Breaking News

ಬೆಂಗಳೂರು

ಈಶ್ವರಪ್ಪ ಪರ ಬ್ಯಾಟಿಂಗ್ ಮಾಡಿಕೆ ಮಾಜಿ ಸಿಎಂ

ಬೆಂಗಳೂರು: ಹಿಂದೂಗಳ ಪಾಲಿಗೆ ಕೇಸರಿ ಪವಿತ್ರ ವಸ್ತ್ರವಾಗಿದ್ದು, ಅದರ ಪಾವಿತ್ರ್ಯತೆಯನ್ನು ಯಾರು ಸಹ ಹಾಳು ಮಾಡಬಾರದು ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಿಂದೂ ಸಂಸ್ಕೃತಿ, ಪರಂಪರೆಯಲ್ಲಿ ಕೇಸರಿ ಬಣ್ಣ ಮತ್ತು ಕೇಸರಿ ವಸ್ತ್ರಕ್ಕೆ ಪೂಜ್ಯ ಸ್ಥಾನವಿದೆ. ನಮ್ಮ ಪೂರ್ವಿಕರ ಕಾಲದಿಂದ ಇದು ನಡೆದುಕೊಂಡು ಬಂದಿದೆ. ಆದರೆ, ಬಿಜೆಪಿ ಆರ್‌ಎಸ್‌ಎಸ್‌ ಮತ್ತದರ ಸಹ ಸಂಘಟನೆಗಳು ಕೇಸರಿ ಬಾವುಟ ಇಟ್ಟುಕೊಂಡು ಹೋರಾಟ ಮಾಡುತ್ತಿವೆ. …

Read More »

ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿಗೆ 14 ಜಿಲ್ಲೆಗಳಿಗೆ ಅನುಮತಿ ನೀಡಿದ್ದು, ಶೇ. 30 ಕ್ಕಿಂತ ಹೆಚ್ಚಿನ ಹುದ್ದೆ ಖಾಲಿ ಇದ್ದ ಜಿಲ್ಲೆಗಳಲ್ಲಿ ನೇರ ನೇಮಕಾತಿ ಪ್ರಾರಂಭಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಕಂದಾಯ ಇಲಾಖೆ ಖಾಲಿ ಹುದ್ದೆಗಳ ಕುರಿತು ಬಿಜೆಪಿ ಸದಸ್ಯ ಎಸ್.ವಿ.ಸುಂಕನೂರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಆರ್.ಅಶೋಕ್, ಕಂದಾಯ ಇಲಾಖೆಯಲ್ಲಿ ಮಂಜೂರಾದ 2,645 …

Read More »

ಈಶ್ವರಪ್ಪ ರಾಜೀನಾಮೆ ನೀಡುವದಷ್ಟೇ ಅಲ್ಲ, ಸಂಪುಟದಿಂದ ವಜಾ ಮಾಡಬೇಕು : ಡಿಕಶಿ

ಬೆಂಗಳೂರು : ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಬೇಕು. ಸಂಪುಟದಿಂದ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಸದನದಲ್ಲೇ ಕಾಂಗ್ರೆಸ್ ಸದಸ್ಯರು ಅಹೋರಾತ್ರಿ ಹೋರಾಟ ನಡೆಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ನಾನು ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ಕೇಳುತ್ತಿಲ್ಲ. ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನಮಗೆ ಬೇಕಾಗಿಲ್ಲ. ಸಿಎಂ, ಗವರ್ನರ್‌ ಈಶ್ವರಪ್ಪರನ್ನು ವಜಾ ಮಾಡಬೇಕು. ರಾಜೀನಾಮೆ ಎಂಬುದು ಬಹಳ ಗೌರವಯುತವಾದ ಪದ ಎಂದು ಹೇಳಿದ್ದಾರೆ.

