Breaking News

ಬೆಂಗಳೂರು

ಹಿಜಾದ್ ವಿವಾದ ಕುರಿತು ಮಹತ್ವದ ತೀರ್ಮಾನ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವರ್ಸರ್ ಕೇಸರಿ ಶಾಲು ವಿವಾದದ ಬೆನ್ನಲ್ಲೇ, ರಾಜ್ಯ ಸರ್ಕಾರ ಸಮವಸ್ತ್ರ ಕುರಿತಂತೆ ಮಹತ್ವದ ಆದೇಶ ಹೊರಡಿಸಿದೆ. ಅದೇ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿ ಪಡಿಸಿರುವ ಸಮವಸ್ತ್ರವನ್ನು ಕಡ್ಡಾಯವಾಗಿ ಧರಿಸುವಂತೆ ಆದೇಶಿಸಿದೆ. ಈ ಕುರಿತಂತೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ರಾಜ್ಯದ ಎಲ್ಲಾ ಕಾಲೇಜುಗಳಿಗೆ ನಡವಳಿಗಳನ್ನು ಹೊರಡಿಸಿದ್ದು, ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಏಕರೂಪದ ಕಲಿಕಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ …

Read More »

ಹಿಜಾಬ್ ವಿವಾದ ಕುರಿತು ಪ್ರತಿಕ್ರಿಯಿಸಿದ ಆರ್ ಅಶೋಕ್

ಬೆಂಗಳೂರು: ಹಿಜಾಬ್ ಧರಿಸಿ ಕಾಲೇಜಿಗೆ ಬಂದರೂ ತಪ್ಪು ಮತ್ತು ಶಾಲು ಹೊದ್ದು ಬಂದರೂ ತಪ್ಪೇ, ಕೇಸರಿ ಶಾಲಿಗೂ ನಮ್ಮ ವಿರೋಧ ಇರುವಂತೆ ಹಿಜಾಬ್​ಗೂ ವಿರೋಧವಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಪ್ರತಿಕ್ರಿಯಿಸಿದ್ದರು. ಹಿಜಾಬ್ ಧರಿಸುವ ವಿಚಾರ ಕರ್ನಾಟಕದಲ್ಲಿ ದೊಡ್ಡ ವಿವಾದ ಸೃಷ್ಟಿಯಾಗಿದ್ದು, ಈ ಬಗ್ಗೆ ಪರ-ವಿರೋಧ ಚರ್ಚೆಗಳು ಶುರುವಾಗಿದೆ. ಈ ವಿವಾದ ಕುರಿತು ರಾಜಕಾರಣಿಗಳು ಸಹ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತೀದ್ದಾರೆ.

Read More »

ಸಿದ್ದರಾಮಯ್ಯ ಅಲ್ಪಸಂಖ್ಯಾತರೆಂದರೆ ಓಡಿಹೋಗಿ ಸ್ಟೇಟ್ಮೆಂಟ್ ಕೊಡ್ತಾರೆ :ಆರ್ ಅಶೋಕ್

ಬೆಂಗಳೂರು: ಸಿದ್ದರಾಮಯ್ಯಗೂ ಅಲ್ಪಸಂಖ್ಯಾತರಿಗೂ ಭಾರೀ ನಂಟು,ಅಲ್ಪಸಂಖ್ಯಾತರೆಂದರೆ ಓಡಿಹೋಗಿ ಸ್ಟೇಟ್ಮೆಂಟ್ ಕೊಡ್ತಾರೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಲೆಗಳಲ್ಲಿ ಹಿಜಾಬ್ ಕಾನೂನಿಗೆ ವಿರುದ್ಧ ಎಂದು ಸರ್ಕಾರ ಹೇಳಿದೆ. ಟಿಪ್ಪು ಜಯಂತಿ ಮಾಡಿದ್ರು, ಶಾದಿ ಭಾಗ್ಯ ಮಾಡಿದರು ಮುಸ್ಲಿಂಮರಿಗೆ ಮಾತ್ರ. ಹಿಂದೂಗಳಲ್ಲಿ ಎಸ್ ಟಿ ಗಳಲ್ಲಿ‌ ಬಡವರು ಇಲ್ಲವೇ?ಹಿಜಾಬ್ ವಿವಾದ ಕಾಂಗ್ರೆಸ್ ಪ್ರೇರಿತವಾದ ಘಟನೆ ಎಂದರು.

