admin
January 23, 2022
ಬೆಂಗಳೂರು
ಬೆಂಗಳೂರು: ನಗರದ ಟೌನ್ಹಾಲ್ ಮುಂಭಾಗ ನಡೆದ ಭೀಕರ ಲಾರಿ ಅಪಘಾತದಲ್ಲಿ ವಿಜಯವಾಣಿಯ ಮುಖ್ಯ ಉಪ ಸಂಪಾದಕರಾದ ಎಸ್.ಎಸ್ ಗಂಗಾಧರ ಮೂರ್ತಿಯವರು (49) ನಿಧನರಾಗಿದ್ದಾರೆ. ಮೃತರು, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇಂದು ಮಧ್ಯಾಹ್ನ ಎಸ್.ಎಸ್ ಗಂಗಾಧರ ಮೂರ್ತಿಯವರು ಬೈಕ್ನಲ್ಲಿ ಚಾಮರಾಜಪೇಟೆಯಲ್ಲಿರುವ ವಿಜಯವಾಣಿ ಕಚೇರಿಗೆ ಬರುತ್ತಿದ್ದಾಗ, ಟೌನ್ ಹಾಲ್ ಬಳಿ ನಿಯಂತ್ರಣ ತಪ್ಪಿದ ಲಾರಿ ಡಿವೈಡರ್ ಡಿಕ್ಕಿ ಹೊಡೆದು ಬಿದ್ದಿದೆ. ಈಗ ಲಾರಿ ಅಡಿಯಲ್ಲಿ ಸಿಲುಕಿದ ಗಂಗಾಧರ ಮೂರ್ತಿ ತೀವ್ರವಾಗಿ ಗಾಯಗೊಂಡಿದ್ದರು. …
Read More »
admin
January 23, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ (6ರಿಂದ 8ನೇ ತರಗತಿ) ಬೋಧನೆಗೆ 15 ಸಾವಿರ ಪದವೀಧರ ಶಿಕ್ಷಕರ (ಜಿಪಿಟಿ) ನೇಮಕಾತಿ ಮಾಡಿಕೊಳ್ಳುವ ಸಂಬಂಧ ರಾಜ್ಯ ಸರಕಾರ ಕರಡು ಅಧಿಸೂಚನೆ ಪ್ರಕಟಿಸಿದೆ. ಈ ಬಾರಿ ಎಂಜಿನಿಯರಿಂಗ್ ಶಿಕ್ಷಣ ಪಡೆದಿರುವವರಿಗೂ ಶಿಕ್ಷಕರಾಗುವ ಅವಕಾಶ ಕಲ್ಪಿಸಿದೆ. 45 ವರ್ಷಗಳ ವರೆಗಿನ ವಯೋಮಿತಿ ನೀಡಲಾಗಿದೆ. ಪದವಿಯಲ್ಲಿ ಶೇ.50ರಷ್ಟು ಅಂಕ ಮತ್ತು ‘ಬಿ.ಇಡಿ’ ವಿದ್ಯಾರ್ಹತೆ ಹೊಂದಿದವರನ್ನು ಜಿಪಿಟಿ ಶಿಕ್ಷಕರ ಹುದ್ದೆಗಳಿಗೆ ಪರಿಗಣಿಸಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. …
Read More »
admin
January 23, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ತಡರಾತ್ರಿ ಹೃದಯಾಘಾತದಿಂದ ಹೈಕೋರ್ಟ್ ನಿ. ನ್ಯಾಯಮೂರ್ತಿ ಕೆ.ಎಲ್. ಮಂಜುನಾಥ್ ವಿಧಿವಶರಾಗಿದ್ದಾರೆ. ಗಡಿ ಸಂರಕ್ಷಣಾ ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ನ್ಯಾ. ಮಂಜುನಾಥ್ ನಿಧನರಾಗಿದ್ದು, ಬೆಂಗಳೂರಿನ ಕಾಮಾಕ್ಷಿಪಾಳ್ಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
Read More »
admin
January 22, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ಕೊರೊನಾ ಸೋಂಕಿನಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ದೂರವಾಣಿ ಕರೆ ಮಾಡುವ ಮೂಲಕ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆರೋಗ್ಯ ವಿಚಾರಿಸಿದರು. ನಂತರ ಮಣಿಪಾಲ ಆಸ್ಪತ್ರೆಯ ವೈದ್ಯರೊಂದಿಗೆ ಮಾತನಾಡಿ ಗೌಡರ ಆರೋಗ್ಯ ಸ್ಥಿತಿಗತಿ ಕುರಿತು ಮಾಹಿತಿ ಪಡೆದರು. ದೇವೇಗೌಡರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.
