admin
January 6, 2022
Breaking News, ಬೆಂಗಳೂರು
ಬೆಂಗಳೂರು : ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆ ಜೋರಾಗಿದೆ. ಸಂಕ್ರಾಂತಿ ವೇಳೆಗೆ ಹೊಸ ಸಂಪುಟ ರಚನೆಯಾಗಬಹುದು ಎಂಬ ಗುಸು ಗುಸು ಕೇಳಿಬರುತ್ತಿದೆ. ಅಲ್ಲದೇ ಕೆಲ ಹಳಬರಿಗೆ ಕೊಕ್ ನೀಡಿ ಹೊಸ ಮುಖಗಳನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎನ್ನುವ ಸುದ್ದಿಯು ಜೋರಾಗಿದೆ. ಇದರ ಬೆನ್ನಲ್ಲೇ ಇದೀಗ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ. ಈ ಭೇಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
Read More »
admin
January 5, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಅವಿನಾಶ್ ಇನ್ನಿಲ್ಲ ಎಂಬುದಾಗಿ ಸೋಷಿಯಲ್ ಮೀಡಿಯಾದಲ್ಲಿ ಸುದ್ದಿಯೊಂದು ವೈರಲ್ ಆಗಿತ್ತು. ಆದ್ರೇ ಇದೊಂದು ಸುಳ್ಳು ಸುದ್ದಿಯಾಗಿದೆ. ನಾನು ಅರಾಮಾಗಿದ್ದೇನೆ ಎಂಬುದಾಗಿ ನಟ ಅವಿನಾಶ್ ಸ್ಪಷ್ಟ ಪಡಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರಿಗೆ ಇಂದು ಪ್ರತಿಕ್ರಿಯಿಸಿರುವಂತ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವಂತ ಸುದ್ದಿ ಸುಳ್ಳು. ನಾನು ಅರಾಮಾಗಿದ್ದೇನೆ. ಬೆಳಿಗ್ಗೆ ವರ್ಕೌಟ್ ಕೂಡ ಮಾಡಿದ್ದೇನೆ. ಅಭಿಮಾನಿಗಳು ಆತಂಕಕ್ಕೆ ಒಳಗಾಗಬಾರದು ಎಂಬುದಾಗಿ ತಿಳಿಸಿದ್ದಾರೆ
Read More »
admin
January 5, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕೊರೋನಾ ಬಹಳ ವೇಗವಾಗಿ ಹರಡುತ್ತದೆ, ಅದೇ ರೀತಿ ಕಡಿಮೆಯಾಗುತ್ತಾ ಹೋಗುತ್ತದೆ . ಕೋವಿಡ್ ಮೂರನೆ ಅಲೆಯು ಮೊದಲ ಹಾಗೂ ಎರಡನೆ ಅಲೆ ರೀತಿ ದೀರ್ಘ ಕಾಲ ಇರುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು. ಬುಧವಾರ ಸದಾಶಿವ ನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ದೇಶಗಳಲ್ಲಿನ ಪರಿಸ್ಥಿತಿಯನ್ನು ಗಮನಿಸಿದರೆ ನಾವು ಮುಂದಿನ 4-6 ವಾರಗಳ …
Read More »
admin
January 5, 2022
Breaking News, News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕೊರೋನಾ ಏರಿಕೆಯಿಂದಾಗಿ ಎಲ್ಲರಿಗೂ ಆತಂಕ ಉಂಟಾಗಿದೆ. ಅದರಲ್ಲೂ ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿಂದು 4246 ಜನರಿಗೆ ಕೊರೋನಾ ಸೋಂಕು ತಗುಲಿದೆ. ಇಂದು 3,605 ಹೊಸ ಪ್ರಕರಣಗಳೊಂದಿಗೆ ಬೆಂಗಳೂರಿನ ಪಾಸಿಟಿವಿಟಿ ದರವು ಶೇಕಡ 6.45 ಕ್ಕೆ ಏರಿದೆ. ಕರ್ನಾಟಕದ ಶೇ.85ರಷ್ಟು ಪ್ರಕರಣಗಳು ಬೆಂಗಳೂರಿನಲ್ಲೇ ವರದಿಯಾಗಿದ್ದು, 24 ಗಂಟೆಗಳಲ್ಲಿ ಪ್ರಕರಣಗಳು ದ್ವಿಗುಣಗೊಂಡಿದ್ದು, ಮತ್ತೇ ಜನರಿಗೆ ತಮ್ಮ ಜೀವನದ ಬಗ್ಗೆ ಆತಂಕ ಉಂಟಾಗಿದೆ.
