Breaking News

ಬೆಂಗಳೂರು

2025-26ನೇ ಸಾಲಿನ ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆ ಸಿದ್ಧಪಡಿಸಲು ಎಲ್ಲ ಗ್ರಾ.ಪಂ.ಗಳಿಗೆ ಸೂಚನೆ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಗ್ರಾಮ ಪಂಚಾಯತ್‌ ದೂರದೃಷ್ಟಿ ಯೋಜನೆ ಆಧರಿಸಿ 2025-26ನೇ ಸಾಲಿನ ಸಮಗ್ರ ಸಹಭಾಗಿತ್ವ ವಾರ್ಷಿಕ ಕ್ರಿಯಾ ಯೋಜನೆಯನ್ನು ಸಿದ್ದಪಡಿಸಲು ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟನೆ ನೀಡಿರುವ ಅವರು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 309(ಬಿ)ರಡಿಯಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳು ಮುಂದಿನ …

Read More »

ಬಗರ್ ಹುಕುಂ ಅಡಿಯಲ್ಲಿ 5,600 ರೈತರಿಗೆ ಡಿಜಿಟಲ್ ಭೂ ದಾಖಲೆಗಳ ವಿತರಣೆ: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಬಗರ್ ಹುಕುಂ ಅಡಿಯಲ್ಲಿ ಈ ತಿಂಗಳು 5,600 ರೈತರಿಗೆ ಡಿಜಿಟಲ್ ಭೂ ದಾಖಲೆಗಳ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದರು. ಶುಕ್ರವಾರ ತಹಶೀಲ್ದಾರ್‌ಗಳು ಮತ್ತು ಭೂ ದಾಖಲೆಗಳ ಸಹಾಯಕ ನಿರ್ದೇಶಕರೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ ಸಚಿವರು, ಅಕ್ರಮ-ಸಕ್ರಮ ಬಗರ್‌ ಹುಕುಂ ಯೋಜನೆಯ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳು ಜಮೀನು ಪಡೆಯಲು ಅರ್ಹರು. ಅಂತವರಿಗೆ ಸಾಗುವಳಿ ಚೀಟಿ ನೀಡುವುದು ಸರ್ಕಾರದ ಕರ್ತವ್ಯ. ಒಂದು ವೇಳೆ …

Read More »

ಬಗರ್ ಹುಕುಂ ಯೋಜನೆಯಡಿ ಅರ್ಜಿ ಸಲ್ಲಿಸಿದ ಫಲಾನುಭವಿಗಳ ಪೈಕಿ ಮೃತಪಟ್ಟವರಿಗೂ ಭೂಮಿ ಮಂಜೂರು: ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು : ಬಗರ್‌ ಹುಕುಂ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳು ದುರಾದೃಷ್ಟವಶಾತ್‌ ಮೃತಪಟ್ಟರೆ ಅವರ ಕುಟುಂಬಸ್ಥರಿಗೆ ಕಾನೂನು ಪ್ರಕಾರ ಜಮೀನು ಮಂಜೂರು ಮಾಡಿ ಡಿಜಿಟಲ್‌ ಸಾಗುವಳಿ ಚೀಟಿ ನೀಡಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ರಾಜ್ಯದ ಎಲ್ಲಾ ತಹಶೀಲ್ದಾರ್‌ ಹಾಗೂ ಎಡಿಎಲ್‌ಆರ್‌ ಗಳಿಗೆ ಸೂಚಿಸಿದರು. ವಿಕಾಸಸೌಧದಿಂದ ರಾಜ್ಯದ ಎಲ್ಲಾ ತಹಶೀಲ್ದಾರ್‌ ಹಾಗೂ ಎಡಿಎಲ್‌ಆರ್‌ (ಭೂ ದಾಖಲೆಯ ಸಹಾಯ ನಿರ್ದೇಶಕ) ಅಧಿಕಾರಿಗಳ ಜೊತೆ ಶುಕ್ರವಾರ ವಿಡಿಯೋ ಕಾನ್ಫರೆನ್ಸ್‌ …

Read More »

ಕೇಂದ್ರ ಸರ್ಕಾರದಿಂದ ಕರ್ನಾಟಕ ಜನರಿಗೆ ಸಿಹಿಸುದ್ದಿ: ಭದ್ರಾ ಮೇಲ್ದಂಡೆ ಯೋಜನೆಗೆ ಅಗತ್ಯವಾದ ಅರಣ್ಯ ಭೂಮಿ ಬಳಕೆಗೆ ಒಪ್ಪಿಗೆ

