಗೌಡರ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು. ಬೊಮ್ಮಾಯಿ ಕುಟುಂಬದವರು ನನಗೆ ಪರಿಚಿತರು ಎಂದರು. ಹಾವೇರಿ ಸಿಎಂ ತವರು ಜಿಲ್ಲೆಯಾಗಿದೆ. ಕುಟುಂಬದವರೊಂದಿಗೆ …

Read More »

ಉಕ್ರೇನ್‌ನಿಂದ 55 ವಿದ್ಯಾರ್ಥಿಗಳು ಕರ್ನಾಟಕಕ್ಕೆ ವಾಪಸ್

ಬೆಂಗಳೂರು: ‘ಆಪರೇಷನ್ ಗಂಗಾ’ ಕಾರ್ಯಾಚರಣೆ ಅಡಿಯಲ್ಲಿ ಯುದ್ಧಪೀಡಿತ ಉಕ್ರೇನ್‌ನಿಂದ 55 ಕರ್ನಾಟಕದ ವಿದ್ಯಾರ್ಥಿಗಳು ವಾಪಸ್ ಆಗಿದ್ದಾರೆ. ಹಾವೇರಿ ಮೂಲದ ನವೀನ್ ಶೇಖರಪ್ಪ ಗ್ಯಾನಗೌಡರ್ ಎಂಬ ವೈದ್ಯಕೀಯ ವಿದ್ಯಾರ್ಥಿ ಮೃತಪಟ್ಟಿದ್ದಾರೆ. ಕರ್ನಾಟಕ ಮೂಲದ 694 ವಿದ್ಯಾರ್ಥಿಗಳು ಉಕ್ರೇನ್‌ನ ವಿವಿಧ ಭಾಗಗಳಲ್ಲಿ ಸಿಲುಕಿದ್ದಾರೆ. ಮಂಗಳವಾರದ ತನಕ 8 ಬ್ಯಾಚ್‌ಗಳಲ್ಲಿ 55 ವಿದ್ಯಾರ್ಥಿಗಳು ರಾಜ್ಯಕ್ಕೆ ಮರಳಿದ್ದಾರೆ. ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ಈ ಕುರಿತು ಮಾಹಿತಿ ನೀಡಿದೆ.

Read More »

ಕಾರಜೋಳಗೆ ತಿರುಗೇಟು ನೀಡಿದ ಡಿಕೆಶಿ

ಬೆಂಗಳೂರು: ಕಾಂಗ್ರೆಸ್‌ ಪಾದಯಾತ್ರೆಯಿಂದ ಮೇಕೆದಾಟು ಯೋಜನೆಗೆ ಸಂಬಂಧಿಸಿದ ಸುಪ್ರೀಂಕೋರ್ಟ್‌ ಹೋರಾಟದಲ್ಲಿ ರಾಜ್ಯಕ್ಕೆ ಹಿನ್ನಡೆಯಾಗಲಿದೆ ಎಂದಿರುವ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರಿಗೆ ಹೋರಾಟ ಮಾಡಿ ಗೊತ್ತಿಲ್ಲ.ಹಾಗಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಕುಡಿಯುವ ನೀರಿನ ಯೋಜನೆಗೆ ಯಾವುದೇ ಅಡ್ಡಿ ಇಲ್ಲ ಎಂದು ಮುಖ್ಯಮಂತ್ರಿಗಳೇ ಹೇಳಿದ್ದಾರೆ. ನಾನೂ ಜಲಸಂಪನ್ಮೂಲ ಸಚಿವನಾಗಿದ್ದೆ. ಅಲ್ಪ ಸ್ವಲ್ಪ ಪರಿಜ್ಞಾನ ಇದೆ. ಗೋವಿಂದ ಕಾರಜೋಳ …

Read More »

