Breaking News

ಬೆಂಗಳೂರು

ಹೊಟೇಲ್‍ನಲ್ಲಿ ಸಿಲಿಂಡರ್ನಿಂದ ಅನಿಲ ಸೋರಿಕೆ: ವ್ಯಕ್ತಿಗೆ ಗಂಭೀರ ಗಾಯ

ಬೆಂಗಳೂರು:– ಹೊಟೇಲ್‍ನಲ್ಲಿ ಗ್ಯಾಸ್ ಸಿಲಿಂಡರ್ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಚಂದ್ರಾಲೇಔಟ್ ಪೊಲೀಸ್ ಠಾಣಾ ವಾಪ್ತಿಯಲ್ಲಿ ನಡೆದಿದೆ. ಮಹೇಶ್(28) ಸುಟ್ಟ ಗಾಯಗಳಿಂದಾಗಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಂದ್ರಾಲೇಔಟ್, 2ನೆ ಮುಖ್ಯರಸ್ತೆ, ಗಣಪತಿ ಸರ್ಕಲ್ ಬಳಿ ಸಂತೃಪ್ತಿ ಉತ್ತರ ಕರ್ನಾಟಕ ಜವಾರಿ ಊಟದ ಮನೆ ಎಂಬ ಹೊಟೇಲ್‍ನಲ್ಲಿ ರಾತ್ರಿ ಎಲ್ಲಾ ಕೆಲಸ ಮುಗಿಸಿ ಹೊಟೇಲ್‍ಗೆ ಬೀಗ ಹಾಕಿ ಕೆಲಸಗಾರರು ಹೋಗಿದ್ದಾರೆ. …

Read More »

ರಾಮನಗರ: ವೇದಿಕೆಯಲ್ಲೇ ಸಂಸದ ಡಿಕೆ ಸುರೇಶ್, ಸಚಿವ ಅಶ್ವತ್ಥ ನಾರಾಯಣ ಕಿತ್ತಾಟ!

ರಾಮನಗರ: ರಾಮನಗರದಲ್ಲಿಂದು ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಬೇಕಿದ್ದ ವೇದಿಕೆಯಲ್ಲಿಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿಯೇ ಸಂಸದ ಡಿ. ಕೆ. ಸುರೇಶ್ ಹಾಗೂ ಸಚಿವ ಅಶ್ವತ್ಥ ನಾರಾಯಣ ಪರಸ್ಪರ ವಾಗ್ವಾದಕ್ಕಿಳಿದ ಪ್ರಸಂಗ ನಡೆದಿದೆ. ರಾಮನಗರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಂದು ನಾಡಪ್ರಭು ಕೆಂಪೇಗೌಡ, ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಗಳ ಅನಾವರಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಕಾರ್ಯಕ್ರಮ ಆಯೋಜಿತವಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ, ನೀರಾವರಿ …

Read More »

ಕೋವಿಡ್ ಏರಿಕೆ ಕುರಿತು ತಜ್ಞರೊಂದಿಗೆ ಸಮಾಲೋಚನೆ: ಸಿಎಂ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಏರಿಕೆಯಾಗುತ್ತಿರುವ COVID19 ಮತ್ತು Omicron ಸೋಂಕಿನ ಬಗ್ಗೆ ತೀವ್ರ ನಿಗಾ ಇಡಲಾಗಿದೆ. ಒಮಿಕ್ರಾನ್ ಅತಿ ವೇಗವಾಗಿ ಹರಡುತ್ತಿದೆ. ಈ ನಿಟ್ಟಿನಲ್ಲಿ ನಾಳೆ ಸಂಜೆ ತಜ್ಞರೊಂದಿಗೆಸಭೆ ನಡೆಸಿ ಕೋವಿಡ್ ಮತ್ತು ಒಮಿಕ್ರಾನ್ ತಡೆಯುವ ಕುರಿತು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿಂದು ಹೇಳಿದ್ದಾರೆ.

