Breaking News

ಬೆಂಗಳೂರು

ಫೆ. 27 ರಂದು ರಾಮನಗರದಿಂದ ಮೇಕೆದಾಟು ಪಾದಯಾತ್ರೆ ಪುನರಾರಂಭ

ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಆಗ್ರಹಿಸಿ ಕಾಂಗ್ರೆಸ್ ‘ನಮ್ಮ ನೀರು, ನಮ್ಮ ಹಕ್ಕು’ ಪಾದಯಾತ್ರೆಯನ್ನು ಫೆಬ್ರವರಿ 27 ರಂದು ರಾಮನಗರದಿಂದ ಪುನರಾರಂಭಿಸಲಿದೆ. ವಿಧಾನಸೌಧದಲ್ಲಿ ಈ ಕುರಿತಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಸಂಗಮದಿಂದ ಜ.9 ರಂದು ಆರಂಭಿಸಿ ಮಧ್ಯೆ ನಿಲ್ಲಿಸಿದ್ದ ಮೇಕೆದಾಟು ಪಾದಯಾತ್ರೆ ಮುಂದುವರಿಸಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.

Read More »

ಸಾಮಾಜಿಕ ಜಾಲತಾಣದಲ್ಲಿ ಕಿರುಕುಳ ನೀಡಿದ ವ್ಯಕ್ತಿ ಬಂಧನ

ಬೆಂಗಳೂರು: ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಮೊಬೈಲ್‌ ನಂಬರ್‌ ಸಂಗ್ರಹಿಸಿ ಮೆಸೆಂಜರ್‌ ಹಾಗೂ ವಾಟ್ಸ್‌ಆಯಪ್‌ ಮೂಲಕ ಮಹಿಳೆಯರಿಗೆ ಅಶ್ಲೀಲ ವಿಡಿಯೋ ಕಳುಹಿಸಿ ಕಿರುಕುಳ ನೀಡುತ್ತಿದ್ದ ಹಾಸನ ಮೂಲದ ಆರೋಪಿ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ನಿವಾಸಿ ಹರೀಶ್‌(32) ಪೋಲಿಸ್ ರುಬಂಧಿಸಿದ್ದಾರೆ. ಜೆಸಿಬಿ ಚಾಲಕನಾಗಿರುವ ಹರೀಶ್‌, ಇತ್ತೀಚೆಗೆ ಬಿಳೆಕಹಳ್ಳಿ ನಿವಾಸಿಯೊಬ್ಬರ ಪತ್ನಿಗೆ ಕಳೆದ ಮೂರು ತಿಂಗಳಿಂದ ಪದೇ ಪದೇ ಕರೆ ಮಾಡುತ್ತಿದ್ದು, ಜತೆಗೆ ವಾಟ್ಸ್‌ಆಯಪ್‌ ಮೂಲಕ ಪೋರ್ನ್ ವಿಡಿಯೋ ಮತ್ತು ಫೋಟೋಗಳನ್ನು ಕಳುಹಿಸುತ್ತಿದ್ದ. …

Read More »

ರಾಜ್ಯದಲ್ಲಿ 1,333 ಕೋವಿಡ್ ದೃಢ

ಬೆಂಗಳೂರು: ರಾಜ್ಯದಲ್ಲಿ ದೈನಂದಿನ ಕೊರೋನಾ ಪ್ರಕರಣಗಳ ಇಳಿಕೆಯ ಜೊತೆ ಜೊತೆಗೆ ಸೋಂಕಿನಿಂದ ಮೃತಪಡುತ್ತಿರುವವರ ಸಂಖ್ಯೆಯಲ್ಲೂ ಕುಸಿತ ಕಂಡು ಬಂದಿದೆ. ಶುಕ್ರವಾರ 1,333 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು 19 ಮಂದಿ ಮೃತರಾಗಿದ್ದಾರೆ.4,890 ಮಂದಿ ಚೇತರಿಸಿಕೊಂಡಿದ್ದಾರೆ. ಜನವರಿ 3 ರಂದು 1,290 ಪ್ರಕರಣ ದಾಖಲಾದ ಬಳಿಕದ ಅತ್ಯಂತ ಕನಿಷ್ಠ ಪ್ರಕರಣ ವರದಿಯಾಗಿದೆ. 83,555 ಕೋವಿಡ್‌ ಪರೀಕ್ಷೆ ನಡೆದಿದ್ದು ಶೇ.1.59ರ ಪಾಸಿಟಿವಿಟಿ ದರ ದಾಖಲಾಗಿದೆ. 26 ದಿನ (ಜನವರಿ 23)ರ ಬಳಿಕ ಮೊದಲ ಬಾರಿಗೆ …

