admin
February 26, 2022
Breaking News, ಬೆಂಗಳೂರು
ಬೆಂಗಳೂರು: ಉಕ್ರೇನ್ʼನಲ್ಲಿ ಸಿಲುಕಿರುವ ರಾಜ್ಯದ ವಿದ್ಯಾರ್ಥಿಗಳು, ನಾಗರೀಕರನ್ನು ಸುರಕ್ಷಿತವಾಗಿ ಏರ್ʼಲಿಫ್ಟ್ ಮಾಡಿ ರಾಜ್ಯಕ್ಕೆ ಕರೆತೆರಬೇಕು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಮತ್ತು ಕೇಂದ್ರ ಸರಕಾರಗಳನ್ನು ಒತ್ತಾಯಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ( HD Kumaraswamy ), ‘ಕೇಂದ್ರ ಸರಕಾರವು ಎಲ್ಲ ರಾಜತಾಂತ್ರಿಕ ಮಾರ್ಗಗಳನ್ನು ಹುಡುಕಿ ಕನ್ನಡಿಗರನ್ನು ವಾಪಸ್ ಕರೆತರಬೇಕು’ ಎಂದು ಹೇಳಿದ್ದಾರೆ. ಹೆಬ್ಬಾಳ ವಿಧಾನಸಭೆ ಕ್ಷೇತ್ರದಲ್ಲಿಂದು ಜಾತ್ಯತೀತ …
Read More »
admin
February 26, 2022
Breaking News, ಬೆಂಗಳೂರು
ಬೆಂಗಳೂರು: ಕೊರೋನಾ ಕಾರಣದಿಂದ ಅರ್ಧಕ್ಕೆ ಮೊಟಕುಗೊಳಿಸಿದ್ದ ಮೇಕೆದಾಟು ಪಾದಯಾತ್ರೆ ಫೆ.27ರಂದು ರಾಮನಗರದಿಂದ ಪುನರ್ ಆರಂಭಗೊಳ್ಳುತ್ತಿದ್ದು, ಮಾ.1ರಿಂದ 3ರ ವರೆಗೆ ಮೂರು ದಿನ ಬೆಂಗಳೂರು ನಗರ ಭಾಗದಲ್ಲಿ ಬೃಹತ್ ಪಾದಯಾತ್ರೆ ನಡೆಯಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಫೆ.28ರ ವೇಳೆಗೆ ಪಾದಯಾತ್ರೆ ಕೆಂಗೇರಿ ತಲುಪಲಿದೆ. ಬಳಿಕ ಬೆಂಗಳೂರಿನಲ್ಲೇ 5 ದಿನ ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಮಾ.4ರಂದು ಬಜೆಟ್ ಅಧಿವೇಶನ ಪ್ರಾರಂಭವಾಗುವ …
Read More »
admin
February 26, 2022
Breaking News, ಬೆಂಗಳೂರು
ಬೆಂಗಳೂರು: 2013ರ ವಿಧಾನಸಭಾ ಚುನಾವಣೆ ವೇಳೆ ಕಲಬುರಗಿಯಲ್ಲಿ ಪ್ರಚಾರದಲ್ಲಿ ಪಾಲ್ಗೊಂಡಿದ್ದಾಗ ನಗದು ಪತ್ತೆ ಯಾಗಿದ್ದ ಪ್ರಕರಣದಲ್ಲಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಹಾಗೂ ಪಕ್ಷದ ಮುಖಂಡ ಸತೀಶ್‌ಚಂದ್ರ ಮಿಶ್ರಾ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ತಮ್ಮ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಮಾಯಾವತಿ ಮತ್ತು ಸತೀಶ್ ಚಂದ್ರ ಮಿಶ್ರಾ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ. ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶವನ್ನು ಮಾಡಿದೆ. …
Read More »
admin
February 26, 2022
Breaking News, ಬೆಂಗಳೂರು
