admin
November 23, 2021
ಕರ್ನಾಟಕ, ಬೆಂಗಳೂರು
ಬೆಂಗಳೂರು: ರಾಜ್‌ಕುಮಾರ್ ಪ್ರತಿಮೆ ಪಕ್ಕದಲ್ಲಿಯೇ ಪುನೀತ್ ಪ್ರತಿಮೆ ಇಡಲಾಗುತ್ತಿದೆ. ಇಷ್ಟು ಬೇಗ ಹೀಗಾಗುತ್ತೆ ಅಂದುಕೊಂಡಿರಲಿಲ್ಲ ಎಂದು ಪುನೀತ್ ಪ್ರತಿಮೆಗೆ ಮುತ್ತಿಟ್ಟು ರಾಘವೇಂದ್ರ ರಾಜ್‌ಕುಮಾರ್ ಭಾವುಕರಾದ ಘಟನೆ ನಗರದ ಪಾಲಿಕೆ ಆವರಣದಲ್ಲಿ ನಡೆದಿದೆ. ಬಿಬಿಎಂಪಿಗೆ ಭೇಟಿ ನೀಡಿದ್ದ ರಾಘವೇಂದ್ರ ರಾಜ್‌ಕುಮಾರ್, ಪಾಲಿಕೆ ಆವರಣದಲ್ಲಿರುವ ಡಾ.ರಾಜ್‌ಕುಮಾರ್ ಪ್ರತಿಮೆ ಪಕ್ಕ ಅಪ್ಪು ಪುತ್ಥಳಿ ಸ್ಥಾಪನೆಯ ಸಿದ್ಧತೆಗಳನ್ನು ವೀಕ್ಷಿಸಿದರು. ಬನಶಂಕರಿಯ ಸ್ಥಾಪತಿ ಕ್ರಿಯೇಷನ್‌ನಲ್ಲಿ ಪುನೀತ್ ಕಂಚಿನ ಪ್ರತಿಮೆ ನಿರ್ಮಾಣ ಆಗುತ್ತಿದೆ. ತಡವಾದರೂ ಪರವಾಗಿಲ್ಲ, ಪ್ರತಿಮೆ ಸುಂದರವಾಗಿ ಮಾಡಿ …
Read More »
admin
November 22, 2021
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆಯಾಗುವ (Bangalore Rains) ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು (ನ.22) ಬೆಳಗ್ಗೆ 26.5 ರಷ್ಟು ಗರಿಷ್ಟ ಉಷ್ಣಾಂಶವಿದ್ದು. 20.5 ಕನಿಷ್ಠ ಉಷ್ಣಾಂಶ ದಾಖಾಲಾಗಿದೆ. ನಗರದಲ್ಲಿ 5.2 ಮಿಲಿ ಮೀಟರ್ ಮಳೆಯಾಗಿದೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 6.2 ಮಿಮೀ ಮಳೆಯಾಗಿದ್ದು, ಎಚ್ಎಎಲ್ನಲ್ಲಿ 1.4 ಮಿಲಿ ಮೀಟರ್ ಮಳೆಯಾಗಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿ 6.5 …
Read More »
admin
November 19, 2021
ಆರೋಗ್ಯ, ಕರ್ನಾಟಕ, ಬೆಂಗಳೂರು, ಲೈಫ್ ಸ್ಟೈಲ್, ವಿಶೇಷ ಸುದ್ದಿ
ಬೆಂಗಳೂರು : ನಮ್ಮ ದೈನಂದಿನ ಆಹಾರ ಕ್ರಮದಲ್ಲಿ ಸಕ್ಕರೆ ಅತಿ ಕೆಟ್ಟ ಅಭ್ಯಾಸ ಎನ್ನುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಹೇಳುತ್ತದೆ. ಸಕ್ಕರೆ ಸೇವನೆ ಒಂದು ರೀತಿಯ ಸ್ಲೋ ಪಾಯಿಸನ್ (ನಿಧಾನಗತಿಯ ವಿಷ). ಇದರ ಸೇವನೆಯಿಂದ ಅತಿ ಹೆಚ್ಚು ಆರೋಗ್ಯ ಸಮಸ್ಯೆ ನಮ್ಮನ್ನು ಕಾಡುತ್ತದೆ. ಎಲ್ಲಾ ಬಗೆಯ ಆರೋಗ್ಯ ಸಮಸ್ಯೆಗೆ ಸಕ್ಕರೆಯೇ ಮುಖ್ಯ ಕಾರಣ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ. ಹಾಗಿದ್ದರೆ, ಸಕ್ಕರೆ ಸೇವನೆ ಮಾಡಬಾರದೇ?. ಖಂಡಿತ ಮಾಡಬಹುದು. ಎಷ್ಟು ಪ್ರಮಾಣದಲ್ಲಿ ಮಾಡಬೇಕು, ಯಾವ …
Read More »
admin
November 19, 2021
