Breaking News

ಬೆಂಗಳೂರು

ಕಾಂಗ್ರೆಸ್ ಗೂ ನಮಗೂ ಇನ್ನು ಮುಗಿದ ಅಧ್ಯಾಯ : ಇಬ್ರಾಹಿಂ

ಬೆಂಗಳೂರು : ಸಿದ್ದರಾಮಯ್ಯಗಾಗಿ ದೇವೇಗೌಡರನ್ನು ಬಿಟ್ಟಿದ್ದೇವು. ಜೈಲಿನಲ್ಲಿದ್ದು ಕಟ್ಟಿದ್ದ ಪಕ್ಷ ಜೆಡಿಎಸ್ ಬಿಟ್ಟಿದ್ದೇವು, ಕಾಂಗ್ರೆಸ್ ಗೂ ನಮಗೂ ಇನ್ನೂ ಮುಗಿದ ಅಧ್ಯಾಯ ಎಂದು ಎಂ.ಎಲ್.ಸಿ ಸಿ.ಎಂ ಇಬ್ರಾಹಿಂ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಶೀಘ್ರದಲ್ಲೇ ನನ್ನ ನಿರ್ಧಾರವನ್ನು ತಿಳಿಸುತ್ತೇನೆ. ಕಾಂಗ್ರೆಸ್ ಗೂ ನಮಗೂ ಇನ್ನು ಮುಗಿದ ಅಧ್ಯಾಯ ಎಂದು ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ಗೆ ಗುಡ್ ಬೈ ಹೇಳುವ ಸುಳಿವು ನೀಡಿದ್ದಾರೆ. ಸಿದ್ದರಾಮಯ್ಯಗೆ ಹೊಸ ರಾಜಕೀಯ ಜೀವನ ಕೊಟ್ಟೆವು. …

Read More »

ಬಿಟ್ಟು ಹೋದವರನ್ನ ಮತ್ತೆ ಕರೆದುಕೊಳ್ಳುವುದಿಲ್ಲ : ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಮತ್ತು ಕಾಂಗ್ರೆಸ್ ನ ಹಲವು ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಸಿದ್ದರಾಮಯ್ಯ ಬಾಂಬ್ ಸಿಡಿಸಿದ್ದರು. ಅದಕ್ಕೆ ಬಿಜೆಪಿ ನಾಯಕರು ಕೆಂಡಾಮಂಡಲಾರಾಗಿದ್ದರು.ಸಚಿವ ಆರ್ ಅಶೋಕ್ ಕೂಡ ಆ ವಿಚಾರಕ್ಕೆ ಗರಂ ಆಗಿ ಉತ್ತರ ಕೊಟ್ಟಿದ್ದರು. ಸೂರ್ಯ ಚಂದ್ರ ಒಂದಾದರೂ ಬಿಟ್ಟು ಹೋದವರನ್ನ ಸೇರಿಸಿಕೊಳ್ಳಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಈಗ ಈ ರೀತಿ ಮಾತಾಡುತ್ತಿದ್ದಾರಲ್ಲ ಎಂದಿದ್ದರು. ಇದೇ ವಿಚಾರಕ್ಕೆ ಇದೀಗ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಬಿಟ್ಟು ಹೋದವರನ್ನ …

Read More »

ರಾಜ್ಯದಲ್ಲಿ 41,400 ಜನರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ  ಇಂದು ಹೊಸದಾಗಿ 41,400 ಜನರಿಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಸೋಂಕಿನಿಂದ 52 ಮಂದಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್  ಅವರು ಮಾಹಿತಿ ಹಂಚಿಕೊಂಡಿದ್ದು, ಕಳೆದ 24 ಗಂಟೆಯಲ್ಲಿ 1,55,054 ಜನರಿಗೆ ಕೊರೋನಾ ಪರೀಕ್ಷೆ ಮಾಡಲಾಗಿದೆ. ಇವರಲ್ಲಿ ಬೆಂಗಳೂರಿನ 19,105 ಮಂದಿ ಸೇರಿದಂತೆ ರಾಜ್ಯಾಧ್ಯಂತ 41,400 ಜನರಿಗೆ ಕೋವಿಡ್ ದೃಢಪಟ್ಟಿದೆ. ಹೀಗಾಗಿ ಪಾಸಿಟಿವಿಟಿ ದರ 26.70ಕ್ಕೆ ಏರಿಕೆಯಾಗಿರೋದಾಗಿ ತಿಳಿಸಿದೆ.

