admin
February 17, 2022
Breaking News, ಬೆಂಗಳೂರು
ಬೆಂಗಳೂರು: ವಿಧಾನಸಭೆಯಲ್ಲಿ ಇವತ್ತು ನಡೆದ ವಿದ್ಯಮಾನ ಪ್ರಜಾಪ್ರಭುತ್ವವನ್ನೇ ಅಣಕಿಸುವಂತೆ ಇದ್ದು, 2023 ರ ಚುನಾವಣೆಯಲ್ಲಿ ಏನೆಲ್ಲಾ ನಡೆಯುತ್ತದೆ ಎಂಬುದರ ತೋರಿಸಿದ್ದಾರೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸದನದಲ್ಲಿ ನಡೆದ ಘಟನೆಗಳು ಪ್ರಜಾಪ್ರಭುತ್ವಕ್ಕೆ ಶೋಭೆಯಲ್ಲ. ರಾಷ್ಟ್ರೀಯ ಪಕ್ಷಗಳು ತಮ್ಮ ಹಿತಕ್ಕಾಗಿ ಕನ್ನಡಿಗರ ಹಣವನ್ನು ಪೋಲು ಮಾಡುತ್ತಿವೆ. ರಾಜ್ಯದಲ್ಲಿ ಈಗ ಉದ್ಭವಿಸಿರುವ ಶೈಕ್ಷಣಿಕ ಬಿಕ್ಕಟ್ಟಿನ ಬಗ್ಗೆ ಪ್ರಸ್ತಾಪಿಸಲು ನಮಗೆ ಅವಕಾಶವೇ ಸಿಗಲಿಲ್ಲ’ ಎಂದರು.
Read More »
admin
February 17, 2022
Breaking News, ಬೆಂಗಳೂರು
ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಗ್ರಾಮ ಲೆಕ್ಕಿಗ ಹುದ್ದೆಗಳ ಭರ್ತಿಗೆ 14 ಜಿಲ್ಲೆಗಳಿಗೆ ಅನುಮತಿ ನೀಡಿದ್ದು, ಶೇ. 30 ಕ್ಕಿಂತ ಹೆಚ್ಚಿನ ಹುದ್ದೆ ಖಾಲಿ ಇದ್ದ ಜಿಲ್ಲೆಗಳಲ್ಲಿ ನೇರ ನೇಮಕಾತಿ ಪ್ರಾರಂಭಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಕಂದಾಯ ಇಲಾಖೆ ಖಾಲಿ ಹುದ್ದೆಗಳ ಕುರಿತು ಬಿಜೆಪಿ ಸದಸ್ಯ ಎಸ್.ವಿ.ಸುಂಕನೂರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಆರ್.ಅಶೋಕ್, ಕಂದಾಯ ಇಲಾಖೆಯಲ್ಲಿ ಮಂಜೂರಾದ 2,645 …
Read More »
admin
February 17, 2022
Breaking News, ಬೆಂಗಳೂರು
ಬೆಂಗಳೂರು: ಕೇಸರಿ ಧ್ವಜ ಕುರಿತಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಯಲ್ಲಿ ಕಾನೂನಾತ್ಮಕವಾಗಿ ಯಾವುದೇ ಉಲ್ಲಂಘನೆ ಆಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಪಾದಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಹೇಳಿಕೆ ಕುರಿತಂತೆ ಈಗಾಗಲೇ ಸಚಿವರು ಸ್ಪಷ್ಟೀಕರಣ ನೀಡಿದ್ದಾರೆ. ಕೇಸರಿ ಧ್ವಜವನ್ನು 300-400 ವರ್ಷಗಳ ನಂತರ ಹಾರಿಸಲು ಸಾಧ್ಯವಾಗಬಹುದು ಎಂಬುದಾಗಿ ಹೇಳುವ ಜೊತೆಗೆ ರಾಷ್ಟ್ರಧ್ವಜವನ್ನು ಒಪ್ಪಿಕೊಂಡಿದ್ದು, ಎಲ್ಲರೂ ಗೌರವ ನೀಡಬೇಕು ಎಂಬುದನ್ನೂ ತಿಳಿಸಿದ್ದಾರೆ. ಆದರೆ, ಅವರ ಹೇಳಿಕೆಯ ಆಯ್ದ ಭಾಗಗಳನ್ನು …
Read More »
admin
February 16, 2022
Breaking News, ಬೆಂಗಳೂರು
