ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ನಡುವಿನ ಕೋಳಿ ಜಗಳ ಮುಂದುವರೆದಿದೆ. ಮೈತ್ರಿ ಸರ್ಕಾರ ರಚನೆ ಮಾಡಲು ಜೆಡಿಎಸ್ ನವರ ಮನೆ ಬಾಗಿಲಿಗೆ ಹೋಗಿಲ್ಲ. ವರಿಷ್ಠರ ಜೊತೆಗೆ ಮಾತುಕತೆ ಆಗಿದ್ದು, ನಿಜ. ನಾನಂತೂ ಅವರ ಮನೆಗೆ ಹೋಗಿಲ್ಲ ಎಂದು ಸಿದ್ದರಾಮಯ್ಯ ಕೋಲಾರದ ನೀಡಿದ್ದ ಹೇಳಿಕೆ ಬಗ್ಗೆ ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.ಈ ಬಗ್ಗೆ ಇಂದು ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಜೆಡಿಎಸ್ ನಾಯಕರು ಮತ್ತು ಪಕ್ಷದ ಬಗ್ಗೆ ಸರಣಿ …
Read More »ಇಂಗ್ಲೆಂಡ್ನಿಂದ ಬಂದ ಇಬ್ಬರು ಮಕ್ಕಳು ಸೇರಿ ಐವರಿಗೆ ಕೊರೊನಾ
ದೇವನಹಳ್ಳಿ : ವಿದೇಶದಿಂದ ಬರುತ್ತಿರುವ ಪ್ರಯಾಣಿಕರಲ್ಲಿ ಕೊರೊನಾ ಸೊಂಕಿತರ ಸಂಖ್ಯೆ ಏರಿಕೆಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇಂದು ಮುಂಜಾನೆ ಇಂಗ್ಲೆಂಡ್ನಿಂದ ಬಂದ 5 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಇಂದು ಮುಂಜಾನೆ ಯುಕೆಯಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಿಮಾನ ಆಗಮಿಸಿದ್ದು, ಪ್ರಯಾಣಿಕರನ್ನ ಆರ್ ಟಿ ಪಿಸಿಆರ್ ಟೆಸ್ಟ್ಗೆ ಒಳಪಡಿಸಿದ್ದಾಗ 5 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. 18 ವರ್ಷದ ಇಬ್ಬರಿಗೆ, 6 ವರ್ಷದ ಇಬ್ಬರು ಮಕ್ಕಳಿಗೆ ಮತ್ತು 30 ವರ್ಷದ …
Read More »ನಾಳೆಯಿಂದ ಬೆಳಗಾವಿ ಅಧಿವೇಶನ ಆರಂಭ-ಮತಾಂತರ ಕಾಯ್ದೆ,ಉ.ಕ ಭಾಗದ ಅಭಿವೃದ್ಧಿ ಕುರಿತು ಚರ್ಚೆ- ಸಿಎಂ ಬೊಮ್ಮಾಯಿ
ಹುಬ್ಬಳ್ಳಿ- ನಾಳೆಯಿಂದ ಬೆಳಗಾವಿ ಅಧಿವೇಶ ಆರಂಭವಾಗುತ್ತೆ.ಈಗಾಗಲೇ ಎಲ್ಲಾ ತಯಾರಿ ಮಾಡಿದ್ದೆವೆ.ಹುಬ್ಬಳ್ಳಿಯ ನಿವಾಸ ಬಳಿ ಸಿಎಂ ಬೊಮ್ಮಾಯಿ ಹೇಳಿಕೆ.ಈ ಭಾಗದ ಅಭಿವೃದ್ಧಿ ಬಗ್ಗೆ ಚರ್ಚೆ ಮಾಡ್ತೆವೆ.