ಬೆಂಗಳೂರು: ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯದಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ವಕೀಲ ಕೆ ಎನ್ ಜಗದೀಶ್ ಕುಮಾರ್ ಅಲಿಯಾಸ್ ಜಗದೀಶ್ ಮಹದೇವ್ ಅವರ ವಿರುದ್ಧ ಪ್ರಕರಣಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿ ʼಭ್ರಷ್ಟಾಚಾರದ ವಿರುದ್ಧ ನಾವುʼ ವೇದಿಕೆ ಅಡಿ ಪ್ರತಿಭಟನೆ ನಡೆಸಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು. ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ ಪಿ ರಂಗನಾಥ್ ಮತ್ತು ಇತರರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ …
Read More »
admin
February 26, 2022
Breaking News, ಬೆಂಗಳೂರು
ಬೆಂಗಳೂರು: ಯುದ್ಧಪೀಡಿತ ಉಕ್ರೇನ್‌ನಲ್ಲಿ ಇಲ್ಲಿಯವರೆಗೂ ರಾಜ್ಯದ 346 ವಿದ್ಯಾರ್ಥಿಗಳು ಸಿಲುಕಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ನೋಡಲ್ ಅಧಿಕಾರ ಮನೋಜ್ ರಂಜನ್ ತಿಳಿಸಿದ್ದಾರೆ. ಉಕ್ರೇನ್‌ನಲ್ಲಿರುವವರ ಬಗ್ಗೆ ಶುಕ್ರವಾರ ಮಧ್ಯಾಹ್ನ 3 ಗಂಟೆವರೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಕರೆಗಳು ಬಂದಿವೆ. ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಉಕ್ರೇನ್‌ಗೆ ತೆರಳಿರುವವರ ವಿದ್ಯಾರ್ಥಿಗಳ ತಂದೆ-ತಾಯಿ, ಪೋಷಕರು, ಸಂಬಂಧಿಕರು, ಸ್ನೇಹಿತರ ಬಳಗದಿಂದ ಕರೆಗಳು ಬರುತ್ತಿವೆ. ಆ ಆಧಾರದಲ್ಲಿ ಉಕ್ರೇನ್‌ನಲ್ಲಿ ಎಷ್ಟು ವಿದ್ಯಾರ್ಥಿಗಳು ಇರಬಹುದು …
Read More »
admin
February 25, 2022
Breaking News, ಬೆಂಗಳೂರು
ಬೆಂಗಳೂರು: ಹಿಜಾಬ್ ವಿವಾದದ ಕುರಿತಂತೆ ನ್ಯಾಯಾಧೀಶರನ್ನು ನಿಂಧಿಸಿ, ಫೇಸ್ ಬುಕ್ ನಲ್ಲಿ ಮಾಡಿದ ಆರೋಪದಲ್ಲಿ ನ್ಯಾಯಾಂಗ ನಿಂಧನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಂತ ನಟ ಚೇತನ್ ಗೆ ಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇಂದು ಆ ದಿನಗಳ ಖ್ಯಾತಿಯ ನಟ ಚೇತನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿದಂತ ನಗರದ 32ನೇ ಎಸಿಎಂಎಂ ಕೋರ್ಟ್ ನ ನ್ಯಾಯಾದೀಶ ಮಧುಕರ್ ನೆಲಕುಂದ್ರೆ ಅವರು, ನಟ ಚೇತನ್ ಗೆ 1 ಲಕ್ಷ …
Read More »
admin
February 25, 2022
Breaking News, ಬೆಂಗಳೂರು
ಬೆಂಗಳೂರು : ಉಕ್ರೇನ್-ರಷ್ಯಾ ಬಿಕ್ಕಟ್ಟು ತೀವ್ರವಾಗಿದ್ದು, ಉಕ್ರೇನ್‌ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ವೆಬ್ ಪೋರ್ಟಲ್ ಅನ್ನು ಅಭಿವೃದ್ಧಿಪಡಿಸಿದೆ. ಈ ಕುರಿತು ವಿಪತ್ತು ನಿರ್ವಹಣಾ ಪ್ರಾಧಿಕಾರದ ಮನೋಜ್ ರಾಜನ್ ಮಾಹಿತಿ ನೀಡಿದ್ದು, ಉಕ್ರೇನ್‌ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ಮಾಹಿತಿ ಸಂಗ್ರಹಿಸುವ ನಿಟ್ಟಿನಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ http://ukraine.karnataka.tech ವೆಬ್ ಪೋರ್ಟಲ್ ಅನ್ನು ಅಭಿವೃದ್ಧಿಪಡಿಸಿದೆ. ಈ ವೆಬ್ ಪೋರ್ಟಲ್ ಮೂಲಕ ಯುದ್ಧಪೀಡಿತ …
