admin
February 2, 2022
Breaking News, ಬೆಂಗಳೂರು
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಅಶೋಕ್ ರಾವ್ ಇಂದು ನಿಧನರಾಗಿದ್ದಾರೆ.ಕ್ಯಾನ್ಸರ್ ನಿಂದ ಬಳಲುತ್ತಿದ್ದಂತ ಅವರು ಇಹಲೋಕ ತ್ಯಜಿಸಿದ್ದಾರೆ. ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದಂತ ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ವಿದ್ಯಾರಣ್ಯಪುರದ ನಿವಾಸದಲ್ಲಿ ಅಶೋಕ್ ರಾವ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥ ಮಾಡಲಾಗಿದೆ
Read More »
admin
February 1, 2022
Breaking News, ಬೆಂಗಳೂರು
ಬೆಂಗಳೂರು: ಸಚಿವೆ ನಿರ್ಮಲಾ ಸೀತರಾಮನ್ ಮಂಡಿಸಿದ ಕೇಂದ್ರದ ಬಜೆಟ್ ಗೆ ಸಚಿವ ಸುಧಾಕರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2022-23ನೇ ಸಾ ಲಿನ ಆಯವ್ಯಯವು ಕೋವಿಡ್ ನಿಂದ ದೇಶದ ಆರ್ಥಿಕತೆಯ ಮೇಲೆ ಬಿದ್ದಿರುವ ಹೊಡೆತವನ್ನು ತಪ್ಪಿಸೋಕೆ ಈ ಬಜೆಟ್ ಪೂರಕವಾ ಗಿದೆ. ಹೀಗಾಗಿ ಬಜೆಟ್ ಮಂಡಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪ್ರಧಾನಿ …
Read More »
admin
February 1, 2022
Breaking News, ಬೆಂಗಳೂರು
ಬೆಂಗಳೂರು: ಚಲಿಸುತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್ ಚಾಲಕ ತಕ್ಷಣ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಹೊರಕ್ಕೆ ಕಳಿಸಿರುವ ಘಟನೆ ಇಲ್ಲಿಯಜಯನಗರ ಸೌತ್ ಎಂಡ್ ಸರ್ಕಲ್ ಬಳಿ ಅಂತಹುದೆ ಮತ್ತೊಂದು ಘಟನೆ ನಡೆದಿದೆ. ಘಟನೆಯಲ್ಲಿ ಯಾವುದೆ ಪ್ರಾಣಾಪಾಯ ಅಗಿಲ್ಲ. ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
Read More »
admin
January 31, 2022
Breaking News, ಬೆಂಗಳೂರು
ಮೈಸೂರು: ಸಿದ್ದರಾಮಯ್ಯ ನೀವೊಬ್ಬರೇ ಗಂಡಸರಾ? ನಿಮ್ಮನ್ನು ಯಾವ ಪ್ರಮುಖ ನಾಯಕರು ಅಂತ ಕರೆಯುತ್ತಿದ್ದಾರೆ, ಸಿದ್ದರಾಮಯ್ಯ ಕಾಂಗ್ರೆಸ್ ಪಾಲಿನ ಭಸ್ಮಾರ ಅಂತ ಬಿಜೆಪಿ ಹೆಚ್.ವಿಶ್ವನಾಥ್ ಪ್ರಶ್ನೆ ಮಾಡಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾತನಾಡಿದ್ದಾರೆ, ಇದೇ ವೇಳೆ ಅವರು ಮಾತನಾಡಿ, ಸಿದ್ದರಾಮಯ್ಯ ಕಾಂಗ್ರೆಸ್ ಮುಗಿಸಿ ಹೊರಡುತ್ತಾರೆ ಅಂತ ಹೇಳಿದರು.ಅವರ ಬೆಂಬಗಲಿಗರು ಮಾತ್ರ ಅವರನ್ನು ನಾಯಕರು ಕರೆಯುತ್ತಿದ್ದಾರೆ ಅಂತ ಹೇಳಿದರು.
Read More »
admin
January 31, 2022
Breaking News, ಬೆಂಗಳೂರು
ಬೆಂಗಳೂರು: ಕರ್ನಾಟಕದ ಸಿಂಗಂ ಎಂದೆ ಖ್ಯಾತಿ ಆಗಿರುವ ಐಪಿಎಸ್ ಅಧಿಕಾರಿ ರವಿ ಡಿ.ಚನ್ನಣ್ಣನವರ್ ವಿರುದ್ಧ ಅಕ್ರಮ ಭೂಕಬಳಿಕೆ ಆರೋಪ ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿತ್ತು. ಯೂತ್ ಐಕಾನ್ ಆಗಿ ಗುರುತಿಸಿಕೊಂಡ ರವಿ ವಿರುದ್ಧ ಭ್ರಷ್ಟಾಚಾರದ ಆರೋಪ ಜನಸಾಮಾನ್ಯರಲ್ಲೂ ಸಾಕಷ್ಟು ಪ್ರಶ್ನೆಗಳನ್ನ ಹುಟ್ಟುಹಾಕಿತ್ತು. ಕೊನೆಗೂ ಮೌನ ಮುರಿದ ರವಿ, ಪ್ರೆಸ್ನೋಟ್ನಲ್ಲಿ ಮಹತ್ವದ ವಿಚಾರ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆಯನ್ನು ನೀಡಿರುವ ಅವರು, ‘ಕೆಲ ವ್ಯಕ್ತಿಗಳು ನನ್ನ ಹಾಗೂ ನನ್ನ ಕುಟುಂಬದ ಮೇಲೆ ದುರುದ್ದೇಶದಿಂದ ಸುಳ್ಳು …
Read More »
admin
January 31, 2022
Breaking News, ಬೆಂಗಳೂರು
ಬೆಂಗಳೂರು: ಕಾಂಗ್ರೆಸ್ ನಲ್ಲಿ ಎರಡೇ ಅಲ್ಲ, ಮೂರು ಗುಂಪುಗಳಿವೆ. ಡಿಕೆಶಿ ಹಾಗೂ ಸಿದ್ದರಾಮಯ್ಯ ಎಣ್ಣೆ ನೀರು ಇದ್ದಂಗೆ. ಅವರಿಬ್ಬರು ಒಂದಾಗಲು ಸಾಧ್ಯವೇ ಇಲ್ಲ ಎಂದು ಸಚಿವ ಗೋವಿಂದ ಕಾರಜೋಳ ಟೀಕಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸ್ಥಿತಿ ಗಂಭೀರವಾಗಿದ್ದು, ಅವರವರಲ್ಲೇ ಮೂರು ಗುಂಪುಗಳಿವೆ. ಸಿದ್ದರಾಮಯ್ಯ, ಡಿಕಶಿ ಎರಡು ಗುಂಪಾದರೆ ಮೂರನೇಯ ಗುಂಪಿನಲ್ಲಿ ಖರ್ಗೆ, ಪರಮೇಶ್ವರ, ಶಾಮನೂರು ಶಿವಶಂಕರಪ್ಪ ಸೇರಿದಂತೆ ಇನ್ನಿತರರಿದ್ದಾರೆ ಎಂದು ಹೇಳಿದರು. ಇದೇ ವೇಳೆ ಬಿಜೆಪಿಯ ಕೆಲ ಶಾಸಕರು ಕಾಂಗ್ರೆಸ್ …
Read More »
admin
January 30, 2022
Breaking News, ಬೆಂಗಳೂರು
ಮೈಸೂರು : ಮಹಾರಾಜರನ್ನು ಬಿಟ್ಟರೇ ನಾನೇ ಅತಿ ಹೆಚ್ಚು ಅಂತರದಿಂದ ಗೆದ್ದಿದ್ದೇನೆ ಎಂದಿದ್ದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ್ ಶನಿವಾರ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಂಸದ ಆರ್ ಧ್ರುವನಾರಾಯಣ್ , ಸಂಸದ ವಿ ಶ್ರೀನಿವಾಸ ಪ್ರಸಾದ್ ಅವರು ಈ ಹಿಂದೆ 1.65 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು.ನಾನು ಸಹ 1.41 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದೆ.ಕಳೆದ ಲೋಕಸಭಾ ಚುನಾವಣೆಯಲ್ಲಿ ಅತಿಯಾದ ಆತ್ಮವಿಶ್ವಾಸದಿಂದಾಗಿ …
