Breaking News

ಬೆಂಗಳೂರು

ಕೃಷಿ ಪ್ರಧಾನವಾದ ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ,ಮೈಸೂರು ಚಾಮರಾಜನಗರ ಭಾಗದ ರೈತರಿಗೆ ಸಾವಯವ ಹಾಗೂ ಸಿರಿಧಾನ್ಯ ಕೃಷಿಗೆ ಮಾರ್ಗದರ್ಶನ ಹಾಗೂ ಪ್ರೋತ್ಸಾಹ ದೊರೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಅಂತರರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ 2025 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ರೈತರ ಹಲವು ದಿನಗಳ …

Read More »

ಬಿಬಿಎಂಪಿ ವ್ಯಾಪ್ತಿಯ ಪುನರ್ವಸತಿ ಕಾರ್ಯಕರ್ತರಿಗೆ ಸ್ಥಳ ನಿಯೋಜಿಸಲು ಸೂಚನೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಖಾಲಿಯಿರುವ ನಗರ ಪುನರ್ವಸತಿ ಕಾರ್ಯಕರ್ತರಿಗೆ ಸ್ಥಳ ನಿಯೋಜಿಸುವಂತೆ ಕಲ್ಯಾಣ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಂಗವಿಕರಲ ಸಬಲೀಕರಣಕ್ಕಾಗಿ ರೂಪಿಸಿರುವ ಕಾರ್ಯಕ್ರಮಗಳ ಅನುಷ್ಠಾನ, ನಗರ ಪುನರ್ವಸತಿ ಕಾರ್ಯಕರ್ತರ ನಿಯೋಜನೆಗೆ ಸಂಬಂಧಿಸಿ ಪಾಲಿಕೆ ಕೇಂದ್ರ ಕಚೇರಿಯಲ್ಲಿ ನಡೆದ ಸಭೆ ಉದ್ದೇಶಿಸಿ ಮಾತನಾಡಿದರು. ಎಲ್ಲ 8 ವಲಯಗಳಗಳಲ್ಲಿನ ವಾರ್ಡ್‌ಗಳಲ್ಲಿ ನಗರ ಪುನರ್ವಸತಿ ಕಾರ್ಯಕರ್ತರ (ವಿಆರ್‌ಡಬ್ಲ್ಯು) ನೇಮಕ ಮಾಡಿಕೊಳ್ಳಬೇಕು. ನಂತರ ಅಂಗವಿಕಲರ ವರ್ಗದವರನ್ನು …

Read More »

ಕರ್ನಾಟಕದಲ್ಲಿನ ಮಾದರಿ ಶಾಲೆಗಳಿಗೂ ಕೆಇಎಯಿಂದಲೇ ಪ್ರವೇಶ ಪರೀಕ್ಷೆ

ಬೆಂಗಳೂರು: ರಾಜ್ಯದಲ್ಲಿನ 12 ಏಕಲವ್ಯ ಮಾದರಿ ಶಾಲೆಗಳಿಗೆ 6ನೇ ತರಗತಿಯ ದಾಖಲಾತಿಯ ಪ್ರವೇಶ ಪರೀಕ್ಷೆ ನಡೆಸುವ ಹೊಣೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ವಹಿಸಲಾಗಿದೆ. ಪ್ರವೇಶ ಪರೀಕ್ಷೆ ಫೆ. 15ಕ್ಕೆ ನಿಗದಿಯಾಗಿದ್ದು, ಜನವರಿ 25ರೊಳಗೆ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ. ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಅಟಲ್‌ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾ ಗಾಂಧಿ, ಡಾ.ಬಿ.ಆರ್‌.ಅಂಬೇಡ್ಕರ್‌ ಮುಂತಾದ ವಸತಿ ಶಾಲೆಗಳಿಗೆ ಕೆಇಎಯೇ ಪ್ರವೇಶ ಪರೀಕ್ಷೆ ನಡೆಸುತ್ತಿದ್ದು, ಇದೀಗ ಏಕಲವ್ಯ ಮಾದರಿ …

Read More »

