Breaking News

ಬೆಂಗಳೂರು

ರಾಜ್ಯದ 102 ಪಿಎಸ್‌ಐಗಳಿಗೆ ಬಡ್ತಿ ನೀಡಿ ವರ್ಗಾವಣೆ

ಬೆಂಗಳೂರು: ರಾಜ್ಯದ 102 ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗಳಿಗೆ ಇನ್‌ಸ್ಪೆಕ್ಟರ್‌ಗಳಾಗಿ ಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ. ಅದರ ಜತೆಯಲ್ಲೇ 41 ಇನ್‌ಸ್ಪೆಕ್ಟರ್‌ಗಳು ಹಾಗೂ11 ಡಿವೈಎಸ್‌ಪಿಗಳನ್ನು ವರ್ಗಾವಣೆಗೊಳಿಸಿ ಎಡಿಜಿಪಿ (ಆಡಳಿತ) ಸೌಮೇಂದು ಮುಖರ್ಜಿ ಆದೇಶ ಹೊರಡಿಸಿದ್ದಾರೆ.

Read More »

ಜ.16 ರಂದು ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿ ಮಂಡಿಸಲು ಸಿಎಂ ನಿರ್ಧಾರ

ಬೆಂಗಳೂರು : ಬಹು ಮುಖ್ಯವಾದಂತಹ ಜಾತಿಗಣತಿ ವರದಿ ಜಾರಿ ಮಾಡುವ ಕುರಿತಂತೆ ಮುಂದಿನ ಸಂಪುಟ ಸಭೆಯಲ್ಲಿ ಅಂದರೆ ಜನೆವರಿ 16 ರಂದು ಈ ಒಂದು ಜಾದಿಗಣತಿ ವರದಿ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದು, ಬಹುತೇಕ ಮುಂದೆ ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರೊಂದಿಗೆ ಚರ್ಚಿಸಿ ಜಾತಿಗಣತಿ ವರದಿ ಜಾರಿಯಾಗುವ ಕುರಿತು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ. ಹೌದು ಮುಂದಿನ ಕ್ಯಾಬಿನೆಟ್ ನಲ್ಲಿ ಜಾತಿಗಣತಿ ವರದಿ ಜಾರಿ ಕುರಿತು ಚರ್ಚೆ …

Read More »

ಜಾತಿಗಣತಿ ಸಭೆಯನ್ನು ಮುಂದೂಡಲು ಒಕ್ಕಲಿಗರ ಸಂಘದ ಪದಾಧಿಕಾರಿಗಳಿಗೆ ಸೂಚನೆ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಜಾತಿ ಗಣತಿ ವಿಚಾರವಾಗಿ ಈಗಲೇ ಸಭೆ ಮಾಡಿ ಗೊಂದಲ ಸೃಷ್ಟಿಸುವುದು ಬೇಡ, ಸಭೆಯನ್ನು ಮುಂದೂಡಿ. ಈ ವಿಚಾರವಾಗಿ ಶ್ರೀಗಳ ಜೊತೆ ನಾನು ಮಾತನಾಡುತ್ತೇನೆ ಎಂದು ಒಕ್ಕಲಿಗರ ಸಂಘದ ಪದಾಧಿಕಾರಿಗಳಿಗೆ ಸೂಚಿಸಿರುವುದಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಸುದ್ಧಿಗಾರರ ಜತೆ ಇಂದು ಮಾತನಾಡಿದ ಅವರು, ಒಕ್ಕಲಿಗರ ಸಂಘದ ಪದಾಧಿಕಾರಿಗಳ ಜತೆ ಸಭೆ ಮಾಡಿದ್ದೀರಿ ಎಂದು ಕೇಳಿದಾಗ, ನಾನು ಯಾವುದೇ ಸಭೆ ಮಾಡಿಲ್ಲ. ಅದರ ಅವಶ್ಯಕತೆ ನನಗಿಲ್ಲ. ಇಂದು ಜಾತಿ ಗಣತಿ …

Read More »

ಜಾತಿಗಣತಿ ವರದಿ ವಿಚಾರ ಕುರಿತು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ಧಪಡಿಸಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷಾ ವರದಿ ಇದೇ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಲಿದೆ. ಬಹಳಷ್ಟು ತಳ ಸಮುದಾಯಗಳು ಸ್ವಾಗತಿಸಿರುವ ಹಾಗೂ ಮೇಲ್ವರ್ಗದ ಲಿಂಗಾಯಿತ ಮತ್ತು ಒಕ್ಕಲಿಗ ಸಮುದಾಯಗಳು ಪ್ರಬಲವಾಗಿ ವಿರೋಧಿಸಿರುವ ಜಾತಿ ಗಣತಿ ವರದಿ ವಿಚಾರದಲ್ಲಿ ಸರಕಾರ ಯಾವ ಹೆಜ್ಜೆ ತುಳಿಯಬೇಕು ಎಂಬುದು ಸಂಪುಟದಲ್ಲಿ ತೀರ್ಮಾನವಾಗಲಿದೆ. ಸಮೀಕ್ಷಾ ವರದಿ ಸಮರ್ಪಕವಾಗಿಲ್ಲ ಮತ್ತು ದಶಕಗಳ ಹಿಂದಿನ ದತ್ತಾಂಶ ಆಧರಿಸಿದ ಇದು …

