Breaking News

ಬೆಂಗಳೂರು

ಬಸ್ ಪ್ರಯಾಣ ದರ ಏರಿಕೆ ಮಾಡುವುದಿಲ್ಲ : ಶ್ರೀರಾಮುಲು

ಬೆಂಗಳೂರು: ಬಸ್ ಪ್ರಯಾಣ ದರ ಏರಿಕೆ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಸಚಿವರು ಮಾಹಿತಿ ನೀಡಿದ್ದಾರೆ.ವೋಲ್ವೋ ಬಸ್ ಪ್ರಯಾಣ ದರವನ್ನು ಈಗಾಗಲೇ ಇಳಿಕೆ ಮಾಡಲಾಗಿದೆ. ಸರ್ಕಾರಕ್ಕೆ ಪ್ರಯಾಣ ದರ ಹೆಚ್ಚಳ ಮಾಡುವ ಉದ್ದೇಶವಿಲ್ಲ ಎಂದು ತಿಳಿಸಿದ್ದಾರೆ.

Read More »

ಹಿಜಾಬ್ ವಿವಾದ ಕುರಿತು ಇಂದು ಸಂಜೆ ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ‘ಸಮವಸ್ತ್ರ’ ವಿವಾದ ಹಿನ್ನೆಲೆ ಇಂದು ಸಂಜೆ ಸಚಿವರು, ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಎಸ್ ಪಿಗಳ ಜೊತೆ ಸಿಎಂ ಬೊಮ್ಮಾಯಿ ಮಹತ್ವದ ಸಭೆ ನಡೆಸಲಿದ್ದಾರೆ. ವರ್ಚುವಲ್ ಮೂಲಕ ಸಭೆ ನಡೆಸಲಿರುವ ಸಿಎಂ ಬೊಮ್ಮಾಯಿ ವಿವಿಧ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಇಂದು ಸಂಜೆ 5 ಗಂಟೆಗೆ ಸಭೆ ನಡೆಯಲಿದೆ ಎಂದು ತಿಳಿದು ಬಂದಿದೆ. ಹೈಕೋರ್ಟ್‌ ಆದೇಶದ ಬೆನ್ನೆಲ್ಲೇ ಮುಖ್ಯಮಂತ್ರಿಗಳು ಮಹತ್ವದ ಸಭೆ ನಡೆಸಿದ್ದು, ರಾಜ್ಯದಲ್ಲಿ …

Read More »

ಯುವ ಕಾಂಗ್ರೆಸ್‌ ನೂತನ ಅಧ್ಯಕ್ಷರಾಗಿ ಮೊಹಮ್ಮದ್‌ ನಲಪಾಡ್‌ ನೇಮಕ

ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್‌ ನೂತನ ಅಧ್ಯಕ್ಷರಾಗಿ ಮೊಹಮ್ಮದ್‌ ನಲಪಾಡ್‌ ‌ಗುರುವಾರ ಅಧಿಕಾರ ಸ್ವೀಕರಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ನಲಪಾಡ್‌ ಅವರಿಗೆ ಯುವ ಕಾಂಗ್ರೆಸ್‌ ಧ್ವಜ ನೀಡಿದರು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ‘ಚುನಾವಣೆಗೆ ವರ್ಷ ಇರುವಾಗಲೇ ಬಿಜೆಪಿಯವರು ಹಿಜಾಬ್ ವಿಚಾರ ಮುಂದಿಟ್ಟು ಮಕ್ಕಳ ಮನಸ್ಸಿನಲ್ಲಿ ದ್ವೇಷ ತುಂಬಿ, ಸಮಾಜ ಒಡೆಯಲು ಹೊರಟಿದ್ದಾರೆ. …

Read More »

ಪದವಿ ಪರೀಕ್ಷೆ ಮುಂದೂಡಿಕೆ ಕೋರಿ ಸರ್ಕಾರಕ್ಕೆ ಮನವಿ ಪತ್ರ

ಬೆಂಗಳೂರು: ಕೋವಿಡ್‌ ಮತ್ತು ಓಮೈಕ್ರಾನ್ ಸೋಂಕು ಹೆಚ್ಚಳ ಹಾಗೂ ಅತಿಥಿ ಉಪನ್ಯಾಸಕರ ಮುಷ್ಕರದಿಂದ ಬೋಧನಾ ಕಾರ್ಯ ಅಪೂರ್ಣವಾಗಿರುವ ಕಾರಣ ಪದವಿ ಕೋರ್ಸುಗಳ ಸೆಮಿಸ್ಟರ್ ಪರೀಕ್ಷೆಯನ್ನು ಕನಿಷ್ಠ ಒಂದು ತಿಂಗಳು ಮುಂದೂಡುವಂತೆ ಕೋರಿ ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ. ಪ್ರದೀಪ್ ಅವರು ಪತ್ರ ಬರೆದಿದ್ದಾರೆ. ‘ಕೆಲವು ವಿಶ್ವವಿದ್ಯಾಲಯಗಳು ಈಗಾಗಲೇ ಸೆಮಿಸ್ಟರ್ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿವೆ. ಆದರೆ, ಬೋಧನಾ ಕಾರ್ಯ ಇನ್ನೂ ಮುಗಿದಿಲ್ಲ. …

