admin
February 23, 2022
Breaking News, ಬೆಂಗಳೂರು
ಬೆಂಗಳೂರು : ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಗಳನ್ನು ಪಂಚಾಯಿತಿ ಮಟ್ಟದ ಜನನ, ಮರಣ ನೋಂದಣಾಧಿಕಾರಿಗಳನ್ನಾಡಿ ನೇಮಕ ಮಾಡಲಾಗಿದೆ. ಜೊತೆಗೆ ಗ್ರಾಮ ಲೆಕ್ಕಿಗರಿಗೆ ಉಪನೋಂದಣಾಧಿಕಾರಿ ಹೊಣೆಗಾರಿಕೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮೀಣ ಭಾಗದಲ್ಲಿ ಶೇ.100 ರಷ್ಟು ಜನನ, ಮರಣ ನೋಂದಣಿ ಘಟನೆಗಳನ್ನು ದಾಖಲಿಸಲು ಮತ್ತು ನಾಗರಿಕ ನೋಂದಣಿ ಪದ್ದತಿ ಬಲಪಡಿಸಲು ಈ ಕ್ರಮ ಕೈಗೊಳ್ಳಲಾಗಿದೆ.
Read More »
admin
February 23, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಶಾಂತಿ ಭದ್ರತೆಗೆ ದೊಡ್ಡ ಅಪಾಯ ಎದುರಾಗಿದ್ದು, ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು ಅವರು, ಶಾಂತಿಯುತವಾಗಿದ್ದ ರಾಜ್ಯವು ಹಿಜಾಬ್, ಕೇಸರಿ ಶಾಲು ಹಾಗೂ ಈಗ ಶಿವಮೊಗ್ಗದಲ್ಲಿ ಯುವಕನೊಬ್ಬನ ಕೊಲೆ ಕಾರಣದಿಂದ ಇಡೀ ರಾಜ್ಯವೇ ಕುದಿಯುವ ಕುಲುಮೆಯಾಗಿದೆ ಎಂದರು.
Read More »
admin
February 23, 2022
Breaking News, ಬೆಂಗಳೂರು
ಬೆಂಗಳೂರು: ನ್ಯಾಯಾಧೀಶರನ್ನು ನಿಂಧಿಸಿದಂತ ಪ್ರಕರಣ ಸಂಬಂಧ ನಟ ಚೇತನ್ ಅವರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ. 8 ನೇ ಎಸಿಎಂಎಂ ಕೋರ್ಟ್ ಆದೇಶ ನೀಡಿದೆ. ಅಕ್ಷೇಪಾರ್ಯ ಟ್ವೀಟ್ ಮಾಡಿರುವ ಹಿನ್ನೆಲೆಯಲ್ಲಿ ಪೊಲೀಸರು ನಿನ್ನೆ ನಟ ಚೇತನ್ ಅವರನ್ನು ಬಂಧಿಸಲಾಗಿತ್ತು. ಈ ಸಂಬಂಧ ವಿಚಾರಣೆ ನಡೆಸಿದ 8 ನೇ ಎಸಿಎಂಎಂ ಕೋರ್ಟ್ ನಟ ಚೇತನ್ ರನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.