Read More »

ಮಾಜಿ ಸಿಎಂ ವಿರುದ್ಧ ಹೊಸ ಬಾಂಬ್ ಸಿಡಿಸಿದ ರಮೇಶ ಜಾರಕಿಹೊಳಿ

ಬೆಂಗಳೂರು : ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿ ಇದ್ದಾರೆ . ಸಿದ್ದರಾಮಯ್ಯ ಅವರು ಯಾರನ್ನೂ ವಾಪಸ್ ತೆಗೆದುಕೊಳ್ಳುವುದಿಲ್ಲ ಅಂತ ಅಧಿವೇಶನದಲ್ಲಿ ಹೇಳಿದ್ದರು. ಈಗ ಯಾಕೆ ನಮ್ಮವರು ಬೇಕು ಅಂತಾರೆ  ಎಂದು ಬಿಜೆಪಿ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಬಿಡುವಾಗ 36 ಜನ ನನ್ನ ಜೊತೆ ಇದ್ದರು.ಅದರಲ್ಲಿ 17 ಜನ ಮಾತ್ರ ಬಿಜೆಪಿಗೆ ಬಂದೆವು.ಉಳಿದವರೂ ನಮ್ಮ ಜೊತೆ ಇದ್ದಾರೆ ಎಂದು ಹೇಳಿದ್ದಾರೆ. ದಯವಿಟ್ಟು ಸಿದ್ದರಾಮಯ್ಯ ಹಾಗೆಲ್ಲ ಮಾತಾಡಬಾರದು. …

Read More »

ಕಾಂಗ್ರೆಸ್ ನಾಯಕ, ಮಾಜಿ ಕೇಂದ್ರ ಸಚಿವ ʼRPN ಸಿಂಗ್ʼ ಬಿಜೆಪಿಗೆ ಸೇರ್ಪಡೆ

ಜಾರ್ಖಂಡ್ : ಕಾಂಗ್ರೆಸ್ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಆರ್ ಪಿಎನ್ ಸಿಂಗ್ ಮಂಗಳವಾರ ಬಿಜೆಪಿ ಸೇರಿದ್ದಾರೆ. ಜಾರ್ಖಂಡ್ ಮತ್ತು ಛತ್ತೀಸ್‌ಗಢದ ಕಾಂಗ್ರೆಸ್ ಉಸ್ತುವಾರಿ ಸಿಂಗ್ ಅವ್ರು ತಮ್ಮ ರಾಜೀನಾಮೆ ಪತ್ರವನ್ನ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರಿಗೆ ಕಳುಹಿಸಿದ್ದು, ದೇಶ, ಜನರು ಮತ್ತು ಪಕ್ಷಕ್ಕೆ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಕ್ಕಾಗಿ ಧನ್ಯವಾದ ಅರ್ಪಿಸಿದ್ದಾರೆ. ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಸಚಿವರನ್ನಾಗಿ ಮಾಡಿದ ಜಿತಿನ್ ಪ್ರಸಾದ ಅವರ ನಂತರ ಬಿಜೆಪಿ …

Read More »

ಒಮಿಕ್ರಾನ್ ಕುರಿತು ಆತಂಕ ಪಡುವ ಅಗತ್ಯವಿಲ್ಲ

ಬೆಂಗಳೂರು : ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಪ್ರಭಾವದಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ನಿನ್ನೆ‌ ಒಂದೇ ದಿನ 50 ಸಾವಿರ ಹೊಸ ಪ್ರಕರಣ ಪತ್ತೆಯಾಗಿವೆ. ಇತ್ತ ಸೋಂಕಿತರ ಸಂಖ್ಯೆ ಇನ್ನಷ್ಟು ಉತ್ತುಂಗಕ್ಕೇರುವ ಸಾಧ್ಯತೆ ಬಗ್ಗೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆದರೆ, ಈ ಕೋವಿಡ್ ಮೂರನೇ ಅಲೆಯು ಜ್ವರ, ಕೆಮ್ಮು, ನೆಗಡಿಗಷ್ಟೇ ಸೀಮಿತವಾಗುತ್ತಾ? ಇಂತಹದೊಂದು ಪ್ರಶ್ನೆ ಸಹಜವಾಗಿ ಕಾಡುತ್ತೆ.‌ ಯಾಕೆಂದರೆ, 50,000 ಕೇಸ್ ಬಂದ್ರೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗುತ್ತಿಲ್ಲ.‌ ಹೀಗಾಗಿ, ಆತಂಕ …

Read More »