Read More »
admin
January 22, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ICMR ಮಾರ್ಗಸೂಚಿಯಂತೆ ಕೊರೊನಾ ಲಕ್ಷಣ ಹೊಂದಿರುವವರಿಗೆ ಮಾತ್ರ ಟೆಸ್ಟ್ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಆಗಿರುವುದು ಸಮಾಧಾನ ತಂದಿದೆ. ವೈಜ್ಞಾನಿಕವಾಗಿ ಪರಾಮರ್ಶೆ ಮಾಡಿ, ತಜ್ಞರ ಅಭಿಪ್ರಾಯ ಪಡೆದು ಸರ್ಕಾರ ವೀಕೆಂಡ್ ಕರ್ಫ್ಯೂ ರದ್ದು ಮಾಡಿದೆ ಎಂದು ಹೇಳಿದರು.
Read More »
admin
January 22, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ‘ಜಗದೀಶ ಶೆಟ್ಟರ್ ನೇತೃತ್ವದ ಬಿಜೆಪಿ ಸರ್ಕಾರ ಟಿಪ್ಪು ಸುಲ್ತಾನ್ ಅವರನ್ನು ಹಾಡಿ, ಹೊಗಳಿ ಗ್ರಂಥ ಪ್ರಕಟಿಸಿದ್ದಾಗ ಬಾಯಿ ಮುಚ್ಚಿಕೊಂಡಿದ್ದೇಕೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನೀಲ್‌ಕುಮಾರ್ ಅವರನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪರೇಡ್‌ಗೆ ಟಿಪ್ಪು ಸುಲ್ತಾನ್ ಸ್ತಬ್ಧಚಿತ್ರ ಕಳುಹಿಸಿದ್ದನ್ನು ಟೀಕಿಸಿರುವ ಸಚಿವರಿಗೆ ಪ್ರತಿಕ್ರಿಯೆ ನೀಡಿರುವ ಅವರು, ‘ಬಿಜೆಪಿ ಸರ್ಕಾರ ಪ್ರಕಟಿಸಿದ್ದ ಟಿಪ್ಪು ಸುಲ್ತಾನ್ …
Read More »
admin
January 21, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ನಗರದಲ್ಲಿ ಇತ್ತಿಚೆಗೆ ಪೊಲೀಸರ ಮೇಲೆ ಭ್ರಷ್ಟ ಆರೋಪಗಳ ಸಂಖ್ಯೆ ಹೆಚ್ಚಾಗುತ್ತಿವೆ. ಹೀಗಾಗಿ ಖುದ್ದು ಕಮಿಷನರ್ ಕಮಲ್ ಪಂಥ್ ರಿಯಾಕ್ಟ್ ಮಾಡಿದ್ದಾರೆ. ಪೊಲೀರ ಮೇಲೆ ಹದ್ದಿನ ಕಣ್ಣೀಡಲು ಡಿಸಿಪಿಗಳಿಗೆ ಪಂಥ್ ಸೂಚನೆ ಕೊಟ್ಟಿದ್ದಾರೆ. ಇಷ್ಟೇ ಅಲ್ಲದೆ ಖಡಕ್ ವಾರ್ನಿಂಗ್ ಕೂಡ ಕೊಟ್ಟಿದ್ದು, ಭ್ರಷ್ಟಾಚಾರದಲ್ಲಿ ತೊಡಗುವ ಯಾವೂದೇ ಅಧಿಕಾರಿ ಆದ್ರೂ ಬಿಡಲ್ಲ, ಅವ್ರ ಮೇಲೆ ಮುಲಾಜಿಲ್ಲದೆ ಕ್ರಮ ಕೈ ಗೊಳ್ಳುತ್ತೆ ಎಂದು ವಾರ್ನ್ ಮಾಡಿದ್ದಾರೆ.