ಅಧಿವೇಶನದಲ್ಲಿ ಅಭೀವೃದ್ದಿ ಬಗ್ಗೆ ಚರ್ಚೆಯಾಗುತ್ತೆ. ಮತಾಂತರ ನಿಷೇದ ಕಾಯ್ದೆ ಮಂಡನೆ ವಿಚಾರ. ಹಿಂದೂ,ಇಸ್ಲಾಂ,ಕ್ರಿಶ್ಚಿಯನ್, ಸಿಖ್ ಸೇರಿದಂತೆಎಲ್ಲಾ ಧರ್ಮಗಳು ಸಂವಿಧಾನಾತ್ಮಕವಾಗಿ ರಚನೆಯಾಗಿವೆ.ಅವರಿಗೆ ಯಾವುದೇ ಆತಂಕ ಬೇಡ.ಈಗಾಗಲೇ ಕ್ರಿಶ್ಚಿಯನ್ ಸಮೂದಾಯ ನಾಯಕರಿಗೆ ನಾನು ಹೇಳಿದ್ದೆನೆ.ಅವರಿಗೆ ಯಾವುದೇ ತೊಂದರೆಯಾಗಲ್ಲ.ಬದಲಾಗಿ ಬಡತನವನ್ನ ದುರುಪಯೊಗ ಮಾಡಿಕೊಂಡು ಮತಾಂತರ ಮಾಡೋದು ತಪ್ಪು.ಆಸೆ ಆಮೀಷ ಒಡ್ಡಿ …
Read More »ವಿಕೃತ ಮನಸುಗಳಿಗೆ ಸಿಎಂ ಖಡಕ್ ಎಚ್ಚರಿಕೆ
ಹಾವೇರಿ :ಸೇನಾಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರು ವೀರ ಮರಣವನ್ನು ಹೊಂದಿದ್ದಾರೆ. ವಿಕೃತ ಮನಸ್ಸಿನ ಕೆಲವು ವ್ಯಕ್ತಿಗಳು ಅವರ ಸಾವಿನ ಬಗ್ಗೆ ಅವಹೇಳನಕಾರಿ, ಸಂಭ್ರಮಾಚರಣೆಯ ಸಂದೇಶಗಳನ್ನು ಟ್ವೀಟ್ ಮಾಡಿದ್ದಾರೆ. ಈ ಅಂಶಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡದರು.
Read More »ವಿನೋದ್ ಕಾಂಬ್ಳಿಗೆ ಸೈಬರ್ ಕಳ್ಳರಿಂದ ವಂಚನೆ-ಕೆವೈಸಿ ಅಪಡಟ್ ನೆಪ ಹೇಳಿ 1 ಲಕ್ಷ ಎಗರಸಿದ ಭೂಪರು
ಮುಂಬೈ: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರಿಗೆ ಸೈಬರ್ ವಂಚಕರು 1 ಲಕ್ಷ ರೂ. ವಂಚಿಸಿರುವ ಘಟನೆ ಬಾಂದ್ರಾದಲ್ಲಿ ನಡೆದಿದೆ.ಪ್ರಸಿದ್ಧ ಬ್ಯಾಂಕ್ನ ಪ್ರತಿನಿಧಿಯೆಂದು ಕಾಂಬ್ಳಿಗೆ ಕರೆ ಮಾಡಿದ್ದಾರೆ. ನಂತರ ಕೆವೈಸಿ ಅಪ್ಡೇಟ್ ಮಾಡಲು ತಿಳಿಸಿದ್ದಾರೆ. ಬಳಿಕ ಅವರ ಬ್ಯಾಂಕ್ ವಿವರಗಳನ್ನೆಲ್ಲಾ ತೆಗೆದುಕೊಂಡು ಅಪ್ಲೊಡ್ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.ಸ್ವಲ್ಪ ಸಮಯದ ನಂತರ ಅವರ ಖಾತೆಯಿಂದ ಒಂದು ಲಕ್ಷ ರೂ.ವನ್ನು ವಂಚಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆ ಸಂಬಂಧಿಸಿದಂತೆ ಕಾಂಬ್ಳಿ ಅಪರಿಚಿತ ವ್ಯಕ್ತಿಯ …
Read More »ದ್ವಿತೀಯ ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಮಧ್ಯ ವಾರ್ಷಿಕ ಪರೀಕ್ಷೆ ಆರಂಭ
