admin
February 21, 2022
Breaking News, ಬೆಂಗಳೂರು
ಬೆಂಗಳೂರು: ಭವಿಷ್ಯದಲ್ಲಿ ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಾಡಬಹುದು ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ, ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದಂತ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ಕೈ ಬಿಡುವಂತೆ ಒತ್ತಾಯಿಸಿ, ಕಾಂಗ್ರೆಸ್ ನಾಯಕರ ಅಹೋರಾತ್ರಿ ಧರಣಿ ಮುಂದುವರೆಸಿದ್ದಾರೆ. ಸಚಿವ ಕೆ ಎಸ್ ಈಶ್ವರಪ್ಪರನ್ನು ವಜಾಗೊಳಿಸಲು ಕಳೆದ ಗುರುವಾರದಿಂದ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಂಗ್ರೆಸ್ ಶಾಸಕರ ಹೋರಾಟ 5ನೇ ದಿನಕ್ಕೂ ಕಾಲಿಟ್ಟಿದೆ. ರಾಷ್ಟ್ರಧ್ವಜ ಕುರಿತು ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿವಾದಾತ್ಮಕ ಹೇಳಿಕೆ …
Read More »
admin
February 21, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಇಂದು (ಫೆ.20, ಭಾನುವಾರ) 1,001 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಇಂದು 485 ಜನರಿಗೆ ಕೊರೊನಾ ದೃಢಪಟ್ಟಿದ್ದು, ಕೊರೊನಾದಿಂದ 12 ಜನ ಸಾವಿಗೀಡಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 39,36,586 ಕೊರೊನಾ ಪ್ರಕರಣಗಳು ಪತ್ತೆಯಾದಂತಾಗಿದೆ. ಈ ಪೈಕಿ 38,84,120 ಜನರು ಚೇತರಿಸಿಕೊಂಡಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1,780 ಜನರು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿಗೆ 18 …
Read More »
admin
February 21, 2022
Breaking News, ಬೆಂಗಳೂರು
ಬೆಂಗಳೂರು: ಕಾರ್ಯತಂತ್ರ ರೂಪಿಸಲು ಮುಂದಾಗಿರುವ ಕಾಂಗ್ರೆಸ್ ಹೈಕಮಾಂಡ್, ಈ ಬಗ್ಗೆ ಚರ್ಚಿಸಲು ಇದೇ 25ರಂದು ದೆಹಲಿಗೆ ಬರುವಂತೆ ಪಕ್ಷದ ರಾಜ್ಯ ಮುಖಂಡರಿಗೆ ಆಹ್ವಾನ ನೀಡಿದೆ. 25ರಂದು ಸಂಜೆ 4 ಗಂಟೆಗೆ ದೆಹಲಿಯಲ್ಲಿ ಎಐಸಿಸಿ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ರಾಜ್ಯಸಭೆ ಕಾಂಗ್ರೆಸ್ ಸದಸ್ಯ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. …
Read More »
admin
February 20, 2022
Breaking News, ಬೆಂಗಳೂರು
ಬೆಂಗಳೂರು: ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ಅವರಿಗೆ ಮತ್ತೊಂದು ಆಘಾತ ಎದುರಾಗಿದೆ. ಅಶ್ವಿನಿ ಅವರ ತಂದೆ ರೇವನಾಥ್ ಹೃದಯಸ್ತಂಭನದಿಂದ ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರೇವನಾಥ್ ನಿಧನರಾಗಿದ್ದಾರೆ. ಪುನೀತ್ ರಾಜಕುಮಾರ್ ಅಗಲಿಕೆ ಆಘಾತದಿಂದ ಹೊರ ಬರುವ ಮೊದಲೇ ತಂದೆಯನ್ನು ಅಶ್ವಿನಿ ಕಳೆದುಕೊಂಡಿದ್ದಾರೆ. ರೇವನಾಥ್ ಅವರು ಹೃದಯಾಘಾತದಿಂದ ಬೆಂಗಳೂರಿನಲ್ಲಿ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಚಿಕ್ಕಮಗಳೂರು ಮೂಲದ ರೇವನಾಥ್ ಅವರು ಅಳಿಯ ಪುನೀತ್ ಅಗಲಿಕೆ ನಂತರ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.
