Breaking News

ಬೆಂಗಳೂರು

ಹಿಜಾಬ್ ವಿವಾದಕ್ಕೆ ಕಾಂಗ್ರೆಸ್ ಪಕ್ಷ ಕಾರಣ : ಆರ್. ಅಶೋಕ್ ಆರೋಪ

ಬೆಂಗಳೂರು : ಹಿಜಾಬ್ ವಿವಾದಕ್ಕೆ ಕಾಂಗ್ರೆಸ್ ಪಕ್ಷವೇ ಕಾರಣ, ಹಿಜಾಬ್ ಗಲಾಟೆಗೆ ಕಾಂಗ್ರೆಸ್ ಪ್ರೇರಪಣೆ ನೀಡುತ್ತಿದೆ ಎಂದು ಕಂದಾಯ ಸಚಿವ ಅರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ,ಕರ್ನಾಟಕದಲ್ಲಿ ಹಿಜಾಬ್ ಗಲಾಟೆಗೆ ಕಾಂಗ್ರೆಸ್ ಕಾರಣ. ಕಾಂಗ್ರೆಸ್ ಪಕ್ಷ ಒಂದು ವರ್ಗಕ್ಕೆ ಪ್ರೇರಪಣೆ ನೀಡುತ್ತಿದೆ. ಕಾಂಗ್ರೆಸ್ ನ ಇನ್ನೊಂದು ವರ್ಗ ಎರಡೂ ಕಡೆ ಇದೆ. ಕಾಂಗ್ರೆಸ್ ಪಕ್ಷ ಎರಡೂ ಕಡೆ ಇರುವುದು ಒಳ್ಳೆಯದಲ್ಲ. ಕಾಂಗ್ರೆಸ್ ಯಾರ ಪರ …

Read More »

ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಇನಾಂ ಜಮೀನು ರೀ-ಗ್ರಾಂಟ್‍ಗಾಗಿ ಅರ್ಜಿ ಸಲ್ಲಿಸಲು ಒಂದು ವರ್ಷ ಕಾಲಾವಕಾಶ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕದ ಕೆಲವು ಇನಾಂಗಳ ರದ್ದಿಯಾತಿ ನಿಯಮ 1977 ಹಾಗೂ ಕರ್ನಾಟಕ(ಸಂಡೂರು ಪ್ರದೇಶ) ಇನಾಂಗಳ ರದ್ದಿಯಾತಿ ಅಧಿನಿಯಮ 1976 ಕ್ಕೆ ತಿದ್ದುಪಡಿ ತಂದು ಇನಾಂ ಜಮೀನು ರೀ-ಗ್ರಾಂಟ್‍ಗಾಗಿ ಅರ್ಜಿ ಸಲ್ಲಿಸಲು ಒಂದು ವರ್ಷ ಕಾಲಾವಧಿ ವಿಸ್ತರಿಸಿ ಸರ್ಕಾರ ಆದೇಶಿಸಿದೆ.

Read More »

ಹಿಜಾಬ್‌ ವಿವಾದಕ್ಕೆ ಶಿಕ್ಷಣ ಸಚಿವ, ಗೃಹ ಸಚಿವರೇ ಕಾರಣ : ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ವಿವಿಧ ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಹಾಗೂ ಕೇಸರಿ ಶಾಲು ಸಂಘರ್ಷಕ್ಕೆ ರಾಜ್ಯ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನೀಡುತ್ತಿರುವ ಪ್ರಚೋದನಕಾರಿ ಹೇಳಿಕೆಗಳೇ ಕಾರಣ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಹಿಜಾಬ್‌-ಕೇಸರಿ ಶಾಲು ನಡುವಿನ ಸಂಘರ್ಷ ಅತಿರೇಕಕ್ಕೆ ತಲುಪಿ ವಿದ್ಯಾರ್ಥಿಗಳು ಪರಸ್ಪರ ಕಾದಾಟಕ್ಕೆ ಇಳಿದು ಶಾಲಾ-ಕಾಲೇಜುಗಳೇ ಕದನ ಕಣಗಳಾಗುತ್ತಿರುವುದು ಅಪಾಯಕಾರಿ ಬೆಳವಣಿಗೆ. ಸಮಸ್ಯೆಯನ್ನು ಇತ್ಯರ್ಥಗೊಳಿಸುವ ಹೊಣೆಗಾರಿಕೆ ಹೊಂದಿರುವ ರಾಜ್ಯ ಶಿಕ್ಷಣ …

Read More »