Read More »

15-18ನೇ ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನಕ್ಕೆ ಸಿಎಂ ಚಾಲನೆ

ಬೆಂಗಳೂರು: ಇಲ್ಲಿಯ ಗೋವಿಂದರಾಜನಗರದ ಮೂಡಲಪಾಳ್ಯದಲ್ಲಿ ಬಿಬಿಎಂಪಿ ಪ್ರೌಢಶಾಲೆಯಲ್ಲಿಹಮ್ಮಿಕೊಳ್ಳಲಾಗಿದ್ದ 15-18ನೇ ವಯೋಮಾನದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮಕ್ಕಳನ್ನು ನೋಡಿ ಸಂತೋಷವಾಯಿತು. ಬೆಂಗಳೂರಿನ ಪ್ರದೇಶದಲ್ಲಿ ಇಂತಹ ವ್ಯವಸ್ಥಿತ ಶಾಲೆ ಇದೆ ಎನ್ನುವುದನ್ನು ಸೋಮಣ್ಣ ತೋರಿಸಿದ್ದಾರೆ. ಈ ಲಸಿಕೆ ಕಾರ್ಯಕ್ರಮ ಹೊಸ ವರ್ಷದಲ್ಲಿ ನಡೆಯುತ್ತಿದೆ. ಹೊಸವರ್ಷದಂದು ಹೊಸ ಅಭಿಯಾನ ನಡೆಯುತ್ತಿದೆ. ಮೋದಿಜಿಯವರ ದೂರದೃಷ್ಟಿಯ ಪರಿಣಾಮದಿಂದ ಈ ಕಾರ್ಯಕ್ರಮ ನಡೆಯುತ್ತಿದೆ …

Read More »

ನ್ಯೂ ಇಯರ್‌ ಆಚರಣೆ ಇಲ್ಲ ಏನಿಲ್ಲ-ಹೇಗಿದೆ ನೋಡಿ ವಾಣಿಜ್ಯ ನಗರಿ ಹುಬ್ಬಳ್ಳಿ

ಹುಬ್ಬಳ್ಳಿ : ಹೊಸ ವರ್ಷ ಸಂಭ್ರಮಾಚರಣೆಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಖಾಸಗಿ ಹೋಟೆಲ್​​​ಗಳು ನವಧುವಿನಂತೆ ಶೃಂಗಾರಗೊಳ್ಳುತ್ತಿದ್ದವು. ಜಗಮಗಿಸುವ ಲೈಟಿಂಗ್, ಡಿಜೆ ಸೌಂಡ್​​​ಗೆ ಯುವಕರು ಸ್ಟೆಪ್ ಹಾಕಿ ಸಂಭ್ರಮಿಸುತ್ತಿದ್ದರು. ಆದರೆ, ಕೊರೊನಾ ಹಾಗೂ ಒಮಿಕ್ರಾನ್ ಭೀತಿ ಹಿನ್ನೆಲೆ​​ ಈ ಬಾರಿಯೂ ಸಂಭ್ರಮಾಚರಣೆಗೆ ಬ್ರೇಕ್​​ ಬಿದ್ದಿದೆ. ರಾಜ್ಯದಲ್ಲಿ ಒಮಿಕ್ರಾನ್​ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಅಲ್ಲದೇ ನಿಯಮ ಉಲ್ಲಂಘನೆ ಮಾಡಿದರೆ ಅವರ ವಿರುದ್ಧ ಕ್ರಮ ಜರುಗಿಸುವುದಾಗಿ …

Read More »