Read More »
admin
January 30, 2022
Breaking News, ಬೆಂಗಳೂರು
ಬೆಂಗಳೂರು : ಹಿರಿಯ ಕಾಂಗ್ರೆಸ್ ಶಾಸಕ ಯು.ಟಿ ಖಾದರ್ ವಿಧಾನಸಭೆ ವಿಪಕ್ಷ ಉಪನಾಯಕರಾಗಿ ಆಯ್ಕೆ ಮಾಡಲಾಗಿದೆ. ಸಿದ್ದರಾಮಯ್ಯ ಆಪ್ತ ಯು.ಟಿ ಖಾದರ್‌ಗೆ ಸ್ಥಾನ ನೀಡಲಾಗಿದೆ.ವಿಧಾನ ಪರಿಷತ್‌ನಲ್ಲಿ ವಿಪಕ್ಷ ನಾಯಕ ಸ್ಥಾನ ಮುಸ್ಲಿಂ ಸಮುದಾಯದ ನಾಯಕನಿಗೆ ತಪ್ಪಿದ ಹಿನ್ನೆಲೆ ವಿಧಾನ ಸಭೆಯಲ್ಲಿ ವಿಪಕ್ಷ ಉಪನಾಯಕನ ಸ್ಥಾನ ಮುಸ್ಲಿಂ ಸಮುದಾಯಕ್ಕೆ ಕಾಂಗ್ರೆಸ್ ಹೈಕಮಾಂಡ್ ನೀಡಿದೆ. ಯು.ಟಿ ಖಾದರ್‌ಗೆ ಸ್ಥಾನ ಕಲ್ಪಿಸುವ ಮೂಲಕ ಸಿದ್ದರಾಮಯ್ಯ, ಹಾಗೂ ಅಲ್ಪಸಂಖ್ಯಾತರನ್ನ ಎಐಸಿಸಿ ಸಮಾಧಾನ ಪಡಿಸಿದೆ ಎಂದು ಹೇಳಲಾಗಿದೆ. ಎಐಸಿಸಿ …
Read More »
admin
January 30, 2022
Breaking News, ಬೆಂಗಳೂರು
ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮುಸುಕಿನ ಗುದ್ದಾಟ ಈಗ ಬಯಲಾಗಿದೆ ಎಂದು ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನ ಮುಸುಕಿನ ಗುದ್ದಾಟ ಈಗ ಬಯಲಾಗಿದೆ. ಸಿದ್ದರಾಮಯ್ಯಗಿಂತ ಮೇಲಿದ್ದೇನೆ ಎಂದು ತೋರಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಂದ ಮೇಕೆದಾಟು ಪಾದಯಾತ್ರೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
Read More »
admin
January 30, 2022
Breaking News, ಬೆಂಗಳೂರು
ಬೆಂಗಳೂರು: ನಿವೃತ್ತ ಐಪಿಎಸ್ ಅಧಿಕಾರಿ ಎಂ. ನಾರಾಯಣ ಗೌಡ ನಿನ್ನೆ ರಾತ್ರಿ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಕೇಂದ್ರ ವಿಭಾಗ ಡಿಸಿಪಿ ಎಂ.ಎನ್ ಅನುಚೇತ್ ಅವರ ತಂದೆ ನಾರಾಯಣ ಗೌಡ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಎಂ.ಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ 11 ಗಂಟೆ ಸುಮಾರಿಗೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
Read More »