Read More »
admin
January 5, 2022
Breaking News, ಆರೋಗ್ಯ, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಶಿವಮೊಗ್ಗ, ಸುದ್ದಿ
ಶಿವಮೊಗ್ಗ : ಕೋವಿಡ್ ಹೆಚ್ಚಳ ಹಿನ್ನೆಲೆ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿರುವ ಸರ್ಕಾರದ ನಿರ್ಧಾರಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಬುಧವಾರ ಅಸಮಾಧಾನ ಹೊರ ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೊನಾ ಜಾಸ್ತಿ ಇರುವುದು ಹೌದು, ನಾನು ಇಲ್ಲ ಅಂತಾ ಹೇಳಿಲ್ಲ.ರಾಜ್ಯದ ಎಲ್ಲಾ ಕಡೆಯೂ ಇದು ಇಲ್ಲ.ಉದಾಹರಣೆಗೆ ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನಾ ಅಷ್ಟಿಲ್ಲ.ಕೆಲವೆಡೆ 2-3-4-5 ಈ ರೀತಿ ಇದೆ. ಜಾಸ್ತಿ ಅಂದರೆ 10 ರವರೆಗೆ ಇದೆ. ಜಾಸ್ತಿ ಇದೆ ಅಂದುಕೊಂಡು ಇಡೀ ರಾಜ್ಯಕ್ಕೆ …
Read More »
admin
January 5, 2022
Breaking News, ಕರ್ನಾಟಕ, ದೆಹಲಿ, ದೇಶ-ವಿದೇಶ, ಬೆಂಗಳೂರು, ರಾಜಕೀಯ ಸುದ್ದಿ, ಶಿವಮೊಗ್ಗ
ಶಿವಮೊಗ್ಗ : ಕೊರೊನಾ ಟಫ್ ರೂಲ್ಸ್ ಜನ ಸಾಮಾನ್ಯರಿಗೆ ಅನ್ವಯವಾಗುವಂತೆ ಕಾಂಗ್ರೆಸ್ ಪಕ್ಷಕ್ಕೂ ಅನ್ವಯವಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಾಂಗ್ರೆಸ್‍ನ ಮೇಕೆದಾಟು ಪಾದಯಾತ್ರೆಗೆ ಟಾಂಗ್ ನೀಡಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಿನೇದಿನೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಬೆಂಗಳೂರಿನಲ್ಲಿ ಸಹ ಪ್ರತಿ ದಿನ ಸಾವಿರಾರ ಪಾಸಿಟಿವ್ ಪ್ರಕರಣ ಪತ್ತೆಯಾಗುತ್ತಿವೆ. ರಾಜ್ಯ ಸರ್ಕಾರ ತಜ್ಞರ ಸಲಹೆ ಪಡೆದು ಕಠಿಣ ನಿಯಮ ಜಾರಿ ಮಾಡಲಾಗಿದೆ. ನೈಟ್ ಕಫ್ರ್ಯೂ …
Read More »
admin
January 5, 2022
Breaking News, ಕರ್ನಾಟಕ, ದೆಹಲಿ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ, ಹುಬ್ಬಳ್ಳಿ-ಧಾರವಾಡ
ಬೆಂಗಳೂರು: ಕೊರೋನಾ ಹಾಗೂ ಓಮಿಕ್ರಾನ್ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳದ ಕಾರಣದಿಂದಾಗಿ, ವಿಧಾನಸೌಧ ವಿಕಾಸಸೌಧಹಾಗೂ ಬಹುಮಹಡಿ ಕಟ್ಟಡಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ. 2 ಡೋಸ್ ಕೊರೋನಾ ಲಸಿಕೆ ಪಡೆದವರಿಗೆ ಮಾತ್ರವೇ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಸುತ್ತೋಲೆ ಹೊರಡಿಸಿದ್ದು, ಕೊರೋನಾ, ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಳದ ಕಾರಣದಿಂದಾಗಿ ರಾಜ್ಯ ಸರ್ಕಾರಿ ನೌಕರರ ಹಿತದೃಷ್ಠಿಯಿಂದ ವಿಧಾನಸೌಧ, …