ಬೆಂಗಳೂರು: ಡಿವೈಡರ್ ಹಾರಿ ಲಾರಿಗೆ ಕಾರ್ ಡಿಕ್ಕಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಅಟ್ಟೂರು ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಅಪಘಾತ ಸಂಭವಿಸಿದ್ದು, ನಾಲ್ವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿ, ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಮೃತರು ಗಾರ್ಡನ್ ಸಿಟಿ ಕಾಲೇಜ್ ವಿದ್ಯಾರ್ಥಿಗಳಾಗಿದ್ದು, …
Read More »
admin
February 16, 2022
Breaking News, ಬೆಂಗಳೂರು
ಬೆಂಗಳೂರು: ಜಮೀನು ಸರ್ವೆ ಸಮಸ್ಯೆಗೆ ಆರು ತಿಂಗಳಲ್ಲಿ ಮುಕ್ತಿ ನೀಡುವುದಾಗಿ ಕಂದಾಯ ಸಚಿವ ಆರ್. ಅಶೋಕ್ ಭರವಸೆ ನೀಡಿದ್ದಾರೆ. ಕಳೆದ 5 ವರ್ಷಗಳಿಂದ ಬಾಕಿ ಉಳಿದಿರುವ 2 ಲಕ್ಷ ಪೋಡಿ, ಹದ್ದುಬಸ್ತು, 11ಇ ನಕ್ಷೆ ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಲಾಗುವುದು ಎಂದು ಹೇಳಿದ್ದಾರೆ.2072 ಭೂಮಾಪಕರಿಗೆ ಪರವಾನಿಗೆ ನೀಡಲಾಗುವುದು. ಮನೆಬಾಗಿಲಿಗೆ ಕಂದಾಯ ಇಲಾಖೆ ದಾಖಲೆಗಳನ್ನು ಶೀಘ್ರವೇ ತಲುಪಿಸಲಾಗುವುದು ಎಂದು ಹೇಳಿದ್ದಾರೆ.
Read More »
admin
February 15, 2022
Breaking News, ಬೆಂಗಳೂರು
ಬೆಂಗಳೂರು : ಇಲ್ಲಿಯ ಸೇಂಟ್ ಜಾನ್ ಆಸ್ಪತ್ರೆಗೆ ಹಿರಿಯ ನಟಿ ಭಾರ್ಗವಿ ನಾರಾಯಣ್ ಅವರ ದೇಹದಾನ ಮಾಡಲಾಗಿದೆ. ಬೆಳಿಗ್ಗೆ 11 ಗಂಟೆಯವರೆಗೆ ಭಾರ್ಗವಿ ಅವರ ಸ್ವಗೃಹದಲ್ಲಿಯೇ ಅಂತಿಮ ದರ್ಶನಕ್ಕೆ ಏರ್ಪಾಡು ಮಾಡಲಾಗಿತ್ತು. ನಂತರ ಅಲ್ಲಿಂದ ಪಾರ್ಥಿವ ಶರೀರವನ್ನು ಸೇಂಟ್ ಜಾನ್ ಆಸ್ಪತ್ರೆಗೆ ರವಾನಿಸಲಾಯಿತು. ದೇಹದಾನ ಮತ್ತು ಕಣ್ಣುದಾನ ಮಾಡಬೇಕು ಎನ್ನುವುದು ಸ್ವತಃ ಭಾರ್ಗವಿ ನಾರಾಯಣ್ ಅವರ ಬಯಕೆಯಾಗಿತ್ತು. ಈ ನಿಟ್ಟಿನಲ್ಲಿ ಕುಟುಂಬವು ಅವರ ಆಸೆಯನ್ನು ಈಡೇರಿಸಿದೆ ಎಂದು ನಟ, ನಿರ್ದೇಶಕ …
Read More »
admin
February 15, 2022
Breaking News, ಬೆಂಗಳೂರು
ಬೆಂಗಳೂರು :ಪಿಯುಸಿ, ಪದವಿ ತರಗತಿಗಳು ಫೆ.16 ಬುಧವಾರದಿಂದ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ರಾಜ್ಯದಲ್ಲಿ ಸಮವಸ್ತ್ರ ವಿವಾದ ಭುಗಿಲೆದ್ದಿದ್ದು, ಈ ಸಂಬಂಧ ಸಿಎಂ ‘ಬಸವರಾಜ ಬೊಮ್ಮಾಯಿ’ ನೇತೃತ್ವದಲ್ಲಿ ಮಹತ್ವದ ನಡೆದಿದೆ.ಸಭೆ ಬಳಿಕ ಮಾತನಾಡಿದ ಸಚಿವರು ಫೆ.16 ಬುಧವಾರದಿಂದ ಪಿಯುಸಿ, ಪದವಿ ತರಗತಿಗಳು ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ಹೈಕೋರ್ಟ್ ಸೂಚನೆಯಂತೆ ಕಾಲೇಜು ಪ್ರಾರಂಭಿಸಿದ್ದೇವೆ, ಹೈಕೋರ್ಟ್ ಆದೇಶ ಪಾಲಿಸಬೇಕು. ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ …
Read More »
admin
February 15, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಇಂದು 1568 ಜನರಿಗೆ ಕೊರೋನಾ ಸೋಂಕು ತಗುಲಿದೆ. 25 ಜನ ಸೋಂಕಿತರು ಮೃತಪಟ್ಟಿದ್ದಾರೆ. 6025 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 38,57,323 ಜನ ಗುಣಮುಖರಾಗಿದ್ದು, 39,665 ಜನ ಸೋಂಕಿತರು ಮೃತಪಟ್ಟಿದ್ದಾರೆ.ಒಟ್ಟು ಸೋಂಕಿತರ ಸಂಖ್ಯೆ 39,28,237 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 31,215 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 2.25 ರಷ್ಟು ಇದೆ. ಬೆಂಗಳೂರಿನಲ್ಲಿ ಇಂದು 754 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 5 ಜನ ಸೋಂಕಿತರು ಮೃತಪಟ್ಟಿದ್ದಾರೆ. …
Read More »
admin
February 15, 2022
Breaking News, ಬೆಂಗಳೂರು
ಬೆಂಗಳೂರು: ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಮಾಜದ ಎಲ್ಲ ವರ್ಗದವರು ಅಧಿಕಾರಕ್ಕೆ ಬಂದಂತೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಏರ್ಪಡಿಸಿದ್ದ ಕಾಂಗ್ರೆಸ್ ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಬಿಜೆಪಿಯವರು ಗೋಹತ್ಯೆ, ಮತಾಂತರ, ಕೇಸರಿ ಶಾಲು ವಿಚಾರವಾಗಿ ಮಾತ್ರ ಮಾತನಾಡುತ್ತಾರೆಯೇ ಹೊರತು ಅವರ ಪಕ್ಷದ ಸಾಧನೆ ಬಗ್ಗೆಯಲ್ಲ ಎಂದು ಹೇಳಿದರು.
Read More »
admin
February 14, 2022
Breaking News, ಬೆಂಗಳೂರು
ಬೆಂಗಳೂರು: ಕನ್ನಡ ಸಿನಿಮಾ ರಂಗಕ್ಕೆ ಮತ್ತೊಂದು ಆತಂಕ ಶುರುವಾಗಿದೆ. ಸ್ಯಾಂಡಲ್‌ವುಡ್‌ನ ಹಿರಿಯ ನಟ , ಕಲಾತಪಸ್ವಿ ರಾಜೇಶ್ ಅಸ್ವಸ್ಥಗೊಂಡಿದ್ದಾರೆ. 82 ವರ್ಷದ ರಾಜೇಶ್, ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಇದೀಗ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಜೇಶ್ ಆಸ್ಪತ್ರೆ ಸೇರಿರುವ ವಿಚಾರ ತಿಳಿದು ಕನ್ನಡ ಚಿತ್ರರಂಗ ಕಂಗೆಟ್ಟಿದೆ. ಹಿರಿ-ಕಿರಿಯ ನಟರು, ನಟಿಯರು, ಕಲಾವಿದರು, ತಂತ್ರಜ್ಞರು, ನಿರ್ದೇಶಕ, ನಿರ್ಮಾಪಕರು ಕಂಗಾಲಾಗಿದ್ದಾರೆ. ಅಭಿಮಾನಿಗಳು ಕಲಾತಪಸ್ವಿ ಆರೋಗ್ಯವಾಗಿ ವಾಪಸ್ ಬರಲಿ, ಇನ್ನಷ್ಟು ಕಾಲ ನಮ್ಮ ಜೊತೆಗೆ ಇರಲಿ …
Read More »