Read More »

ಬೇಟಿ ಬಚಾವೋ ಬೇಟಿ ಪಡಾವೋ ಘೋಷಣೆ ಈಗ ಬೇಟಿ ಹಠಾವೋ ಆಗಿ ಬದಲಾಗುತ್ತಿದೆ: .ಕುಮಾರಸ್ವಾಮಿ

ಬೆಂಗಳೂರು: ಕೇಂದ್ರ ಸರಕಾರದ ಬೇಟಿ ಬಚಾವೋ ಬೇಟಿ ಪಡಾವೋ ಘೋಷಣೆ ಈಗ ಬೇಟಿ ಹಠಾವೋ ಆಗಿ ಬದಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಿಡಿಕಾರಿದರು. ನಗರದಲ್ಲಿ ಇಂದು ತಮ್ಮನ್ನು ಭೇಟಿಯಾದ ಮಾಧ್ಯಮಗಳ ಜತೆ ಮಾತನಾಡಿದ ಅವರು; ” ಹೆಣ್ಣು ಮಕ್ಕಳ ಉದ್ಧಾರಕ್ಕಾಗಿ ಕೇಂದ್ರ ಸರಕಾರ ಭೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಜಾರಿಗೆ ತಂದಿದೆ.ಆದರೆ ಈಗ ರಾಜ್ಯ ಸರಕಾರವು ಅನಗತ್ಯವಾಗಿ ಹಿಜಾಬ್ ವಿಷಯವನ್ನು ವಿವಾದ ಮಾಡುವ ಮೂಲಕ ಭೇಟಿ …

Read More »

ಕಾಂಗ್ರೆಸ್ ತೊರೆದು ಜೆಡಿಎಸ್​ ಸೇರಲು ದಿನಾಂಕ ಪ್ರಕಟಿಸುವೆ : ಸಿ.ಎಂ. ಇಬ್ರಾಹಿಂ

ಬೆಂಗಳೂರು : ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್ ಸೇರುವ ಕುರಿತಂತೆ ಮಹತ್ವದ ಮಾಡಿದ್ದು, ಫೆ. 14 ರಂದು ಹುಬ್ಬಳ್ಳಿ ಸಭೆ ನಂತರ ಜೆಡಿಎಸ್ ಸೇರುವೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ತೊರೆದು ಜೆಡಿಎಸ್​ ಸೇರಲು ದಿನಾಂಕ ಪ್ರಕಟಿಸುವೆ.ಪರಿಷತ್ ಸ್ಥಾನಕ್ಕೆ ರಾಜೀನಾಮೆ ಕೊಡಲು ತೀರ್ಮಾನಿಸಿದ್ದೇ‌ನೆ. ನಾನು ಬಿಟ್ಟರೆ ಇನ್ನು ಕೆಲವರಿಗೆ ಅವಕಾಶ ಸಿಗುತ್ತದೆ. ಇಬ್ರಾಹಿಂಗೆ ಖಾದರ್ ಸರಿಸಮಾನ ಅನ್ನೋದಾದರೆ, ಸಿದ್ದರಾಮಯ್ಯಗೆ ವಿಶ್ವನಾಥ್ …

Read More »

ಪವರ್ ಸ್ಟಾರ್ ಅಭಿಮಾನಿಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಪುನೀತ್​ ಹುಟ್ಟುಹಬ್ಬದ ಪ್ರಯುಕ್ತ ಸಿನಿಮಾದ ಪೋಸ್ಟರ್​ ಒಂದನ್ನ ಬಿಡುಗಡೆ ಮಾಡಿದ್ದ ಚಿತ್ರ ತಂಡ ಈಗ ಸಿನಿಮಾ ಟೀಸರ್​ ಬಿಡುಗಡೆಗೆ ದಿನಾಂಕ ಫಿಕ್ಸ್​ ಮಾಡಿದೆ. ಫೆಬ್ರವರಿ 11 ರಂದು ಸರಿಯಾಗಿ 11 ಗಂಟೆ 11 ನಿಮಿಷಕ್ಕೆ ಜೇಮ್ಸ್​ ಸಿನಿಮಾದ ಟೀಸರ್​ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ. ಇನ್ನೂ ಜೇಮ್ಸ್​ ಸಿನಿಮಾದಲ್ಲಿ ಪ್ರಿಯಾ ಆನಂದ್​ ಹಿರೋಯಿನ್​ ಆಗಿ ನಟಿಸಿದ್ದು, ತೆಲುಗು ನಟ ಶ್ರೀಕಾಂತ್​, ಶರತ್​ ಕುಮಾರ್​ ರಾಘವೇಂದ್ರ ರಾಜ್​ಕುಮಾರ್​, ಮುಂತಾದ ಕಲಾವಿದರು …

Read More »