ಬೆಂಗಳೂರು: ಕೇಂದ್ರ ಸರ್ಕಾರದಿಂದ ಕರ್ನಾಟಕದ ಜನರಿಗೆ ಸಿಹಿಸುದ್ದಿ ಸಿಕ್ಕಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಅಗತ್ಯವಾದ ಅರಣ್ಯ ಭೂಮಿ ಬಳಕೆ ಮಾಡಲು ಷರತುಬದ್ಧ ಒಪ್ಪಿಗೆ ನೀಡಿದೆ. 128 ಎಕರೆ ಅರಣ್ಯ ಭೂಮಿಯನ್ನು ಬಳಸಿಕೊಳ್ಳಲು ಕೇಂದ್ರ ಸರ್ಕಾರದ ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಒಪ್ಪಿಗೆ ನೀಡಿದೆ. ಜೊತೆಗೆ ಕೆಲವು ಷರತ್ತುಗಳನ್ನು ವಿಧಿಸಿದೆ. ಶಿರಾ ತಾಲೂಕಿನ ಬುಕ್ಕಾಪಟ್ಟಣ ಚಿಂಕಾರ ವನ್ಯಜೀವಿ ಧಾಮದ 128 ಎಕರೆ ಭದ್ರಾ ಮೇಲ್ದಂಡೆ ಕಾಲುವೆ ನಿರ್ಮಾಣಕ್ಕೆ ಬಳಕೆ ಮಾಡಬೇಕು. …

Read More »

ಆಶಾ ಕಾರ್ಯಕರ್ತೆಯರ ಸಂಧಾನ ಯಶಸ್ವಿ: ಗೌರವಧನ 10 ಸಾವಿರಕ್ಕೆ ಹೆಚ್ಚಿಸಿ ಸಿಎಂ ಸಿದ್ದರಾಮಯ್ಯ ಆದೇಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಆಶಾ ಕಾರ್ಯಕರ್ತೆಯರ ಸಂಧಾನ ಯಶಸ್ವಿಯಾಗಿದ್ದು, ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 10 ಸಾವಿರ ರೂ.ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ. ರಾಜ್ಯ ಸರ್ಕಾರದಿಂದ ಪ್ರತಿ ಮಾಹೆ 5000 ರೂ ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10 ಸಾವಿರ ರೂ.ಗಳನ್ನು ತಿಂಗಳಿಗೆ ನೀಡಲಾಗುವುದು ಎಂದು ತಿಳಿಸಿದರು. ಮಾಹಿತಿಯನ್ನು ಪೋರ್ಟಲ್ ನಲ್ಲಿ ನಮೂದು ಮಾಡುವುದು ಕಷ್ಟ ಸಾಧ್ಯವಾಗಿರುವ …

Read More »

ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಯೋಜನೆ ತ್ವರಿತ ಅನುಷ್ಠಾನಕ್ಕೆ ಕೇಂದ್ರ ಸಚಿವರಿಗೆ ಪತ್ರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಮೈಸೂರು ವಿಮಾನ ನಿಲ್ದಾಣ ವಿಸ್ತರಣೆ ಯೋಜನೆ ತ್ವರಿತವಾಗಿ ಆಗದೆ ಕುಂಟುತ್ತಿರುವ ಬಗ್ಗೆ ಕೇಂದ್ರದ ಮತ್ತು ರಾಜ್ಯದ ಅಧಿಕಾರಿಗಳನ್ನು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಗ್ಗೆ ಕೇಂದ್ರ ವಿಮಾನಯಾನ ಸಚಿವರಿಗೆ ವಿವರವಾದ ಪತ್ರ ಬರೆಯಲು ಮತ್ತು ಅನುಷ್ಠಾನ ಕುರಿತು ಜ.15ರಂದು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲು ತೀರ್ಮಾನಿಸಿದರು. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮೈಸೂರು ಜಿಲ್ಲೆಯ ಅಭಿವೃದ್ಧಿ ಸಂಬಂಧ ಜಿಲ್ಲೆಯ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರ ಜೊತೆ ಮುಖ್ಯಮಂತ್ರಿ …

Read More »

ಸಿಎಂ ಸಿದ್ದರಾಮಯ್ಯರೊಂದಿಗೆ ಸಂಧಾನ ಯಶಸ್ವಿ: ಆಶಾ ಕಾರ್ಯಕರ್ತೆಯರ ಮುಷ್ಕರ ವಾಪಸ್

ಬೆಂಗಳೂರು : ಮಾಸಿಕ 15 ಸಾವಿರ ರೂಪಾಯಿ ನಿಶ್ಚಿತ ಗೌರವಧನ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಫ್ರೀಡಂ ಪಾರ್ಕ್‍ನಲ್ಲಿ ನಡೆಯುತ್ತಿದ್ದ ಆಶಾ ಕಾರ್ಯಕರ್ತೆಯರ ರಾಜ್ಯ ಮಟ್ಟದ ಅನಿರ್ದಿಷ್ಟಾವಧಿ ಮುಷ್ಕರ ವಾಪಸ್​​​ಗೆ ನಿರ್ಧರಿಸಲಾಗಿದೆ. ಸತತ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಆಶಾ ಕಾರ್ಯಕರ್ತೆಯರ ಸಂಘಟನೆಯ ಮುಖಂಡರ ಹೋರಾಟವು ಸಿಎಂ ಸಿದ್ದರಾಮಯ್ಯ ಅವರೊಂದಿಗಿನ ಸಂಧಾನ ಯಶಸ್ವಿಯಾದ ಹಿನ್ನೆಲೆ ಮುಷ್ಕರ ವಾಪಸ್ ಪಡೆಯಲು ತೀರ್ಮಾನಿಸಲಾಗಿದೆ. ಆಶಾ ಕಾರ್ಯಕರ್ತೆಯರು ರೂ.15 ಸಾವಿರಕ್ಕೆ ಗೌರವ ಧನ …