Read More »

ಹಗರಣದಲ್ಲಿ ಭಾಗಿಯಾಗಿರುವ ಎಲ್ಲ ಅಧಿಕಾರಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು : ಬೊಮ್ಮಾಯಿ

ಬೆಂಗಳೂರು: ಇಬ್ಬರು ಐಪಿಎಸ್ ಅಧಿಕಾರಿಗಳು ಸೇರಿದಂತೆ ಐಎಂಎ ಹಗರಣದಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ. ವಿಧಾನ ಪರಿಷತ್ ಕಲಾಪದಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಐಎಂಎ ಪ್ರಕರಣದ ಕುರಿತು ಪ್ರಶ್ನೆ ಮಾಡಿದರು. ಐಎಂಎ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿಗಳ ವಿರುದ್ಧ ಯಾಕೆ ಕ್ರಮ ಕೈಗೊಂಡಿಲ್ಲ. ಕೂಡಲೇ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರ ಯಾರನ್ನೂ ರಕ್ಷಣೆ ಮಾಡಬಾರದು ಅಂತ …

Read More »

ರಾಜ್ಯದಲ್ಲಿ 1,579 ಕೋವಿಡ್ ದೃಢ

ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೊನಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗ್ತಿದ್ದು, ಇಂದು 1,579 ಮಂದಿಗೆ ಕೋವಿಡ್ ದೃಢಪಟ್ಟಿದ್ರೆ,23 ಜನ ಕಿಲ್ಲರ್ ಕೊರೊನಾಗೆ ಬಲಿಯಾಗಿದ್ದಾರೆ. ಈ ಕುರಿತು ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ 769 ಮಂದಿಗೆ ಸೇರಿ ರಾಜ್ಯದಲ್ಲಿ ಒಟ್ಟು 1,579 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇನ್ನು ರಾಜ್ಯದಲ್ಲಿ ಇಂದು ಪಾಸಿಟಿವಿಟಿ ದರ 1.74 %ಕ್ಕೆ ತಲುಪಿದೆ’ ಎಂದಿದ್ದಾರೆ. ಬೆಂಗಳೂರಿನಲ್ಲಿ 7 …

Read More »

ಏಕಾಏಕಿ ಹಿಜಾಬ್​ ತೆಗೆಯಿರಿ ಅಂದರೆ ಹೇಗೆ ಸಾಧ್ಯ? : ಜಮೀರ್ ಅಹಮದ್​

ಬೆಂಗಳೂರು : ಮುಸ್ಲಿಂ ವಿದ್ಯಾರ್ಥಿಗಳು ನೂರಾರು ವರ್ಷಗಳಿಂದ ಹಿಜಾಬ್ ಧರಿಸುತ್ತಿದ್ದಾರೆ. ಏಕಾಏಕಿ ಹಿಜಾಬ್​ ತೆಗೆಯಿರಿ ಅಂದರೆ ಹೇಗೆ ಸಾಧ್ಯ? ನಾವು ಕೋರ್ಟ್ ಆದೇಶವನ್ನ ಪಾಲನೆ ಮಾಡುತ್ತಿದ್ದೇವೆ, ಎಂದು ಬೆಂಗಳೂರಿನಲ್ಲಿ ಶಾಸಕ ಜಮೀರ್ ಅಹಮದ್​ ಹೇಳಿಕೆ ನೀಡಿದ್ದಾರೆ. ಕಳೆದ ತಿಂಗಳು ಕೇಸರಿ ಶಾಲು ಎಲ್ಲಿಂದ ಬಂತು,? ಕೆಲವು ಕಾಲೇಜುಗಳಲ್ಲಿ ಷಡ್ಯಂತ್ರ ನಡೆಯುತ್ತಿದೆ. ಕಾಣದ ಕೈಗಳ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು. ಹಲವು ವಿದ್ಯಾರ್ಥಿಗಳಿಗೆ ಒಳಗೆ ಹೋಗಲು ಬಿಡುತ್ತಿಲ್ಲ. ರಾಜ್ಯ ಸರ್ಕಾರ ಆದೇಶವನ್ನ …

Read More »

ಈಶ್ವರಪ್ಪಗೆ ಹೇಗೆ ರಾಜೀನಾಮೆ ಕೊಡಿಸಬೇಕು ಎಂಬುದು ನಮ್ಮ ಗೊತ್ತಿದೆ : ಡಿಕೆಶಿ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು. ಹೇಗೆ ರಾಜೀನಾಮೆ ಕೊಡಿಸಬೇಕು ಎಂಬುದು ನಮಗೆ ಗೊತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿದ್ದ ಸಚಿವ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ನಾಯಕರು ಮುಗಿಬಿದ್ದಿದ್ದು, ಸಚಿವರ ಹೇಳಿಕೆ ರಾಷ್ಟ್ರಧ್ವಜಕ್ಕೆ ಮಾಡಿದ ಅಪಮಾನ, ರಾಷ್ಟ್ರದ್ರೋಹದ ಕೆಲಸ ಎಂದು ಕಿಡಿಕಾರಿರುವ ಕಾಂಗ್ರೆಸ್ ನಾಯಕರು ಈಶ್ವರಪ್ಪ ರಾಜೀನಾಮೆಗೆ ಪಟ್ಟು ಹಿಡಿದಿದ್ದಾರೆ.ಆದರೆ ತಿರಂಗಾ ಯಾತ್ರೆ ಮಾಡಿರುವ …