Breaking News, ಕರ್ನಾಟಕ, ಬೆಂಗಳೂರು, ಮೈಸೂರು, ರಾಜಕೀಯ ಸುದ್ದಿ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮೈಸೂರು: ರಾಜ್ಯದಲ್ಲಿ 40 ಪರ್ಸೆಂಟ್ ಕಮಿಷನ್ ಪಡೆಯುವ ಸರ್ಕಾರವಿದೆ. ರಾಜ್ಯಪಾಲರು ಇಂತಹ ಸರ್ಕಾರವನ್ನು ವಜಾ ಮಾಡುವಂತೆ ಪತ್ರ ಬರೆಯುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಒಂದು ಕಾಮಗಾರಿ ತೆಗೆದುಕೊಳ್ಳಬೇಕಾದರೆ ಮಂತ್ರಿಗಳಿಗೆ, ಎಂಎಲ್ಎಗಳಿಗೆ 40 ಪರ್ಸೆಂಟ್ ಕಮಿಷನ್ ಕೊಡಬೇಕಾಗಿದೆ ಎಂದು ಗುತ್ತಿಗೆದಾರರ ಸಂಘ ಪ್ರಧಾನಿ ಅವರಿಗೆ ಪತ್ರ ಬರೆದಿದೆ ಎಂದರು. ಇಷ್ಟೊಂದು ಕಮಿಷನ್ ತೆಗೆದುಕೊಳ್ಳುವ ಸರ್ಕಾರವನ್ನು …
Read More »
admin
November 19, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಮಂಗಳೂರು: ಕೇಂದ್ರ ಸರ್ಕಾರವು ದೇಶಕ್ಕೆ ಮಾರಕವಾಗಿರುವ ರೈತ ವಿರೋಧಿ ಕಾಯ್ದೆಗಳನ್ನು ರೈತರ ಜನಾಂದೋಲನಕ್ಕೆ ಮಣಿದು ಹಿಂಪಡೆದಿದೆ. ಆದರೆ 1 ವರ್ಷ 2 ತಿಂಗಳಲ್ಲಿ ಎಷ್ಟು ಶ್ರೀಮಂತರು ಈ ಕಾಯ್ದೆಯಿಂದ ಲಾಭ ಪಡೆದುಕೊಂಡಿದ್ದಾರೆಂದು ಸರ್ಕಾರ ಬಹಿರಂಗಪಡಿಸಲಿ ಎಂದು ಶಾಸಕ ಯು.ಟಿ ಖಾದರ್ ಹೇಳಿದರು. ‘ಬಿಜೆಪಿ ಮುಖಂಡರು ಕ್ಷಮೆ ಯಾಚಿಸಲಿ’: ಕಾಂಗ್ರೆಸ್ ಸರ್ಕಾರ ರೈತ ಮಸೂದೆಯನ್ನು ಜಾರಿಗೊಳಿಸಿತ್ತು. ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಈ ಕಾನೂನನ್ನು ತಿದ್ದುಪಡಿ ಮಾಡಿತು. ಹಾಗಾಗಿ ರೈತರು ನಿರಂತರ …
Read More »
admin
November 19, 2021
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ಕಳೆದು ಹಲವು ದಿನಗಳಿಂದಲೂ ಸುರಿಯುತ್ತಿರುವ ಅಕಾಲಿಕ ಮಳೆ ಬಹುತೇಕ ಜಿಲ್ಲೆಯ ಅನ್ನದಾತರನ್ನ ಕಂಗಾಲು ಮಾಡಿದೆ. ಜತೆಗೆ ನಿರಂತರ ಮಳೆಯಿಂದಾಗಿ ರಾಜ್ಯದಾಂದ್ಯಂತ ಹಲವು ಅವಾಂತರಗಳು ಕೂಡ ಸೃಷ್ಠಿಯಾಗುತ್ತಿವೆ. ಸದ್ಯ ರಾಜ್ಯದಲ್ಲಿ ವರುಣಾರ್ಭಟ ಮುಗಿಯುವ ಲಕ್ಷಣವೂ ಕಾಣುತ್ತಿಲ್ಲ. ಈ ಮಧ್ಯೆ ಹವಾಮಾನ ಇಲಾಖೆಯೂ ಕೂಡ ಮುನ್ನೆಚ್ಚರಿಕೆ ನೀಡಿದ್ದು, ನ.23ರ ವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಅಲ್ಲದೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, …
Read More »
admin
November 16, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರನ್ನು(HD Kumaraswamy) ಕೆಲ ಸಂಘಟನೆಯ ನಾಯಕರು ಭೇಟಿಯಾಗಿ ಚರ್ಚೆ ನಡೆಸಿದರು. ಹುಬ್ಬಳ್ಳಿ : ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ (Legislative Council Election) ಕಾವು ಏರುತ್ತಿದೆ. ಅದರಲ್ಲೂ ರಾಷ್ಟ್ರೀಯ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ.ಇತ್ತ ಧಾರವಾಡ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ಸೇತರ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಇಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರನ್ನು(HD Kumaraswamy) ಕೆಲ ಸಂಘಟನೆಯ ನಾಯಕರು ಭೇಟಿಯಾಗಿ …