Read More »

ಹಿರಿಯ ನಟ ರಾಜೇಶ್ ನಿಧನ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್(86) ನಿಧನರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ಫೆಬ್ರವರಿ 9 ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನರಾಗಿದ್ದಾರೆ.ರಾಜೇಶ್ ಅವರು ಏಪ್ರಿಲ್ 15, 1935 ರಲ್ಲಿ ಬೆಂಗಳೂರಿನಲ್ಲಿ ಜನಿಸಿದರು. ಪಿಡಬ್ಲ್ಯೂಡಿ ಇಲಾಖೆಯಲ್ಲಿ ಶೀಘ್ರಲಿಪಿ ಮತ್ತು ಬೆರಳಚ್ಚುಗಾರರಾಗಿ ಕಾರ್ಯನಿರ್ವಹಿಸುತ್ತಿದ್ದರು.

Read More »

ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಕಾಲೇಜಿಗೆ ಹೋಗಬೇಕು : ಬಿ.ಸಿ.ನಾಗೇಶ್

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್ ಗಲಾಟೆ ಎಲ್ಲವೂ ಸರಿಯಾಗಲಿದೆ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಕಾಲೇಜಿಗೆ ಹೋಗಬೇಕು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 1 ರಿಂದ 12 ನೇ ತರಗತಿ ಮಕ್ಕಳಿಗೆ ಸಮವಸ್ತ್ರ ಇದೆ.ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಸ್ವಲ್ಪ ಗೊಂದಲ ಇದೆ. ನಿನ್ನೆ ಮುಸ್ಲಿಂ ಶಾಸಕರ ಜೊತೆಗೆ ಸಭೆ ನಡೆಸಿದ್ದೇನೆ. ಅವರು ಕೋರ್ಟ್ ಆದೇಶ ಪಾಲಿಸಲು ಮುಖಂಡರಿಗೆ ಹೇಳಿದ್ದಾರೆ. ವಿದ್ಯಾರ್ಥಿಗಳ ಮನವೊಲಿಸುವ …

Read More »

ನಳೀನ್ ಕುಮಾರ್ ಕಟೀಲ್ ವಿರುದ್ಧ ಗಂಭೀರ ಆರೋಪ ಮಾಡಿದ ಬಿ.ಕೆ.ಹರಿಪ್ರಸಾದ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನನಗೆ ನೇರವಾಗಿ ಜೀವ ಬೆದರಿಕೆ ಕರೆ ಕೊಟ್ಟಿದ್ದಾರೆ. ಕಾರ್ಯಕರ್ತರಿಗೆ ಕರೆ ಮಾಡಿ ನನಗೆ ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಕೆ.ಹರಿಪ್ರಸಾದ್, ನಳೀನ್ ಕುಮಾರ್ ಕಟೀಲ್ ನೇರವಾಗಿ ನನಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಕಾಂಗ್ರೆಸ್ ನಾಯಕರು ಬೆದರಿಕೆಗಳಿಗೆ ಹೆದರುವವರಲ್ಲ. ನಮ್ಮ ಪೂರ್ವಜರೇ ಬ್ರಿಟೀಷರ ಗುಂಡಿಗೆ ಹೆದರಿಲ್ಲ ಇನ್ನು …

Read More »

ಈಶ್ವರಪ್ಪ ರಾಜೀನಾಮೆಗೆ ಒತ್ತಾಯ : ಸೋಮವಾರಕ್ಕೆ ಮುಂದೂಡಿದ ವಿಧಾನಪರಿಷತ್ ಕಲಾಪ

ಬೆಂಗಳೂರು: ಇಂದು ಸದನ ಆರಂಭವಾಗುತ್ತಿದ್ದಂತೆ ಆಡಳಿತ, ವಿಪಕ್ಷಗಳ ಗಲಾಟೆ ಜೋರಾಗಿದ್ದು, ಆ ಕಾರಣಕ್ಕಾಗಿ ವಿಧಾನಪರಿಷತ್ ಕಲಾಪವನ್ನು ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಯಿತು. ಸಚಿವ ಕೆಎಸ್ ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ಸದನದಲ್ಲಿ ಪಟ್ಟು ಹಿಡಿದರು.ಇದರಿಂದ ವಾಗ್ವಾದ ಏರ್ಪಟ್ಟಿತು. ಈ ವೇಳೆ ಕಾಂಗ್ರೆಸ್ ಪಕ್ಷದ ಸದಸ್ಯರು, ಸಚಿವ ಈಶ್ವರಪ್ಪ, ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಆಗ ಬಿಜೆಪಿ …