ಹಿಜಾಬ್ ವಿವಾದ : ವಿದ್ಯಾರ್ಥಿಗಳಿಗೆ ಮನವಿ ಮಾಡಿದ ಹೈಕೋರ್ಟ್

ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಪ್ರತಿಭಟನೆಗಳು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ವಿಚಾರಣೆ ನಡೆಸುತ್ತಿರುವ ಹೈಕೋರ್ಟ್ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಯ್ದುಕೊಳ್ಳುವಂತೆ ವಿದ್ಯಾರ್ಥಿ ಸಮುದಾಯ ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಅಲ್ಲದೆ, ನ್ಯಾಯಾಲಯಕ್ಕೆ ಜನರ ವಿವೇಕದ ಬಗ್ಗೆ ಸಂಪೂರ್ಣ ವಿಶ್ವಾಸವಿದೆ. ಹಾಗಾಗಿ ಅವರು ಯಾವುದೇ ರೀತಿಯಲ್ಲೂ ಶಾಂತಿ ಸುವ್ಯವಸ್ಥೆಗೆ ಭಂಗವಾಗದಂತೆ ನಡೆದುಕೊಳ್ಳಲಿದ್ದಾರೆ ಎಂದು ಹೈಕೋರ್ಟ್ ಆಶಿಸಿದೆ.

Read More »

ರಾಜ್ಯದಲ್ಲಿ 4452 ಕೋವಿಡ್ ಪ್ರಕರಣ ಪತ್ತೆ

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 4452 ಹೊಸ ಪ್ರಕರಣ ದಾಖಲಾಗಿದ್ದು, 19067 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸೋಂಕಿತರ ಪಾಸಿಟಿವಿಟಿ ದರ ಶೇ.5.1ಕ್ಕೆ ಹಾಗೂ ಸಕ್ರಿಯ ಪ್ರಕರಣ 72,414 ಕ್ಕೆ ಇಳಿಕೆಯಾಗಿದೆ. ಸೋಮವಾರ 88797 ಸ್ವಾéಬ್‌ಗಳನ್ನು ಪರೀಕ್ಷೆ ಒಳಪಡಿಸಲಾಗಿತ್ತು. ಬೆಂಗಳೂರು ನಗರ 2139,ಬೆಳಗಾವಿ 352, ಮೈಸೂರು 222,ತುಮಕೂರು 221,, ದಕ್ಷಿಣ ಕನ್ನಡ 146,ಶಿವಮೊಗ್ಗ 122,ಹಾಸನ 103, ಧಾರವಾಡ 102,ಕೊಪ್ಪಳ 99,ಚಿತ್ರದುರ್ಗ 89,ಕೊಡಗು 81,ಚಾಮರಾಜನಗರ 75, ಕಲಬುರಗಿ 73, ಬಳ್ಳಾರಿ 64 , ಉಡುಪಿ …

Read More »

ಹಿಜಾಬ್ ವಿವಾದ : ತುರ್ತು ಸಂಪುಟ ಸಭೆ ಕರೆದ ಸಿಎಂ

ಬೆಂಗಳೂರು: ಕಾಲೇಜು ಕ್ಯಾಂಪಸ್‌ನಲ್ಲಿ ಹಿಜಾಬ್‌ ವಿವಾದ ಕಿಚ್ಚು ಹಬ್ಬಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಿಗೂ ಕೂಡ ಈ ಸಂಘರ್ಷ ವ್ಯಾಪಿಸಿದೆ.ಇನ್ನು ಈ ವಿವಾದನ್ನು ಬಗೆಹರಿಸಲು ಸರ್ಕಾರ ಕಸರತ್ತು ನಡೆಸಿದ್ದು, ಈ ಬಗ್ಗೆ ಮಹತ್ವದ ಚರ್ಚೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತುರ್ತು ಸಂಪುಟ ಸಭೆ ಕರೆದಿದ್ದಾರೆ. ಸಭೆಯಲ್ಲಿ ಈ ಬಗ್ಗೆ ಸಿಎಂ ಬೊಮ್ಮಾಯಿ ಸಚಿವರ ಅಭಿಪ್ರಾಯ ಕೇಳಲಿದ್ದಾರೆ. ಅಲ್ಲದೇ ಇದನ್ನು ನಿಯಂತ್ರಿಸುವ ಬಗ್ಗೆ ಮಹತ್ವದ ಮಾತುಕತೆಗಳು ನಡೆಸಲಿದ್ದಾರೆ.