ಬೆಂಗಳೂರು : ರಾಜ್ಯದಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಮಧ್ಯ ವಾರ್ಷಿಕ ಪರೀಕ್ಷೆ ಗುರುವಾರದಿಂದ ಆರಂಭವಾಗಿದೆ. ಪರೀಕ್ಷೆ ಆರಂಭವಾದ ಮೊದಲ ದಿನ ಇತಿಹಾಸ ಮತ್ತು ಭೌತಶಾಸ್ತ್ರ ಪರೀಕ್ಷೆ ನಡೆಯಿದೆ. ಅದೇ ರೀತಿ ಪ್ರಥಮ ಪಿಯುಸಿಯ ಮಧ್ಯ ವಾರ್ಷಿಕ ಪರೀಕ್ಷೆ ಸಹ ಡಿಸೆಂಬರ್ 9 ರಿಂದ 23 ವರೆಗೂ ನಡೆಯಲಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಆಯಾ ಜಿಲ್ಲಾ ಉಪ ನಿರ್ದೇಶಕರ ಕಚೇರಿಯಿಂದ ಪ್ರಶ್ನೆ ಪತ್ರಿಕೆಗಳನ್ನು ಸಂಬಂಧ ಪಟ್ಟ ಪ್ರತಿ ಕಾಲೇಜಿಗೂ …
Read More »ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ : ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು : ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿನ ಆತಂಕ ಹಾಗೂ ಕೊರೊನಾ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಹಾಸ್ಟೆಲ್ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ಮಾಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಹಾಸ್ಟೆಲ್ ಗಳಲ್ಲಿ ಹೊಸ ಮಾರ್ಗಸೂಚಿ ಜಾರಿ ಮಾಡಲಾಗುವುದು. ವಿದ್ಯಾರ್ಥಿಗಳು ಒಟ್ಟಿಗೆ ಊಟ ಮಾಡುವಂತಿಲ್ಲ ಎಂಬ ನಿಯಮವನ್ನು ಜಾರಿಗೆ ತರಲಾಗಿದ್ದು, ಹಾಸ್ಟೆಲ್ ವಿದ್ಯಾರ್ಥಿಗಳು ಅಂತರ ಪಾಲಿಸಿಕೊಂಡು ಊಟ ಮಾಡುವುದಕ್ಕೆ ವ್ಯವಸ್ಥೆ ಮಾಡುವಂತೆ ಹಾಸ್ಟೆಲ್ ಗಳಿಗೆ …
Read More »5ನೇ ವರ್ಷದ ಮದುವೆ ವಾರ್ಷಿಕೋತ್ಸವ ಸಂಭ್ರಮದಲ್ಲಿ ರಾಧಿಕಾ-ಯಶ್
ಬೆಂಗಳೂರು: ಚಂದನವನದ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಇಂದು 5ನೇ ವರ್ಷದ ಮದುವೆ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದಾರೆ. ಮದುವೆ ವಾರ್ಷಿಕೋತ್ಸವದ ಹಿನ್ನೆಲೆ ರಾಧಿಕಾ ಅವರು ಇನ್ಸ್ಟಾಗ್ರಾಮ್ ನಲ್ಲಿ ಬ್ಯೂ ಟ್ಯಾಪ್ಲಿನ್ ಬರೆದ ಸಾಲುಗಳನ್ನು ಬರೆದು, ಯಶ್ ಜೊತೆಗಿನ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಈ ಸಾಲಿನಲ್ಲಿ, ಯಾರಾದರೂ ನಿಮ್ಮನ್ನು ನೀವು ಉತ್ತಮಗೊಳ್ಳುವಂತೆ ಮಾಡುವ ಪ್ರೀತಿಯಲ್ಲಿ ಮತ್ತು ಜೀವನದಲ್ಲಿ ನಿಮ್ಮನ್ನು ಪ್ರೇರೇಪಿಸುವ, ಪ್ರೋತ್ಸಾಹಿಸುವ, ನೀವು ನಿರ್ಲಕ್ಷಿಸುವ ಕನಸುಗಳು ಮತ್ತು ಗುರಿಗಳ ಕಡೆಗೆ ನಿಮ್ಮನ್ನು …
Read More »ಧ್ರುವ ಸರ್ಜಾ ‘ಮಾರ್ಟಿನ್’ ಚಿತ್ರಕ್ಕೆ ಸಿಕ್ಕಳು ಪುಣೆ ಸುಂದರಿ
ಬೆಂಗಳೂರು: ಪೊಗರು’ ಸಿನಿಮಾ ಬಳಿಕ ನಟ ಧ್ರುವ ಸರ್ಜಾ ಅಭಿನಯಿಸುತ್ತಿರೋ ಸಿನಿಮಾ ‘ಮಾರ್ಟಿನ್’. ನಿರ್ದೇಶಕ ಎ.ಪಿ ಅರ್ಜುನ್ ನಿರ್ದೇಶನದಲ್ಲಿ ಮೂಡಿ ಬರ್ತಿರೋ ಚಿತ್ರಕ್ಕೆ ನಾಯಕಿ ಯಾರಾಗ್ತಾರೆ ಅನ್ನೋದು ಗಾಂಧಿನಗರದಲ್ಲಿ ಚರ್ಚೆ ಆಗಿತ್ತು. ಮತ್ತೊಂದೆಡೆ, ಚಿತ್ರತಂಡ ಹೊಸ ಹೀರೋಯಿನ್ ಹುಡುಕಾಟದಲ್ಲಿದೆ ಎನ್ನಲಾಗಿತ್ತು. ವೈಭವಿ ಶಾಂಡಿಲ್ಯ ಮೂಲತಃ ಪುಣೆಯವರು. ಈಗಾಗಲೇ ಮರಾಠಿ, ತಮಿಳು ಚಿತ್ರರಂಗದಲ್ಲಿ ಹೆಸರು ಮಾಡಿದ್ದು, ಶರಣ್ ಅಭಿನಯದ ‘ರಾಜ್ ವಿಷ್ಣು’ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಪದಾರ್ಪಣೆ ಮಾಡಿದ್ದರು. ಬಳಿಕ ಯೋಗರಾಜ್ …
Read More »ಸಂಪುಟ ವಿಸ್ತರಣೆ- ನಾನಾಗಿಯೇ ಸಚಿವ ಸ್ಥಾನ ಕೇಳೊದಿಲ್ಲ,ಶಾಸಕನಾಗಿಯೇ ಇರ್ತೆನೆ-ಅರವಿಂದ ಬೆಲ್ಲದ
ಹುಬ್ಬಳ್ಳಿ: ಶಾಸಕರಾದವರಿಗೆ ಸಚಿವರಾಗುವ ಆಸೆ ಇದ್ದೆ ಇರುತ್ತದೆ. ಆದರೆ ನಾನಾಗಲೇ ಸಚಿವ ಸ್ಥಾನಕ್ಕಾಗಿ ಲಾಭಿ ಮಾಡುವುದಿಲ್ಲ. ಬದಲಾಗಿ ಪಕ್ಷ ಗುರುತಿಸಿ ಜವಾಬ್ದಾರಿ ನೀಡಿದರೆ ಸ್ವೀಕರಿಸುವೆ ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು. ನಗರದ ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟದ ವಿಸ್ತರಣೆ ಕುರಿತು ನನಗೆ ಮಾಹಿತಿ ಇಲ್ಲ. ಹಾಗೇನಾದರೂ ಸಂಪುಟ ವಿಸ್ತರಣೆ ಆದರೆ ನಾನು ಸಚಿವ ಸ್ಥಾನ ಕೇಳುವುದಿಲ್ಲ. ಈಗಾಗಲೇ ನಾನು ಶಾಸಕನಾಗಿ, ಜಿಲ್ಲಾಧ್ಯಕ್ಷನಾಗಿ ನೆಮ್ಮದಿಯಿಂದ ಇರುವೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





