admin
February 4, 2022
Breaking News, ಬೆಂಗಳೂರು
ಬೆಂಗಳೂರು: ವಿಧಾನಪರಿಷತ್ಗೆ ನಡೆಯಲಿರುವ 4 ಸ್ಥಾನಗಳ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಗೊಳಿಸಿದೆ. ಎರಡು ಪದವೀಧರ ಮತ್ತು ಎರಡು ಶಿಕ್ಷಕರ ಕ್ಷೇತ್ರಕ್ಕೆ ರಾಜ್ಯ ಬಿಜೆಪಿ ಘಟಕ ಕಳುಹಿಸಿರುವ ಅಭ್ಯರ್ಥಿಗಳ ಪಟ್ಟಿಗೆ ಹೈಕಮಾಂಡ್ ಹಸಿರುನಿಶಾನೆ ತೋರಿದೆ. ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಹಾಲಿ ಸದಸ್ಯ ಅರುಣ್ ಶಹಪುರ್, ವಾಯುವ್ಯ ಪದವೀಧರ ಕ್ಷೇತ್ರದಿಂದ ಹಾಲಿ ಮತ್ತೋರ್ವ ಸದಸ್ಯ ಹನುಮಂತ ನಿರಾಣಿ, ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಮೋಹನ್ ಲಿಂಬಿಕಾಯಿ ಮತ್ತು ದಕ್ಷಿಣ ಪದವೀಧರ ಕ್ಷೇತ್ರಕ್ಕೆ ಗೋ. …
Read More »
admin
February 4, 2022
Breaking News, ಬೆಂಗಳೂರು
ಬಾಗಲಕೋಟೆ: ಯಾವುದೇ ಕಾರಣಕ್ಕೂ ಸಿ.ಎಂ. ಇಬ್ರಾಹಿಂ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳಲು ಸಾಧ್ಯವೇ ಇಲ್ಲ. ಅವರ ಧೂಳು ಕೂಡ ಬಿಜೆಪಿಗೆ ಬರಬಾರದು ಎಂದು ಸಚಿವ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಈಶ್ವರಪ್ಪ, ಇಬ್ರಾಹಿಂ ಅವರನ್ನು ಯಾವ ಕಾರಣಕ್ಕೂ ಬಿಜೆಪಿಗೆ ಸೇರಿಸಲ್ಲ.ರಾಷ್ಟ್ರವಾದಿ ಮುಸ್ಲಿಂರನ್ನು ಮಾತ್ರ ಬಿಜೆಪಿಗೆ ಸೇರಿಸಿಕೊಳ್ಳುತ್ತೇವೆ ಎಂದರು. ಇದೇ ವೇಳೆ ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ, ಕಾಂಗ್ರೆಸ್ ಶಾಸಕರನ್ನೇ ಹಿಡಿದಿಟ್ಟುಕೊಳ್ಳಲು ಆಗಿಲ್ಲ, 17 …
Read More »
admin
February 3, 2022
Breaking News, ಬೆಂಗಳೂರು
ಬೆಂಗಳೂರು : ಕೊರೊನಾ ಪರೀಕ್ಷೆ ಸಂಬಂಧ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಮಾರ್ಗಸೂಚಿಯಲ್ಲಿರುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಕೊರೊನಾ ಸೋಂಕಿನ ಲಕ್ಷಣಗಳಿದ್ದರೆ ಮಾತ್ರ ಟೆಸ್ಟ್ ಮಾಡಿಸಬೇಕು. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಆಯುಕ್ತರು ಆದೇಶ ಹೊರಡಿಸಿದ್ದು, ಕೋವಿಡ್ ಸೋಂಕಿನ ಪ್ರಕರನಗಳನ್ನು ತ್ವರಿತವಾಗಿ ಪತ್ತೆ ಹಚ್ಚುವುದು ಮತ್ತು ಸೂಕ್ತ ಚಿಕಿತ್ಸೆಯನ್ನು ಖಚಿತಪಡಿಸಿಕೊಳ್ಳುವುದು ಹಾಗೂ ಹಿರಿಯ ನಾಗರಿಕರಿಗೆ ( 60 ವರ್ಷ …
Read More »
admin
February 3, 2022
Breaking News, ಬೆಂಗಳೂರು
ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ರೈಲಿಗೆ ತಲೆಕೊಟ್ಟು ಯುವಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ. ಯಾದಗಿರಿ ಮೂಲದ ಹನುಮಂತು (23) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹನುಮಂತುಗೆ ಕಿಡ್ನಿ ಫೇಲ್ಯೂರ್ ಆಗಿತ್ತು.ಇದರಿಂದ ಮನನೊಂದು ಯಶವಂತಪುರದ ಕೊಲಂಬಿಯಾ ಆಸ್ಪತ್ರೆ ಬಳಿಯ ರೈಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯುವಕನ ತಂದೆ-ತಾಯಿ ಬಿಬಿಎಂಪಿಯಲ್ಲಿ ಕೂಲಿ ಕಾರ್ಮಿಕರಾಗಿದ್ದರು. ಹನುಮಂತನಿಗೆ ಚಿಕಿತ್ಸೆ ಕೊಡಿಸಿಸಿದ್ದರೂ ಪ್ರಯೋಜನವಾಗಿರಲಿಲ್ಲ. ಯಶವಂತಪುರ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »
admin
February 3, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 6 ರಿಂದ 8 ನೇ ತರಗತಿಗೆ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿಗೆ ಸರ್ಕಾರ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದ್ದು, ಅಗತ್ಯ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಎಲ್ಲ ಜಿಲ್ಲಾ ಉಪನಿರ್ದೇಶಕರಿಗೆ ಸೂಚನೆ ನೀಡಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಆರ್. ವಿಶಾಲ್ ಅವರು ಡಿಡಿಪಿಐಗಳಿಗೆ ಈ ಸಂಬಂಧ ಸೂಚನೆ ನೀಡಿದ್ದು, ಕಲ್ಯಾಣ ಕರ್ನಾಟಕದ 6 ಶೈಕ್ಷಣಿಕ ಜಿಲ್ಲೆಗಳ ಶಾಲೆಗಳಿಗೆ ಒಟ್ಟು 5000 …