Read More »
admin
February 25, 2022
Breaking News, ಬೆಂಗಳೂರು
ಬೆಂಗಳೂರು: ‘ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳ ಹೊಣೆಗಾರಿಕೆ ಹೆಚ್ಚು.’ಆರೋಗ್ಯಕರ ಸಮಾಜ ನಿರ್ಮಾಣ ಮತ್ತು ಅಭಿವೃದ್ಧಿಯಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರವಹಿಸುತ್ತಿವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಗುರುವಾರ ಆಯೋಜಿಸಿದ್ದ ವರ್ಷದ ವ್ಯಕ್ತಿ ಮತ್ತು ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಮಾಧ್ಯಮ ರಂಗ ಪ್ರಜಾಪ್ರಭುತ್ವದ ಜೀವಾಳ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಮಾಧ್ಯಮಗಳು ದನಿಯಾಗಬೇಕು’ ಎಂದು ಹೇಳಿದರು. ಶಾಸಕ ಬಿ.ಎಸ್. ಯಡಿಯೂರಪ್ಪ, ನಟ ಸುದೀಪ್ ಮಾತನಾಡಿದರು. ಸಚಿವ …
Read More »
admin
February 25, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯದಲ್ಲಿ ಗುರುವಾರ 588 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. 19 ಮಂದಿ ಮೃತರಾಗಿದ್ದಾರೆ. 2022ರ ಸಾಲಿನ ಕನಿಷ್ಠ ಪ್ರಕರಣ ಮತ್ತು ಅತ್ಯಂತ ಕಡಿಮೆ ಪಾಸಿಟಿವಿಟಿ ದರ (ಶೇ.0.84) ಗುರುವಾರ ದಾಖಲಾಗಿದೆ. ಕಳೆದ ಡಿಸೆಂಬರ್ 29ಕ್ಕೆ 566 ಪ್ರಕರಣ ದಾಖಲಾದ ಬಳಿಕದ ಕನಿಷ್ಠ ಪ್ರಕರಣ ಇದಾಗಿದೆ. 1692 ಮಂದಿ ಕೋವಿಡ್‌ನಿಂದ (Covid19) ಚೇತರಿಸಿಕೊಂಡಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆ 8,255ಕ್ಕೆ ಇಳಿದಿದೆ. 69,388 ಕೋವಿಡ್ ಪರೀಕ್ಷೆ ನಡಿದಿದೆ.
Read More »
admin
February 25, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಮದ್ಯದ ದರ ಹೆಚ್ಚಳಕ್ಕೆ ಸರ್ಕಾರ ಚಿಂತನೆ ಮಾಡಿಲ್ಲ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ. 2022-23 ನೇ ಸಾಲಿನ ರಾಜ್ಯ ಬಜೆಟ್ ಕುರಿತು ವಿಧಾನಸೌಧದಲ್ಲಿಂದು ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಇಲಾಖಾವಾರು ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲಾಖೆಯ ಹಣಕಾಸಿನ ಪರಿಸ್ಥಿತಿಯನ್ನು ಮುಖ್ಯಮಂತ್ರಿಗಳು ಪರಾಮರ್ಶೆ ಮಾಡಿ, ಕೆಲವು ಸಲಹೆ ಸೂಚನೆ ನೀಡಿದ್ದಾರಲ್ಲದೆ ಇಲಾಖೆಯ ಅಭಿವೃದ್ಧಿಗೂ ಸಹಕಾರ ನೀಡುವುದಾಗಿ ಭರವಸೆ ನೀಡಿದರು ಎಂದು ತಿಳಿಸಿದರು.
Read More »