admin
March 1, 2022
Breaking News, ಬೆಂಗಳೂರು
ಬೆಂಗಳೂರು: ಕಾಂಗ್ರೆಸ್ ಪಕ್ಷದಿಂದ ಮೇಕೆದಾಟು ಕುಡಿಯುವ ನೀರಿಗೆ ಆಗ್ರಹಿಸಿ ನಡೆಸುತ್ತಿರುವಂತ ಪಾದಯಾತ್ರೆ ಇಂದಿಗೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ಕೆಂಗೇರಿಯಿಂದ ಆರಂಭಗೊಂಡಿರುವಂತ ಮೂರನೇ ದಿನದ ಪಾದಯಾತ್ರೆ, ಇಂದು ಬೆಂಗಳೂರು ತಲುಪಲಿದೆ. ಈ ಹಿನ್ನಲೆಯಲ್ಲಿ ಮೈಸೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಕೂಡ ಉಂಟಾಗಿದೆ. ಹೀಗಾಗಿಯೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಬೆಂಗಳೂರು ಜನತೆಯನ್ನು ಕ್ಷಮೆಯಾಚಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ನೀರಿಗಾಗಿ ಆಗ್ರಹಿಸಿ ನಡೆಯುತ್ತಿರುವಂತ ಪಾದಯಾತ್ರೆಯಿಂದಾಗಿ ಸಂಚಾರ ದಟ್ಟಣೆ ಮೈಸೂರು ರಸ್ತೆ, …
Read More »
admin
March 1, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ 2 ಕಿ. ಮೀ. ವ್ಯಾಪ್ತಿಯಲ್ಲಿ ಮಾರ್ಚ್ 4 ರಿಂದ 30ರ ತನಕ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಸಮಯದಲ್ಲಿ ಪ್ರತಿಭಟನೆ ನಡೆಸುವುದು ನಿರ್ಬಂಧಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಮಾರ್ಚ್ 4 ರಿಂದ 30ರ ತನಕ ಬೆಳಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯ ತನಕ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಮಾರ್ಚ್ 4ರಂದು ಹಣಕಾಸು ಸಚಿವರು …
Read More »
admin
March 1, 2022
Breaking News, ಬೆಂಗಳೂರು
ಬೆಂಗಳೂರು : ಭಾರತದ ರಸ್ತೆಗಳ ಗುಣಮಟ್ಟವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸುವ ಗುರಿ ಹೊಂದಿದ್ದು 2024ರೊಳಗೆ ಕರ್ನಾಟಕದ ಎಲ್ಲ ರಸ್ತೆಗಳ ಗುಣಮಟ್ಟವನ್ನು ಅಮೆರಿಕ ಮಾದರಿಗೆ ಎತ್ತರಿಸಲಾಗುವುದು ಎಂದು ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ. ಬೆಳಗಾವಿ, ಹುಬ್ಬಳ್ಳಿ ಮತ್ತು ಮಂಗಳೂರುಗಳಲ್ಲಿ ಸೋಮವಾರ ಒಂದೇ ದಿನದಲ್ಲಿ ನಡೆದ ಪ್ರತ್ಯೇಕ ಸಮಾರಂಭಗಳಲ್ಲಿ ಅವರು ಒಟ್ಟಾರೆ ರಾಜ್ಯದ ವಿವಿಧೆಡೆ ನಡೆಯಲಿರುವ .19,930 ಕೋಟಿ ವೆಚ್ಚದ 46 ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳಿಗೆ ಚಾಲನೆ ನೀಡಿ …
Read More »
admin
March 1, 2022
Breaking News, ಬೆಂಗಳೂರು
ಪುನೀತ್ ರಾಜ್ಕುಮಾರ್ ಅಭಿಮಾನಿಗಳಿಗೆ ಇಂದು ಮಾರ್ಚ್ 1 ವಿಶೇಷ ದಿನ.ಅವರು ಹೀರೋ ಆಗಿ ನಟಿಸಿದ ಕೊನೆಯ ಸಿನಿಮಾ ‘ಜೇಮ್ಸ್’ನ ಲಿರಿಕಲ್ ಸಾಂಗ್, ‘ಟ್ರೇಡ್ಮಾರ್ಕ್. ಬೆಳಗ್ಗೆ 11:11ಕ್ಕೆ ರಿಲೀಸ್ ಆಗುತ್ತಿದೆ. ಈ ವಿಚಾರವನ್ನು ಈ ಮೊದಲು ಚಿತ್ರತಂಡ ಘೋಷಣೆ ಮಾಡಿತ್ತು. ಹೀಗಾಗಿ, ಅಭಿಮಾನಿಗಳು ಈ ಸಾಂಗ್ ಕೇಳೋಕೆ ಕಾದು ಕೂತಿದ್ದಾರೆ. ಈಗಾಗಲೇ ಟೀಸರ್ ಮೂಲಕ ಈ ಸಿನಿಮಾ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದೆ. ಈಗ ಚಿತ್ರದ ಹಾಡು ಹೇಗಿರಲಿದೆ ಎಂಬುದನ್ನು ನೋಡೋಕೆ ಅಭಿಮಾನಿಗಳು …
Read More »
admin
February 28, 2022
Breaking News, ಬೆಂಗಳೂರು
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಅವರ ತಾಯಿ ಪಟ್ಟಮ್ಮಾಳ್ ವೀರಸ್ವಾಮಿ ಸೋಮವಾರ ನಿಧನರಾದರು. ಪಟ್ಟಮ್ಮಾಳ್ ಅವರಿಗೆ 83 ವರ್ಷ ವಯಸ್ಸಾಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಪಟ್ಟಮ್ಮಾಳ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಬೆಳಗ್ಗೆ ಕೊನೆಯುಸಿರೆಳೆದರು.