Read More »

ಹಿಜಾಬ್ ವಿವಾದ: ಹೈಕೋರ್ಟ್ ಕೊನೆ ನಿರ್ಧಾರ ಕ್ಕೆ ರಾಜ್ಯ ಸರ್ಕಾರ ಮಾನ್ಯತೆ ಮಾಡುತ್ತದೆ

ಬೆಂಗಳೂರು : ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಹಿಜಾಬ್ ವಿವಾದ ನ್ಯಾಯಾಲಯದ ಮೆಟ್ಟಿಲೇರಿದ್ದು, ಇಂದು ಹೈಕೋರ್ಟ್ ವಿಚಾರಣೆ ನಡೆಸಲಿದ್ದು, ಈ ಸಂಬಂಧ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿವಾದ ಸಂಬಂಧ ಹೈಕೋರ್ಟ್ ಯಾವುದೇ ತೀರ್ಪು ಕೊಟ್ಟರು ರಾಜ್ಯ ಸರ್ಕಾರ ಮಾನ್ಯತೆ ಮಾಡುತ್ತದೆ. ಕೋರ್ಟ್ ತೀರ್ಪು ನೋಡಿಕೊಂಡು ಸರ್ಕಾರ ಮುಂದಿನ ತೀರ್ಮಾನ ಮಾಡುತ್ತದೆ. ಯಾವುದೇ ತರಹದ ತೊಂದರೆ ಆಗದಂತೆ ಗೃಹ ಇಲಾಖೆ …

Read More »

ಹಿಜಾಬ್ ವಿವಾದ : ಇಂದು ಸಂಜೆ ಗೃಹ ಸಚಿವರೊಂದಿಗೆ ಮಕತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ಭುಗಿಲೆದ್ದಿದ್ದು, ರಾಜ್ಯ ಸರ್ಕಾರವು ಉನ್ನತ ಮಟ್ಟದ ಸಭೆ ಕರೆದಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ನೇತೃತ್ವದಲ್ಲಿ ಈ ಮಹತ್ವದ ಸಭೆ ನಡೆಯಲಿದ್ದು, ಇದ್ರಲ್ಲಿ ಗೃಹ ಇಲಾಖೆ, ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.ಇನ್ನು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಕೂಡ ಭಾಗಿಯಾಗಲಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಸರ್ಕಾರ, ಹಿಜಾಬ್‌ ಮತ್ತು ಕೇಸರಿ ಶಾಲು ವಿವಾದದ …

Read More »

ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ಲಕ್ಷಕ್ಕಿಂತ ಕಡಿಮೆ ಕೊರೋನಾ ಸೋಂಕು ಪರೀಕ್ಷೆಗಳು ನಡೆದಿದ್ದು, ಹೊಸ ಪ್ರಕರಣಗಳು ಕೂಡಾ ಆರು ಸಾವಿರಕ್ಕೆ ಕುಸಿದಿವೆ. ಇದು 1 ತಿಂಗಳ ಕನಿಷ್ಠ. ಸೋಂಕಿತರ ಸಾವು ಮಾತ್ರ ಐವತ್ತರ ಆಸುಪಾಸಿನಲ್ಲಿಯೇ ಮುಂದುವರೆದಿದೆ. ಸೋಮವಾರ 6,151 ಮಂದಿ ಸೋಂಕಿತರಾಗಿದ್ದು, 49 ಸೋಂಕಿತರು ಸಾವಿಗೀಡಾಗಿದ್ದಾರೆ. 16,802 ಮಂದಿ ಗುಣಮುಖರಾಗಿದ್ದಾರೆ. ಸದ್ಯ 87 ಸಾವಿರ ಸೋಂಕಿತರು ಆಸ್ಪತ್ರೆ/ಮನೆಯಲ್ಲಿ ಚಿಕಿತ್ಸೆ, ಆರೈಕೆಯಲ್ಲಿದ್ದಾರೆ. ಸೋಂಕು ಪರೀಕ್ಷೆಗಳು 99 ಸಾವಿರ ನಡೆದಿದ್ದು, ಪಾಸಿಟಿವಿಟಿ ದರ ಶೇ.6 …

Read More »

ರಾಜ್ಯಾದ್ಯಂತ 3 ದಿನ ಶಾಲಾ-ಕಾಲೇಜುಗಳು ರಜೆ : ಸಿಎಂ ಬೊಮ್ಮಾಯಿ

ಬೆಂಗಳೂರು: ಹಿಜಾಬ್​ ವಿವಾದ ಭುಗಿಲೆದ್ದಿದ್ದು, ಹಲವೆಡೆ ಸಂಘರ್ಷ ವಿಕೋಪಕ್ಕೆ ತಿರುಗಿದೆ. ಪರಿಸ್ಥಿತಿ ನಿಯಂತ್ರಿಸಲು ನಾಳೆಯಿಂದ ರಾಜ್ಯಾದ್ಯಂತ ಮೂರು ದಿನ ಎಲ್ಲ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್​ ಮಾಡಿದ್ದು, ನಾಳೆಯಿಂದ(ಫೆ.9) ಮೂರು ದಿನ ರಾಜ್ಯಾದ್ಯಂತ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆ ರಾಜ್ಯದಲ್ಲಿ ಶಾಂತಿ ಕಾಪಾಡಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.

Read More »