Breaking News

ಬೆಂಗಳೂರು

ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿ: ಏಪ್ರಿಲ್ ನಿಂದ 10,000 ಮುಂಗಡ ಪಾವತಿಗೆ ಸರ್ಕಾರ ನಿರ್ಧಾರ

ಬೆಂಗಳೂರು: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ಎನ್ನುವಂತೆ ಏಪ್ರಿಲ್ ನಿಂದ ಪ್ರತಿ ತಿಂಗಳು 10,000 ಮುಂಗಡ ಪಾವತಿಗೆ ಸರ್ಕಾರ ನಿರ್ಧರಿಸಿದೆ. ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ಶಾಸಕ ಹರೀಶ್ ಪುಂಜಾ ವೇದಿಕೆಯ ಮೇಲಿದ್ದ ಸಚಿವ ದಿನೇಶ್ ಗುಂಡೂರಾವ್ ಎದುರು ಎರಡು ಬೇಡಿಕೆಯನ್ನ ಮುಂದಿಟ್ಟರು. ನಾನೊಬ್ಬ ಆಶಾ ಕಾರ್ಯಕರ್ತೆಯರ ಕುಟುಂಬದಿಂದ ಬಂದವನಾಗಿದ್ದು, ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಿಸಬೇಕು. ಹಾಗೂ 70 ವರ್ಷ ಮೇಲ್ಪಟ್ಟವರಿಗೆ ಕೇಂದ್ರ …

Read More »

ಮುಡಾ ಹಗರಣ: ಸಿಎಂ ಆಸ್ತಿಯನ್ನು ಇ.ಡಿ ಜಪ್ತಿ ಮಾಡಿದ ಬೆನ್ನಲ್ಲೇ ಸಿದ್ಧರಾಮಯ್ಯನವರ ರಾಜೀನಾಮೆಗೆ ಬಿಜೆಪಿ ಒತ್ತಾಯ

ಬೆಂಗಳೂರು: ಭವಿಷ್ಯದಲ್ಲಿ ಭಾರೀ ಕಾನೂನು ಸಂಕಷ್ಟ ತಂದೊಡ್ಡಲಾಗುತ್ತದೆ ಎಂದು ಹೇಳಲಾಗುತ್ತಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಕುರಿತು ಜಾರಿ ನಿರ್ದೇಶನಾಲಯ (ಇಡಿ) 300 ಕೋಟಿ ರೂ.ಆಸ್ತಿ ಜಪ್ತಿ ಮಾಡುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜೀನಾಮೆಗೆ ಬಿಜೆಪಿ ಒತ್ತಾಯಿಸಿದೆ. ಇಡಿ ಮುಡಾಗೆ ಸೇರಿದ ಸುಮಾರು 300 ಕೋಟಿ ಮೌಲ್ಯದ 142 ಚಿರಾಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು ಇದರಲ್ಲಿ ಅಕ್ರಮ ವಹಿವಾಟು, ಬೇನಾಮಿ ಆಸ್ತಿ ಸಂಪಾದನೆ, ಬೇರೆಯವರ ಹೆಸರಿನಲ್ಲಿ ಆಸ್ತಿ ಖರೀದಿ …

Read More »

ಎಲ್ಲರೂ ಬಾಯಿ ಮುಚ್ಚಿಕೊಂಡು ಸುಮ್ಮನಿರಿ, ಮೊದಲು ನಿಮಗೆ ವಹಿಸಿರುವ ಕೆಲಸ ಸರಿಯಾಗಿ ಮಾಡಿ: ಮಲ್ಲಿಕಾರ್ಜುನ ಖರ್ಗೆ ಖಡಕ್ ಸೂಚನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಹೇಳಿಕೆಗಳಿಂದ ಕೆಂಡಾಮಂಡಲಗೊಂಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ಎಲ್ಲರೂ ಬಾಯಿ ಮುಚ್ಚಿಕೊಂಡು ಸುಮ್ಮನಿರಿ. ಮೊದಲು ನಿಮಗೆ ವಹಿಸಿರುವ ಕೆಲಸ ಸರಿಯಾಗಿ ಮಾಡಿ’ ಎಂದು ಖಡಕ್ ಸೂಚನೆ ನೀಡಿದ್ದಾರೆ. ಜತೆಗೆ, ‘ಹೈಕಮಾಂಡ್ ಸೂಚನೆ ಮೀರಿ ಮಾತನಾಡಿದರೆ ಹೈಕಮಾಂಡ್ ದುರ್ಬಲ ಅಲ್ಲ ಎಂಬುದನ್ನು ತೋರಿಸಬೇಕಾಗುತ್ತದೆ. ಶತಮಾನಕ್ಕೂ ಹೆಚ್ಚು ಇತಿಹಾಸ ವಿರುವ ಪಕ್ಷ ಕಾಂಗ್ರೆಸ್. ಯಾರೋ ಒಬ್ಬರು ಇಬ್ಬರನ್ನು ಅವಲಂಬಿಸಿ ಪಕ್ಷ ಕಟ್ಟಿಲ್ಲ’ ಎಂದೂ ಎಚ್ಚರಿಸಿದ್ದಾರೆ. …