ಗ್ರಾಮ ಆಡಳಿತ ಅಧಿಕಾರಿಗಳನ್ನು ತಕ್ಷಣ ಅವರ ಮೂಲ ಸ್ಥಾನಗಳಿಗೆ ಮರು ನಿಯೋಜಿಸುವಂತೆ ಕಂದಾಯ ಇಲಾಖೆ ಆದೇಶ

ಬೆಂಗಳೂರು : ಜಿಲ್ಲಾಧಿಕಾರಿಗಳು, ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು, ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್‌ಗಳು ಮತ್ತು ತಹಶೀಲ್ದಾರ್‌ಗಳ ಕಚೇರಿಗಳಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಗ್ರಾಮ ಆಡಳಿತ ಅಧಿಕಾರಿಗಳನ್ನು (VAOs) ತಕ್ಷಣ ಬಿಡುಗಡೆ ಮಾಡುವಂತೆ ಕಂದಾಯ ಇಲಾಖೆ ನಿರ್ದೇಶಿಸಿದೆ, ಅವರು ತಮ್ಮ ಮೂಲ ಹುದ್ದೆಗಳಿಗೆ ಮರಳುವಂತೆ ಸೂಚಿಸಿದೆ. ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ಮಂಗಳವಾರ ಸುತ್ತೋಲೆ ಹೊರಡಿಸಿ, ಪದೇ ಪದೇ ಸೂಚನೆಗಳಿದ್ದರೂ, ಹಲವಾರು ವಿಎಒಗಳು ತಮ್ಮ ಗೊತ್ತುಪಡಿಸಿದ ಪಾತ್ರಗಳ ಹೊರಗೆ ಕರ್ತವ್ಯದಲ್ಲಿ ನಿರತರಾಗಿದ್ದಾರೆ ಎಂದು …

Read More »

ಹೈಕೋರ್ಟ್ ತಡೆಯಾಜ್ಞೆ ಅನ್ವಯ ಅತಿಥಿ ಉಪನ್ಯಾಸಕರ ಕೌನ್ಸೆಲಿಂಗ್ ನ್ನು ಮುಂದೂಡಿದ ಕಾಲೇಜು ಶಿಕ್ಷಣ ಇಲಾಖೆ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಆಯ್ಕೆಗಾಗಿ ನಡೆಯಬೇಕಿದ್ದ ಕೌನ್ಸೆಲಿಂಗ್ ಅನ್ನು ಕಾಲೇಜು ಶಿಕ್ಷಣ ಇಲಾಖೆ ಮುಂದೂಡಿದೆ. ಸಂಸ್ಕೃತ, ಚಿತ್ರಕಲಾ ಕಾಲೇಜುಗಳು ಸೇರಿದಂತೆ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾಯಂ ಅಧ್ಯಾಪಕರಿಗೆ ಬೋಧನಾ ಕಾರ್ಯಭಾರ ಹಂಚಿಕೆ ಮಾಡಿದ ಬಳಿಕ ಉಳಿಯುವ ಕಾರ್ಯಭಾರಕ್ಕೆ ಅನುಗುಣವಾಗಿ 2024- 25 ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ಜನವರಿ 2ರಂದು ಅರ್ಜಿ ಆಹ್ವಾನಿಸಲಾಗಿತ್ತು. ವೇಳಾಪಟ್ಟಿಯ ಅನ್ವಯ ಅತಿಥಿ …

Read More »

ಬೆಂಗಳೂರಿನ ದೇವನಹಳ್ಳಿಯಲ್ಲಿ 1,500 ಕೋಟಿ ವೆಚ್ಚದಲ್ಲಿ ರೈಲ್ವೆ ಟರ್ಮಿನಲ್ ಅಧ್ಯಯನಕ್ಕಾಗಿ ನೈರುತ್ಯ ರೈಲ್ವೆ ವಲಯ ಸಿದ್ಧತೆ