ಕಾಂಗ್ರೆಸ್‌- ಜೆಡಿಎಸ್‌ ಪಕ್ಷದ ಅನೇಕ ಮುಖಂಡರು ನಮ್ಮ ಸಂಪರ್ಕದಲ್ಲಿದ್ದಾರೆ : ಬೊಮ್ಮಾಯಿ

ಬೆಂಗಳೂರು: ಕಾಂಗ್ರೆಸ್‌- ಜೆಡಿಎಸ್‌ ಇವೆರಡೂ ಪಕ್ಷಗಳ ಜನಹಿತ ಬಯಸುವ ಅನೇಕ ಮುಖಂಡರು ನಮ್ಮ ಸಂಪರ್ಕದಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಬೇರೆ ಜಿಲ್ಲೆಗಳ ಇನ್ನಷ್ಟು ಮುಖಂಡರು ಬಿಜೆಪಿ ಸೇರಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ ದೇವನಹಳ್ಳಿಯ ಮಾಜಿ ಶಾಸಕರಾದ ಪಿಳ್ಳಮುನಿಶಾಮಪ್ಪ ಮತ್ತು ಅವರ ಬೆಂಬಲಿಗರ ಹಾಗೂ ಕಾಂಗ್ರೆಸ್‌ ಮುಖಂಡರ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೇವನಹಳ್ಳಿಯ ಮಾಜಿ ಶಾಸಕರಾದ ಪಿಳ್ಳಮುನಿಶಾಮಪ್ಪ ಅವರ ಸೇರ್ಪಡೆಯಿಂದ …

Read More »

ಉಕ್ರೇನ್ ನಲ್ಲಿ ನಿಧನ ಹೊಂದಿದ ನವೀನ್ ಗೆ ಸಂತಾಪ ಸೂಚಿಸಿದ ಎಚ್ ಡಿಕೆ

ಬೆಂಗಳೂರು: ಹಾವೇರಿ ಜಿಲ್ಲೆಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್​ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಟ್ವೀಟ್​ ಮಾಡಿರುವ ಹೆಚ್​ಡಿಕೆ, ಉಕ್ರೇನ್‌ ಮೇಲೆ ರಷ್ಯಾ ನಡೆಸುತ್ತಿರುವ ದಾಳಿಯಲ್ಲಿ ಹಾವೇರಿ ಜಿಲ್ಲೆ ಚಳಗೇರಿಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಬಲಿ ಆಗಿರುವುದು ನನಗೆ ತೀವ್ರ ಆಘಾತ ಉಂಟು ಮಾಡಿದೆ.ಯುದ್ಧ ದಿಂದ ತತ್ತರಿಸಿರುವ ಖಾರ್ಕೀವ್ ನಗರದಲ್ಲಿದ್ದ ಆ ವಿದ್ಯಾರ್ಥಿ ಶೆಲ್ ದಾಳಿಯಲ್ಲಿ ಅಸುನೀಗಿದ್ದಾರೆಂಬ ಸುದ್ದಿ ಶಿವರಾತ್ರಿ ದಿನ ಬರಸಿಡಿಲಿ …

Read More »