Read More »
admin
January 21, 2022
Breaking News, ಬೆಂಗಳೂರು
ಬೆಂಗಳೂರು: ನಮಗೆ ದಿಲ್ಲಿಗೆ ಹೋಗುವ ಚಟ ಇದೆ ಹಳೆಯ ಸ್ನೇಹಿತರಿದ್ದಾರೆ ಅವರೊಂದಿಗೆ ಭೇಟಿ ಮಾಡಿ ಬರುತ್ತೇನೆ ಎಂದು ಶುಕ್ರವಾರ ಬಿಜೆಪಿ ಹಿರಿಯ ನಾಯಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಸಂಪುಟ ಪುನಾರಚನೆ ಯಾವಾಗಾದರೂ ಮಾಡಲಿ, ಒಳ್ಳೆಯ ಆಡಳಿತ ನೀಡಲಿ. ಯುಗಾದಿ ಹೊತ್ತಿಗೆ ಬದಲಾವಣೆ ಆಗುತ್ತದೆ. ಬದಲಾವಣೆ ಜಗದ ನಿಯಮ. ಬದಲಾವಣೆ ಆಗದಿದ್ದರೆ ಅದನ್ನು ಯುಗಾದಿ ಸಂಕ್ರಮಣ ಅಂತ ಯಾಕೆ ಕರೆಯಬೇಕು ಎಂದರು.
Read More »
admin
January 21, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಒಂದು ವೇಳೆ ಮುಂದಿನ ದಿನಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾದ್ರೇ ಮತ್ತ ವೀಕೆಂಡ್ ಕರ್ಪ್ಯೂವನ್ನು ಮುಂದುವರೆಸಲಾಗುತ್ತದೆ. ಇದೀಗರಾಜ್ಯದಲ್ಲಿ ಜಾರಿಗೊಳಿಸಿದ್ದಂತ ವೀಕೆಂಡ್ ಕರ್ಪ್ಯೂವನ್ನು ರದ್ಧುಗೊಳಿಸಲಾಗುತ್ತಿದೆ. ಒಂದು ವೇಳೆ ಮುಂದಿನ ದಿನಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾದ್ರೇ ಮತ್ತೆ ಮುಂದುವರೆಸಲಾಗುತ್ತದೆ. ಆಸ್ಪತ್ರೆಗೆ ಸೇರುವವರ ಸಂಖ್ಯೆಯ ಆಧಾರದ ಮೇಲೆ ಈ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್ ತಿಳಿಸಿದರು. ಸಿಎಂ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಸಭೆಯ ನಿರ್ಧಾರಗಳನ್ನು ಸುದ್ದಿಗಾರರೊಂದಿಗೆ …
Read More »
admin
January 21, 2022
Breaking News, ಬೆಂಗಳೂರು
ಬೆಂಗಳೂರು: ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಅದನ್ನ ನಿಯಂತ್ರಿಸಲು ಕರ್ನಾಟಕ ಸರ್ಕಾರ ವೀಕೆಂಡ್, ನೈಟ್ ಕರ್ಫ್ಯೂ ಜಾರಿ ಮಾಡಿದೆ.ಆದ್ರೆ, ಇದೀಗ ಅದಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಮಾಜಿ ಮುಖ್ಯಂತ್ರಿ ಸಿದ್ದರಾಮಯ್ಯ ಸಹ ಸಹ ವೀಕೆಂಡ್ ಕರ್ಫ್ಯೂಗೆ ವಿರೋಧಿಸಿದ್ದು, ಬದಲಿಗೆ ಸೋಂಕು ನಿಯಂತ್ರಣಕ್ಕೆ ಮಹತ್ವದ ಸಲಹೆ ಕೊಟ್ಟಿದ್ದಾರೆ.
Read More »