Read More »

ನ್ಯಾಯಾಲಯದ ತೀರ್ಪಿಗೆ ಎಲ್ಲರೂ ಬದ್ದರಾಗೋಣ : ಬೊಮ್ಮಾಯಿ

ಬೆಂಗಳೂರು: ಶಾಲಾ-ಕಾಲೇಜುಗಳಲ್ಲಿ ವಸ್ತ್ರಸಂಹಿತೆಗೆ ಸಂಬಂಧಿಸಿದಂತೆ ಶಾಂತಿ ಕದಡುವ ವಿಚಾರ ಮಾತನಾಡದೇ ನಮಗೆ ನಾವೇ ನಿಯಂತ್ರಣ ಹಾಕಿಕೊಳ್ಳೋಣ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ಕಾಯೋಣ. ಪ್ರಜಾಪ್ರಭುತ್ವದಲ್ಲಿ ನ್ಯಾಯಾಲಯದ ತೀರ್ಪಿಗೆ ನಾವೆಲ್ಲರೂ ಗೌರವಕೊಡಬೇಕು. ಶಾಂತಿಯುತ ವಾತಾವರಣ ನೆಲೆಸಬೇಕು. ಸಮಸ್ಯೆಗೆ ನ್ಯಾಯಾಲಯದಲ್ಲಿ ಪರಿಹಾರ ಸಿಗಲು ಸಾಧ್ಯವಿದೆ. ನೀಡಬೇಕಿರುವ ಹೇಳಿಕೆಗಳನ್ನು ಎಲ್ಲರೂ ಈಗಾಗಲೇ ನೀಡಿದ್ದಾರೆ ಎಂದು ಹೇಳಿದರು.ಎರಡೂ ಕಡೆ ಆರೋಪ, ಪ್ರತ್ಯಾರೋಪಗಳು ನಡೆಯುತ್ತಿವೆ. ನ್ಯಾಯಾಲಯದ ತೀರ್ಪಿಗೆ ಬದ್ಧರಾಗೋಣ ಎಂದರು.

Read More »

ಕುಟುಂಬ ವ್ಯಾಮೋಹಕ್ಕಿಂತಲೂ ರಾಜ್ಯದ ಮೇಲೆ ಪ್ರೀತಿ ಹೆಚ್ಚು : ಕುಮಾರಸ್ವಾಮಿ

ಬೆಂಗಳೂರು: ಕೆಲ ಹೋರಾಟಗಾರರು ನಮ್ಮ ಕುಟುಂಬ ರಾಜಕಾರಣದ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ನಮ್ಮ ಕುಟುಂಬದ ಬಗ್ಗೆ ಚರ್ಚೆಗಳು ನಡೆಯುತ್ತಲೇ ಇವೆ. ಈಗ ಅದರ ಬಗ್ಗೆ ಮಾತನಾಡುವುದು ಅಪ್ರಸ್ತುತ. ನಾನು ರಾಜಕಾರಣಕ್ಕೆ ಬರದೇ ಇದ್ದಿದ್ದರೆ ಇಂದು ನಮ್ಮ ಪಕ್ಷ ಇರುತ್ತಿರಲಿಲ್ಲ.ಪಕ್ಷ ಉಳಿಸಿಕೊಳ್ಳಲು ನನ್ನ ಪತ್ನಿಯನ್ನು ಚುನಾವಣಾ ಕಣಕ್ಕಿಳಿಸಬೇಕಾಯಿತು. ನನಗೆ ಕುಟುಂಬ ವ್ಯಾಮೋಹಕ್ಕಿಂತಲೂ ರಾಜ್ಯದ ಮೇಲೆ ವ್ಯಾಮೋಹ, ಪ್ರೀತಿ ಹೆಚ್ಚು ಎಂದು ಎಚ್‌.ಡಿ. ಕುಮಾರಸ್ವಾಮಿ ಹೇಳಿದರು. ಮುಂದಿನ ಚುನಾವಣೆಗೆ ಅವರನ್ನು ನಿಲ್ಲಿಸುವ ಪ್ರಶ್ನೆಯೇ …

Read More »