Read More »
admin
February 28, 2022
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಫೆಬ್ರವರಿ 27) ಹೊಸದಾಗಿ 366 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 39,40,795 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 38,94,333 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 17 ಮಂದಿ ಮೃತಪಟ್ಟಿದ್ದಾರೆ. ಅದರಂತೆ, ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 39,936 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 6,488 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು …
Read More »
admin
February 26, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಇಂದು 514 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 19 ಜನ ಸೋಂಕಿತರು ಮೃತಪಟ್ಟಿದ್ದಾರೆ. 1073 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 39,40,429 ಕ್ಕೆ ಏರಿಕೆಯಾಗಿದೆ. ಇದುವರೆಗೆ 39,919 ಜನ ಸೋಂಕಿತರು ಮೃತಪಟ್ಟಿದ್ದಾರೆ. 38,93,532 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 6940 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 0.84 ರಷ್ಟು ಇದೆ.
Read More »
admin
February 26, 2022
Breaking News, ಬೆಂಗಳೂರು
ಬೆಂಗಳೂರು : ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇದೀಗ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ನೌಕರರ ಸಂಘ ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಮಾರ್ಚ್ 4ರಂದು ರಾಜ್ಯಾದ್ಯಂತ ಶಾಲಾ-ಕಾಲೇಜುಗಳನ್ನ ಬಂದ್ ಮಾಡಿ, ಮೆಜೆಸ್ಟಿಕ್ನಿಂದ ವಿಧಾನಸೌಧದ ತನಕ ಬೃಹತ್ ರ್ಯಾಲಿ ನಡೆಸಲಿದ್ದಾರೆ. ಅರ್ನಿದಿಷ್ಟ ಅಹೋರಾತ್ರಿ ಧರಣಿಗೂ ಸಿದ್ದವಾಗಿರುವುದಾಗಿ ರಾಜ್ಯಾಧ್ಯಕ್ಷ ಗೋಪಿನಾಥ್ ತಿಳಿಸಿದ್ದಾರೆ. ಇಂದು ಪ್ರೆಸ್ ಕ್ಲಬ್ನಲ್ಲಿ ಮಾತಾನಡಿದ ಅವರು, ಕಳೆದ 2014ರಿಂದಲ್ಲೂ ಅನೇಕ ಮನವಿಯನ್ನ ಸಲ್ಲಿಸಿದ್ದರೂ, ಹೋರಾಟಗಳನ್ನ ನಡೆಸಿದ್ದರೂ ಸರ್ಕಾರ ನಿರ್ಲಕ್ಷ್ಯವಹಿಸುತ್ತಿದೆ ಎಂದು ಆಕ್ರೋಶ …
Read More »
admin
February 26, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣ ಮತ್ತು ಪಾಸಿಟಿವಿಟಿ ದರದಲ್ಲಿ ತುಸು ಏರಿಕೆ ದಾಖಲಾಗಿದೆ. ಶುಕ್ರವಾರ 628 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 15 ಮಂದಿ ಮರಣವನ್ನಪ್ಪಿದ್ದಾರೆ. 1,349 ಮಂದಿ ಚೇತರಿಸಿಕೊಂಡಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 7,518ಕ್ಕೆ ಕುಸಿದಿದೆ. ಪಾಸಿಟಿವಿಟಿ ದರ ಶೇ.0.92ಕ್ಕೆ ಏರಿದೆ. ಜ.17ರಂದು 14 ಮಂದಿ ಮರಣವನ್ನಪ್ಪಿದ ಬಳಿಕದ ಒಂದು ದಿನದ ಕನಿಷ್ಠ ಸಾವು ಶುಕ್ರವಾರ ವರದಿಯಾಗಿದೆ. ಬೆಂಗಳೂರು ನಗರದಲ್ಲಿ 346 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಬೆಳಗಾವಿ 30, ಚಿತ್ರದುರ್ಗ …
Read More »
admin
February 26, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಹೊಸ ಪಿಂಚಣಿ ಯೋಜನೆಯನ್ನು ಹಿಂಪಡೆದು, ಹಳೆಯ ನಿಯಮದಂತೆ ಪಿಂಚಣಿ ಸೌಲಭ್ಯ ಕಲ್ಪಿಸಬೇಕು ಎಂಬ ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಗೆ ಸಿಎಂ ಬಸವರಾಜ ಬೊಮ್ಮಾಯಿ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಈ ಕುರಿತು ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಜಾರಿಗೊಳಿಸಿರುವ ಹೊಸ ಪಿಂಚಣಿ ಯೋಜನೆಯನ್ನು ಹಿಂಪಡೆದು, ಹಳೆಯ ನಿಯಮದಂತೆ ಪಿಂಚಣಿ ಸೌಲಭ್ಯ ಕಲ್ಪಿಸಬೇಕು …
Read More »