ಬೆಂಗಳೂರು: ವಿಸ್ತಾರವಾಗುತ್ತಿರುವ ಬೆಂಗಳೂರಿಗೆ ಪೂರಕವಾಗಿ ಹೊರವಲಯದ ದೇವನಹಳ್ಳಿಯಲ್ಲಿ ಸರಿಸುಮಾರು 1,500 ಕೋಟಿ ವೆಚ್ಚದಲ್ಲಿ ಬೃಹತ್ತಾಗಿ ನಿರ್ಮಿಸಲು ಉದ್ದೇಶಿಸಿರುವ ರೈಲ್ವೆ ಟರ್ಮಿನಲ್‌ಗಾಗಿ ಕಾರ್ಯಸಾಧ್ಯತಾ ಅಧ್ಯಯನಕ್ಕಾಗಿ ನೈಋತ್ಯ ರೈಲ್ವೆ ವಲಯ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈಗಾಗಲೇ ಕೆಎಸ್‌ಆರ್ ರೈಲ್ವೇ ನಿಲ್ದಾಣ ಮರು ನಿರ್ಮಾಣಕ್ಕಾಗಿ ₹1200 ಕೋಟಿ ಯೋಜನೆಯ ನೀಲನಕ್ಷೆ ಸಿದ್ದವಾಗಿದೆ. ಇದಕ್ಕೂ ಮುನ್ನ ಬೈಯಪ್ಪನಹಳ್ಳಿಯಲ್ಲಿ ತಲೆ ಎತ್ತಿರುವ ಸರ್‌ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಸದ್ಯದ ಬೆಂಗಳೂರಿನ ಅತ್ಯಾಧುನಿಕ ರೈಲ್ವೇ ನಿಲ್ದಾಣ ಎನ್ನಿಸಿಕೊಂಡಿದೆ. ಯಶವಂತಪುರ, ಕಂಟೋನ್ಸೆಂಟ್ ರೈಲು …

Read More »

ರಾಜ್ಯದಲ್ಲಿ ಪೌರ ನೌಕರರು ಮತ್ತು ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸುವಲ್ಲಿ ವಿಫಲ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ರಾಜ್ಯದ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಲವು ದಶಕಗಳಿಂದ ಸೇವೆ ಸಲ್ಲಿಸುತ್ತಿರುವ ಪೌರ ನೌಕರರು ಮತ್ತು ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ನ್ಯಾಯಾಲಯ ಹೊರಡಿಸಿರುವ ಆದೇಶ ಪಾಲಿಸದ ಹಿನ್ನೆಲೆಯಲ್ಲಿ ದಾಖಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ನೋಟಿಸ್ ಜಾರಿಗೊಳಿಸಿದೆ. 2023ರ ಜೂನ್‌ 19ರಂದು ಹೈಕೋರ್ಟ್‌ನ ಏಕಸದಸ್ಯ ಪೀಠವು ಹೊರಡಿಸಿರುವ ಆದೇಶದ ಅನ್ವಯ ಸೇವೆ ಕಾಯಂಗೊಳಿಸಲು ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ರಾಜ್ಯ …

Read More »

ಬಿಜೆಪಿ: ಯತ್ನಾಳ್, ರಮೇಶ್ ಜಾರಕಿಹೊಳಿಗೆ ಪಕ್ಷದಿಂದ ಉಚ್ಚಾಟನೆಗೆ ನಿರ್ಣಯ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರನ್ನೇ ಮುಂದುವರಿಸಬೇಕು ಹಾಗೂ ಅವರ ವಿರುದ್ಧ ಮಾತನಾಡುತ್ತಿರುವವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ವಿಜಯೇಂದ್ರ ಗುಂಪಿನ ನಾಯಕರು ಆಗ್ರಹಿಸಿದ್ದಾರೆ. ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ನಿವಾಸದಲ್ಲಿ ಬೆಳಗ್ಗೆ ಸಭೆ ನಡೆಸಿದ ನಾಯಕರು, ವಿಜಯೇಂದ್ರರನ್ನೇ ಮುಂದಿನ 3 ವರ್ಷಗಳ ಅವಧಿಗೆ ಅಧ್ಯಕ್ಷರನ್ನಾಗಿ ಮುಂದುವರಿಸಬೇಕು, ರಾಜ್ಯಾಧ್ಯಕ್ಷರು, ಪಕ್ಷದ ವಿರುದ್ಧ ಮಾತನಾಡುತ್ತಿರುವವರ ವಿರುದ್ಧ ಇದುವರೆಗೆ ಏಕೆ ಕಠಿಣ ಕ್ರಮ ಜರುಗಿಸಿಲ್ಲ?, ಬಸನಗೌಡ ಪಾಟೀಲ್‌ ಯತ್ನಾಳ್‌, ರಮೇಶ್‌ ಜಾರಕಿಹೊಳಿ …