Read More »

ಕೆಪಿಸಿಎಲ್ ನೇಮಕಾತಿ: ಕನ್ನಡ ಭಾಷಾ ಪರೀಕ್ಷೆಯನ್ನು ಮತ್ತೊಮ್ಮೆ ನಡೆಸುವಂತೆ ಹೈಕೋರ್ಟ್ ಆದೇಶ

ಬೆಂಗಳೂರು: ಹೈದರಾಬಾದ್-ಕರ್ನಾಟಕ ಮತ್ತು ಇತರೆ ಕೋಟಾಗಳ ಅಡಿಯಲ್ಲಿ ಜೂನಿಯರ್ ಎಂಜಿನಿಯರ್ (ಮೆಕ್ಯಾನಿಕಲ್) ಮತ್ತು ಸಹಾಯಕ ಎಂಜಿನಿಯರ್(ಮೆಕ್ಯಾನಿಕಲ್) ಹುದ್ದೆಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ಮತ್ತೊಮ್ಮೆ ನಡೆಸುವಂತೆ ಕರ್ನಾಟಕ ಹೈಕೋರ್ಟ್ ‘ಕರ್ನಾಟಕ ವಿದ್ಯುತ್‌ ನಿಗಮ ನಿಯಮಿತ(ಕೆಪಿಸಿಎಲ್‌)ಕ್ಕೆ ಆದೇಶಿಸಿದೆ. ನೇಮಕಾತಿ ಅಧಿಸೂಚನೆಯು ಕನ್ನಡ ಭಾಷಾ ಪರೀಕ್ಷೆಗೆ ಗರಿಷ್ಠ 150 ಅಂಕಗಳನ್ನು ಸ್ಪಷ್ಟವಾಗಿ ಸೂಚಿಸಿದ್ದರೂ, ಈಗಾಗಲೇ ನಡೆಸಲಾದ ಪರೀಕ್ಷೆಯ ನಂತರ ಅರ್ಹತಾ ಅಂಕಗಳಾಗಿ ಕನಿಷ್ಠ 50 ಅಂಕಗಳನ್ನು ಏಕಪಕ್ಷೀಯವಾಗಿ ನಿಗದಿಪಡಿಸಿರುವುದು ನ್ಯಾಯಯುತವಾಗಿಲ್ಲ ಅಥವಾ ಪಾರದರ್ಶಕ ಕ್ರಮವಲ್ಲ” …

Read More »

ನಾಳೆ ಬೆಂಗಳೂರಿನಲ್ಲಿ ಸಿ ಎಲ್ ಪಿ ಸಭೆ: ಇಂದು ರಾಜ್ಯಕ್ಕೆ ರಣದೀಪ್ ಸಿಂಗ್ ಸುರ್ಜೆವಾಲ ಭೇಟಿ

ಬೆಂಗಳೂರು : ನಾಳೆ ಬೆಂಗಳೂರಲ್ಲಿ ಖಾಸಗಿ ಹೋಟೆಲ್‌ನಲ್ಲಿ ಸಿ ಎಲ್ ಪಿ ಸಭೆ ಹಿನ್ನೆಲೆ ಇಂದು ರಾಜ್ಯಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಗಮಿಸಲಿದ್ದಾರೆ. ನಾಳೆ ಸಂಜೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸಿ ಎಲ್ ಪಿ ಸಭೆ ಹಾಗೂ ಜ. 21ರಂದು ನಡೆಯಲಿರುವ ಬೆಳಗಾವಿಯಲ್ಲಿ ಗಾಂಧಿ ಸಮಾವೇಶದ ಕುರಿತು ಚರ್ಚೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಅವರು …

Read More »

ನಿವೃತ್ತಿ ನಂತರ ಅಧಿಕಾರಿಗಳನ್ನು ಲೋಕ ಸೇವಾ ಆಯೋಗಗಳಲ್ಲಿ ಮುಂದುವರೆಸುವಿಕೆಯನ್ನು ತಡೆಯಬೇಕು: ಉಪರಾಷ್ಟ್ರಪತಿ ಧನಕರ್