Read More »
admin
February 20, 2022
Breaking News, ಬೆಂಗಳೂರು
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದು, ಕನ್ನಡದ ತನುಜಾ ಎಂಬ ಸಿನಿಮಾದಲ್ಲಿ ನಟಿಸಿದ್ದಾರೆ. ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ತನುಜಾ ಎಂಬ ಕನ್ನಡ ಸಿನಿಮಾದಲ್ಲಿ ನಟಿಸಿದ್ದಾರೆ. ಈಗಾಗಲೇ ಈ ಸಿನಿಮಾದ ಚಿತ್ರೀಕರಣ ಕೂಡ ಆರಂಭ ಆಗಿದ್ದು, ಶೂಟಿಂಗ್ನಲ್ಲಿ ಬಿ.ಎಸ್. ಯಡಿಯೂರಪ್ಪ ಭಾಗಿಯಾಗಿರುವ ಫೋಟೋಗಳು ಲಭ್ಯವಾಗಿವೆ. ತುನುಜಾ ನೈಜ ಘಟನೆ ಆಧರಿಸಿದ ಸಿನಿಮಾ. ಕೊವಿಡ್ ಸಂದರ್ಭದಲ್ಲಿ ನೀಟ್ ಪರೀಕ್ಷೆ ಬರೆಯಲು ಸುಮಾರು 350ಕಿಮೀ ದೂರ ಪ್ರಯಾಣ …
Read More »
admin
February 20, 2022
Breaking News, ಬೆಂಗಳೂರು
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮುಂದೆ ಪ್ರತಿಭಟನೆ ಮಾಡಿದವರ ಮೇಲೆ ಎಫ್‌ಐಆರ್ ದಾಖಲಾಗಿದೆ. ಮಂಜುನಾಥ್ ಎಂಬ ಪೊಲೀಸ್ ಪೇದೆ ಕೊಟ್ಟ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಾಗಿದೆ. ಗೋವಾ ಚುನಾವಣಾ ಪ್ರಣಾಳಿಕೆಯಲ್ಲಿ ಮಹದಾಯಿ ಯೋಜನೆ ಮೂಲಕ ಗೋವಾಗೆ ನೀರು ಹರಿಸುವ ಪ್ರಸ್ತಾಪ ಹಿನ್ನಲೆಯಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್ ರಾಜ್ಯಾಧ್ಯರಾದ ಡಾ. ರವಿಶೇಟ್ಟಿ ಬೆಂದೂರ, ನಾಗಮಂಗಲದ ಕುಮಾರ್, ಕೆ.ಎನ್.ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ್ದರು.
Read More »
admin
February 20, 2022
Breaking News, ಬೆಂಗಳೂರು
ಬೆಂಗಳೂರು :ಪದವಿ ಪೂರ್ವ ಶಿಕ್ಷಣ ಇಲಾಖೆ ಈಗಾಗಲೇ ಪ್ರಾಯೋಗಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದ್ದು, ನಾಳೆಯಿಂದ ರಾಜ್ಯಾದ್ಯಂತ ಪಿಯು ಕಾಲೇಜುಗಳಲ್ಲಿ ಪ್ರಾಯೋಗಿಕ ಪರೀಕ್ಷೆಗಳು ನಡೆಯಲಿದ್ದು, ಹಿಜಾಬ್ ವಿವಾದಿಂದ ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎನ್ನಲಾಗಿದೆ. ವೇಳಾಪಟ್ಟಿಯಂತಯೇ ನಾಳೆಯಿಂದ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ.ಹಿಜಾಬ್ ವಿವಾದದಿಂದ ಪರೀಕ್ಷೆಗೆ ಗೈರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಹೇಳಿದೆ. ಈ ಹಿನ್ನೆಲೆಯಲ್ಲಿ ಹಿಜಾಬ್ …
Read More »
admin
February 20, 2022
Breaking News, ಬೆಂಗಳೂರು
ಬೆಂಗಳೂರು : ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಗಳನ್ನು ಪಂಚಾಯಿತಿ ಮಟ್ಟದ ಜನನ, ಮರಣ ನೋಂದಣಾಧಿಕಾರಿಗಳನ್ನಾಡಿ ನೇಮಕ ಮಾಡಲಾಗಿದೆ. ಜೊತೆಗೆ ಗ್ರಾಮ ಲೆಕ್ಕಿಗರಿಗೆ ಉಪನೋಂದಣಾಧಿಕಾರಿ ಹೊಣೆಗಾರಿಕೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮೀಣ ಭಾಗದಲ್ಲಿ ಶೇ.100 ರಷ್ಟು ಜನನ, ಮರಣ ನೋಂದಣಿ ಘಟನೆಗಳನ್ನು ದಾಖಲಿಸಲು ಮತ್ತು ನಾಗರಿಕ ನೋಂದಣಿ ಪದ್ದತಿ ಬಲಪಡಿಸಲು ಈ ಕ್ರಮ ಕೈಗೊಳ್ಳಲಾಗಿದೆ.