ಬೆಳಗಾವಿ ಬಿಜೆಪಿ ಸಭೆ ಕುರಿತು ಅಸಮಧಾನ ಹೊರ ಹಾಕಿದ ರಮೇಶ ಜಾರಕಿಹೊಳಿ

‌ ಬೆಂಗಳೂರು : ಅರಣ್ಯ ಸಚಿವ ಉಮೇಶ ಕತ್ತಿ ಮನೆಯಲ್ಲಿ ನಡೆದ ಬೆಳಗಾವಿ ಜಿಲ್ಲೆಯ ಬಿಜೆಪಿ ಪ್ರಮುಖ ಮುಖಂಡರ ರಹಸ್ಯ ಸಭೆ ಬಗ್ಗೆ ಬಿಜೆಪಿ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿ‌ ಅವರು ಸೋಮವಾರ ಪ್ರತಿಕ್ರಿಯೆ ನೀಡಿದ್ದು, ನಾನು ಅಂತಹ ಸಭೆಗೆ ಹೋಗುವುದಿಲ್ಲ,ಪ್ರೀತಿ ಇರುವ ಸಭೆಗೆ ಮಾತ್ರ ಹೋಗುತ್ತೇನೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಹೈಕಮಾಂಡ್ ಬಹಳ ಬುದ್ದಿವಂತ ಇದೆ.ಯಾರು ಎನ್ ಮಾಡ್ತಾರೆ ಅವರಿಗೆ ಗೊತ್ತಿದೆ.ಆವತ್ತಿನ …

Read More »

28 ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ : ಇಲ್ಲಿದೆ ಸಂಪೂರ್ಣ ಪಟ್ಟಿ

ಬೆಂಗಳೂರು: ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆ ಸದ್ದಿನ ಬೆನ್ನಲ್ಲೇ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 28 ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶಿಸಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಮುಖ್ಯಮಂತ್ರಿಗಳ ದಿನಾಂಕ 24-01-2022ರ ಟಿಪ್ಪಣಿಯಂತೆ ಈ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಕಂಡಂತ ಜಿಲ್ಲೆಗಳಿಗೆ ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿ ಆದೇಶಿಸಿರೋದಾಗಿ ತಿಳಿಸಿದೆ. ಜಿಲ್ಲಾ …

Read More »

ರಾಜ್ಯದಲ್ಲಿ ಇಂದು 50,210 ಕೊರೋನಾ ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ  ಮಹಾಸ್ಪೋಟವೇ ಉಂಟಾಗಿದೆ. ಇದುವರೆದೆ 40 ಸಾವಿರ ಆಸುಪಾಸಿನಲ್ಲಿದ್ದಂತ ಕೊರೋನಾ ಪ್ರಕರಣಗಳ  ಸಂಖ್ಯೆ ಇಂದು ಅರ್ಧ ಲಕ್ಷ ದಾಟಿದೆ. ಕಳೆದ 24 ಗಂಟೆಯಲ್ಲಿ ಹೊಸದಾಗಿ 50,210 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ  ಮಾಹಿತಿ ಹಂಚಿಕಿಕೊಂಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್  ಅವರು, ಕಳೆದ 24 2,20,459 ಮಂದಿಗೆ ಕೊರೋನಾ ಪರೀಕ್ಷೆ  ಮಾಡಲಾಗಿದೆ. ಇವರಲ್ಲಿ ಬೆಂಗಳೂರಿನ 26,299 ಸೇರಿದಂತೆ …

Read More »

ರಾಜ್ಯದಲ್ಲಿ 165 ಓಮಿಕ್ರಾನ್ ಕೇಸ್‍ ಪತ್ತೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್‌ ನ ರೂಪಾಂತರಿ ಓಮಿಕ್ರಾನ್‌ ತನ್ನ ಕಬಂದ ಬಾಹುಗಳನ್ನು ಕ್ಷಿಪ್ರಗತಿಯಲ್ಲಿ ಚಾಚುತ್ತಿದೆ. ರಾಜ್ಯದಲ್ಲಿಂದು 165 ಹೊಸ ಓಮಿಕ್ರಾನ್ ಕೇಸ್‍ಗಳು ವರದಿಯಾಗಿದೆ. ಈ ಎಲ್ಲಾ ಪ್ರಕರಣಗಳು ಬೆಂಗಳೂರಿನಲ್ಲಿಯೇ ಪತ್ತೆಯಾಗಿವೆ.ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಸುಧಾಕರ್ ಅವರು, ಬೆಂಗಳೂರಿನಲ್ಲಿ ಇಂದು 165 ಹೊಸ ಓಮಿಕ್ರಾನ್ ಪ್ರಕರಣಗಳು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 931 ಕ್ಕೆ ತಲುಪಿದೆ ಎಂದು ತಿಳಿಸಿದ್ದಾರೆ. ಇನ್ನು ರಾಜ್ಯದಲ್ಲಿ …

Read More »