Read More »
admin
February 3, 2022
Breaking News, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 20505 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 38,44,338ಕ್ಕೆ ಏರಿಕೆಯಾಗಿದೆ. ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಬರೋಬ್ಬರಿ 81 ಮಂದಿ ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 39137ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
Read More »
admin
February 2, 2022
Breaking News, ಬೆಂಗಳೂರು
ಬೆಂಗಳೂರು: ದ್ವಿತೀಯ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ. 2021 -22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಒಟ್ಟು 42 ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಬಿಡುಗಡೆ ಮಾಡಲಾಗಿದೆ.pue.kar.nic.in ವೆಬ್ಸೈಟ್ ನಲ್ಲಿ ಪ್ರಶ್ನೆಪತ್ರಿಕೆಗಳು ಲಭ್ಯವಿವೆ. ವಿದ್ಯಾರ್ಥಿಗಳು ಗಮನಿಸಬಹುದಾಗಿದೆ. ಏಪ್ರಿಲ್ 16 ರಿಂದ ಮೇ 4 ರವರೆಗೆ ಸೆಕೆಂಡ್ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ಎನ್ನಲಾಗಿದೆ.
Read More »
admin
February 2, 2022
Breaking News, ಬೆಂಗಳೂರು
ಬೆಂಗಳೂರು: ಬಜೆಟ್ ಪೂರ್ವಭಾವಿ ಸಿದ್ಧತೆಗಾಗಿ ಫೆ.7 ರಿಂದ ಇಲಾಖಾವಾರು ಚರ್ಚೆಯ ವೇಳಾಪಟ್ಟಿ ನಿಗದಿ ಮಾಡಲಾಗಿದ್ದು, ಫೆ.10 ಮಧ್ಯಾಹ್ನ 12ಕ್ಕೆ ಸಚಿವ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಮಾಧ್ಯಮದವರೊಂದಿಗೆ ಮಾತನಾಡಿ, ಪೂರ್ವಭಾವಿ ಸಭೆಗಳನ್ನು ಮುಂದಿನ ವಾರದಿಂದ ನಡೆಸಲಾಗುವುದು. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ದೊರೆಯಲಿರುವ ಸಾಲ ಹಾಗೂ ಅನುದಾನಗಳ ಆಧಾರದ ಮೇಲೆ ರಾಜ್ಯ ಸರ್ಕಾರದ ಆಯವ್ಯಯದ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಹೇವಿವಿಧ ಇಲಾಖೆಗಳೊಂದಿಗೆಳಿದರು.
Read More »
admin
February 2, 2022
Breaking News, ಬೆಂಗಳೂರು
ಬೆಂಗಳೂರು: ಬಜೆಟ್ ನಲ್ಲಿ ಘೋಷಿಸಿದ ನದಿ ಜೋಡಣೆ ವಿಚಾರದಲ್ಲಿ ನಮಗೆ ಅನ್ಯಾಯವಾದರೆ ನಾವು ಒಪ್ಪುವುದಿಲ್ಲ. ನಮ್ಮ ರಾಜ್ಯದ ನೀರಿಗೆ ತೊಂದರೆಯಾಗಬಾರದು. ನೀರು ಹಂಚಿಕೆಯಲ್ಲಿ ಸಮಸ್ಯೆ ಆದ್ರೆ ನಾವು ಅನುಮತಿ ಕೊಡುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನದಿ ಜೋಡಣೆ ಯೋಜನೆಗೆ ರಾಜ್ಯ ಸರ್ಕಾರದ ಅನುಮತಿ ಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ. ನಮಗೆ ಅನ್ಯಾಯವಾಗುವ ರೀತಿಯಿದ್ದರೆ ನಾವು ಒಪ್ಪುವುದಿಲ್ಲ ಎಂದರು.
Read More »
admin
February 2, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಸದ್ಯ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿದೆ. ಆದರೆ ಸಾವಿನ ಸಂಖ್ಯೆ ಹೆಚ್ಚಾಗಿದ್ದು, ಭೀತಿಗೆ ಕಾರಣವಾಗಿದೆ. ಕಳೆದ ಹತ್ತು ದಿನದಲ್ಲಿ ಕೊರೊನಾ ಸಾವಿನ ಸಂಖ್ಯೆ ಹೆಚ್ಚಳವಾಗಿದೆ. ಜನವರಿ 22 ರಿಂದ 31ರ ವರೆಗೆ ಕರ್ನಾಟಕದಲ್ಲಿ ಸುಮಾರು 461 ಮಂದಿ ಮೃತಪಟ್ಟಿದ್ದಾರೆ. ಇದರಲ್ಲಿ 39 ಮಂದಿ ಚಿಕತ್ಸೆಗೆ ಮುನ್ನವೇ ಕೊರೊನಾಗೆ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ. 39 ಸಾವಿನ ಪೈಕಿ, 32 ಮಂದಿ ಮನೆಯಲ್ಲೇ ಸಾವಿಗೀಡಾಗಿದ್ದಾರೆ. ಇನ್ನು 7 ಮಂದಿ …
Read More »