Breaking News

ಬೆಂಗಳೂರು

ಜಾತಿಗಣತಿ ವರದಿ ಕುರಿತು ಮುಂದಿನ ಸಚಿವ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ

ಬೆಂಗಳೂರು: ಜಾತಿವಾರು ಜನಗಣತಿ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯ ಮುಂದಿರಿಸುವ ಮಹತ್ವದ ನಿರ್ಣಯ ತೆಗೆದುಕೊಳ್ಳಲಾಗಿದೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಕುರಿತು ಚರ್ಚಿಸಲು ತೀರ್ಮಾನಿಸಲಾಗಿದೆ. ಹಿಂದುಳಿದ ವರ್ಗಗಳ ಆಯೋಗ ಸಲ್ಲಿಸಿರುವ ವರದಿಯು ಖಜಾನೆಯಲ್ಲಿದ್ದು, ಮುಚ್ಚಿದ ಲಕೋಟೆಯಲ್ಲಿದೆ. ಸಂಪುಟ ಸಭೆಯಲ್ಲೇ ಮುಚ್ಚಿದ ಲಕೋಟೆ ತೆರೆಯಲು ಸಂಪುಟ ಸಭೆಯಲ್ಲಿ ನಿರ್ಣಯಿಸಲಾಗಿದೆ. ಇಂದಿನ ಸಚಿವ ಸಂಪುಟದಲ್ಲೇ ಜಾತಿಗಣತಿ ವರದಿ ಮಂಡನೆಯಾಗುವ ಕುರಿತು ಚರ್ಚೆಗಳು …

Read More »

ರಾಜ್ಯ ಸರ್ಕಾರದಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಗುಡ್ ನ್ಯೂಸ್: ಲ್ಯಾಪ್ ಟಾಪ್ ವಿತರಿಸಲು ಸಂಪುಟ ಅನುಮೋದನೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಭರ್ಜರಿ ಗುಡ್ ನ್ಯೂಸ್ ಒಂದು ಹೊರ ಬಿದ್ದಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಿಸಲು ಅನುದಾನಕ್ಕೆ ಒಪ್ಪಿಗೆಯನ್ನು ಸೂಚಿಸಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಸಂಪುಟದ ನಿರ್ಧಾರಗಳನ್ನು ಸಚಿವ ಹೆಚ್.ಕೆ.ಪಾಟೀಲ್ ನೀಡಿದರು. ಕಂದಾಯ ಇಲಾಖೆಯ ಡಿಜಿ ಕಂದಾಯ ಅನುದಾನದಲ್ಲಿ ರಾಜ್ಯದ ಗ್ರಾಮ …

Read More »

ಜಾತಿಗಣತಿಯಲ್ಲಿ ಉಪಪಂಗಡಗಳನ್ನು ಲಿಂಗಾಯತ ಸಮುದಾಯದ ಭಾಗವೆಂದು ಪರಿಗಣಿಸದಿದ್ದರೆ ಬಹುದೊಡ್ಡ ಅನ್ಯಾಯ: ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಜಾತಿ ಗಣತಿ ವರದಿಯಲ್ಲಿ ಉಪಪಂಗಡಗಳನ್ನು ಲಿಂಗಾಯತ ಸಮುದಾಯದ ಭಾಗವೆಂದು ಪರಿಗಣಿಸದಿದ್ದರೆ ಬಹುದೊಡ್ಡ ಅನ್ಯಾಯವಾಗುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಗುರುವಾರ ಹೇಳಿದ್ದಾರೆ. ಇಂದು ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯಲ್ಲಿ ವಿವಾದಾತ್ಮಕ ಜಾತಿ ಗಣತಿ ವರದಿ ಮಂಡನೆಯನ್ನು ಸಿಎಂ ಸಿದ್ದರಾಮಯ್ಯ ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ. ಕಾಂಗ್ರೆಸ್‌ನ ಒಳಜಗಳದ ನಡುವೆಯೇ ಈ ಬೆಳವಣಿಗೆ ಚರ್ಚೆಗೆ ಗ್ರಾಸವಾಗಿದೆ. ವಿಧಾನಸೌಧದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಪಾಟೀಲ್, ಲಿಂಗಾಯತ ಉಪಪಂಗಡದ …

Read More »

ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರ ವರ್ಗಾವಣೆ ರದ್ದು ಕುರಿತು ಸರ್ಕಾರ ಮಹತ್ವದ ಆದೇಶ

