admin
January 14, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಜನರು ಕೊರೋನಾ ಮಾರ್ಗಸೂಚಿ ಕ್ರಮಗಳನ್ನು ಅನುಸರಿಸಿ.ಮಾಸ್ಕ್, ಸಾಮಾಜಿಕ ಅಂತರದಂತ ನಿಯಮ ಪಾಲಿಸಿ. ಸದ್ಯದ ಈಗಿನ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವಂತ ಕೋವಿಡ್ ಸೋಂಕಿತರ ಪ್ರಮಾಣ ಗಮನಿಸಿದ್ರೇ.. ಲಾಕ್ ಡೌನ್ ಮಾಡಿ ಕೊರೋನಾ ನಿಯಂತ್ರಣ ಮಾಡೋ ಪ್ರಮೇಯವಿಲ್ಲ ಎಂದು ಹೇಳುವ ಮೂಲಕ ರಾಜ್ಯದಲ್ಲಿ ಲಾಕ್ ಡೌನ್ ಇಲ್ಲವೇ ಇಲ್ಲ ಎಂಬುದಾಗಿ ಆರೋಗ್ಯ ಸಚಿವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಕೊರೋನಾ ಸೋಂಕಿನ ಪ್ರಮಾಣ ಫೆಬ್ರವರಿ …
Read More »
admin
January 13, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಏರಿಕೆ ಕ್ರಮದಲ್ಲಿ ಸಾಗುತ್ತಿದ್ದು, ಜನರಲ್ಲಿ ಆತಂಕ ಉಂಟಾಗಿದೆ. ಇಂದು 25 ಸಾವಿರಕ್ಕೂ ಅಧಿಕ ಮಂದಿಗೆ ಕೊರೋನಾ ಸೋಂಕು ತಗುಲಿದೆ. ರಾಜಧಾನಿ 18 ಸಾವಿರಕ್ಕೂ ಅಧಿಕ ಮಂದಿಗೆ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಇವತ್ತು ಕೊರೋನಾ ಮಹಾಸ್ಪೋಟವಾಗಿದ್ದು 25,005 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
Read More »
admin
January 13, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ಅತಿ ಹೆಚ್ಚು ವೇಗವಾಗಿ ಹರಡುವ ಸಾಂಕ್ರಾಮಿಕ ರೋಗ ಇದು. ಮೊದಲ ಅಲೆಯಲ್ಲಿ ಡಬ್ಲಿಂಗ್ ರೇಟ್ 10-12 ದಿನಗಳ ಅಂತರ ಇತ್ತು. ಎರಡನೇ ಅಲೆಯಲ್ಲಿ ಡಬ್ಲಿಂಗ್ ರೇಟ್ 8 ದಿನಕ್ಕೆ ಬಂದಿತ್ತು. ಇದೀಗ 3ನೇ ಅಲೆಯಲ್ಲಿ ಎರಡರಿಂದ ಮೂರು ದಿನಕ್ಕೆ ಬಂದಿದೆ. 72 ಗಂಟೆಗಳ ಒಳಗಿನ ನೆಗೆಟಿವ್ ರಿಪೋರ್ಟ್ ಕಡ್ಡಾಯ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿಕೆ ನೀಡಿದ್ದಾರೆ. ಕೊರೊನಾ ಬೆಂಗಳೂರಲ್ಲಿ ಶೇ.75ರಷ್ಟು, ಉಳಿದ ಜಿಲ್ಲೆಗಳಲ್ಲಿ …
Read More »
admin
January 13, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ನಡುವೆ ಸಚಿವ ಕೆ.ಸಿ.ನಾರಾಯಣಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಕೆ.ಸಿ.ನಾರಾಯಣಗೌಡ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.😢
Read More »
admin
January 13, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ರಾಜ್ಯದಲ್ಲಿ 21,390 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರು ನಗರದಲ್ಲಿಯೇ 15,617 ಹೊಸ ಪ್ರಕರಣ ಪತ್ತೆಯಾಗಿದೆ. ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಬುಧವಾರ ಈ ಕುರಿತು ಟ್ವೀಟ್ ಮಾಡಿದ್ದಾರೆ. ರಾಜ್ಯದ ಪಾಸಿಟಿವಿಟಿ ದರ ಶೇ 10.96ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 24 ಗಂಟೆಯಲ್ಲಿ 1,541 ಜನರು ಡಿಸ್ಚಾರ್ಜ್ ಆಗಿದ್ದಾರೆ, 10 ಜನರು ಸಾವನ್ನಪ್ಪಿದ್ದಾರೆ.
Read More »
admin
January 13, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ವಿಧಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತು ರಾಜ್ಯ ಸರ್ಕಾರದ ಕಾರ್ಯದರ್ಶಿ ಸಿ.ಎಸ್ ರವಿಕುಮಾರ್ ಆದೇಶ ಹೊರಡಿಸಿದ್ದಾರೆ. ಈ ಕೂಡಲೇ ಪಾದಯಾತ್ರೆಯನ್ನು ನಿಲ್ಲಿಸುವಂತೆ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿ ಆದೇಶ ಹೊರಡಿಸಿದೆ. ಪಾದಯಾತ್ರೆಯ ವಾಹನ ಸಂಚಾರ,ಜನಸಂಚಾರ ನಿಷೇಧಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.ಸರ್ಕಾರದ ಆದೇಶ ಉಲ್ಲಂಘಿಸಿ ಪಾದಯಾತ್ರೆ ಮುಂದುವರೆಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಎಚ್ಚರಿಕೆ ನೀಡಿದೆ.