ಕೋವಿಡ್ ಸೋಂಕು ಇಳಿಕೆ : ಹೈಕೋರ್ಟ್ ಕಲಾಪಗಳಿಗೆ ವಿಧಿಸಿದ್ದ ನಿರ್ಬಂಧ ಸಡಿಲ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ಪ್ರಮಾಣ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಕಲಾಪಗಳಿಗೆ ವಿಧಿಸಿದ್ದ ನಿರ್ಬಂಧಗಳನ್ನು ಸಡಿಲಿಸಲಾಗಿದ್ದು, ಸೋಮವಾರದಿಂದ ಜಾರಿಗೆ ಬರುವಂತೆ ಹೊಸ ಎಸ್‌ಒಪಿ ಹೊರಡಿಸಲಾಗಿದೆ. ಹೈಕೋರ್ಟ್ ಕಲಾಪಗಳಿಗೆ ಸಂಬಂಧಿಸಿದಂತೆ ನೂತನ ಎಸ್‌ಒಪಿ ಪ್ರಕಟಿಸಿ ರಿಜಿಸ್ಟ್ರಾರ್ ಜನರಲ್ ಟಿ.ಜಿ.ಶಿವಶಂಕರೇಗೌಡ ಆದೇಶ ಹೊರಡಿಸಿದ್ದು, ಬೆಂಗಳೂರು ಪ್ರಧಾನ ಪೀಠದಲ್ಲಿ ಭೌತಿಕ ಕಲಾಪಗಳಿಗೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಲಾಗಿದೆ.

Read More »

ರಾಜ್ಯಾದ್ಯಂತ 15 ದಿನಗಳ ಕಾಲ ಮಾಜಿ ಸಿಎಂ ಪ್ರವಾಸ

ಬೆಂಗಳೂರು: 15 ದಿನಗಳಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಳ್ಳಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕನಿಷ್ಠ 130ರಿಂದ 140 ಸೀಟುಗಳನ್ನು ಗೆದ್ದು ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಸಜ್ಜಾಗಿದ್ದಾರೆ. ಬಿಜೆಪಿ ಭಾರಿ ಅಂತರದಲ್ಲಿ ಗೆಲುವುನ್ನು ಸಾಧಿಸಲು ಪ್ರವಾಸ ಕೈಗೊಂಡಿದ್ದಾರೆ.

Read More »

ಉತ್ತರ ಕನ್ನಡ ಜಿಲ್ಲೆಯ 101 ಮುಖಂಡರು ಕಾಂಗ್ರೆಸ್‌ಗೆ ಸೇರ್ಪಡೆ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ವಿವಿಧ ಪಕ್ಷಗಳ 101 ಮುಖಂಡರು ಶುಕ್ರವಾರ ಕಾಂಗ್ರೆಸ್‌ ಪಕ್ಷ ಸೇರಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರನ್ನು ಕಾಂಗ್ರೆಸ್‌ಗೆ ಸ್ವಾಗತಿಸಲಾಯಿತು. ಭಾಸ್ಕರ ಪಟಗಾರ್, ಶಂಕರ್‌ ಗೌಡ, ಅಶೋಕ್‌ ಗೌಡ, ಕೃಷ್ಣ ಗೌಡ, ರಾಜೇಶ್‌ ಗೌಡ, ಮುಕುಂದ ಗೌಡ, ಬಲೀಂದ್ರ ಗೌಡ, ಸುಕ್ರು ಗೌಡ, ಬೊಮ್ಮಣ್ಣ ಪಡಿಗಾರ್‌, ಜಗದೀಶ್ ನಾಯ್ಕ, ನಾಗು ಹಳ್ಳೀರ ಮತ್ತು ಉದಯ ಮಕ್ಕಿ ಶುಕ್ರವಾರ ಕಾಂಗ್ರೆಸ್‌ ಸೇರಿದವರಲ್ಲಿ ಪ್ರಮುಖರು.

Read More »

ಹಿಜಾಬ್ ವಿವಾದ : ಬಿಜೆಪಿ ಮತ್ತು RSS ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಸಿಎಂ

ಬೆಂಗಳೂರು: ಉಡುಪಿ ಜಿಲ್ಲೆಯ ಹಿಜಾಬ್ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಬಿಜೆಪಿ ಮತ್ತು RSS ವಿಎಎರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ತಮ್ಮ ಧರ್ಮಗಳಿಗೆ ಅನುಗುಣವಾಗಿ ವಸ್ತ್ರಧಾರಣೆ ಮಾಡುವ ಹಕ್ಕನ್ನು ದೇಶದ ಸಂವಿಧಾನ ನೀಡಿದೆ’ ಅಂತಾ ಹೇಳುವ ಮೂಲಕ ಹಿಜಾಬ್ ಪರ ಬ್ಯಾಟಿಂಗ್ ಮಾಡಿದ್ದಾರೆ. ‘ತಮ್ಮ ಧರ್ಮಗಳಿಗೆ ಅನುಗುಣವಾಗಿ ವಸ್ತ್ರಧಾರಣೆ ಮಾಡುವ ಹಕ್ಕನ್ನು ದೇಶದ ಸಂವಿಧಾನ ನೀಡಿದೆ. ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸುವ …

Read More »