Read More »
admin
February 22, 2022
Breaking News, ಬೆಂಗಳೂರು
ಬೆಂಗಳೂರು: ತೀವ್ರ ಕುತೂಹಲ ಮೂಡಿಸಿದ್ದಂತ ರಾಜ್ಯ ಬಜೆಟ್ ಮಂಡನೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಕಾಂಗ್ರೆಸ್ ಗದ್ದಲದ ನಡುವೆಯೂ ಸಿಎಂ ಬಸವರಾಜ ಬೊಮ್ಮಾಯಿ ಮಾರ್ಚ್ 4ಕ್ಕೆ ರಾಜ್ಯ ಬಜೆಟ್ ಮಂಡಿಸೋದಾಗಿ ಘೋಷಣೆ ಮಾಡಿದ್ದಾರೆ. ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತನ ಹತ್ಯೆ ಪ್ರಕರಣ ಸಂಬಂಧ ಕಾಂಗ್ರೆಸ್ ಕೈವಾಡವಿದೆ ಎಂಬುದಾಗಿ ಆರೋಪಿಸಿದಂತ ಬಿಜೆಪಿ ನಾಯಕರ ವಿರುದ್ಧ ಸದನದಲ್ಲಿ ಭಾವಿಗಿಳಿದು ಕಾಂಗ್ರೆಸ್ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೇ ತನಿಖೆಗೆ ಆಗ್ರಹಿಸಿ ಧರಣಿ ನಡೆಸುತ್ತಿದ್ದಾರೆ. ಈ …
Read More »
admin
February 22, 2022
Breaking News, ಬೆಂಗಳೂರು
ಬೆಂಗಳೂರು: ಉಡುಪಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾರಂಭವಾದ ಹಿಜಾಬ್-ಕೇಸರಿ ಶಾಲು ವಿವಾದದ ಬೆಂಕಿ ಇಂದು ರಾಜ್ಯಾದ್ಯಂತ ಹಬ್ಬಿ, ದೇಶ- ವಿದೇಶಗಳಲ್ಲೂ ಚರ್ಚೆ, ಪ್ರತಿಭಟನೆಗಳಿಗೆ ನಾಂದಿ ಹಾಡಿದೆ.ನಾವು ಕೋರ್ಟ್ ಆದೇಶ ಪಾಲಿಸುತ್ತೇವೆ ಎಂದು ವಿದ್ಯಾರ್ಥಿನಿಯರು ಹಿಜಾಬ್ ತೆಗೆದಿಟ್ಟು ತರಗತಿಗೆ ಬರುತ್ತಿದ್ದಾರೆ. ಹೈಕೋರ್ಟ್ ಮಧ್ಯಂತರ ಆದೇಶದ ಬಳಿಕವೂ ವಿವಾದ ತಣ್ಣಗಾಗಿಲ್ಲ. ಹಿಜಾಬ್ ಹಾಕಿಕೊಂಡೇ ತರಗತಿಗೆ ಬರುತ್ತೇವೆ ಅವಕಾಶ ಕೊಡಿ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ಅವಕಾಶ ಕೊಡದಿದ್ದಾಗ ತರಗತಿಯನ್ನೇ, ಪರೀಕ್ಷೆಯನ್ನೇ ಬಿಟ್ಟು ಹೋದ …
Read More »
admin
February 22, 2022
Breaking News, ಬೆಂಗಳೂರು
ಬೆಂಗಳೂರು: ಬೆಂಗಳೂರಿನಲ್ಲಿ ದಿನನಿತ್ಯದ ಹೊಸ ಪ್ರಕರಣಗಳು ಇಂದು ಮೂರನೇ ಅಲೆಯ ಪೂರ್ವ ಮಟ್ಟಕ್ಕೆ ಇಳಿದಿವೆ.ರಾಜ್ಯದಲ್ಲಿ ಇಂದು 679 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. 21 ಜನ ಸೋಂಕಿತರು ಮೃತಪಟ್ಟಿದ್ದಾರೆ. 1932 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 52,505 ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇ.1.29 ರಷ್ಟು ಇದೆ. ರಾಜ್ಯದಲ್ಲಿ 11,360 ಸಕ್ರಿಯ ಪ್ರಕರಣಗಳು ಇವೆ. 346 ಜನರಿಗೆ ಸೋಂಕು ತಗುಲಿದ್ದು, 8 ಜನ ಸೋಂಕಿತರು ಮೃತಪಟ್ಟಿದ್ದಾರೆ. 5 ಸಾವಿರಕ್ಕೂ ಅಧಿಕ …
Read More »
admin
February 22, 2022
Breaking News, ಬೆಂಗಳೂರು