ಐದು ಜಿಲ್ಲೆಗಳ ಡಿಸಿಗಳಿಗೆ ಬೆವರಿಳಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಜಿಲ್ಲಾಧಿಕಾರಿಗಳ ಸಭೆಯಲ್ಲಿ ಅಧಿಕಾರಿಗಳಿಗೆ ಫುಲ್‌ ಕ್ಲಾಸ್‌ ಮಾಡಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಸರ್ಕಾರದ ಕಾರ್ಯಕ್ರಮ ಅನುಷ್ಠಾನದಲ್ಲಿ ವೈಫಲ್ಯ, ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಹಿನ್ನಡೆ ವಿಚಾರವನ್ನು ಪ್ರಸ್ತಾಪಿಸಿ ಐವರು ಜಿಲ್ಲಾಧಿಕಾರಿಗಳಿಗೆ ಕ್ಲಾಸ್‌ ಮಾಡಿದ್ದಾರೆ. ಚಿಕ್ಕಮಗಳೂರು, ಬೆಳಗಾವಿ, ಮೈಸೂರು, ವಿಜಯನಗರ, ಬೆಂಗಳೂರು ಜಿಲ್ಲಾಧಿಕಾರಿಗಳಿಗೆ ಬೊಮ್ಮಾಯಿ ವಾರ್ನಿಂಗ್‌ ನೀಡಿದ್ದಾರೆ. ಚಿಕ್ಕಬಳ್ಳಾಪುರ,ಮಂಡ್ಯ ಸೇರಿ ಏಳು ಜಿಲ್ಲೆಗಳಲ್ಲಿ ಅರ್ಧಕರ್ಧ ಕೆಲಸ ಮಾಡಿದ್ದು ಯಾಕೆ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು …

Read More »

ಇಂದು ಸಂಜೆ 6 ಗಂಟೆಯಿಂದಲೇ ಬೆಂಗಳೂರಿನಾದ್ಯಂತ ನಿಷೇಧಾಜ್ಞೆ ಜಾರಿ

ಬೆಂಗಳೂರು,;– ಕೋವಿಡ್‍ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲು ರಾಜ್ಯ ಸರ್ಕಾರ ಸೂಚಿಸಿದ್ದು, ಇಂದು ಸಂಜೆ 6 ಗಂಟೆಯಿಂದಲೇ ಪೊಲೀಸರು ನಗರದ ಆಯಕಟ್ಟಿನ ಜಾಗ ಗಳೂ ಸೇರಿದಂತೆ ಎಲ್ಲೆಡೆ ಬಿಗಿಭದ್ರತೆ ಆಯೋಜಿ ಸಲಾಗಿದೆ. ಪ್ರಮುಖವಾಗಿ ಪ್ರತಿ ವರ್ಷ ಅದ್ಧೂರಿ ವರ್ಷಾ ಚರಣೆ ನಡೆಯುವ ಎಂ.ಜಿ.ರಸ್ತೆ, ಬ್ರಿಗೇಡ್ ರಸ್ತೆ, ಇಂದಿರಾನಗರ, ಕೋರಮಂಗಲ ಸೇರಿದಂತೆ ಆಯಕಟ್ಟಿನ ಜಾಗಗಳ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ನಗರಪೊಲೀಸ್ ಆಯುಕ್ತ ಕಮಲಪಂಥ್ ಅವರು ಇಂದು ಸಂಜೆ …

Read More »