Read More »
admin
November 14, 2021
Breaking News, ಆರೋಗ್ಯ, ಬೆಂಗಳೂರು
ಸೂಪರ್ ಸ್ಪೆಷಾಲಿಟಿ ಸ್ಪರ್ಶ್ ಆಸ್ಪತ್ರೆ ಉದ್ಘಾಟನೆ ಬೆಂಗಳೂರು : ಸ್ಪರ್ಶ್ ಗ್ರೂಪ್ ಆಫ್ ಹಾಸ್ಪಿಟಲ್ಸ್ (Sparsh Group of Hospitals) ಇಂದು ತನ್ನ ವಿಶೇಷ ಮಹಿಳಾ ಮತ್ತು ಮಕ್ಕಳ ಆರೈಕೆ ಕ್ಷೇತ್ರ (Women and Child Care) ಆರಂಭಿಸಿರುವುದಾಗಿ ಘೋಷಿಸಿದೆ. ಬೆಂಗಳೂರಿನ ಇನ್‍ಫೆಂಟ್ರಿ ರಸ್ತೆಯಲ್ಲಿರುವ (Infantry Road,Bangalore)ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನ ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ (Shri Shivaratri Desi Kendra Swamiji ) ಉದ್ಘಾಟಿಸಿದರು. ಈ ವೇಳೆ …
Read More »
admin
November 12, 2021
Breaking News, ಅಪರಾಧ, ಜಿಲ್ಲೆ, ಬೆಂಗಳೂರು
ಬೆಂಗಳೂರು: ಆಟೋ ಚಾಲಕನ ಮೇಲೆ ವೈದ್ಯರ ತಂಡದಿಂದ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಬಾಗಲೂರು ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಆಟೋ ಚಾಲಕನನ್ನು ವಿವಸ್ತ್ರಗೊಳಿಸಿ, ಮೂತ್ರ ವಿಸರ್ಜನೆ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.ಯಲಹಂಕ ನಿವಾಸಿ 26 ವರ್ಷದ ಮುರುಳಿ ಹಲ್ಲೆಗೊಳಗಾದ ಆಟೋ ಚಾಲಕ. ಸದ್ಯ ಚಾಲಕ ನೀಡಿದ ದೂರಿನ ಮೇರೆಗೆ ಖಾಸಗಿ ಆಸ್ಪತ್ರೆಯೊಂದರ ವೈದ್ಯನನ್ನು ಪೊಲೀಸರು ಬಂಧಿಸಿದ್ದಾರೆ. ಖಾಸಗಿ ಹೋಟೆಲ್ನಲ್ಲಿ ವೈದ್ಯರು ಪಾರ್ಟಿ ಮಾಡುತ್ತಿದ್ದರು. …
Read More »
Mallesh BIG TV NEWS, BANGALORE
June 20, 2019
ಅಪರಾಧ, ಬೆಂಗಳೂರು
ಬೆಂಗಳೂರು: ಫೇಸ್ಬುಕ್ನಲ್ಲಿ ಪರಿಚಯವಾದ ಲಂಡನ್ ಸ್ನೇಹಿತ 27 ಲಕ್ಷ ರೂ. ಮತ್ತು ದುಬಾರಿ ಗಿಫ್ಟ್ ಆಮಿಷವೊಡ್ಡಿ ಮಹಿಳೆಯಿಂದ 2.50 ಲಕ್ಷ ರೂ. ಪಡೆದು ವಂಚನೆ ಮಾಡಿದ್ದಾನೆ.ಬನಶಂಕರಿ 3ನೇ ಹಂತ ಮಂಜುನಾಥ ಕಾಲನಿ ನಿವಾಸಿ ವಂಚನೆಗೆ ಒಳಗಾದ ಮಹಿಳೆ. ಇವರು ಕೊಟ್ಟ ದೂರಿನ ಮೇರೆಗೆ ಆರೋಪಿ ಕೆ. ಸುಬೀನ್ಸ್ ವಿರುದ್ಧ ಎಫ್ಐಆರ್ ದಾಖಲಿಸಿ ಆರೋಪಿ ಬಂಧನಕ್ಕೆ ಬಲೆಬೀಸಿರುವುದಾಗಿ ಚನ್ನಮ್ಮನಕೆರೆ ಅಚ್ಚು ಕಟ್ಟು ಪೊಲೀಸರು ತಿಳಿಸಿದ್ದಾರೆ.
Read More »