Read More »

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಖಾಲಿ ಇರುವ 413 ಹುದ್ದೆಗಳ ಭರ್ತಿಗೆ ಸರ್ಕಾರ ಅನುಮತಿ

ಬೆಂಗಳೂರು: ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಬೆಂಗಳೂರು ಮತ್ತು ಪಿಸಿಸಿ, ಕಲಬುರ್ಗಿ ಸಂಸ್ಥೆಗಳಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ. ಸಂಸ್ಥೆಯು ಗ್ರೂಪ್ ‘ಎ’, ‘ಬಿ’, ಮತ್ತು ‘ಸಿ’ ವೃಂದದಲ್ಲಿ ಖಾಲಿ ಇರುವ 587 ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿ ಮಾಡಲು ಆಡಳಿತಾತ್ಮಕ ಅನುಮೋದನೆ ಕೋರಿತ್ತು. ಈ ಪ್ರಸ್ತಾವನೆಯನ್ನು ಪರಿಶೀಲಿಸಿದ ಸರ್ಕಾರವು ಮೊದಲ ಹಂತದಲ್ಲಿ ಭರ್ತಿ ಮಾಡಿಕೊಳ್ಳಲು ಪ್ರಸ್ತಾಪಿಸಿರುವ 425 ಹುದ್ದೆಗಳ ಪೈಕಿ 413 ಹುದ್ದೆಗಳನ್ನು …

Read More »

ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ಮೆಡಿಕಲ್ ಕಾಲೇಜು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ಮೆಡಿಕಲ್‌ ಕಾಲೇಜು ಹಾಗೂ ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆ ನಿರ್ಮಾಣ ಆಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಲುವು ಪ್ರಕಟಿಸಿದ್ದಾರೆ. ನಗರದ ಹೊರವಲಯದ ಮೇರಿಹಿಲ್‌ನಲ್ಲಿ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರಕ್ಕೆ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ನಾನು ಹಣಕಾಸು ಸಚಿವನಾಗಿದ್ದಾಗಲೇ ಪ್ರತಿ ಜಿಲ್ಲೆಗೊಂದು ಸರ್ಕಾರಿ ಮೆಡಿಕಲ್‌ ಕಾಲೇಜು ಮತ್ತು ಸೂಪರ್‌ ಸ್ಪೆಶಾಲಿಟಿ ಆಸ್ಪತ್ರೆ ಸ್ಥಾಪನೆಯ ತೀರ್ಮಾನ ಮಾಡಿದ್ದೆ. ಆದರೆ, ಇಂದಿಗೂ …

Read More »

ಬಡವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸುವುದು ಸರ್ಕಾರದ ಗುರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಡವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸುವುದು ಸರಕಾರದ ಗುರಿಯಾಗಿದೆ. ಸರಕಾರದ ಎಲ್ಲಾ ಸಂಸ್ಥೆಗಳು ಸಮಾಜಮುಖಿಯಾಗಿ ಕಾರ್ಯ ನಿರ್ವಹಿಸಬೇಕಾಗಿರುವುದು ಅಂತಿಮ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ನಗರದ ಮೇರಿ ಹಿಲ್ ನಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕೇಂದ್ರ ಕಚೇರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡುತ್ತಿದ್ದರು. ಸರಕಾರಿ ಆಸ್ಪತ್ರೆಗಳೂ ಖಾಸಗಿ ಆಸ್ಪತ್ರೆಗಳ ಮಾದರಿಯಲ್ಲಿ ಶುಚಿತ್ವ ಮತ್ತು ನಿರ್ವಹಣೆ ಕಾಪಾಡುವ ಜೊತೆಗೆ ಗುಣಮಟ್ಟದ ಚಿಕಿತ್ಸಾ ಸೌಲಭ್ಯ …

Read More »