ಬೆಂಗಳೂರು: ಅಧಿಕಾರಿಗಳು ಮತ್ತು ರಾಜಕಾರಣಿಗಳು ತಮ್ಮ ಕುಟುಂಬದವರನ್ನು ಅರ್ಹತೆ ಇಲ್ಲದಿದ್ದರೂ ಲೋಕ ಸೇವಾ ಆಯೋಗದ ಸದಸ್ಯರನ್ನಾಗಿ ನೇಮಿಸುತ್ತಿದ್ದಾರೆ. ಈ ರೀತಿಯ ಸ್ವಜನ ಪಕ್ಷಪಾತದಿಂದಾಗಿ ಲೋಕಸೇವಾ ಆಯೋಗಗಳ ವಿಶ್ವಾಸಾರ್ಹತೆ ಕುಸಿಯುವಂತಾಗಿದೆ. ಈ ಅಪವಾದದಿಂದ ಆಯೋಗಗಳು ಹೊರಬರಲು ಕಾನೂನು ಬಿಗಿಗೊಳಿಸಬೇಕಿದೆ ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಹೇಳಿದರು. ರಾಜ್ಯ ಲೋಕಸೇವಾ ಆಯೋಗ ಖಾಸಗಿ ಹೋಟೆಲ್‌ನಲ್ಲಿ ಶನಿವಾರ ಆಯೋಜಿಸಿದ್ದ ’25ನೇ ರಾಜ್ಯ ಲೋಕಸೇವಾ ಆಯೋಗಗಳ ಅಧ್ಯಕ್ಷರ ಸಮ್ಮೇಳನ’ ಉದ್ಘಾಟಿಸಿ ಮಾತನಾಡಿ, ಅಧಿಕಾರಿಗಳು ಮತ್ತು ರಾಜಕಾರಣಿಗಳು …

Read More »

ಪ್ರಸಕ್ತ ಸಾಲಿನ ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆ ಸಿದ್ಧಪಡಿಸಲು ಎಲ್ಲ ಗ್ರಾ.ಪಂ.ಗಳಿಗೆ ಸೂಚನೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮ ಪಂಚಾಯಿತಿ ದೂರದೃಷ್ಟಿ ಯೋಜನೆ ಆಧರಿಸಿ 2025-26ನೇ ಸಾಲಿನ ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲು ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ವಿವರಿಸಿರುವ ಅವರು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 309(ಬಿ) ಅಡಿಯಲ್ಲಿ ರಾಜ್ಯದ …

Read More »

ಜಾತಿಗಣತಿ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಜಾತಿ ಗಣತಿ ವಿಚಾರವನ್ನು ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ತಮ್ಮ ಸರಕಾರಿ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಕಾಂಗ್ರೆಸ್ ಹಿರಿಯ ನಾಯಕರ ಸಭೆ ಬಳಿಕ ಶಿವಕುಮಾರ್ ಮಾಧ್ಯಮದವರ ಜೊತೆ ಮಾತನಾಡುತ್ತಿದ್ದರು. ಜಾತಿ ಗಣತಿ ವಿರೋಧಿಸಿ ಒಕ್ಕಲಿಗ ಹಾಗೂ ಲಿಂಗಾಯತ ನಾಯಕರ ಸಭೆ ನಡೆಯುವುದೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಸಿಎಂ, “ನನಗೆ ಗೊತ್ತಿರುವ ಮಾಹಿತಿ ಪ್ರಕಾರ ಈ ಬಗ್ಗೆ ಯಾವುದೇ ಸಭೆ ಇಲ್ಲ. …

Read More »

ಇಂದು ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಜಗದೀಪ್ ಧನಕರ್: ಸಿಎಂ ಸಿದ್ದರಾಮಯ್ಯರಿಂದ ಸ್ವಾಗತ

ಬೆಂಗಳೂರು: ಭಾರತದ ಉಪರಾಷ್ಟ್ರಪತಿ ಜಗದೀಪ್ ಧನಕರ್ ಹಾಗೂ ಅವರ ಪತ್ನಿ ಶ್ರೀಮತಿ ಸುದೇಶ ಧನಕರ್ ಅವರು ಇಂದು ಬೆಂಗಳೂರಿಗೆ ಭೇಟಿ ನೀಡಿದ್ದಾರೆ. ಬೆಂಗಳೂರಿಗೆ ಆಗಮಿಸಿದ ಉಪರಾಷ್ಟ್ರಪತಿ ಅವರನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಎಮ್ ಸಿ ಸುಧಾಕರ್ ಸೇರಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹಾಗೂ ರಾಜ್ಯದ ಹಿರಿಯ ಅಧಿಕಾರಿಗಳು ಹೆಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಳ್ಳಲಾಗಿರುವ ಎಲ್ಲಾ …

Read More »