Read More »

ಬೆಂಬಲ ಬೆಲೆಯಡಿ ಶೇಂಗಾ ಖರೀದಿ ಅವಧಿ ವಿಸ್ತರಣೆ: ಸಚಿವ ಶಿವಾನಂದ ಪಾಟೀಲ್

ಬೆಂಗಳೂರು : ಬೆಂಬಲ ಬೆಲೆಯಡಿ ಶೇಂಗಾ ಖರೀದಿ ನೋಂದಣಿ ಮತ್ತು ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ. ನೋಂದಣಿ ಅವಧಿಯನ್ನು ಜನವರಿ 20ರವರೆಗೆ ಹಾಗೂ ಖರೀದಿ ಅವಧಿಯನ್ನು ಜನವರಿ 22ರವರೆಗೆ ವಿಸ್ತರಣೆ ಮಾಡಲಾಗಿದೆ. ಶೇಂಗಾ ಬೆಲೆಯನ್ನು ಪ್ರತಿ ಕ್ವಿಂಟಾಲ್‌ಗೆ 6783 ರೂ. ನಿಗದಿಪಡಿಸಲಾಗಿದೆ. ಖರೀದಿ ಅವಧಿ ವಿಸ್ತರಣೆ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಜನವರಿ 22ರ ವರೆಗೆ ವಿಸ್ತರಣೆ ಮಾಡಲಾಗಿದೆ. ಕೊಪ್ಪಳ, ಧಾರವಾಡ, …

Read More »

ಆಶಾ ಕಾರ್ಯಕರ್ತೆಯರನ್ನು ಸಿಎಂ ಸಿದ್ದರಾಮಯ್ಯ ಬೀದಿಗೆ ತಂದು ನಿಲ್ಲಿಸಿದ್ದಾರೆ: ಆರ್.ಅಶೋಕ್ ಕಿಡಿ

ಬೆಂಗಳೂರು: ಚುನಾವಣೆಗೂ ಮುನ್ನ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಬಿಸಿಯೂಟ ಕಾರ್ಯಕರ್ತೆಯರ ಉದ್ಧಾರ ಮಾಡುವುದಾಗಿ ಸುಳ್ಳು ಆಶ್ವಾಸನೆ ಕೊಟ್ಟಿದ್ದಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇದೀಗ ಅವರನ್ನು ಬೀದಿಗೆ ತಂದು ನಿಲ್ಲಿಸಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಆಶೋಕ್ ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಕೊರೆಯುವ ಚಳಿಯಲ್ಲೂ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಮಾಡುತ್ತಿದ್ದರೆ, ಹೃದಯಹೀನ …

Read More »

ಆರೋಗ್ಯ ಇಲಾಖೆಯ 878 ಹುದ್ದೆಗಳ ನೇಮಕಾತಿಗೆ ಸರ್ಕಾರ ಕ್ರಮ ಕೈಗೊಳ್ಳವಂತೆ ಆಗ್ರಹ

ಬೆಂಗಳೂರು :ಕೋವಿಡ್ 19 ಸಂದರ್ಭದಲ್ಲಿ ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯು ತನ್ನ 878 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭ ಮಾಡಿ ಹಲವು ವರ್ಷ ಕಳೆದರೂ ಇನ್ನೂ ಪೂರ್ಣಗೊಳಿಸದೇ ಇರುವುದು ಅಚ್ಚರಿಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಆರೋಗ್ಯ ಇಲಾಖೆಯಲ್ಲಿ ನೇಮಕಾತಿ ಭಾಗ್ಯ ಮರೀಚಿಕೆಯಾಯಿತೇ ಎಂಬ ಪ್ರಶ್ನೆ ಮೂಡಿದೆ. ಕಲ್ಯಾಣ ಕರ್ನಾಟಕ ಹಾಗೂ ಉಳಿದ ಕರ್ನಾಟಕ ಪ್ರದೇಶಗಳಿಗೆ ಸುಮಾರು 878 ವಿವಿದ ಹುದ್ದೆಗಳ ನೇಮಕಾತಿಯ ಅಧಿಸೂಚನೆಯು 2022ರಲ್ಲಿ ಅರ್ಜಿ ಆಹ್ವಾನಿಸಿತ್ತು. ಆದರೆ …

Read More »