Read More »

ಈಶ್ವರಪ್ಪ ರಾಜಿನಾಮೆ ಕೊಡುವಂತೆ ಕಾಂಗ್ರೆಸ್ ಒತ್ತಾಯ

ಬೆಂಗಳೂರು: ವಿಧಾನ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆಯೇ ಭಿತ್ತಿಪತ್ರ ಹಿಡಿದು ಕಲಾಪದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಸದಸ್ಯರು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದರು. ವಿಧಾನಪರಿಷತ್ ಕಲಾಪದ ವೇಳೆಯೂ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಒತ್ತಾಯದ ಪ್ರತಿಧ್ವನಿ ಕೇಳಿಬಂದಿದೆ. ಕಾಂಗ್ರೆಸ್ ಸದಸ್ಯರು ಈಶ್ವರಪ್ಪ ರಾಜೀನಾಮೆಗೆ ಒತ್ತಾಯಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಪರಿಷತ್ ಗೆ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಆಗಮಿಸಿದ್ದು, ಸಚಿವ ಈಶ್ವರಪ್ಪ ವಿರುದ್ಧ …

Read More »

ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ : ಫೆ.19ರಂದು ಪ್ರತಿಭಟನೆ

ಬೆಂಗಳೂರು : ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನವೆಸಗಿದ ರಾಯಚೂರು ಜಿಲ್ಲಾ ನ್ಯಾಯಾಧೀಶರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಸರ್ಕಾರದ ಕ್ರಮವನ್ನು ಖಂಡಿಸಿ ಸಂವಿಧಾನ ಸಂರಕ್ಷಣಾ ಮಹಾಒಕ್ಕೂಟ ವತಿಯಿಂದ ಫೆಬ್ರವರಿ 19ರಂದು ಬೃಹತ್ ಪ್ರತಿಭಟನಾ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಡಿಎಸ್‌ಎಸ್ ಅಧ್ಯಕ್ಷ ಎನ್ ಮೂರ್ತಿ ತಿಳಿಸಿದರು. ಬೆಂಗಳೂರು ಪ್ರೆಸ್ ಕ್ಲಬ್ ಆವರಣದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಜನವರಿ 26ರಂದು ನಡೆದ ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಯಚೂರು ಜಿಲ್ಲೆಯ ಮಾನ್ಯ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಪಾಟೀಲರು …

Read More »

ಈಶ್ವರಪ್ಪ ಸಚಿವ ಸ್ಥಾನಕ್ಕೆ ವಜಾ ಮಾಡುವಂತೆ ಮಾಜಿ ಸಿಎಂ ಒತ್ತಾಯ

ಬೆಂಗಳೂರು: ರಾಷ್ಟ್ರ ಧ್ವಜವನ್ನು ಅವಮಾನಿಸಿರುವ ಸಚಿವ ಕೆ.ಎಸ್‌. ಈಶ್ವರಪ್ಪ ಅವರನ್ನು ಗುರುವಾರ ಬೆಳಗ್ಗೆ 11 ಗಂಟೆಯೊಳಗಾಗಿ ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಜತೆಗೆ ಪೊಲೀಸರು ಸುಮೊಟೋ ದೇಶದ್ರೋಹ ಪ್ರಕರಣ ದಾಖಲಿಸಿ ಬಂಧಿಸಬೇಕು. ಇಲ್ಲದಿದ್ದರೆ ಸದನದಲ್ಲಿ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿಕೆ ಸಮರ್ಥಿಸಿಕೊಳ್ಳುವ ಮೂಲಕ ಮುಖ್ಯಮಂತ್ರಿ ಹಾಗೂ ಬಿಜೆಪಿಯೂ ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ದಾರೆ. ಹೀಗಾಗಿ ಬಿಜೆಪಿಯ ವಿರುದ್ಧ …

Read More »