ಮೀಟ್‌ ಮಾಡಣ, ಇಲ್ಲ ಡೇಟ್‌ ಮಾಡಣ..: ಜ.21 ರಂದು ಏಕ್‌ ಲವ್‌ ಯಾ ರಿಲೀಸ್‌

ಪ್ರೇಮ್‌ ನಿರ್ದೇಶನದ “ಏಕ್‌ ಲವ್‌ ಯಾ’ ಚಿತ್ರ¨ಹಾಡುಗಳು ಸದ್ದು ಮಾಡುತ್ತಿವೆ. ಈಗಾಗಲೇ ಬಿಡುಗಡೆಯಾಗಿರುವ ಮೂರು ಹಾಡುಗಳು ಹಿಟ್‌ಲಿಸ್ಟ್‌ ಸೇರಿತ್ತು. ಈಗ ನಾಲ್ಕನೇ ಹಾಡು ಬಿಡುಗಡೆಯಾಗಿ, ಅದು ಕೂಡಾ ಸಂಗೀತ ಪ್ರಿಯರ ಮನ ಗೆದ್ದಿದೆ. “ಮೀಟ್‌ ಮಾಡಣ ಇಲ್ಲ ಡೇಟ್‌ ಮಾಡಣ…’ ಎಂಬ ಹಾಡು ಎರಡು ಮಿಲಿಯನ್‌ಗೂ ಅಧಿಕ ಹಿಟ್‌ನೊಂದಿಗೆ ಮುನ್ನುಗ್ಗುತ್ತಿದೆ. ಈ ಹಾಡಿಗೆ ವಿಜಯ್‌ ಈಶಯ್‌ ಸಾಹಿತ್ಯವಿದ್ದು, ಅರ್ಜುನ್‌ ಜನ್ಯಾ ಸಂಗೀತವಿದೆ. ಐಶ್ವರ್ಯಾ ರಂಗರಾಜನ್‌ ಹಾಡಿಗೆ ಧ್ವನಿಯಾಗಿದ್ದಾರೆ. ಮೋಹನ್‌ ನೃತ್ಯ …

Read More »

ರಂಗಾಯಣದ ಮುಂದೆ ನಿಲ್ಲದ ಪ್ರತಿಭಟನೆ

ಮೈಸೂರು: ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ವಜಾಕ್ಕೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಶುಕ್ರವಾರ ಮುಂದುವರಿದಿದೆ. ರಂಗಾಯಣ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಹೋರಾಟಗಾರರು ಕುಕ್ಕರಹಳ್ಳಿ ಕೆರೆ ಮುಂದೆ ಸಭೆ ನಡೆಸಿ, ರಂಗಾಯಣದತ್ತ ಮೆರವಣಿಗೆ ಹೊರಡಲು ಮುಂದಾದರು. ಬ್ಯಾರಿಕೇಡ್ ಹಾಕಿದ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರಿಗೂ, ಪ್ರತಿಭಟನಕಾರರಿಗೂ ಜಟಾಪಟಿ ನಡೆಯಿತು. ಮಫ್ತಿಯಲ್ಲಿದ್ದ ಪೊಲೀಸ್ ಸಿಬ್ಬಂದಿ ನಿಂದಿಸಿದರು ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕಲಾಮಂದಿರಕ್ಕೆ ಮೌನವಾಗಿ ಮೆರವಣಿಗೆ ಹೊರಡಲು ಅನುಮತಿ ನೀಡಬೇಕೆಂದು …

Read More »

ಅವಕಾಶ ಸಿಕ್ಕಾಗಲೆಲ್ಲ ನಾವು ಪುಟಿದೇಳುತ್ತೇವೆ: ವಿರಾಟ್ ಕೊಹ್ಲಿ

ಸೆಂಚುರಿಯನ್: ದಕ್ಷಿಣಾ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು 113ರನ್ ಅಂತರದ ಗೆಲುವು ಸಾಧಿಸಿರುವ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ. ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡ ಸದ್ಯ 1-0 ಮುನ್ನಡೆ ಪಡೆದುಕೊಂಡಿದೆ. ತಮ್ಮ ತಂಡವು ಮುಂದಿನ ಪಂದ್ಯದಲ್ಲಿಯೂ ಜಯ ಸಾಧಿಸಲಿದೆ ಎಂದು ಕೊಹ್ಲಿ ವಿಶ್ವಾಸದಿಂದ ಹೇಳಿದ್ದಾರೆ. ಗೆಲುವಿನ ಬಳಿಕ ಬಿಸಿಸಿಐ ಟಿವಿಯಲ್ಲಿ ಮಾತನಾಡಿರುವ ಅವರು, ‘ದಕ್ಷಿಣ ಆಫ್ರಿಕಾದಲ್ಲಿನ ಈ ಸರಣಿಯು ಯಾವುದೇ …

Read More »