Read More »
admin
January 5, 2022
Breaking News, ಆರೋಗ್ಯ, ಕರ್ನಾಟಕ, ದೆಹಲಿ, ದೇಶ-ವಿದೇಶ, ಬೆಂಗಳೂರು
ಆಂಧ್ರಪ್ರದೇಶ: ಕೊರೋನಾ ನಿಯಂತ್ರಿಸಲು ಹೆಣಗಾಡುತ್ತಿರುವ ರಾಜ್ಯ ಸರ್ಕಾರಗಳಿಗೆ ಶಾಲೆಗಳು ಮತ್ತು ಕಾಲೇಜುಗಳು ತಲೆನೋವಾಗಿ ಪರಿಣಮಿಸಿದೆ. ಹೀಗಾಗಿಯೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಶಾಲೆಗಳನ್ನ ಬಂದ್ ಮಾಡಲಾಗಿದೆ. ಶಾಲೆಗಳು ಕೊರೋನಾ ಹಾಟ್ ಸ್ಪಾಟ್ ಆಗಿ ಮಾರ್ಪಟ್ಟಿವೆ ಅನ್ನೋದಕ್ಕೆ ಮತ್ತೊಂದು ಉದಾಹರಣೆ ಎಂಬುವಂತೆ ಆಂಧ್ರ ಪ್ರದೇಶದ ಶಾಲೆಯೊಂದರಲ್ಲಿ 19 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ವರದಿಯಾಗಿದೆ. ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ಕೋತವಲಸದಲ್ಲಿರುವ ಜಿಲ್ಲಾ ಪರಿಷತ್ ಪ್ರೌಢಶಾಲೆಯಲ್ಲಿ 19 ವಿದ್ಯಾರ್ಥಿಗಳು ಮತ್ತು ಒಬ್ಬ ಶಿಕ್ಷಕರಲ್ಲಿ ಸೋಂಕು …
Read More »
admin
January 5, 2022
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಶಿಕ್ಷಣ
ಬೆಂಗಳೂರು: ಕೋವಿಡ್ ಹೆಚ್ಚಳ ಹಿನ್ನೆಲೆ ವಿದ್ಯಾರ್ಥಿಗಳ ಆರೋಗ್ಯ ದೃಷ್ಠಿಯಿಂದ ರಾಜ್ಯದಲ್ಲಿ 2021-22ನೇ ಸಾಲಿನಲ್ಲಿ ಶಾಲೆಗಳನ್ನು ಆನ್‌ಲೈನ್/ಆಫ್ ಲೈನ್ ಸೇರಿ ಎರಡರಲ್ಲಿ ಶಾಲೆಗಳಿಗೆ ಅನುಕೂಲವಾಗುವುದರಲ್ಲಿ ತರಗತಿಗಳನ್ನು ನಡೆಸಲು ಸರಕಾರ ಈಗಾಗಲೇ ಅವಕಾಶ ನೀಡಿದೆ. ಬೆಂಗಳೂರು ಸಹಿತ ವಿವಿಧ ಭಾಗಗಳ ಕೆಲವು ಖಾಸಗಿ ಶಾಲೆಗಳು ಶುಕ್ರವಾರದಿಂದಲೇ (ಜ.6) ಆನ್‌ಲೈನ್ ತರಗತಿಗಳನ್ನು ನಡೆಸಲು ನಿರ್ಧರಿಸಿದ್ದು, ಮಕ್ಕಳು ಮತ್ತು ವಿದ್ಯಾರ್ಥಿಗಳು ಶಾಲೆಗೆ ಬಾರದಂತೆ ಸೂಚನೆ ನೀಡಿವೆ. ಕೋವಿಡ್ ಹೆಚ್ಚಳದ ನಡುವೆ ಶಿಕ್ಷಕರ ವಿರೋಧ ಯಾಕೆ?ಶಾಲಾ ಕೊಠಡಿಗಳಲ್ಲಿ ಮಕ್ಕಳೊಂದಿಗೆ …
Read More »
admin
January 5, 2022
Breaking News, ಕರ್ನಾಟಕ, ಬೆಂಗಳೂರು
ಕುಂದಾಪುರ: ನಾಲ್ಕು ಬಾರಿ ವಿಧಾನಸಭೆ ಸದಸ್ಯರಾಗಿ, ಮೂರು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ 36 ವರ್ಷಗಳ ಸುದೀರ್ಘ ಶಾಸಕತ್ವ ಅವಧಿ ಹೊಂದಿದ್ದ ಕೆ. ಪ್ರತಾಪಚಂದ್ರ ಶೆಟ್ಟಿ ಅವರ ಶಾಸಕತ್ವ ಜ. 5ರಂದು ಕೊನೆಯಾಗಲಿದೆ. ಪ್ರಸ್ತುತ ಚುನಾವಣಾ ರಾಜಕೀಯದಿಂದ ದೂರ ಇರುವ ಅವರು ಎಐಸಿಸಿ ಸದಸ್ಯರಾಗಿದ್ದುಕೊಂಡು ಪಕ್ಷ ಹಾಗೂ ರೈತ ಸಂಘದ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಳ್ಳಲಿದ್ದಾರೆ.
Read More »