ಬೆಂಗಳೂರು: ಹಿಂದೂ ಕಾರ್ಯಕರ್ತನ ಕೊಲೆ ಪ್ರಕರಣ ಸಂಬಂಧ ಸಂಸದೆ ಸುಮಲತಾ ಅಂಬರೀಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಪರಿಸ್ಥಿತಿಯನ್ನು ಹತೋಟಿಗೆ ತರುವುದಕ್ಕಾಗಿ ಶತಾಯಗತಾಯ ಪ್ರಯತ್ನಿಸುತ್ತಿದೆ. ಆದರೆ ಕೆಲವು ಗುಂಪುಗಳು ಜನರಿಗೆ ಪ್ರಚೋದನೆ ನೀಡುವ ಕೆಲಸವನ್ನು ಮಾಡುತ್ತಿವೆ ಎಂದು ಸಂಸದೆ ಸುಮಲತಾ ಅಂಬರೀಶ್ ಆರೋಪಿಸಿದ್ದಾರೆ. ಇನ್ನೂ ಶಿವಮೊಗ್ಗ ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಹರ್ಷ ಎಂಬ ಯುವಕನ ಹತ್ಯೆ ಮಾಡಲಾ ಗಿದ್ದು, ಇದರಿಂದ ನಗರದಲ್ಲಿ ಬಿಗುವಿನ …
Read More »
admin
February 22, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳು ಆರಂಭಗೊಂಡಿದ್ದು, ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ 80 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗಿದ್ದಾರೆ. ವಿಜಯಪುರ ಸರ್ಕಾರಿ ಪಿಯು ಕಾಲೇಜಿನ 30 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿಲ್ಲ.ಹಾವೇರಿಯ ಹಾನಗಲ್ ಕೆಎಲ್ ಇ ಪಿಯು ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಪ್ರಾಯೋಗಕ ಪರೀಕ್ಷೆಗೆ ಹಾಜರಾಗಿರಲಿಲ್ಲ.ಯಾದಗಿರಿಯ ಒಂದು ಶಾಲೆಯಲ್ಲಿ 40 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು …
Read More »
admin
February 22, 2022
Breaking News, ಬೆಂಗಳೂರು
ಬೆಂಗಳೂರು: ಶಿವಮೊಗ್ಗದಲ್ಲಿ ಯುವಕನ ಕೊಲೆ ಮಾಡಿಸಿರುವುದೇ ಕೆ.ಎಸ್ ಈಶ್ವರಪ್ಪ. ತನ್ನ ಕುರ್ಚಿ ಉಳಿಸಿಕೊಳ್ಳಲು ಈ ಕೊಲೆ ಮಾಡಿಸಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ. ಪರಿಷತ್ ನಲ್ಲಿ ಮಾತನಾಡಿದ ಅವರು, ಶಿವಮೊಗ್ಗ ಕೊಲೆ ಪ್ರಕರಣ ಸಂಬಂಧ ಮಾತನಾಡುತ್ತಾ ಪರೋಕ್ಷವಾಗಿ ಈಶ್ವರಪ್ಪನವರೇ ಈ ಕೊಲೆ ಮಾಡಿಸಿದ್ದಾರೆ ಎಂದು ಆರೋಪಿಸಿದರು. ತಮ್ಮ ಸ್ಥಾನ ಉಳಿಸಿಕೊಳ್ಳಲು ಈಶ್ವರಪ್ಪ ಕೊಲೆ ಮಾಡಿಸಿದ್ದಾರೆ. ಈ ಬಗ್ಗೆ ಸಿಬಿಐ ತನಿಖೆ ಅಥವಾ ಹೈಕೋರ್ಟ್ ನ್ಯಾಯಾಧೀಶರಿಂದ …
Read More »
admin
February 22, 2022
Breaking News, ಬೆಂಗಳೂರು
ಬೆಂಗಳೂರು : ಹತ್ಯೆಯಾಗಿರುವ ಹಿಂದೂ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಶಾಸಕ ಅರವಿಂದ ಲಿಂಬಾವಳಿ ಒಂದು ಲಕ್ಷ ರೂ ನೆರವು ಘೋಷಿಸಿದ್ದಾರೆ. ಹಿಂದೂ ಕಾರ್ಯಕರ್ತ ಹರ್ಷ ಅವರನ್ನು ಹತ್ಯೆ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಸರ್ಕಾರವನ್ನು ಆಗ್ರಹಿಸುತ್ತೇನೆ. ಹರ್ಷರವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂ ಬಸ್ಥರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಆಘಾತಕಾರಿ ಘಟನೆಯಲ್ಲಿ ತಮ್ಮ …
Read More »