Read More »
admin
February 19, 2022
Breaking News, ಬೆಂಗಳೂರು
ಬೆಂಗಳೂರು: ಕಾಂಗ್ರೆಸ್ ಮುಖಂಡ ಹಾಗೂ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಅಭಿನಂದನಾ ಕಾರ್ಯಕ್ರಮಕ್ಕಾಗಿ ಟೌನ್ ಹಾಲ್ ಮುಂದೆ ಹಾಗೂ ಸುತ್ತಮುತ್ತ ಅನಧಿಕೃತ ಬ್ಯಾನರ್ ಹಾಗೂ ಫ್ಲೆಕ್ಸ್‌ಗಳನ್ನು ಹಾಕಲಾಗಿತ್ತು. ಈ ಹಿನ್ನಲೆಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಮಹಮದ್ ನಲಪಾಡ್ ವಿರುದ್ಧ ಎರಡು ಠಾಣೆಗಳಲ್ಲಿ ಎಫ್‌ಐಆರ್ ದಾಖಲಾಗಿದೆ. ನಗರದಲ್ಲಿ ಫ್ಲೆಕ್ಸ್ ಹಾಗೂ ಬ್ಯಾನರ್‌ಗಳನ್ನು ನಿಷೇಧಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಆದರೂ ಕಾನೂನು ಬಾಹಿರವಾಗಿ ಫ್ಲೆಕ್ಸ್ ಅಳವಡಿಸಿದ್ದನ್ನು ಕಂಡ ಸಾಮಾಜಿಕ ಕಾರ್ಯಕರ್ತ …
Read More »
admin
February 19, 2022
Breaking News, ಬೆಂಗಳೂರು
ಬೆಂಗಳೂರು : ಸಿಂಧೂರು, ತಿಲಕ, ಬಿಂದಿ ಧರಿಸಿದ ವಿದ್ಯಾರ್ಥಿಗಳನ್ನು ತರಗತಿಗೆ ಹಾಜರಾಗದಂತೆ ತಡೆಯುವಂತಿಲ್ಲ. ಸಿಂಧು, ತಿಲಕ, ಬಿಂದಿ, ನಾಮ, ಬಳೆ ಶೃಂಗಾರ ವಸ್ತುಗಳು. ವಿದ್ಯಾರ್ಥಿಗಳನ್ನು ತರಗತಿ ಹೊರಗೆ ನಿಲ್ಲಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಒಂದು ವೇಳೆ ವಿದ್ಯಾರ್ಥಿಗಳು ಸಿಂಧೂರ, ತಿಲಕ ಧರಿಸಿ ಬಂದರೆ ಅವರನ್ನು ಶಾಲೆಯೊಳಗೆ ಹೋಗಲು ಬಿಡಬೇಕು. ಒಂದುವೇಳೆ ಆ ವಿದ್ಯಾರ್ಥಿನಿಗಳನ್ನು ತಡೆದರೆ ಅಂತಹ ಶಾಲಾ ಶಿಕ್ಷಕರ ವಿರುದ್ಧ …
Read More »