ಬೆಂಗಳೂರು: ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರ ವರ್ಗಾವಣೆ ಹಾಗೂ ನಿಯೋಜನೆಯನ್ನು ರದ್ದು ಪಡಿಸುವ ಕುರಿತು ರಾಜ್ಯ ಕಾಂಗ್ರೆಸ್‌ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ, ಬೆಂಗಳೂರು, ಇವರು, ಉಲ್ಲೇಖ (1) ರಲ್ಲಿ ಮನವಿಯನ್ನು ಸಲ್ಲಿಸಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು …

Read More »

ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಶಂಕುಸ್ಥಾಪನೆ

ಬೆಂಗಳೂರು : ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ-ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪೆನಿಯ (ಐಬಿಸಿ) ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಂಪನಿಯು ತಯಾರಿಸುವ ಬ್ಯಾಟರಿಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಮಹಾನಗರ ಗ್ಯಾಸ್ ಲಿಮಿಟೆಡ್ ಜತೆ ಸೇರಿ ಐಬಿಸಿ ಈ ಕಾರ್ಖಾನೆಯನ್ನು ಸ್ಥಾಪಿಸುತ್ತಿದೆ. ಈ ವೇಳೆ ಮಾತನಾಡಿದ ಎಂ.ಬಿ.ಪಾಟೀಲ್, `ದೇವನಹಳ್ಳಿಯ ಕೆಐಎಡಿಬಿ ಐಟಿಐಆರ್ …

Read More »

ರಾಜ್ಯದಲ್ಲಿ ಸುಗಮ ಅಧಿಕಾರ ವರ್ಗಾವಣೆಗಾಗಿ ಕಾಂಗ್ರೆಸ್ ಹೈಕಮಾಂಡ್ ಕಸರತ್ತು: ಯಾವುದೇ ಕಾಂಗ್ರೆಸ್ ನಾಯಕನಿಗೆ ಅಧಿಕಾರ ಹಸ್ತಾಂತರಿಸುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಸುಗಮ ಅಧಿಕಾರ ವರ್ಗಾವಣೆಗಾಗಿ ಕಾಂಗ್ರೆಸ್ ಹೈಕಮಾಂಡ್ ತನ್ನ ಕಸರತ್ತು ಆರಂಭಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎಲ್ಲಾ ಸಲಹೆಗಳನ್ನು ಸ್ವೀಕರಿಸಲಿದೆ ಎಂದು ಮೂಲಗಳು ತಿಳಿಸಿವೆ. ಸಿದ್ದರಾಮಯ್ಯ ಅವರು ತಮ್ಮ ಎರಡೂವರೆ ವರ್ಷಗಳ ಅಧಿಕಾರಾವಧಿಯನ್ನು ಪೂರ್ಣಗೊಳಿಸಿದ ನಂತರ ಅವರ ನಿಷ್ಠಾವಂತ, ಆಪ್ತ ಬೆಂಬಲಿಗ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ನಂತರ, ಪಕ್ಷದ ಹೈಕಮಾಂಡ್ ಯಾವುದೇ ಕಾಂಗ್ರೆಸ್ ನಾಯಕನಿಗೆ ಅಧಿಕಾರ ಹಸ್ತಾಂತರಿಸುವ ಸಾಧ್ಯತೆಯಿದೆ ಎಂದು …

Read More »

ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿನ ಬೋಧಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ನಿಧನ, ರಾಜೀನಾಮೆ ಹಾಗೂ ಇತರೆ ಕಾರಣಗಳಿಂದ ಖಾಲಿಯಾದ ಬೋಧಕ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಸರ್ಕಾರದ ಪತ್ರ ಸಂಖ್ಯೆ ಇಪಿ:396 ಎಸ್.ಇ.ಎಸ್ 2021 ದಿನಾಂಕ:07-08-2024 ರಲ್ಲಿ ರಾಜ್ಯದ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ:01.01.2016 ರಿಂದ 31.12.2020ರವರೆಗೆ ನಿಧನ, ನಿವೃತ್ತಿ, ರಾಜೀನಾಮೆ ಹಾಗೂ ಇತರ ಕಾರಣಗಳಿಂದ ಖಾಲಿಯಾದ ಬೋಧಕ ಹುದ್ದೆಗಳನ್ನು ಭರ್ತಿ …

Read More »

ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಸಚಿವ ಎಂ.ಬಿ.ಪಾಟೀಲ್ ಶಂಕುಸ್ಥಾಪನೆ

ಬೆಂಗಳೂರು: ವಿದ್ಯುತ್ ಚಾಲಿತ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳಿಗೆ ಬೇಕಾಗುವ ಲೀಥಿಯಂ-ಅಯಾನ್ ಬ್ಯಾಟರಿಗಳನ್ನು ತಯಾರಿಸುವ ಇಂಟರ್ ನ್ಯಾಷನಲ್ ಬ್ಯಾಟರಿ ಕಂಪನಿಯ (ಐಬಿಸಿ) ಗಿಗಾ ಫ್ಯಾಕ್ಟರಿಯ ಸ್ಥಳೀಯ ಘಟಕಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಂಪನಿಯು ತಯಾರಿಸುವ ಬ್ಯಾಟರಿಗಳ ಪ್ರದರ್ಶನವನ್ನು ಕೂಡ ಏರ್ಪಡಿಸಲಾಗಿತ್ತು. ಮಹಾನಗರ ಗ್ಯಾಸ್ ಲಿಮಿಟೆಡ್ ಜತೆ ಸೇರಿ ಐಬಿಸಿ ಈ ಕಾರ್ಖಾನೆಯನ್ನು ಸ್ಥಾಪಿಸುತ್ತಿದೆ. ಈ ಸಂದರ್ಭದಲ್ಲಿ …

Read More »

ಕೆಪಿಎಸ್‌ಸಿ ಗ್ರೂಪ್ ಬಿ ಹುದ್ದೆಗಳ ನೇಮಕಾತಿ: ಜ.19 ಮತ್ತು 25 ರಂದು ಪರೀಕ್ಷೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳ ಗ್ರೂಪ್ ‘ಬಿ’ ವೃಂದದ ಹುದ್ದೆಗಳ ನೇಮಕಾತಿ ಸಂಬಂಧ ಜ.19 ಮತ್ತು 25 ರಂದು ಪರೀಕ್ಷೆಗಳನ್ನು ನಡೆಸಲಿದ್ದು, ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಯಶಸ್ವಿಯಾಗಿ ನಡೆಯಲು ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ದಿನಾಂಕ: 19-01-2025 ರಂದು ಬೆಳಿಗ್ಗೆ 10 ರಿಂದ 11.30 ರವರೆಗೆ ಸಾಮಾನ್ಯ ಪತ್ರಿಕೆ ಪರೀಕ್ಷೆ ಹಾಗೂ ದಿ: 25-01-2025 ರಂದು ಮಧ್ಯಾಹ್ನ 3 ರಿಂದ ಸಂಜೆ 5 ಗಂಟೆವರೆಗೆ ನಿರ್ದಿಷ್ಟ …

Read More »

ಆರ್.ಬಿ.ತಿಮ್ಮಾಪುರ ಸಿಎಂ ಆಕಾಂಕ್ಷಿ ಎಂದು ಹೇಳಿರುವುದರಲ್ಲಿ ತಪ್ಪೇನಿಲ್ಲ: ಸಚಿವ ಪರಮೇಶ್ವರ್

ಬೆಂಗಳೂರು: ಆರ್‌ಬಿ ತಿಮ್ಮಾಪೂರ ನಾನು ಸಿಎಂ ಆಕಾಂಕ್ಷಿ ಎಂದು ಹೇಳಿರುವುದರಲ್ಲಿ ತಪ್ಪೇನಿಲ್ಲ. ಅವರು 30 ವರ್ಷ ರಾಜಕೀಯ ಮಾಡಿದ್ದಾರೆ. ಅವರಿಗೂ ಸಾಮರ್ಥ್ಯ ಇದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಆಗಲು ತಿಮ್ಮಾಪೂರ ಅವರು ರೆಡಿ ಇದ್ದೇನೆ ಎಂದಿದ್ದರು. ಸಿಎಂ ಸ್ಥಾನವನ್ನು ಯಾರು ಬೇಕಾದರೂ ಕೇಳಬಹುದು. ಅವರು ಆಕಾಂಕ್ಷಿಯಾಗಬಹುದು. ಅದನ್ನು ಕೇಳುವುದರಲ್ಲಿ ತಪ್ಪೇನಿಲ್ಲ ಎಂದು ಹೇಳಿದರು.

Read More »