Read More »

2025ರ ಜನಗಣತಿ ಪರಿಗಣಿಸಿ ಒಳ ಮೀಸಲಾತಿ ಕಲ್ಪಿಸಬೇಕು: ಬೋವಿ ಪರಿಷತ್

ಬೆಂಗಳೂರು: ಕೇಂದ್ರ ಸರ್ಕಾರ ಹೊಸತಾಗಿ 2025ರ ಜನಗಣತಿ ಮಾಡುತ್ತಿದ್ದು, ಈ ಜನಗಣತಿಯ ದತ್ತಾಂಶಗಳನ್ನು ಪರಿಗಣಿಸಿ ಎಲ್ಲ ಸಮುದಾಯಗಳಿಗೆ ನ್ಯಾಯುತವಾಗಿ ಒಳ ಮೀಸಲಾತಿ ನಿರ್ಣಯಿಸಬೇಕು ಎಂದು ಆಗ್ರಹಿಸಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ಆಯೋಗದ ಅಧ್ಯಕ್ಷ ಎಚ್‌.ಎನ್. ನಾಗಮೋಹನ್‌ದಾಸ್‌ ಅವರಿಗೆ ಭಾರತೀಯ ಬೋವಿ ಜನಾಂಗದ ಪರಿಷತ್‌ (ಒಡಿ ಕಮ್ಯೂನಿಟಿ ಆಫ್‌ ಇಂಡಿಯಾ ಇಂಟರ್‌ನ್ಯಾಷನಲ್‌) ಮನವಿ ಸಲ್ಲಿಸಿದೆ. 2011ರ ಜನಗಣತಿಯಲ್ಲಿರುವ ಜಾತಿ ಸಮುದಾಯಗಳ ದತ್ತಾಂಶಗಳು 14-15 ವರ್ಷಗಳ ಹಿಂದಿನದ್ದು. ಅದರಲ್ಲಿ ಸಾಕಷ್ಟು ಬದಲಾವಣೆ …

Read More »

ನಿಯೋಜನೆ ಮೇಲೆ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳ ಬಿಡುಗಡೆಗೆ ಸೂಚನೆ

ಬೆಂಗಳೂರು : ಪ್ರಾದೇಶಿಕ ಆಯುಕ್ತರ/ಜಿಲ್ಲಾಧಿಕಾರಿಗಳ/ಉಪವಿಭಾಗಾಧಿಕಾರಿ/ತಹಶಿಲ್ದಾರ್ ಕಚೇರಿಗಳಲ್ಲಿ ನಿಯೋಜನೆ/ಅನ್ನ ಕರ್ತವ್ಯದ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಆಡಳಿತ ಅಧಿಕಾರಿಗಳನ್ನು ಕೂಡಲೇ ಅವರ ಮೂಲಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸಲು ಬಿಡುಗಡೆ ಮಾಡಬೇಕು ಎಂದು ಕಂದಾಯ ಇಲಾಖೆ ಪ್ರಧಾನ ಕಾರ್ಯದಶಿ ರಾಜೇಂದರ್ ಕುಮಾರ್ ಕಟಾರಿಯಾ ಸೂಚನೆ ನೀಡಿದ್ದಾರೆ. ಇಂದು ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಅವರು, ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳನ್ನು ಮೂಲ ಹುದ್ದೆಯಲ್ಲಿಯೇ ಕರ್ತವ್ಯಕ್ಕೆ ನಿಯೋಜಿಸುವಂತೆ ಹಲವು ಬಾರಿ ಸೂಚನೆಗಳನ್ನು ನೀಡಲಾಗಿದ್ದರೂ, ಆ ಅಧಿಕಾರಿಗಳು …

Read More »