Read More »
admin
January 12, 2022
Breaking News, ಕರ್ನಾಟಕ, ಬೆಂಗಳೂರು
: ಬೆಂಗಳೂರು: ಬೆಳಗಾವಿ ಮತ್ತು ಮೈಸೂರಿನಲ್ಲಿ ಶಾಲೆಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿನ ಶಾಲೆಗಳು, ವಸತಿ ಶಾಲೆಗಳು, ಹಾಸ್ಟೆಲ್ ಗಳಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ತೀವ್ರ ಏರಿಕೆ ಕಾಣುತ್ತಿದ ಕಾರಣದಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 1 ರಿಂದ 9ನೇ ತರಗತಿ ಬಂದ್ ಆಗಿರುವುದರಿಂದ ಮಕ್ಕಳಿಗೆ ಕಲಿಕೆ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ಚಂದನವಾಹಿನಿಯಲ್ಲಿ ನಾಳೆಯಿಂದ ವಿಡಿಯೋ ಪಾಠ ಪ್ರಸಾರ ಮಾಡಲಾಗುತ್ತದೆ.
Read More »
admin
January 12, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆ ಮಧ್ಯಾಹ್ನ 12 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮೀಟಿಂಗ್ ಮಾಡಲಾಗಿತ್ತು. ಬೆಂಗಳೂರಿನ ಕೆ ಆರ್ ಸರ್ಕಲ್ ನಲ್ಲಿರುವ ಸಮಗ್ರ ಶಿಕ್ಷಣದಲ್ಲಿ ಇಲಾಖೆಯಲ್ಲಿ ಶಿಕ್ಷಣ ಸಚಿವರಿಂದ ಮಹತ್ವದ ಸಭೆ ನಡೆಸಲಾಗಿತ್ತು. ಇನ್ನೂ ಸಭೆಯಲ್ಲಿ ರಾಜ್ಯದ ಡಿಡಿಪಿಐ, ಬಿಇಓಗಳು ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗಿಯಾಗಲಿದ್ದಾರೆ. ಅಲ್ಲದೇ ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಶಾಲೆ ಬಂದ್ ಆಗಿವೆ. ಹೀಗಾಗಿ ರಾಜ್ಯದ ಶಾಲೆಗಳ ಸ್ಥಿತಿಗತಿ ಬಗ್ಗೆ ತಿಳಿದುಕೊಳ್ಳಲು ಸಭೆ ನಡೆಸಲಾಗುತ್ತಿದೆ …
Read More »
admin
January 11, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವೈದ್ಯರ ಸಲಹೆ ಮೇರೆಗೆ ಇಂದು ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಆಸ್ಪತ್ರೆಗೆ ದಾಖಲಾಗಿದ್ದಾರೆ. ಲಘು ರೋಗಲಕ್ಷಣಗಳಿದ್ದು, ಮನೆಯಲ್ಲೇ ಐಸೋಲೇಟ್ ಆಗಿದ್ದ ಮುಖ್ಯಮಂತ್ರಿಗಳನ್ನು ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಸಮಸ್ಯೆ ಇಲ್ಲ ಎಂದು ವೈದ್ಯರು ತಿಳಿಸಿದ್ದು, ಕೆಲವೊಂದು ತಪಾಸಣೆ ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ. ನಿನ್ನೆ ಮುಖ್ಯಮಂತ್ರಿಗಳಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಇಂದು ಅವರ ಮಗ ಮತ್ತು …
Read More »
admin
January 11, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಏಕಕಾಲಕ್ಕೆ ಶಾಲೆಗಳನ್ನು ಬಂದ್ ಮಾಡುವುದಿಲ್ಲ.ಕೊರೊನಾ ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ಜಿಲ್ಲಾಧಿಕಾರಿ ನಿರ್ಧರಿಸುತ್ತಾರೆ. ಶಾಲಾ- ಕಾಲೇಜು ಬಂದ್ ಬಗ್ಗೆ ಆಯಾ ಡಿಸಿ ನಿರ್ಧರಿಸ್ತಾರೆ ಎಂದು ಟಿವಿ9ಗೆ ಶಿಕ್ಷಣ ಇಲಾಖೆ ಸಚಿವ ಬಿ.ಸಿ. ನಾಗೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಆಯಾ ಅಧಿಕಾರಿಗಳೇ ನಿರ್ಧರಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೊರೊನಾ ಹೆಚ್ಚಿರುವ ಜಿಲ್ಲೆಗಳಲ್ಲಿ ಡಿಸಿಗಳು ಈ ಬಗ್ಗೆ ನಿರ್ಧರಿಸ್ತಾರೆ ಎಂದು ತಿಳಿಸಿದ್ದಾರೆ.
Read More »