ವಿಭಿನ್ನವಾಗಿ ಶಿವರಾತ್ರಿ ಹಬ್ಬದ ಶುಭಾಶಯ ಕೋರಿದ ಕಬ್ಜ ಚಿತ್ರತಂಡ

ಬೆಂಗಳೂರು: ಪ್ಯಾನ್ ಇಂಡಿಯಾ ಮಟ್ಟದಲ್ಲಿ ತಯಾರಾಗುತ್ತಿರುವ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ‘ಕಬ್ಜ’ ಚಿತ್ರವು ತನ್ನ ಮೇಕಿಂಗ್​ನಿಂದಲೇ ದೊಡ್ಡ ಮಟ್ಟದಲ್ಲಿ ಗಮನ ಸೆಳೆದಿದೆ. ಕಳೆದ ಒಂದು ವರ್ಷದಿಂದಲೂ ಚಿತ್ರದ ಶೂಟಿಂಗ್​ ನಡೆಯುತ್ತಲೇ ಇದ್ದು, ಯಾವಾಗ ಪೂರ್ಣಗೊಳ್ಳುತ್ತದೆ ಎಂಬ ಎಂಬ ಸುಳಿವು ಕೂಡ ಇಲ್ಲ. ಇನ್ನು ಕಬ್ಜ ಚಿತ್ರತಂಡದ ಒಂದು ವಿಶೇಷತೆಯ ಬಗ್ಗೆ ನಾವಿಲ್ಲಿ ಹೇಳಲೇ ಬೇಕು. ಯಾವುದೇ ಹಬ್ಬ-ಹರಿದಿನ ಅಥವಾ ವಿಶೇಷ ಸಂದರ್ಭ ಬಂದಾಗ ಯಾರೇ ಮಿಸ್​ ಮಾಡಿಕೊಂಡರು ಕಬ್ಜ …

Read More »

ನವೀನ್ ಮರಣದ ಕುರಿತು ಸಿಎಂ ಭಾವುಕ

ಬೆಂಗಳೂರು: ಉಕ್ರೇನ್ ನ ಖಾರ್ಕಿವ್ ನಲ್ಲಿ ನಡೆದ ಶೆಲ್ ದಾಳಿಯಲ್ಲಿ ನವೀನ್ ಮೃತಪಟ್ಟಿರುವ ಸಂಗತಿ ವಿಷಾದಕರ. ನವೀನ್ ಸಾವು ಬಹಳ ದುಃಖ ತರಿಸಿದೆ. 2-3 ದಿನಗಳಲ್ಲಿ ಮೃತದೇಹವನ್ನು ತರಿಸುವ ಬಗ್ಗೆ ಚರ್ಚೆ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಶಂಕರ್ ಗೌಡ ಅವರಿಗೆ ಇಬ್ಬರು ಮಕ್ಕಳು. ಒಬ್ಬ ಮಗ ಬೆಂಗಳೂರಿನಲ್ಲಿ ಪಿಎಸ್ ಡಿ ಓದುತ್ತಿದ್ದಾರೆ. ನವೀನ್ ಉಕ್ರೇನ್ ನಲ್ಲಿ ಎಂಬಿಬಿಎಸ್ ಓದುತ್ತಿದ್ದರು. ಬೆಳಿಗ್ಗೆ ತಿಂಡಿ ತರಲು ಹೋದಾಗ ನಡೆದ …

Read More »

ಉಕ್ರೇನ್ ದಾಳಿಯಲ್ಲಿ ಕರ್ನಾಟಕದ ವಿದ್ಯಾರ್ಥಿ ಬಲಿ

ಬೆಂಗಳೂರು: ಉಕ್ರೇನ್ ನ ಖಾರ್ಕಿವ್ ನಲ್ಲಿ ನಡೆದ ಶೆಲ್ ದಾಳಿಯಲ್ಲಿ ನವೀನ್ ಮೃತಪಟ್ಟಿರುವ ಸಂಗತಿ ವಿಷಾದಕರ. ಶಂಕರ್ ಗೌಡ ಅವರಿಗೆ ಇಬ್ಬರು ಮಕ್ಕಳು. ಒಬ್ಬ ಮಗ ಬೆಂಗಳೂರಿನಲ್ಲಿ ಪಿಎಸ್ ಡಿ ಓದುತ್ತಿದ್ದಾರೆ. ನವೀನ್ ಉಕ್ರೇನ್ ನಲ್ಲಿ ಎಂಬಿಬಿಎಸ್ ಓದುತ್ತಿದ್ದರು. ಬೆಳಿಗ್ಗೆ ತಿಂಡಿ ತರಲು ಹೋದಾಗ ನಡೆದ ಶೆಲ್ ದಾಳಿಯಲ್ಲಿ ನವೀನ್ ಬಲಿಯಾಗಿದ್ದಾರೆ.

Read More »