ಬಿಪಿಎಲ್ ಕುಟುಂಬಗಳಿಗೆ ಸರ್ಕಾರ ಕೊಡುಗೆ: ಸಿಟಿ ಸ್ಕ್ಯಾನ್, ಎಂ ಆರ್ ಐ ಸ್ಕ್ಯಾನ್ ಉಚಿತ

ಬೆಂಗಳೂರು: ಬಿಪಿಎಲ್ ಕುಟುಂಬಗಳು ಇನ್ಮುಂದೆ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸಿಟಿ ಸ್ಕ್ಯಾನ್ ಮತ್ತು ಎಂಆರ್​ಐ ಸ್ಕ್ಯಾನಿಂಗ್​ ಸೇವೆಯನ್ನು ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. ಬಡವರು ಈ ಸೇವೆಗೆ ದುಬಾರಿ ವೆಚ್ಚ ಭರಿಸಬೇಕಿತ್ತು. ಹೀಗಾಗಿ ಜಿಲ್ಲಾ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಪಿಪಿಪಿ ಮಾದರಿಯಲ್ಲಿ ಒದಗಿಸಲಾಗುತ್ತಿರುವ ಸಿಟಿ ಮತ್ತು ಎಂಆರ್​ಐ ಸ್ಕ್ಯಾನ್​ಗಳನ್ನು ಉಚಿತವಾಗಿಸಲು ನಿರ್ಣಯಿಸಲಾಗಿದೆ. ರೋಗಿಗಳು ಅನಗತ್ಯವಾಗಿ ಸ್ಕ್ಯಾನ್​ಗೆ ಒಳಪಡುವುದನ್ನು ತಪ್ಪಿಸಲು, ಯೋಜನೆ ನಿಜವಾದ …

Read More »

ಬೆಂಗಳೂರಿನಲ್ಲಿ ಫೆ.19ಕ್ಕೆ ಒಳ ಮೀಸಲಾತಿ ಪ್ರತಿಭಟನಾ ಸಮಾವೇಶ

ಬೆಂಗಳೂರು: ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸಲು ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿರುವ ಮಾದಿಗ ಸಮುದಾಯಗಳ ಸ್ವಾಭಿಮಾನದ ಒಕ್ಕೂಟ, ಫೆ.19ಕ್ಕೆ ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನಾ ಸಮಾವೇಶ ಹಮ್ಮಿಕೊಂಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಲ್ ಇಂಡಿಯಾ ಬಹುಜನ ಸಮಾಜ ಪಕ್ಷದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ, ‘ವೈಜ್ಞಾನಿಕ ದತ್ತಾಂಶ ಹೊಂದಿರುವ ಆಯೋಗದ ವರದಿಯನ್ನು ಸರ್ಕಾರವು ಅಪ್ರಸ್ತುತಗೊಳಿಸದೆ, ಸಚಿವ ಸಂಪುಟ ಅಥವಾ ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕರಿಸಬೇಕು. ಯಾವುದೇ …

Read More »

ಪಿಎಂ ಆವಾಸ್ ಯೋಜನೆಯಡಿ ಸ್ಥಗಿತಗೊಳಿಸಲಾಗಿದ್ದ 61,894 ಮನೆಗಳನ್ನು ಪುನರ್ ಪ್ರಾರಂಭಿಸಲು ಸಂಪುಟ ನಿರ್ಧಾರ: ಸಚಿವ ಎಚ್.ಕೆ.ಪಾಟೀಲ್

ಬೆಂಗಳೂರು : ಪ್ರಧಾನಮಂತ್ರಿ ಆವಾಸ್ ಯೋಜನೆ (ನಗರ)ಯಡಿ ರಾಜ್ಯ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಅನುಷ್ಠಾನಗೊಳಿಸಲು ಅನುಮೋದನೆಯಾಗಿರುವ 1,08,253 ಮನೆಗಳ ಪೈಕಿ ಪ್ರಾರಂಭಿಸದೆ ಸ್ಥಗಿತಗೊಳಿಸಲಾಗಿದ್ದ 61,894 ಮನೆಗಳನ್ನು ಪುನರ್ ಪ್ರಾರಂಭಿಸಲು ಮತ್ತು ಇದಕ್ಕೆ ಅಗತ್ಯವಿರುವ 2,643.67 ಕೋಟಿ ರೂ.ಗಳನ್ನು ಭರಿಸಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ …

Read More »

ರಾಜ್ಯದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಮೆಟ್ರಿಕ್ ಅನಂತರದ ಹಾಸ್ಟೆಲ್ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ರಾಜ್ಯದ 15 ಕಡೆ 75 ಕೋಟಿ ರೂ. ವೆಚ್ಚದಲ್ಲಿ ಮೆಟ್ರಿಕ್‌ ಅನಂತರದ ಹಾಸ್ಟೆಲ್‌ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಮಂಗಳೂರು, ಉಡುಪಿಯ ಬೈಂದೂರು, ಶಿವಮೊಗ್ಗದ ಸಾಗರ, ದೇವನಹಳ್ಳಿ, ಉತ್ತರ ಕನ್ನಡದ ದಾಂಡೇಲಿ, ಹಳಿಯಾಳ, ಹುಬ್ಬಳ್ಳಿ, ಹಾವೇರಿಯ ಮೇದೂರು, ಮಂಡ್ಯದ ಮದ್ದೂರು, ತುಮಕೂರು, ಬೆಳಗಾವಿಯ ಆನಗೋಳ, ಬಾಗಲಕೋಟೆ, ವಿಜಯಪುರದ ತಾಂಡ, ಗದಗಿನ ಹೊಂಬಾಳದಲ್ಲಿ ನಿರ್ಮಾಣವಾಗಲಿದೆ.

Read More »