Read More »

ಪವಿತ್ರ ರಂಜಾನ್ ಹಬ್ಬಕ್ಕೆ ಹಿಜಾನ್ ಧರಿಸಲು ಅವಕಾಶ ನೀಡಿ ಎಂದು ಹೈಕೋರ್ಟ್‌ ಗೆ ಅರ್ಜಿ ಸಲ್ಲಿಕೆ

ಬೆಂಗಳೂರು: ಶುಕ್ರವಾರ ಮತ್ತು ಪವಿತ್ರ ರಂಜಾನ್ ತಿಂಗಳಲ್ಲಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂದು ಕೋರಿ ರ್ನಾಟಕ ಹೈಕೋರ್ಟ್‌ನಲ್ಲಿ ಹೊಸ ಅರ್ಜಿಯನ್ನು ಸಲ್ಲಿಸಲಾಗಿದೆ. ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಪೀಠ, ಈ ಅರ್ಜಿಯನ್ನು ಪರಿಗಣಿಸಲು ಸಮ್ಮತಿಸಿದೆ. ಕರ್ನಾಟಕದಲ್ಲಿನ ಹಿಜಾಬ್‌ ವಿವಾದ ಈಗ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಈಗಾಗಲೇ ಹಿಜಾಬ್‌ ನಿಷೇಧದ ವಿರುದ್ಧದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸುತ್ತಿದೆ. ಈ ನಡುವೆ ಹೊಸ ಅರ್ಜಿ …

Read More »

ಪದವಿ ಕಾಲೇಜುಗಳಲ್ಲಿ ಯಾವುದೇ ಡ್ರೆಸ್‌ ಕೋಡ್‌ ಇಲ್ಲ : ಬಿ.ಸಿ ನಾಗೇಶ್‌

ಬೆಂಗಳೂರು : ಪದವಿ ಕಾಲೇಜುಗಳಲ್ಲಿ ಯಾವುದೇ ಡ್ರೆಸ್‌ ಕೋಡ್‌ ಇಲ್ಲ. ಡ್ರೆಸ್‌ ಕೋಡ್‌ ಇರುವ ಕಡೆ ಪಾಲಿಸಬೇಕು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ ಹೇಳಿದ್ದಾರೆ. ಈ ಕುರಿತು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ‘ಪದವಿ ಕಾಲೇಜುಗಳಲ್ಲಿ ಡ್ರೆಸ್‌ ಕೋಡ್‌ ಇಲ್ಲ. ಡ್ರೆಸ್‌ ಕೋಡ್‌ ಇರುವ ಕಡೆ ಪಾಲಿಸಬೇಕು. ನಿನ್ನೆ ಮಲ್ಲೇಶ್ವರಂ ಕಾಲೇಜಿನಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಹೋಗಿದ್ದರಂತೆ, ಯಾರು ಪ್ರಚೋದಿಸ್ತಿದ್ದಾರೆ ಅನ್ನೋದು ತನಿಖೆಯಾಗ್ತಿದೆ’ ಎಂದರು.

Read More »

ಈಶ್ವರಪ್ಪ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಸದನದಲ್ಲಿ ಅಹೋರಾತ್ರಿ ಹೋರಾಟ

ಬೆಂಗಳೂರು: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡಬೇಕು. ಸಂಪುಟದಿಂದ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಸದಸ್ಯರು ಸದನದಲ್ಲಿ ಅಹೋರಾತ್ರಿ ಹೋರಾಟ ನಡೆಸಿದ್ದಾರೆ. ವಿಧಾನಸಭೆ ಮತ್ತು ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯರು ರಾತ್ರಿ ಧರಣಿ ನಡೆಸಿದ್ದಾರೆ.ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗೃಹಸಚಿವ ಆರಗ ಜ್ಞಾನೇಂದ್ರ, ಹಿರಿಯ ನಾಯಕರು ಮನವೊಲಿಸಲು ಮುಂದಾದರೂ ಪಟ್ಟು ಸಡಿಲಿಸದ ಕಾಂಗ್ರೆಸ್ …

Read More »