ಮುಖ್ಯ ಪೋಸ್ಟ್‌ ಮಾಸ್ಟರ್‌ ಜನರಲ್‌ ಆಗಿ ಎಸ್‌. ರಾಜೇಂದ್ರ ಕುಮಾರ್ ನೇಮಕ

ಬೆಂಗಳೂರು: ಕರ್ನಾಟಕ ಅಂಚೆ ವೃತ್ತದ ನೂತನ ಮುಖ್ಯ ಪೋಸ್ಟ್‌ ಮಾಸ್ಟರ್‌ ಜನರಲ್‌ ಆಗಿ ಎಸ್‌. ರಾಜೇಂದ್ರ ಕುಮಾರ್ ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಅವರು, ತೆಲಂಗಾಣ ಅಂಚೆ ವೃತ್ತದ ಮುಖ್ಯ ಪೋಸ್ಟ್‌ ಮಾಸ್ಟರ್‌ ಜನರ್‌ ಆಗಿ ಕಾರ್ಯನಿರ್ವಹಿಸಿದ್ದರು. ಮಂಗಳೂರಿನವರಾದ ಅವರು, 1990ನೇ ಸಾಲಿನ ಭಾರತೀಯ ಅಂಚೆ ಸೇವೆಯ ಅಧಿಕಾರಿಯಾಗಿದ್ದಾರೆ. ಐಐಟಿ ಮದ್ರಾಸ್‌ನಲ್ಲಿ ಲೋಹ ವಿಜ್ಞಾನದಲ್ಲಿ ಬಿ.ಟೆಕ್‌. ಪದವಿ ಪಡೆದಿರುವ ಅವರು, 1987ರಿಂದ 1990ರವರೆಗೆ ಬಿಎಚ್‌ಇಎಲ್‌ನ ಸಂಶೋಧನಾ ಮತ್ತು …

Read More »

ಕರ್ನಾಟಕದಲ್ಲಿ 5,339 ಕೋವಿಡ್ ಪಾಸಿಟಿವ್ ದೃಢ

ಬೆಂಗಳೂರು: ರಾಜ್ಯದಲ್ಲಿ ನಿನ್ನೆ 5 ಸಾವಿರಕ್ಕೂ ಕಡಿಮೆ ಕೇಸ್ ಪತ್ತೆಯಾಗಿದ್ದಂತ ಕೊರೋನಾ ಕೇಸ್ , ಇಂದು ಕೊಂಚ ಏರಿಕೆಯಾಗಿದೆ. ಈ ಮೂಲಕ ರಾಜ್ಯಾಧ್ಯಂತ ಕೋವಿಡ್ ಹಾವು-ಏಣಿಯಾಟ ಮುಂದುವರೆದಿದೆ. ಇಂದು 5,339 ಮಂದಿಗೆ ಕೋವಿಡ್  ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ , ಕಳೆದ 24 ಗಂಟೆಯಲ್ಲಿ 1,28,705 ಜನರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 2,161 ಸೇರಿ …

Read More »

ಬಜೆಟ್ 2022: ಪೂರ್ವಭಾವಿ ಸಭೆ ಆರಂಭಿಸಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬಜೆಟ್ ಪೂರ್ವಭಾವಿ ಸಭೆಯನ್ನು ಆರಂಭಿಸಿದ್ದಾರೆ. ಈಗಾಗಲೇ ಕಂದಾಯ ಇಲಾಖೆ, ಉನ್ನತ ಶಿಕ್ಷಣ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ಲೋಕೋಪಯೋಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜೊತೆಗೆ ಸಿಎಂ ಸಭೆ ನಡೆಸಿ, ಪ್ರಸ್ತಾವನೆ, ಬೇಡಿಕೆಗಳನ್ನು ಆಲಿಸಿದ್ದಾರೆ. ನಿನ್ನೆ 8 ಇಲಾಖೆಯೊಂದಿಗೆ ಸಭೆ ನಡೆಸಿದಂತ ಅವರು, ಇಂದು 12 ಇಲಾಖೆಗಳೊಂದಿಗೆ ಬಜೆಟ್ ತಯಾರಿಯ ಪೂರ್ವಭಾವಿ ಸಭೆಯನ್ನ ನಡೆಸಲಿದ್ದಾರೆ. ಈ …

Read More »

ಹಿಜಾಬ್ ವಿವಾದ : ಫೆ. 22ರವರೆಗೆ ಶಾಲಾ-ಕಾಲೇಜು ಬಂದ್

ಬೆಂಗಳೂರು : ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಗೆ ಬರುವ ಶಾಲಾ-ಕಾಲೇಜುಗಳ ಸುತ್ತಲೂ 200 ಮೀಟರ್ವರೆಗೆ ಜನರು ಗುಂಪುಗೂಡದಂತೆ ಇಂದಿನಿಂದ ಫೆಬ್ರುವರಿ.22ರವರೆಗೆ 144 ಸೆಕ್ಷನ್ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ. ಕಳೆದೆರಡು ದಿನಗಳಿಂದ ಶಿವಮೊಗ್ಗ, ಉಡುಪಿ ಸೇರಿದಂತೆ ಕೆಲ ಶಾಲಾ-ಕಾಲೇಜುಗಳ ಮುಂದೆ ಹಿಜಾಬ್-ಕೇಸರಿ ವಿಚಾರವಾಗಿ ಸಂಘರ್ಷಕ್ಕೆ ಕಾರಣವಾಗಿತ್ತು. ಕಾನೂನು ಸುವ್ಯವಸ್ಥೆಗೆ ಧಕ್ಕೆ ಹಿನ್ನೆಲೆಯಲ್ಲಿ ಸರ್ಕಾರ ಮೂರು ದಿನಗಳ ಕಾಲ ಸರ್ಕಾರ ರಜೆ …

Read More »